Homeಮುಖಪುಟಮಹುವಾ ಮೊಯಿತ್ರಾ ಅವರ ಲಾಗಿನ್, ಪ್ರಯಾಣದ ವಿವರ ಕೇಳಿದ ಸಂಸದೀಯ ನೈತಿಕ ಸಮಿತಿ

ಮಹುವಾ ಮೊಯಿತ್ರಾ ಅವರ ಲಾಗಿನ್, ಪ್ರಯಾಣದ ವಿವರ ಕೇಳಿದ ಸಂಸದೀಯ ನೈತಿಕ ಸಮಿತಿ

- Advertisement -
- Advertisement -

ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಕೇಳಿ ಬಂದಿರುವ ಆರೋಪಗಳ ಮೇಲೆ ವಿಚಾರಣೆ ನಡೆಸುತ್ತಿರುವ ಸಂಸದೀಯ ನೈತಿಕ ಸಮಿತಿಯು ಗುರುವಾರ ತನ್ನ ಮೊದಲ ವಿಚಾರಣೆಯನ್ನು ನಡೆಸಿದ್ದು, ಮಹುವಾ ಮೊಯಿತ್ರಾ ಅವರ ಲಾಗಿನ್ ಮತ್ತು ಪ್ರಯಾಣದ ವಿವರಗಳನ್ನು ಕೇಳಿದೆ.

ಲೋಕಸಭೆಯಲ್ಲಿ ನೇರವಾಗಿ ಪ್ರಶ್ನೆಗಳನ್ನು ಪೋಸ್ಟ್‌ ಮಾಡಲು ಉದ್ಯಮಿ ದರ್ಶನ್ ಹಿರಾನಂದನಿಗೆ ಸಂಸದೀಯ ಲಾಗಿನ್ ಅನ್ನು ನೀಡಿದ್ದಾರೆ ಎಂಬ ಆರೋಪವನ್ನು ಪರಿಶೀಲಿಸಲು ಮಹುವಾ ಮೊಯಿತ್ರಾ ಅವರ ಲಾಗಿನ್ ಮತ್ತು ಸ್ಥಳಗಳ ವಿವರಗಳಿಗಾಗಿ ಸಮಿತಿಯು ಕೇಂದ್ರ ಐಟಿ ಮತ್ತು ಗೃಹ ಸಚಿವಾಲಯಗಳಿಗೆ ಪತ್ರ ಬರೆದಿದೆ.

ಸರ್ಕಾರ ಮತ್ತು ಅದಾನಿ ಗ್ರೂಪ್ ಅನ್ನು ಗುರಿಯಾಗಿಸಿ ಉದ್ಯಮಿ ದರ್ಶನ್ ಪರವಾಗಿ ಮೊಯಿತ್ರಾ ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಲು ಹಣ ಪಡೆದಿದ್ದಾರೆ ಎಂದು ಮೊಯಿತ್ರಾ ವಿರುದ್ಧ ಆರೋಪಿಸಲಾಗಿದೆ.

ದುಬೈನಲ್ಲಿ ನೆಲೆಸಿರುವ ದರ್ಶನ್ ಹಿರಾನಂದನಿ ಅವರ ಅಫಿಡವಿಟ್‌ನ್ನು ಅನುಮೋದಿಸಲಾಗಿದೆಯೇ ಎಂದು ಪರಿಶೀಲಿಸಲು ಸಮಿತಿಯು ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಪತ್ರ ಬರೆದಿದೆ.

ಅಫಿಡವಿಟ್‌ನಲ್ಲಿ, ಮಹುವಾ ಮೊಯಿತ್ರಾ ಅವರು ತಮ್ಮ ಲೋಕಸಭೆಯ ಇ-ಮೇಲ್ ಐಡಿಯನ್ನು ಹಂಚಿಕೊಂಡಿದ್ದಾರೆ, ಆದ್ದರಿಂದ ಅವರು ಅದಾನಿ ಗ್ರೂಪ್ ಅನ್ನು ಗುರಿಯಾಗಿಟ್ಟುಕೊಂಡು ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಎತ್ತಬಹುದು ಎಂದು ಹಿರಾನಂದಾನಿ ಆರೋಪಿಸಿದ್ದಾರೆ.

ಮಹುವಾ ಮೊಯಿತ್ರಾ ಅವರ ವಿಚಾರಣೆಯ ನಂತರ “ಇನ್ನು ಮುಂದೆ ಸಾಕ್ಷಿಗಳಿಲ್ಲ” ಎಂದು ಸಮಿತಿಯು ಹೇಳಿದೆ ಮತ್ತು ನವೆಂಬರ್ ಆರಂಭದಲ್ಲಿ ತನ್ನ ವರದಿಯನ್ನು ಸಲ್ಲಿಸುತ್ತದೆ.

ನಿನ್ನೆ ಸುಮಾರು ಮೂರು ಗಂಟೆಗಳ ಕಾಲ ನಡೆದ ವಿಚಾರಣೆಯಲ್ಲಿ ಸಮಿತಿಯು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮತ್ತು ವಕೀಲ ಜೈ ಅನಂತ್ ದೇಹದ್ರಾಯ್ ಅವರ ವಾದವನ್ನು ಆಲಿಸಿತು ಮತ್ತು ತೃಣಮೂಲ ಸಂಸದರ ವಿರುದ್ಧ ಅವರು ಮಾಡಿರುವ ಆರೋಪಗಳ ಪ್ರತಿಯೊಂದು ಅಂಶವನ್ನು ಚರ್ಚಿಸಿತು.

ನಿಶಿಕಾಂತ್ ದುಬೆ ಅವರು ಸುಪ್ರೀಂ ಕೋರ್ಟ್‌ಗೆ ದೇಹದ್ರಾಯ್ ದೂರಿನ ನಂತರ ತನಿಖೆಯನ್ನು ಪ್ರಾರಂಭಿಸಲು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರಿಗೆ ಮೊದಲು ಪತ್ರ ಬರೆದಿದ್ದರು.

ಇದನ್ನೂ ಓದಿ: ‘ಪ್ರಶ್ನೆಗಾಗಿ ನಗದು’ ಆರೋಪ: ಮಹುವಾ ಮೊಯಿತ್ರಾಗೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಿದ ಸಮಿತಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಕರ್ನಾಟಕದಲ್ಲಿ ಮುಸ್ಲಿಮರು ರಸ್ತೆ ಮಧ್ಯೆ ಗೋಹತ್ಯೆ ಮಾಡಿದ್ದಾರೆ ಎಂಬುವುದು ಸುಳ್ಳು

0
"ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯದವರು ರಸ್ತೆ ಮಧ್ಯೆಯೇ ಬಹಿರಂಗವಾಗಿ ಗೋಹತ್ಯೆ ಮಾಡಿದ್ದಾರೆ" ಎಂದು ಎಕ್ಸ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದೆ. ವಿಡಿಯೋದಲ್ಲಿ ಜೀಪ್‌ ಒಂದರ ಮುಂಭಾಗದಲ್ಲಿ ಹಸುವಿನ ಕಳೇಬರ ಕಟ್ಟಿದಂತೆ ಕಾಣುತ್ತಿದೆ. ಫ್ಯಾಕ್ಟ್‌ಚೆಕ್ : ವಿಡಿಯೋದ ಸತ್ಯಾಸತ್ಯತೆಯನ್ನು ನಾವು...