Homeಮುಖಪುಟಭಾರತ ತಲುಪಿದ ಇಥಿಯೋಪಿಯಾದ ಜ್ವಾಲಾಮುಖಿ ಬೂದಿ : ವಿಮಾನ ಸಂಚಾರ ವ್ಯತ್ಯಯ

ಭಾರತ ತಲುಪಿದ ಇಥಿಯೋಪಿಯಾದ ಜ್ವಾಲಾಮುಖಿ ಬೂದಿ : ವಿಮಾನ ಸಂಚಾರ ವ್ಯತ್ಯಯ

- Advertisement -
- Advertisement -

ಸುಮಾರು 10 ರಿಂದ 12 ಸಾವಿರ ವರ್ಷಗಳ ನಂತರ ಮೊದಲ ಬಾರಿಗೆ, 2025 ನವೆಂಬರ್ 23ರಂದು ಇಥಿಯೋಪಿಯಾದ ಅಫಾರ್ ಪ್ರದೇಶದಲ್ಲಿರುವ ಹಯ್ಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟಗೊಂಡಿದೆ.

ಪರಿಣಾಮ ಭೂಮಿಯಿಂದ 15 ಕಿಲೋಮೀಟರ್ ಎತ್ತರಕ್ಕೆ ಆಕಾಶದತ್ತ ಭಾರೀ ಪ್ರಮಾಣದ ಜ್ವಾಲಾಮುಖಿ ಬೂದಿ, ಸಲ್ಫರ್ ಡೈಆಕ್ಸೈಡ್ ಮತ್ತು ಸಣ್ಣ ಗಾಜಿನಂತಹ ಕಣಗಳು ಚಿಮ್ಮಿವೆ.

ಜ್ವಾಲಾಮುಖಿ ಬೂದಿಯ ಮೋಡ ಈಗ ಸಾವಿರಾರು ಕಿಲೋಮೀಟರ್ ದೂರ ಪ್ರಯಾಣಿಸಿ, ಕೆಂಪು ಸಮುದ್ರ ಮತ್ತು ಅರೇಬಿಯನ್ ಸಮುದ್ರವನ್ನು ದಾಟಿ ಭಾರತದ ಆಕಾಶಕ್ಕೆ ಬಂದಿದೆ. ನವೆಂಬರ್ 24ರ ಸಂಜೆ 6:30ರ ನಂತರ ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಆಕಾಶದಲ್ಲಿ ತೆಳುವಾದ ಮಂಜಿನಂತಹ ಪದರ ರಚನೆಯಾಗಿದೆ. ಆಕಾಶ ಸ್ವಲ್ಪ ಕಪ್ಪಗೆ ಗೋಚರಿಸಿದೆ.

ದೆಹಲಿಯ ಗಾಳಿಯ ಗುಣಮಟ್ಟ (ಎಕ್ಯೂಐ) ಈಗಾಗಲೇ 363 ರಿಂದ 435ರಷ್ಟು ‘ತೀವ್ರ’ ಮಟ್ಟದಲ್ಲಿದೆ. ಜ್ವಾಲಾಮುಖಿ ಬೂದಿ ಬಹಳ ಎತ್ತರದಲ್ಲಿ (25 ರಿಂದ 45 ಸಾವಿರ ಅಡಿ) ಇರುವುದರಿಂದ ಭೂಮಿಯ ಮೇಲಿನ ಮಾಲಿನ್ಯ ಹೆಚ್ಚಳವಾಗುವ ಸಾಧ್ಯತೆ ಕಡಿಮೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ.

ಆದರೆ, ಸ್ವಲ್ಪ ಬೂದಿ ಕೆಳಗೆ ಬಂದರೆ ಕಣ್ಣು, ಗಂಟಲು, ಶ್ವಾಸಕೋಶಕ್ಕೆ ತೊಂದರೆ ಆಗಬಹುದು. ಆಸ್ತಮಾ, ಹೃದ್ರೋಗ ಇರುವವರು ಎಚ್ಚರ ವಹಿಸಬೇಕು ಎಂದು ಐಎಂಡಿ ಮುನ್ನೆಚ್ಚರಿಕೆ ನೀಡಿದೆ.

ವಿಮಾನಗಳ ಹಾರಾಟದಲ್ಲಿ ವ್ಯತ್ಯಯ

ಜ್ವಾಲಾಮುಖಿ ಬೂದಿ ವಿಮಾನದ ಇಂಜಿನ್‌ಗೆ ತುಂಬಾ ಅಪಾಯಕಾರಿ. ಹಾಗಾಗಿ, ದೆಹಲಿ, ಮುಂಬೈ, ಹೈದರಾಬಾದ್, ಕೊಚ್ಚಿ ಸೇರಿದಂತೆ ಭಾರತದ ಹಲವು ವಿಮಾನ ನಿಲ್ದಾಣಗಳಿಂದ ಕೆಲ ವಿಮಾನಗಳ ಹಾರಾಟ ರದ್ದುಪಡಿಸಲಾಗಿದೆ. ಇನ್ನೂ ಕೆಲವು ತಡವಾಗಿ ಹಾರಾಟ ನಡೆಸಿವೆ.

ಮಧ್ಯಪ್ರಾಚ್ಯ ಮತ್ತು ಯೂರೋಪ್‌ನಿಂದ ಭಾರತಕ್ಕೆ ಬರುವ ವಿಮಾನಗಳು ಬೇರೆ ದಾರಿಯಲ್ಲಿ ಬಂದಿವೆ. ಇಂದು (ನ.25) ಸಂಜೆ 7:30ರ ನಂತರ ಬೂದಿಯ ಮೋಡ ಭಾರತದಿಂದ ಹೊರಹೋಗುತ್ತದೆ ಎಂದು ಐಎಂಡಿ ಹೇಳಿದೆ.

ಜ್ವಾಲಾಮುಖಿಯ ಬೂದಿ ಮುಖ್ಯವಾಗಿ ದೆಹಲಿಯಲ್ಲಿ ಕಾಣಿಸಿಕೊಂಡಿದೆ. ದೆಹಲಿಯಲ್ಲಿ ಈಗಾಗಲೇ ವಿಪರೀತ ವಾಯುಮಾಲಿನ್ಯ ಇರುವುದರಿಂದ ಜನರು ಹೊರಗಡೆ ಹೋಗುವಾಗ N95 ಮಾಸ್ಕ್ ಧರಿಸುವಂತೆ ಆಡಳಿತ ಸಲಹೆ ನೀಡಿದೆ.

ಮಕ್ಕಳು, ಹಿರಿಯರು, ಶ್ವಾಸಕೋಶ ಸಮಸ್ಯೆ ಇರುವವರು ಹೆಚ್ಚು ಎಚ್ಚರಿಕೆ ವಹಿಸಬೇಕು. ವಿಮಾನ ಪ್ರಯಾಣ ಮಾಡುತ್ತಿದ್ದರೆ ಫ್ಲೈಟ್ ಸ್ಟೇಟಸ್ ಚೆಕ್ ಮಾಡಿಕೊಳ್ಳಿ, ಎಕ್ಯೂಐ ಆಪ್‌ನಲ್ಲಿ (ಸಮೀರ್ ಆಪ್) ಗಾಳಿಯ ಸ್ಥಿತಿ ನೋಡುತ್ತಿರಿ ಎಂದು ನಿರ್ದೇಶಿಸಿದೆ.

ಜ್ವಾಲಾಮುಖಿಯ ಬೂದಿಯ ಮೋಡ ನಾಳೆ (ನ.26) ಭಾರತದ ಆಕಾಶದಿಂದ ಪೂರ್ತಿಯಾಗಿ ಹೊರಟು ಚೀನಾ ಕಡೆಗೆ ಸಾಗುತ್ತದೆ ಎಂದು ಐಎಂಡಿ ತಿಳಿಸಿದೆ. ನಾಳೆ ಸಂಜೆಯ ನಂತರ ದೆಹಲಿ-ಉತ್ತರ ಭಾರತದ ಆಕಾಶ ಸ್ವಲ್ಪ ಸ್ಪಷ್ಟವಾಗುವ ಸಾಧ್ಯತೆ ಇದೆ (ಆದರೂ ಸಾಮಾನ್ಯ ಮಾಲಿನ್ಯ ಇರುತ್ತದೆ).

ಜ್ವಾಲಾಮುಖಿ ಸ್ಪೋಟಿಸಿದ ಜಾಗ ಭಾರತದಿಂದ ಎಷ್ಟು ದೂರದಲ್ಲಿದೆ?

ಹಯ್ಲಿ ಗುಬ್ಬಿ ಜ್ವಾಲಾಮುಖಿ ಇಥಿಯೋಪಿಯಾದ ಅಫಾರ್ ಪ್ರದೇಶದಲ್ಲಿದೆ. ಇದರ ಅಂದಾಜು ಸ್ಥಾನ : 14° 15′ ಉತ್ತರ ಅಕ್ಷಾಂಶ, 40° 40′ ಪೂರ್ವ ರೇಖಾಂಶ (ಎರ್ಟಾ ಅಲೆ ಜ್ವಾಲಾಮುಖಿಯ ಸಮೀಪದಲ್ಲಿ). ಭಾರತದ ದೆಹಲಿಗೆ (ಸುಮಾರು 28° 36′ ಉತ್ತರ, 77° 12′ ಪೂರ್ವ) ಈ ಜ್ವಾಲಾಮುಖಿಯಿಂದ ನೇರ ಗಾಳಿಪಥದ ದೂರ ಸುಮಾರು 3,800 ಕಿಲೋಮೀಟರ್ (2,360 ಮೈಲ್) ಎಂದು ವರದಿಗಳು ಹೇಳಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...