Homeಕರ್ನಾಟಕಅಗತ್ಯವಿದ್ದರಷ್ಟೆ ಈಶ್ವರಪ್ಪರನ್ನು ಪೊಲೀಸರು ಬಂಧಿಸಲಿದ್ದಾರೆ: ಸಿಎಂ ಬೊಮ್ಮಾಯಿ

ಅಗತ್ಯವಿದ್ದರಷ್ಟೆ ಈಶ್ವರಪ್ಪರನ್ನು ಪೊಲೀಸರು ಬಂಧಿಸಲಿದ್ದಾರೆ: ಸಿಎಂ ಬೊಮ್ಮಾಯಿ

- Advertisement -
- Advertisement -

ಗುರುವಾರ ಸಂಜೆ ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿ ತನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದ, ಸಂತೋಷ್‌ ಆತ್ಮಹತ್ಯೆ ಪ್ರಚೋದನೆಯ ಪ್ರಮುಖ ಆರೋಪಿ ಸಚಿವ ಈಶ್ವರಪ್ಪನನ್ನು ಅಗತ್ಯವಿದ್ದರಷ್ಟೆ ಪೊಲೀಸರು ಬಂಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಶುಕ್ರವಾರ ಹೇಳಿದ್ದಾರೆ.

ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, “ಈಶ್ವರಪ್ಪ ಅವರು ಸ್ವಯಂ ಪ್ರೇರಣೆಯಿಂದ ರಾಜೀನಾಮೆ ನೀಡಿದ್ದಾರೆ. ಅವರ ಮೇಲೆ ಯಾವುದೇ ಒತ್ತಡ ಇರಲಿಲ್ಲ. ಸಾವು ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ಪೊಲೀಸರು ಅಗತ್ಯವಿದ್ದರೆ ಅವರನ್ನು ಬಂಧಿಸಲಿದ್ದಾರೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈಶ್ವರಪ್ಪ ಅವರೊಂದಿಗೆ ತಾನು ಈಗಾಗಲೆ ಮಾತನಾಡಿದ್ದೇನೆ ಎಂದು ಹೇಳಿರುವ ಸಿಎಂ ಬೊಮ್ಮಾಯಿ, “ಈಶ್ವರಪ್ಪ ತಾವು ನಿರಪರಾಧಿ ಎಂದು ಹೇಳಿದ್ದು, ಆದಷ್ಟು ಬೇಗನೆ ತನಿಖೆ ಮಾಡಿದರೆ ಆರೋಪದಿಂದ ಮುಕ್ತನಾಗುತ್ತೇನೆ ಎಂದು ತಿಳಿಸಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಂತೋಷ್‌ ಸಾವು ಪ್ರಕರಣ: ಸಚಿವ ಈಶ್ವರಪ್ಪ ರಾಜೀನಾಮೆ ಘೋಷಣೆ

ನಿನ್ನೆ ಸಂಜೆ ವೇಳೆ ತಮ್ಮ ಕಾರ್ಯಕ್ಷೇತ್ರವಾದ ಶಿವಮೊಗ್ಗದಲ್ಲಿ ದಿಢೀರ್‌‌ ಸುದ್ದಿಗೋಷ್ಠಿ ಕರೆದು ಮಾತನಾಡಿದ್ದ ಈಶ್ವರಪ್ಪ, “ಪ್ರಕರಣದ ವಿಚಾರದಲ್ಲಿ ಪಕ್ಷದ ಹಿರಿಯರಿಗೆ, ಮುಖ್ಯಮಂತ್ರಿಗಳಿಗೆ, ರಾಷ್ಟ್ರೀಯ ನಾಯಕರುಗಳಿಗೆ ಇರುಸುಮುರುಸು ಆಗಬಾರದು. ಈ ಒಂದೇ ಕಾರಣಕ್ಕೆ ನಾನು ರಾಜೀನಾಮೆ ಕೊಡುತ್ತಿದ್ದೇನೆ. ಈ ವಿಷಯದ ಬಗ್ಗೆ ನಾನು ಮುಖ್ಯಮಂತ್ರಿಗೆ ಈಗಾಗಲೇ ಹೇಳಿದ್ದೇನೆ” ಎಂದು ಹೇಳಿದ್ದರು.

“ಶುಕ್ರವಾರ ಸಂಜೆ ಬೆಂಗಳೂರಿಗೆ ಹೋಗಿ ಮುಖ್ಯಮಂತ್ರಿಗಳಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸುತ್ತಾ ಇದ್ದೇನೆ. ಇಲ್ಲಿ ತನಕ ಸಹಕಾರ ಕೊಟ್ಟಂತಹ ಮುಖ್ಯಮಂತ್ರಿಗಳಿಗೆ ಹಾಗೂ ಎಲ್ಲಾ ಸ್ನೇಹಿತರಿಗೆ ಅಭಿನಂಧನೆ ಸಲ್ಲಿಸುತ್ತೇನೆ. ನಾನು ದೇವರನ್ನು ನಂಬುವವನು, ಪ್ರಕರಣದ ಬಗ್ಗೆ ನನಗೆ ಪೂರ್ಣ ವಿಶ್ವಾವಿದೆ.  ಈ ಇಡೀ ಎಪಿಸೋಡಲ್ಲಿ ಒಂದೇ ಒಂದು ಪರ್ಸೆಂಟ್ ನನ್ನದೇನಾದರೂ ತಪ್ಪಿದ್ದರೆ, ಆ ಭಗವಂತ ನನಗೆ ಶಿಕ್ಷೆ ಕೊಡಲಿ ಎಂದು ನಾನು ಕೇಳಿಕೊಳ್ಳುತ್ತೇನೆ” ಎಂದು ಹೇಳಿದ್ದರು.

“ಪ್ರಕರಣದಲ್ಲಿ ನಾನು ಮುಕ್ತವಾಗಿ ಹೊರಬರುತ್ತೇನೆ ಎಂದು ನನಗೆ ಪೂರ್ಣ ನಂಬಿಕೆ ಇದೆ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ನಾನು ಮುಖ್ಯಮಂತ್ರಿಗೆ ಹೇಳಿದಾಗ ಅವರು ಕೂಡಾ ಸಂತೋಷದಿಂದ ತನಿಖೆ ಮಾಡುತ್ತೇನೆ ಎಂದು ಅವರು ಒಪ್ಪಿಕೊಂಡಿದ್ದಾರೆ. ನನ್ನ ಮನೆ ದೇವರಾದ ಚೌಡೇಶ್ವರಿ ನಾನು ತಪ್ಪಿತಸ್ಥ ಅಲ್ಲ ಎಂದು ನಿರ್ದೋಷಿಯಾಗಿ ನನ್ನನ್ನು ಹೊರ ತರುತ್ತಾಳೆ” ಎಂದು ಈಶ್ವರಪ್ಪ ಗುರುವಾರ ಹೇಳಿದ್ದರು.

“ನನಗೆ ಸಹಕಾರ ಕೊಟ್ಟ ಎಲ್ಲಾ ಕಾರ್ಯಕರ್ತರಿಗೆ ಅಭಿನಂಧನೆ ಅರ್ಪಿಸುತ್ತೇನೆ. ಗ್ರಾಮೀಣಾಭಿವೃದ್ದಿ ಇಲಾಖೆ ಸಿಕ್ಕಿದ್ದು ನನ್ನ ಸೌಭಾಗ್ಯ. ಇಲಾಖೆಯಲ್ಲಿ ನಾನು ಸಾಕಷ್ಟು ಕೆಲಸ ಮಾಡಿದ್ದೇನೆ. ಪ್ರಕರಣದಲ್ಲಿ ಯಾರಿಗೂ ಇರಿಸುಮುರಿಸು ಮಾಡಲು ಇಷ್ಟವಿಲ್ಲ. ಎಲ್ಲವನ್ನೂ ಎದುರಿಸಿ ಮುಕ್ತವಾಗಿ ಹೊರಬರುತ್ತೇನೆ. ಒಂದೇ ಒಂದು ಪರ್ಸೆಂಟ್ ತಪ್ಪಿದ್ದರೆ ಸಾಬೀತಾಗಲಿ” ಎಂದು ಈಶ್ವರಪ್ಪ ಗುರುವಾರ ಶಿವಮೊಗ್ಗದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ರಾಜೀನಾಮೆ ಸಾಲದು, ಈಶ್ವರಪ್ಪ ಬಂಧನವಾಗಬೇಕು: ಡಿ.ಕೆ ಶಿವಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...