Homeಕರ್ನಾಟಕಈಶ್ವರಪ್ಪ v/s ಯಡಿಯೂರಪ್ಪ- ‘ಬಿಜೆಪಿ ಶಿಸ್ತಿನ ಪಕ್ಷ, ಶಿಸ್ತು ಉಲ್ಲಂಘನೆ ಆಗಬಾರದು’: ಗೃಹ ಸಚಿವ ಬೊಮ್ಮಾಯಿ

ಈಶ್ವರಪ್ಪ v/s ಯಡಿಯೂರಪ್ಪ- ‘ಬಿಜೆಪಿ ಶಿಸ್ತಿನ ಪಕ್ಷ, ಶಿಸ್ತು ಉಲ್ಲಂಘನೆ ಆಗಬಾರದು’: ಗೃಹ ಸಚಿವ ಬೊಮ್ಮಾಯಿ

- Advertisement -
- Advertisement -

ಮುಖ್ಯಮಂತ್ರಿ ಯಡಿಯೂರಪ್ಪ ತನ್ನ ಇಲಾಖೆಯಲ್ಲಿ ಹಸ್ತಕ್ಷೇಪ ನಡೆಸುತ್ತಿದ್ದಾರೆ ಎಂದು ಸಚಿವ ಈಶ್ವರಪ್ಪ ರಾಜ್ಯಪಾಲರಿಗೆ ದೂರು ನೀಡಿದ್ದ ವಿವಾದದ ಕುರಿತು ಗುರುವಾರ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಗೃಹಸಚಿವ ಬಸವರಾಜ ಬೊಮ್ಮಾಯಿ, “ನಮ್ಮದು ಶಿಸ್ತಿನ ಪಕ್ಷ. ಶಿಸ್ತು ಉಲ್ಲಂಘನೆ ಆಗಬಾರದು. ಸಿಎಂ ನೇತೃತ್ವದಲ್ಲಿ ಆಡಳಿತ ಮಾಡುತ್ತಿದ್ದೇವೆ, ಜನಕಲ್ಯಾಣ ಕೆಲಸ ಮಾಡುತ್ತಿದ್ದೇವೆ” ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಬೊಮ್ಮಾಯಿ, “ಅನುದಾನ ಬಿಡುಗಡೆ ವಿಚಾರ ಆಡಳಿತಾತ್ಮಕವಾದದ್ದು. ಈ ವಿಚಾರದ ಬಗ್ಗೆ ಭಿನ್ನಾಭಿಪ್ರಾಯ, ಆಕ್ಷೇಪಗಳಿದ್ದರೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಜೊತೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಿಕೊಳ್ಳಲಿ” ಎಂದು ಗ್ರಾಮೀಣಾಭಿವೃದ್ಧಿ ಖಾತೆ ಸಚಿವ ಕೆಎಸ್ ಈಶ್ವರಪ್ಪ ಅವರಿಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಈಶ್ವರಪ್ಪನವರು ಮೊದಲ ಬಾರಿ ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ: ಸಿದ್ದರಾಮಯ್ಯ

“ಕಳೆದ ವರ್ಷ ಕೋವಿಡ್‌ನಿಂದಾಗಿ ರಾಜ್ಯದ ಆರ್ಥಿಕ ಪರಿಸ್ಥಿತಿ ಸರಿ ಇರಲಿಲ್ಲ. ಇತ್ತೀಚೆಗೆ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಿದೆ. ಶಾಸಕರ ಒತ್ತಡದ ಮೇರೆಗೆ ಶಾಸಕರಿಗೆ ಸಿಎಂ ಅನುದಾನ ಬಿಡುಗಡೆ ಮಾಡಿದ್ದಾರೆ. ಸಿಎಂ ಹಣಕಾಸು ಖಾತೆಯ ಸಚಿವರೂ ಆಗಿರುವುದರಿಂದ ಅವರೇ ಶಾಸಕರಿಗೆ ಹಣವನ್ನು ಬಿಡುಗಡೆ ಮಾಡಿದ್ದಾರೆ” ಎಂದು ಯಡಿಯೂರಪ್ಪ ಅವರ ಪರವಾಗಿ ಬ್ಯಾಟ್ ಬೀಸಿದ್ದಾರೆ.

“ಅನುದಾನ ಬಿಡುಗಡೆ ವಿಚಾರದಲ್ಲಿ ಆಕ್ಷೇಪಗಳಿದ್ದರೆ ಅದನ್ನು ಸಿಎಂ ಜೊತೆ ಚರ್ಚೆ ಮಾಡಿ ಬಗೆಹರಿಸಿಕೊಳ್ಳಬೇಕು. ಇದು ಆಡಳಿತಾತ್ಮಕ ವಿಷಯ ರಾಜ್ಯಪಾಲರ ಅಂಗಳಕ್ಕೆ ತೆಗೆದುಕೊಂಡು ಹೋಗಿರುವುದು ಸೂಕ್ತ ಅಲ್ಲ. ನಮ್ಮದು ಶಿಸ್ತಿನ ಪಕ್ಷ. ಶಿಸ್ತು ಉಲ್ಲಂಘನೆ ಆಗಬಾರದು. ಸಿಎಂ ನೇತೃತ್ವದಲ್ಲಿ ಆಡಳಿತ ಮಾಡುತ್ತಿದ್ದೇವೆ, ಜನಕಲ್ಯಾಣ ಕೆಲಸ ಮಾಡುತ್ತಿದ್ದೇವೆ” ಎಂದು ಬೊಮ್ಮಾಯಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ರಾಜ್ಯಪಾಲರಿಗೆ ದೂರು: ಈಶ್ವರಪ್ಪ ವಿರುದ್ದ ಮುಗಿಬಿದ್ದ ಬಿಜೆಪಿ ಶಾಸಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೈಸೂರು| ಒಳಮೀಸಲಾತಿ ಹೋರಾಟ ಹತ್ತಿಕ್ಕಲು ನಿಷೇಧಾಜ್ಞೆ ಹೇರಿದ ಕಾಂಗ್ರೆಸ್ ಸರ್ಕಾರ

ಪೂರ್ಣ ಪ್ರಮಾಣದ ಒಳಮೀಸಲಾತಿ ಜಾರಿಗೆ ಆಗ್ರಹಿಸಿ 'ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ' ನಡೆಸುತ್ತಿದ್ದ ಹೋರಾಟಕ್ಕೆ ಜಿಲ್ಲಾ ಪೊಲೀಸರು ಅನುಮತಿ ನಿರಾಕರಿಸಿದ್ದು, ಸಿದ್ದರಾಮನಹುಂಡಿಯಿಂದ ಮೈಸೂರಿಗೆ ಇಂದು ಪಾದಯಾತ್ರೆ ಆರಂಭಿಸಿದ ಹೋರಾಟಗಾರರನ್ನು...

‘ನಕಲಿ ಬ್ಯಾಂಕ್ ಗ್ಯಾರಂಟಿ’ ಪ್ರಕರಣ : ರಿಲಯನ್ಸ್ ಪವರ್, ಇತರ ಸಂಸ್ಥೆಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ ಇಡಿ

ರಿಲಯನ್ಸ್ ಪವರ್ ಕಂಪನಿಯು ಭಾರತೀಯ ಸೌರಶಕ್ತಿ ನಿಗಮಕ್ಕೆ (ಎಸ್‌ಇಸಿಐ) ಟೆಂಡರ್ ಪಡೆಯಲು ಸಲ್ಲಿಸಿದ 68 ಕೋಟಿ ರೂಪಾಯಿಗಳ ನಕಲಿ ಬ್ಯಾಂಕ್ ಗ್ಯಾರಂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಪವರ್ ಲಿಮಿಟೆಡ್ ಮತ್ತು ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್‌ನ...

ಉತ್ತರ ಪ್ರದೇಶ| ಬಾಬರಿ ಮಸೀದಿ ಮೇಲಿನ ದಾಳಿಗೆ 33 ವರ್ಷ; ಅಯೋಧ್ಯೆ-ವಾರಣಾಸಿಯಲ್ಲಿ ಬಿಗಿ ಭದ್ರತೆ

ಬಾಬರಿ ಮಸೀದಿ ಧ್ವಂಸವಾಗಿ 33ನೇ ವರ್ಷ ತುಂಬುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಅಯೋಧ್ಯೆ ಮತ್ತು ಉತ್ತರ ಪ್ರದೇಶದ ಇತರ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಜಾಗರೂಕರಾಗಿದ್ದು, ಎಲ್ಲಾ ಮಾರ್ಗಗಳಲ್ಲಿ ವಾಹನಗಳ ಸಂಪೂರ್ಣ ತಪಾಸಣೆ ನಡೆಸುತ್ತಿವೆ. ಈ ಕುರಿತು...

ನ್ಯಾಷನಲ್ ಹೆರಾಲ್ಡ್‌ಗೆ ದೇಣಿಗೆ: ‘ಡಿಕೆ’ ಸಹೋದರರಿಗೆ ಇಡಿ-ದೆಹಲಿ ಪೊಲೀಸರಿಂದ ಸಮನ್ಸ್

ನ್ಯಾಷನಲ್ ಹೆರಾಲ್ಡ್ ಮತ್ತು ಯಂಗ್ ಇಂಡಿಯಾ ಸಂಸ್ಥೆಗಳಿಗೆ ನೀಡಿದ ದೇಣಿಗೆಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕೈಗೊಂಡಿರುವ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತು ಜಾರಿ ನಿರ್ದೇಶನಾಲಯವು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು...

ಇಂಡಿಗೋ ಹಾರಾಟದಲ್ಲಿ ಐದನೇ ದಿನವೂ ವ್ಯತ್ಯಯ: ವಿಮಾನ ದರಕ್ಕೆ ತಾತ್ಕಾಲಿಕ ಮಿತಿ ವಿಧಿಸಿದ ಕೇಂದ್ರ

ಇಂಡಿಗೋದ ದೇಶೀಯ ಕಾರ್ಯಾಚರಣೆಗಳು ಸತತ ಐದನೇ ದಿನವೂ ಅಸ್ತವ್ಯಸ್ತಗೊಂಡಿದ್ದರಿಂದ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಶನಿವಾರ (ಡಿಸೆಂಬರ್ 6) ವಿಮಾನ ಟಿಕೆಟ್ ದರಗಳ ಮೇಲೆ ತಾತ್ಕಾಲಿಕ ಮಿತಿಯನ್ನು ವಿಧಿಸಿದೆ. ನಿಗದಿತ ಮಾನದಂಡಗಳ ಯಾವುದೇ...

ಪಶ್ಚಿಮ ಬಂಗಾಳ| ಎಸ್‌ಐಆರ್‌ನಲ್ಲಿ ಹೆಸರು ನೋಂದಾಯಿಸಲು ನಿರಾಕರಿಸಿದ 79 ಬುಡಕಟ್ಟು ಜನಾಂಗಗಳು

ಪಶ್ಚಿಮ ಬಂಗಾಳದ ಬಂಕುರಾದ ಮುಚಿಕಟಾ ಮತ್ತು ವೆದುವಾಶೋಲ್ ಗ್ರಾಮಗಳ ಬುಡಕಟ್ಟು ಜನಾಂಗದವರು 'ಸಮಾಜ್ವಾದ್ ಅಂತರ-ರಾಜ್ಯ ಮಾಝಿ ಸರ್ಕಾರ್'ಗೆ ನಿಷ್ಠೆಯನ್ನು ಉಲ್ಲೇಖಿಸಿ, ಚುನಾವಣಾ ಆಯೋಗ್ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಭಾಗವಹಿಸಲು ನಿರಾಕರಿಸಿದ್ದಾರೆ...

ವಿದ್ಯಾರ್ಥಿಗಳಿಗೆ ಭಗವದ್ಗೀತೆ ಬೋಧಿಸುವಂತೆ ಪತ್ರ ಬರೆದ ‘ಜಾತ್ಯತೀತ ಜನತಾದಳ’ ನಾಯಕ ಕುಮಾರಸ್ವಾಮಿ

ಭಗವದ್ಗೀತೆಯನ್ನು 'ಪವಿತ್ರ ಗ್ರಂಥ' ಎಂದಿರುವ ಜಾತ್ಯತೀತ ಜನತಾದಳ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ. ಕುಮಾರಸ್ವಾಮಿ, ವಿದ್ಯಾರ್ಥಿಗಳಿಗೆ ಪಠ್ಯದಲ್ಲಿ ಭಗವದ್ಗೀತೆ ಬೋಧಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಕೇಂದ್ರ ಶಿಕ್ಷಣ...

‘ಲವ್ ಜಿಹಾದ್’ ಕಾರ್ಯಕ್ರಮಗಳನ್ನು ತೆಗೆದು ಹಾಕಲು ಐದು ಚಾನೆಲ್‌ಗಳಿಗೆ ಎನ್‌ಬಿಡಿಎಸ್‌ಎ ಆದೇಶ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯ (ಎನ್‌ಸಿಆರ್‌ಟಿ) ಪಠ್ಯಪುಸ್ತಕವನ್ನು 'ಲವ್ ಜಿಹಾದ್' ಪಿತೂರಿಯೊಂದಿಗೆ ಜೋಡಿಸುವ ಎಂಟು ಕಾರ್ಯಕ್ರಮಗಳನ್ನು ತೆಗೆದುಹಾಕುವಂತೆ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರವು (ಎನ್‌ಬಿಡಿಎಸ್‌ಎ) ಮಂಗಳವಾರ (ಡಿಸೆಂಬರ್...

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಪ್ರಪ್ರಥಮ ‘ಫಿಫಾ ಶಾಂತಿ’ ಪ್ರಶಸ್ತಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರಿಗೆ ಹೊಸ ಫಿಫಾ ಶಾಂತಿ ಪ್ರಶಸ್ತಿಯನ್ನು ಶುಕ್ರವಾರ ನೀಡಲಾಯಿತು. ನೊಬೆಲ್ ಶಾಂತಿ ಪ್ರಶಸ್ತಿಗಾಗಿ ಬಹಿರಂಗವಾಗಿ ಆಸೆ ವ್ಯಕ್ತಪಡಿಸಿದ್ದ ಅವರಿಗೆ, ಹೊಸದಾಗಿ ರಚಿಸಲಾದ ಫಿಫಾ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಟ್ರಂಪ್...

ಬಾಬಾ ಸಾಹೇಬರ ಪರಿನಿಬ್ಬಾಣ ಜಗತ್ತಿನ ಕವಲುದಾರಿಗೊಂದು ಕೈಮರದಂತೆ ಕಾಣಿಸುತ್ತಿದೆ

ಬುದ್ಧನ ತತ್ವಗಳು, ಬಸವ- ಅಲ್ಲಮರ ಚಿಂತನೆಗಳು, ಬಾಬಾ ಸಾಹೇಬರ ವಿಚಾರಗಳು , ನಮ್ಮ ಸಂವಿಧಾನದ ದಿಕ್ಸೂಚಿಗಳು ಹಾಗೂ ಕಳೆದ 75 ವರ್ಷಗಳಿಂದ ಸ್ಕ್ಯಾಂಡಿನೇವಿಯನ್ ದೇಶಗಳು ಒಂದು ಮಟ್ಟಿಗೆ ಸಾಧಿಸಿದ ಆಧುನಿಕ‌ ಮಾನವೀಯ‌- ವೈಜ್ಞಾನಿಕ...