Homeಕರ್ನಾಟಕಈಶ್ವರಪ್ಪ ರಾಜೀನಾಮೆಗೆ ಹೈಕಮಾಂಡ್‌ನಿಂದ ಒತ್ತಡವಿಲ್ಲ: ಸಿಎಂ ಬೊಮ್ಮಾಯಿ

ಈಶ್ವರಪ್ಪ ರಾಜೀನಾಮೆಗೆ ಹೈಕಮಾಂಡ್‌ನಿಂದ ಒತ್ತಡವಿಲ್ಲ: ಸಿಎಂ ಬೊಮ್ಮಾಯಿ

- Advertisement -
- Advertisement -

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಈಶ್ವರಪ್ಪನವರನ್ನು ಸದ್ಯಕ್ಕೆ ಸಚಿವ ಸಂಪುಟದಲ್ಲಿ ಇರುತ್ತಾರೆ. ಪ್ರಾಥಮಿಕ ತನಿಖೆ ಆರಂಭವಾಗಿದೆ. ತನಿಖೆಯ ಆಧಾರದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, “ಈ ಹಿಂದೆಯೇ ಹೇಳಿದಂತೆ ಯಾರ ಮೇಲೆಯೂ ಈ ಕೂಡಲೇ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಪ್ರಾಥಮಿಕ ತನಿಖೆ ಆರಂಭವಾಗಿದ್ದು ಅದರ ಫಲಿತಾಂಶದ ಮೇಲೆಷ್ಟೆ ಕ್ರಮ ಕೈಗೊಳ್ಳುತ್ತೇವೆ” ಎಂದಿದ್ದಾರೆ.

ಈಶ್ವರಪ್ಪನವರ ರಾಜೀನಾಮೆಗೆ ಬಿಜೆಪಿ ಹೈಕಮಾಂಡ್ ಒತ್ತಡ ಹೇರಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಹೈಕಮಾಂಡ್‌ಗೆ ಪ್ರಕರಣದ ಕುರಿತು ಮಾಹಿತಿ ನೀಡಿದ್ದೇವೆ. ಆದರೆ ಹೈಕಮಾಂಡ್ ಯಾವುದೇ ಸಲಹೆ-ಸೂಚನೆ ನೀಡಿಲ್ಲ, ನನ್ನ ಮೆಲೆ ಯಾವುದೇ ಒತ್ತಡವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಹೈಕಮಾಂಡ್‌ಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ತನಿಖೆಯಿಂದಷ್ಟೇ ಸತ್ಯಾಸತ್ಯತೆ ಹೊರಬರಲು ಸಾಧ್ಯ. ನಂತರವಷ್ಟೇ ಕ್ರಮದ ಬಗ್ಗೆ ಚರ್ಚಿಸಲಾಗುವುದು ಎಂದು ಬೊಮ್ಮಾಯಿ ಹೇಳಿದ್ದಾರೆ.

ರಾಜ್ಯದಲ್ಲಿ 40% ಕಮಿಷನ್ ಭ್ರಷ್ಟಾಚಾರ ನಡೆಯುತ್ತಿರುವುದರ ಬಗ್ಗೆ ಗುತ್ತಿಗೆದಾರ ಸಂಘದ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಅವೆಲ್ಲವೂ ಆಧಾರರಹಿತ ಆರೋಪಗಳಾಗಿವೆ. ಭ್ರಷ್ಟಾಚಾರ ನಡೆದುದ್ದರ ಬಗ್ಗೆ ದಾಖಲೆ ಒದಗಿಸಿದರೆ ನಾವು ತನಿಖೆಗೆ ಸಿದ್ದ” ಎಂದಿದ್ದಾರೆ.

ಕಾಂಗ್ರೆಸ್ ಅವಧಿಯಲ್ಲಿಯೇ ಹೆಚ್ಚಿನ ಭ್ರಷ್ಟಾಚಾರಗಳು ನಡೆದಿವೆ. ಹಾಗಾಗಿ ಸಂತೋಷ್ ಸಾವನ್ನು ಇಟ್ಟುಕೊಂಡು ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ ಎಂದು ಇದೇ ಸಂದರ್ಭದಲ್ಲಿ ಅವರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯಲ್ಲಿ ಮೃತ ಸಂತೋಷ್ ಪಾಟೀಲ್ ಅಂತ್ಯಕ್ರಿಯೆ 

ಇನ್ನೊಂದೆಡೆ ಬೆಳಗಾವಿಯಲ್ಲಿ ಮೃತ ಸಂತೋಷ್ ಪಾಟೀಲ್ ಅಂತ್ಯಕ್ರಿಯೆ ನೆರವೇರಿದೆ. ಆರಂಭದಲ್ಲಿ ಬಿಜೆಪಿಯ ಹಿರಿಯ ಮುಖಂಡರು ಸ್ಥಳಕ್ಕೆ ಆಗಮಿಸುವವರೆಗೂ ಅಂತ್ಯಕ್ರಿಯೆ ನಡೆಸುವುದಿಲ್ಲ ಎಂದು ಸಂಬಂಧಿಗಳು ಪಟ್ಟು ಹಿಡಿದಿದ್ದರು. ಸಚಿವ ಈಶ್ವರಪ್ಪನ ರಾಜೀನಾಮೆ ಪಡೆದು ಬಂಧಿಸಬೇಕೆಂದು ಆಗ್ರಹಿಸಿದ್ದರು. ನಂತರ ಕಾಂಗ್ರೆಸ್ ಮುಖಂಡರಾದ ಅದಿವೇಶ್ ಇಟಗಿ ಮಾತನಾಡಿ ಸಂಬಂಧಿಗಳನ್ನು ಸಮಾಧಾನ ಪಡಿಸಿದರು. ನಂತರ ಅಂತ್ಯಕ್ರಿಯೆ ಜರುಗಿದೆ.


ಇದನ್ನೂ ಓದಿ: Exclusive: ಮಸೀದಿ ಸುತ್ತಲಿನ ಹಿಂದೂ ವ್ಯಾಪಾರಿಗಳ ಮನದ ಮಾತು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೈಕಮಾಂಡ್ ಆಗಿರುವ ಎಲ್ಲಾರೂ ಒಂದೊಲ್ಲ ಒಂದು ಪ್ರಕರಣಗಳಲ್ಲಿ ಭಾಗಿಯಾಗಿರುವವರು ಅದಕ್ಕಾಗಿ ಒತ್ತಡ ಹಾಕಿಲ್ಲ ಏಕೆಂದರೆ ನಾವು ಮಾಡಿದ್ದು ಅವನು ಮಾಡಿದ್ದಾನೆಂದು ಸುಮ್ಮನೆ ಇದ್ದಾರೆ

LEAVE A REPLY

Please enter your comment!
Please enter your name here

- Advertisment -

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿಸಿದ 37 ಭಾರತೀಯ ಹಡಗುಗಳು

ಇಸ್ರೇಲ್-ಯುಎಸ್ ಜಂಟಿ ದಾಳಿಯ ನಂತರ, ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ ಭಾರತೀಯ ಹಡಗುಗಳು ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡಿವೆ. ಭಾರತೀಯ ಧ್ವಜ ಹೊಂದಿರುವ 37 ಹಡಗುಗಳು ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ನೀರಿನಲ್ಲಿ ಸಿಲುಕಿಕೊಂಡಿವೆ. 37 ಹಡಗುಗಳು...

ಪಾಲ್ಘರ್: ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಹೊತ್ತಿ ಉರಿದ ಟೆಂಪೋ: 28 ವರ್ಷದ ಚಾಲಕ ಸಜೀವ ದಹನ, ಕ್ಲೀನರ್ ಗೆ ಗಾಯ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಟೆಂಪೋಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಪಂಜಾಬ್‌ನ 28 ವರ್ಷದ ಚಾಲಕ ಸುಟ್ಟು ಕರಕಲಾಗಿದ್ದು, ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ಜನನಿಬಿಡ...

ಗುಜರಾತ್| ಅಂತರ್ಧರ್ಮೀಯ ದಂಪತಿಗೆ ಪೊಲೀಸರ ರಕ್ಷಣೆ; ‘ಲವ್ ಜಿಹಾದ್’ ಎಂದು ಕೂಗಿದ ವಿಎಚ್‌ಪಿ

ಮಾರ್ಚ್ 3 ರಂದು ಗುಜರಾತ್‌ನ ಅಹಮದಾಬಾದ್‌ನ ಮೆಟ್ರೋ ನ್ಯಾಯಾಲಯದ ಸಂಕೀರ್ಣದೊಳಗಿನ ವಿವಾಹ ನೋಂದಣಿ ಕಚೇರಿಯು ಅವ್ಯವಸ್ಥೆಯ ತಾಣವಾಯಿತು. ಗಾಂಧಿನಗರದ ಹಿಂದೂ ಮಹಿಳೆಯೊಬ್ಬರು ನಗರದ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಲು ಬಂದ ನಂತರ ಹಿಂದುತ್ವ ಸಂಘಟನೆಯ...

ಖಮೇನಿ ಹತ್ಯೆ ಕುರಿತು ಪೋಸ್ಟ್‌ : ನ್ಯಾಷನಲ್ ಕಾನ್ಫರೆನ್ಸ್ ಸಂಸದ, ಶ್ರೀನಗರದ ಮಾಜಿ ಮೇಯರ್ ವಿರುದ್ಧ ಎಫ್‌ಐಆರ್

ದಾರಿತಪ್ಪಿಸುವ ಆನ್‌ಲೈನ್ ವಿಷಯವನ್ನು ಹಂಚಿಕೊಂಡ ಆರೋಪದ ಮೇಲೆ ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಸಂಸದ ಅಗಾ ಸೈಯದ್ ರೂಹುಲ್ಲಾ ಮೆಹದಿ ಮತ್ತು ಶ್ರೀನಗರದ ಮಾಜಿ ಮೇಯರ್ ಜುನೈದ್ ಅಝೀಂ ಮಟ್ಟು ವಿರುದ್ಧ...

ಒಡಿಶಾ| ಮೇಕೆ ಕಳ್ಳತನ ಶಂಕೆಯಿಂದ 14 ವರ್ಷದ ಬಾಲಕನನ್ನು ಹೊಡೆದು ಕೊಂದ ಗುಂಪು; 12 ಜನರ ಬಂಧನ

ಒಡಿಶಾದ ಮಯೂರ್‌ಭಂಜ್ ಜಿಲ್ಲೆಯಲ್ಲಿ ಮೇಕೆ ಕಳ್ಳತನದ ಶಂಕೆಯಿಂದ ಗ್ರಾಮಸ್ಥರು ಥಳಿಸಿದರಿಂದ 14 ವರ್ಷದ ಬಾಲಕನೊಬ್ಬ ಸಾವನ್ನಪ್ಪಿ, ಇನ್ನೊಬ್ಬ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಟಿರಿಂಗ್ ಪೊಲೀಸ್ ಠಾಣೆ ವ್ಯಾಪ್ತಿಯ ಇಂಡೋಖೋಲಿ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಪಶ್ಚಿಮ ಏಷ್ಯಾದಲ್ಲಿ ಸಿಲುಕಿದ್ದ ಮಹಾರಾಷ್ಟ್ರದ 164 ಪ್ರವಾಸಿಗರು ಮನೆಗೆ ಮರಳಿದ್ದಾರೆ: ಶಿವಸೇನೆ

ಮುಂಬೈ: ಅಮೆರಿಕ-ಇಸ್ರೇಲ್-ಇರಾನ್ ಸಂಘರ್ಷದಿಂದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಸಿಲುಕಿಕೊಂಡಿದ್ದ ಮಹಾರಾಷ್ಟ್ರದ ಒಟ್ಟು 164 ಪ್ರವಾಸಿಗರು ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ವ್ಯವಸ್ಥೆ ಮಾಡಿದ ಎರಡು ವಿಮಾನಗಳಲ್ಲಿ ಮನೆಗೆ ಮರಳಿದ್ದಾರೆ ಎಂದು ಶಿವಸೇನಾ ಪದಾಧಿಕಾರಿಯೊಬ್ಬರು ಬುಧವಾರ...

‘ಇದು ಟ್ರಂಪ್ ವಾಗ್ದಾನ ಮಾಡಿದ ರಕ್ಷಣೆ’: 165 ಮಕ್ಕಳ ಸಾಮೂಹಿಕ ಸಮಾಧಿಯ ಫೋಟೋ ಹಂಚಿಕೊಂಡ ಇರಾನ್; ಮರುಗಿದ ಮಾನವ ಜಗತ್ತು

ದಕ್ಷಿಣ ಇರಾನ್‌ನ ಮಿನಾಬ್ ನಗರದ ಬಾಲಕಿಯರ ಶಾಲೆಯೊಂದರ ಮೇಲೆ ಶನಿವಾರ (ಫೆ.28) ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಸಾವನ್ನಪ್ಪಿದ 165 ವಿದ್ಯಾರ್ಥಿನಿಯರು ಮತ್ತು ಸಿಬ್ಬಂದಿಯ ಬೃಹತ್ ಅಂತಿಮ ಸಂಸ್ಕಾರ ಮೆರವಣಿಗೆ ಮಂಗಳವಾರ (ಮಾ.3)...

ಖಮೇನಿ ಪುತ್ರ ಮೊಜ್ತಬಾ ಅವರನ್ನು ಸರ್ವೋಚ್ಚ ನಾಯಕನನ್ನಾಗಿ ಹೆಸರಿಸಿದ ಇರಾನ್ ತಜ್ಞರ ಸಭೆ?

ದಿವಂಗತ ಅಯತೊಲ್ಲಾ ಅಲಿ ಖಮೇನಿಯವರ ಪುತ್ರ 56 ವರ್ಷದ ಮೊಜ್ತಬಾ ಖಮೇನಿ ಅವರನ್ನು ತಜ್ಞರ ಸಭೆಯು ಇರಾನ್‌ನ ಹೊಸ ಸರ್ವೋಚ್ಚ ನಾಯಕನನ್ನಾಗಿ ಆಯ್ಕೆ ಮಾಡಿದೆ ಎಂದು ಬಲ್ಲ ಮೂಲಗಳನ್ನು ಉಲ್ಲೇಖಿಸಿ ಇರಾನ್ ಅಂತಾರಾಷ್ಟ್ರೀಯ...

ಲೋಕಸಭೆ ಹಕ್ಕುಬಾಧ್ಯತಾ ಸಮಿತಿಗೆ 15 ಸದಸ್ಯರ ಆಯ್ಕೆ; ರವಿಶಂಕರ್ ಪ್ರಸಾದ್ ನೇತೃತ್ವ

ಹದಿನೆಂಟನೇ ಲೋಕಸಭೆ ರಚನೆಯಾಗಿ ಸುಮಾರು ಎರಡು ವರ್ಷಗಳ ನಂತರ, ಸ್ಪೀಕರ್ ಓಂ ಬಿರ್ಲಾ ಅವರು ಮಂಗಳವಾರ (ಮಾ.3) ಹಕ್ಕುಬಾಧ್ಯತಾ ಸಮಿತಿಗೆ 15 ಸದಸ್ಯರನ್ನು ನಾಮನಿರ್ದೇಶನ ಮಾಡಿದ್ದಾರೆ. ಸದನ ಮತ್ತು ಅದರ ಸದಸ್ಯರ ಹಕ್ಕುಚ್ಯುತಿಗೆ...

ಪಶ್ಚಿಮ ಬಂಗಾಳ : ಚುನಾವಣೆ ಹೊಸ್ತಿಲಲ್ಲಿ ತ್ವರಿತಗೊಂಡ ಸಿಎಎ ಜಾರಿ ಪ್ರಕ್ರಿಯೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಪ್ರಕ್ರಿಯೆಯು ಅತ್ಯಂತ ವೇಗ ಪಡೆದುಕೊಂಡಿದೆ. ಇತ್ತೀಚಿನ ಬೆಳವಣಿಗೆಗಳು ರಾಜ್ಯದ ರಾಜಕೀಯ ಸಮೀಕರಣಗಳನ್ನು ಬದಲಿಸುವ ಮುನ್ಸೂಚನೆ ನೀಡುತ್ತಿವೆ. ಕೇಂದ್ರ ಗೃಹ ಸಚಿವಾಲಯವು...