Homeಕರ್ನಾಟಕಧರ್ಮದ ಹೆಸರಲ್ಲಿ ಮೋದಿ ಮತಯಾಚನೆ, ಪ್ರಣಾಳಿಕೆ ಸುಟ್ಟುಹಾಕಿದ ಈಶ್ವರಪ್ಪ: ಆಯೋಗಕ್ಕೆ ಕಾಂಗ್ರೆಸ್ ದೂರು

ಧರ್ಮದ ಹೆಸರಲ್ಲಿ ಮೋದಿ ಮತಯಾಚನೆ, ಪ್ರಣಾಳಿಕೆ ಸುಟ್ಟುಹಾಕಿದ ಈಶ್ವರಪ್ಪ: ಆಯೋಗಕ್ಕೆ ಕಾಂಗ್ರೆಸ್ ದೂರು

- Advertisement -
- Advertisement -

”ಧರ್ಮದ ಹೆಸರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತಯಾಚನೆ ಮಾಡುತ್ತಿದ್ದಾರೆ ಹಾಗೂ ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ನಮ್ಮ ಪ್ರಣಾಳಿಕೆಯನ್ನು ಸುಟ್ಟು ಹಾಕಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಕಾಂಗ್ರೆಸ್ ಗುರುವಾರ ಭಾರತೀಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಬಿಜೆಪಿ ಹಿರಿಯ ನಾಯಕರಾಗಿರುವ ಪ್ರಧಾನಿ  ಮೋದಿ ಪ್ರಚಾರದಲ್ಲಿ ಹಿಂದೂ ದೇವರುಗಳನ್ನು ಬಳಸಿಕೊಳ್ಳುವ ಮೂಲಕ ಜನರ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಭಾಷಣಗಳಲ್ಲಿ ಧಾರ್ಮಿಕ ಭಾವನೆಗಳನ್ನು ಬಳಸಿಕೊಂಡಿದ್ದಾರೆ. ಕೇವಲ ಚುನಾವಣೆ ಲಾಭಕ್ಕೋಸ್ಕರ ದೇವ ದೇವತೆಗಳನ್ನು ಬಳಸುತ್ತಿದ್ದಾರೆ. ಈ ರೀತಿಯ ಪ್ರಚಾರಕ್ಕೆ ಅವಕಾಶ ನೀಡಬಾರದು. ಜಾತಿ ಧರ್ಮದ ಹೆಸರು ಬಳಸಿಕೊಂಡು ಚುನಾವಣೆ ಪ್ರಚಾರಕ್ಕೆ ಅವಕಾಶ ನೀಡಬಾರದು ಎಂದು ಕಾಂಗ್ರೆಸ್ ಒತ್ತಾಯಿಸಿದೆ.

ಬೆಂಗಳೂರು ನಗರದಲ್ಲಿ ಮೇ 6 ಹಾಗೂ 7 ರಂದು ಪ್ರಧಾನಿ ನರೇಂದ್ರ ಮೋದಿ ಹಮ್ಮಿಕೊಂಡಿರುವ ರೋಡ್ ಶೋಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದ್ದು, ಅನುಮತಿ ನೀಡದಂತೆ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಈ ಸಂಬಂಧ ಸುಪ್ರೀಂಕೋರ್ಟ್ ಈಗಾಗಲೇ ಮಾರ್ಗಸೂತ್ರ ಹೊರಡಿಸಿರುವುದಾಗಿ ಕಾಂಗ್ರೆಸ್ ಕಾನೂನು ಘಟಕದ ಎಸ್ ಎ ಅಹ್ಮದ್ ಹೇಳಿದರು.

ರೋಡ್ ಶೋಗೆ ಅವಕಾಶ ನೀಡುವುದರಿಂದ ಜನರಿಗೆ ತೊಂದರೆ ಆಗುತ್ತದೆ ಎಂಬ ನಿಟ್ಟಿನಲ್ಲಿ ಹೈಕೋರ್ಟ್ ರಿಟ್ ಪಿಟಿಷನ್ ನಲ್ಲಿ ನಿರ್ದೇಶನ ನೀಡಲಾಗಿದೆ. ಹೈಕೋರ್ಟ್ ನಿರ್ದೇಶನ ಪಾಲನೆ ಮಾಡದೆಯೇ ರೋಡ್ ಶೋ ಅವಕಾಶ ನೀಡಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಇದನ್ನೂ ಓದಿ: ‘ಬಿಜೆಪಿಗೆ ಲಿಂಗಾಯತರ ಅಗತ್ಯವಿಲ್ಲ, ಯಡಿಯೂರಪ್ಪ ಏನೂ ಚಿರಂಜೀವಿಯಲ್ಲ’: ಬಿಎಲ್‌ ಸಂತೋಷ್ ಹೇಳಿದ್ದಾರೆನ್ನಲಾದ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ವೈರಲ್

ಬೆಂಗಳೂರು ನಗರದಲ್ಲಿ ಆ್ಯಂಬುಲೆನ್ಸ್ ಸೇರಿದಂತೆ ತುರ್ತು ವಾಹನಗಳ ಓಡಾಟಕ್ಕೆ ಅನನುಕೂಲ ಆಗುವ ನಿಟ್ಟಿನಲ್ಲಿ ರೋಡ್ ಶೋ ಅವಕಾಶ ನೀಡಬಾರದು. ಪ್ರಧಾನಿ ನರೇಂದ್ರ ಮೋದಿ ರೋಡ್ ಶೋಗೆ ಸರಕಾರದ ಹಣವನ್ನೂ ಖರ್ಚು ಮಾಡಲಾಗುತ್ತಿದೆ. ಇದನ್ನು ಲೆಕ್ಕಹಾಕಲು ಸರಿಯಾದ ಸಿಬ್ಬಂದಿ ನೇಮಕ ಮಾಡಬೇಕು ಎಂದೂ ದೂರಿನಲ್ಲಿ ಕಾಂಗ್ರೆಸ್ ಕಾನೂನು ಘಟಕದ ಆರೋಪಿಸಿದೆ.

ಕಾಂಗ್ರೆಸ್ ಕಾನೂನು ಘಟಕ ರೋಡ್ ಶೋ ವಿರೋಧಿಸಿ ಗುರುವಾರ ದೂರು ಸಲ್ಲಿಸಿದ್ದು, ಮೋದಿ ಅವರ ರೋಡ್ ಶೋ ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪ್ರಣಾಳಿಕೆ ಸುಟ್ಟುಹಾಕಿದ ಈಶ್ವರಪ್ಪ: ಕಾಂಗ್ರೆಸ್ ದೂರು 

ಮತ್ತೊಂದೆಡೆ  ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಕಾಂಗ್ರೆಸ್ ಪ್ರಣಾಳಿಕೆ ಪ್ರತಿ ಸುಟ್ಟು ಹಾಕುವ ಮೂಲಕ  ನೀತಿ ಸಂಹಿತೆ ಉಲ್ಲಂಘಿಸಿದ್ದು, ಅವರ ಕ್ರಮ ಕೈಗೊಳ್ಳಬೇಕೆಂದು ಕಾಂಗ್ರೆಸ್, ಚುನಾವಣಾ ಆಯೋಗವನ್ನು ಒತ್ತಾಯಿಸಿದೆ.

ಈ ಸಂದರ್ಭದಲ್ಲಿ ಕೆಪಿಸಿಸಿ ಕಾನೂನು ವಿಭಾಗದ ಉಸ್ತುವಾರಿ ಎಸ್‌.ಎ ಅಹಮ್ಮದ್, ಕಾಂಗ್ರೆಸ್ ವಕ್ತಾರ ನಟರಾಜ್ ಗೌಡ ಹಾಗೂ ಇತರರು ಉಪಸ್ಥಿತರಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಚರ್ಚ್‌ಗಳಲ್ಲಿ ‘ದಿ ಕೇರಳ ಸ್ಟೋರಿ’ ಪ್ರದರ್ಶನ: ಕೋಮು ಅಜೆಂಡಾ ಬಗ್ಗೆ ಎಚ್ಚರಿಸಿದ ತಲಶ್ಶೇರಿ ಬಿಷಪ್

0
ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಕೇರಳದ ಕೆಲ ಚರ್ಚ್‌ಗಳಲ್ಲಿ ವಿವಾದಿತ 'ದಿ ಕೇರಳ ಸ್ಟೋರಿ' ಸಿನಿಮಾ ಪ್ರದರ್ಶನ ಮಾಡಲಾಗಿತ್ತು. ಮುಸ್ಲಿಮರ ಬಗ್ಗೆ ಸುಳ್ಳು ಪ್ರತಿಪಾದಿತ ಈ ಸಿನಿಮಾ ಪ್ರದರ್ಶನದ ಮೂಲಕ ಮುಸ್ಲಿಮರ ಬಗ್ಗೆ ಕ್ರಿಶ್ಚಿಯನ್ನರಲ್ಲಿ...