Homeಅಂತರಾಷ್ಟ್ರೀಯಕೊರೊನಾ 3ನೇ ಅಲೆಯ ಆತಂಕ ಹೆಚ್ಚಿಸಿದ ಯುರೋ ಕಪ್ ಫುಟ್ಬಾಲ್ ಟೂರ್ನಿ

ಕೊರೊನಾ 3ನೇ ಅಲೆಯ ಆತಂಕ ಹೆಚ್ಚಿಸಿದ ಯುರೋ ಕಪ್ ಫುಟ್ಬಾಲ್ ಟೂರ್ನಿ

- Advertisement -
- Advertisement -

ಯುರೋಪ್ ದೇಶಗಳಲ್ಲಿ ಕಳೆದ ಒಂದು ತಿಂಗಳಿನಿಂದ ಫುಟ್ಬಾಲ್ ಕಲರವ ಆರಂಭವಾಗಿದೆ. ಕಳೆದ 1 ವರ್ಷದಿಂದ ಖಾಲಿ ಮೈದಾನಗಳಲ್ಲಿ ನಡೆಯುತ್ತಿದ್ದ ಫುಟ್ಬಾಲ್ ಪಂದ್ಯಗಳು ಈಗ ತುಂಬಿ ತುಳುಕಾಡುತ್ತಿವೆ. ಮೈದಾನಗಳ ಹೊರಗೆ, ವಿಮಾನ ನಿಲ್ಧಾಣ, ರೈಲ್ವೆ ಸ್ಟೇಷನ್, ಮಾರ್ಕೆಟ್ ಎಲ್ಲೆಡೆಯೂ ಈಗ ಫುಟ್ಬಾಲ್ ಗುಂಗು ಗುನುಗುತ್ತಿದೆ. ಜೂನ್ 11 ರಿಂದ ಜುಲೈ 11ರ ವರೆಗೆ ನಡೆಯುತ್ತಿರುವ ಯುರೋ ಕಪ್ 2020 ಫುಟ್ಬಾಲ್ ಟೂರ್ನಿ ಯುರೋಪಿನ ನಗರಗಳಲ್ಲಿ ಅಪಾರ ಜನಸಂದಣಿಗೆ ಕಾರಣವಾಗುತ್ತಿದೆ. ಸಾವಿರಾರು ಫುಟ್ಬಾಲ್ ಪ್ರಿಯರು ಒಂದು ದೇಶದಿಂದ ಮತ್ತೊಂದು ದೇಶಕ್ಕೆ ಪ್ರಯಾಣ ಬೆಳೆಸುತ್ತಿದ್ದಾರೆ. ಯುರೋಪಿನಲ್ಲಿ ವರ್ಷಗಳ ಕಾಲ ರೂಡಿಸಿಕೊಂಡು ಬಂದಿದ್ದ ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸುವ ಶಿಸ್ತು ಫುಟ್ಬಾಲ್ ಟೂರ್ನಿಯ ವೇಳೆ ಎಲ್ಲೂ ಕಾಣಿಸುತ್ತಿಲ್ಲ. ಈ ಜನಸಂದಣಿಯು ಬ್ರಿಟನ್, ರಷ್ಯಾ ದೇಶಗಳ ಅಡಳಿತ ವ್ಯವಸ್ಥೆಗೆ ತೀವ್ರ ತಲೆ ನೋವಾಗಿ ಪರಿಣಮಿಸಿದ್ದು ಕೊರೊನಾ ಮೂರನೇ ಅಲೆಯ ಸಾಧ್ಯತೆಯನ್ನು ಹುಟ್ಟು ಹಾಕಿದೆ.

ಬ್ರಿಟನ್ ರಾಜಧಾನಿ ಲಂಡನ್ ಮತ್ತು ರಷ್ಯಾದ ಸೇಂಟ್‌ ಪೀಟರ್ಸ್‌ ಬರ್ಗ್‌ ದೇಶಗಳಲ್ಲಿ ಡೆಲ್ಟಾ ಮತ್ತು ಡೆಲ್ಟಾ ಪ್ಲಸ್‌ ರೂಪಾಂತರಿ ವೈರಸ್‌ಗಳು ವೇಗವಾಗಿ ಹರಡುತ್ತಿರುವುದರಿಂದ ಅಲ್ಲಿನ ಸರ್ಕಾರಗಳು ಸಾಕಷ್ಟು ಅತಂಕಕ್ಕೆ ಒಳಗಾಗಿವೆ. ತಮ್ಮ ದೇಶದ ಬಹುತೇಕ ನಾಗರಿಕರಿಗೆ ವ್ಯಾಕ್ಸಿನ್ ನೀಡಿರುವ ಯುರೋಪಿಯನ್‌ ದೇಶಗಳಿಗೆ ಡೆಲ್ಟಾ ಪ್ಲಸ್‌ ರೂಪಾಂತರಿಯ ಮೇಲೆ ವ್ಯಾಕ್ಸಿನ್‌ಗಳು ಹೆಚ್ಚು ಪರಿಣಾಮ ಬೀರುವುದಿಲ್ಲ ಎಂಬ ವೈದ್ಯಕೀಯ ವರದಿಗಳು ನಿದ್ದೆಗೆಡಿಸಿದ್ದು ಜನ ಸಂದಣಿಯನ್ನು ನಿಯಂತ್ರಿಸಲು ಅಲ್ಲಿನ ಸರ್ಕಾರಗಳು ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿವೆ.

ನಾವು ಡೆಲ್ಟಾ ಮತ್ತು ಡೆಲ್ಟಾ ಪ್ಲಸ್ ರೂಪಾಂತರಿಯನ್ನು ಹರಡಲೇಬೇಕೆಂದು ಹೊರಟರೆ ಇದೇ ಸರಿಯಾದ ಉಪಾಯ ಎಂದು ಲಂಡನ್‌ನ ಸಾಂಕ್ರಾಮಿಕ ರೋಗ ತಜ್ಞ ಅಂಟೋನಿ ಫ್ಲಾಹಾಲ್ಟ್‌ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಅಂಟಾರ್ಟಿಕದಲ್ಲೂ ಏರಿದ ತಾಪಮಾನ: ಕರಗುತ್ತಿವೆ ನೀರ್ಗಲ್ಲುಗಳು

ಮುಖ್ಯವಾಗಿ ಮುಂದೆ ನಡೆಯಲಿರುವ ಎರಡು ಸೆಮಿಫೈನಲ್ ಪಂದ್ಯಗಳಲ್ಲಿ ಒಂದು ಲಂಡನ್‌ನಲ್ಲಿಯೂ ಮತ್ತೊಂದು ರಷ್ಯಾದ ರಾಜಧಾನಿ ಸೇಂಟ್ ಪೀಟರ್ಸ್‌ಬರ್ಗ್‌ನಲ್ಲಿಯೂ ನಡೆಯಲಿದೆ. ಈ ಪಂದ್ಯಗಳಿಗೆ ಅತಿಹೆಚ್ಚಿನ ಪ್ರೇಕ್ಷಕರು ಆಗಮಿಸುವ ಸಾಧ್ಯತೆ ಇದೆ. ಮತ್ತೊಂದೆಡೆ ಲಂಡನ್ ಮತ್ತು ಸೇಂಟ್‌ಪೀಟರ್ಸ್‌ಬರ್ಗ್‌ ಎರಡೂ ನಗರಗಳಲ್ಲಿ ದಿನನಿತ್ಯದ ಸೋಂಕಿನ ಪ್ರಮಾಣಗಳಲ್ಲಿ ಹೆಚ್ಚಳವಾಗಿದ್ದು ಡೆಲ್ಟಾ ರೂಪಾಂತರಿಯ ಸಾಕಷ್ಟು ಪ್ರಕರಣಗಳು ವರದಿಯಾಗುತ್ತಿದೆ. ಸೆಮಿಫೈನಲ್ ಪಂದ್ಯಗಳಿಗೆ 60,000 ಜನ ಪ್ರೇಕ್ಷಕರಿಗೆ ಪಂದ್ಯ ವೀಕ್ಷಿಸಲು ಅವಕಾಶ ಮಾಡಿಕೊಡಲಾಗಿದ್ದು, ಮೈದಾನದ ಹೊರಗೆ ವ್ಯಾಪಾರಿಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳಲ್ಲಿ ಸಾಮಾಜಿಕ ಅಂತರದ ಪಾಲನೆ ದುಸ್ತರವಾಗಲಿದೆ ಎಂದು ಬ್ರಿಟನ್ ಮಾಧ್ಯಮಗಳು ವರದಿ ಮಾಡಿವೆ.

ಮೊನ್ನೆ ಇಂಗ್ಲೆಂಡ್ ತಂಡವು ಫ್ರಿಕ್ವಾರ್ಟರ್‌ ಫೈನಲ್ ಪಂದ್ಯವನ್ನು ಗೆಲ್ಲುತ್ತಿದ್ದಂತೆ ಲಂಡನ್‌ನ ವೆಂಬ್ಲೆ ಫುಟ್ಬಾಲ್ ಮೈದಾನದಲ್ಲಿ ನೆರೆದಿದ್ದ 42,000 ಜನ ಪ್ರೇಕ್ಷಕರು ಮಾಸ್ಕ್‌ ಧರಿಸದೇ, ಸಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ಮೈದಾನದ ಹೊರಗೆ ಸಂಭ್ರಮಿಸಿದ ರೀತಿ ಬ್ರಿಟನ್ ಮತ್ತು ಅಂತರಾಷ್ಟ್ರೀಯ ಮಾಧ್ಯಮದಲ್ಲಿ ಸಾಕಷ್ಟು ಟೀಕೆಗೆ ಗುರಿಯಾಗಿತ್ತು. ವೆಂಬ್ಲೆ ಮೈದಾನದ ಹೊರಗೆ ಸಾಗರೊಪಾದಿಯಲ್ಲಿ ನೆರೆದ ಜನ ಪ್ರವಾಹದ ಚಿತ್ರ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ವಿರೋಧಕ್ಕೆ ಗುರಿಯಾಗಿತ್ತು. ಇಂಗ್ಲೆಂಡ್ ತಂಡ ಅಂತಿಮ 8 ರ ಘಟ್ಟಕ್ಕೆ ಪ್ರವೇಶಿಸಿದ್ದು ಮುಂದಿನ ಪಂದ್ಯಗಳಲ್ಲಿ ಇನ್ನೂ ಹೆಚ್ಚಿನ ಪ್ರೇಕ್ಷಕರು ಮೈದಾನದಲ್ಲಿ ಸೇರಲಿದ್ದಾರೆ. ಜೊತೆಗೆ ಯುರೋಪ್‌ನಲ್ಲಿ ಬೇಸಿಗೆ ರಜೆ ಕೂಡ ಅರಂಭವಾಗಿರುವುದು ಜನ ದಟ್ಟಣೆಗೆ ಇನ್ನೊಂದು ಕಾರಣವಾಗಿದೆ.

ಫುಟ್ಬಾಲ್ ಪಂದ್ಯಗಳನ್ನು ಬ್ರಿಟನ್‌ ದೇಶದ ಆಚಗೆ ಸ್ಥಳಾಂತರಿಸಬೇಕು ಎಂದು ಸಾಂಕ್ರಾಮಿಕ ರೋಗ ತಜ್ಞ ಅಂಟೋನಿ ಫ್ಲಾಹೆಟ್‌ ಆಗ್ರಹಿಸಿದ್ದಾರೆ. ಪಂದ್ಯಗಳನ್ನು ಕೊರೊನಾ ಅಪಾಯ ಕಡಿಮೆ ಇರುವ ದೇಶಗಳಿಗೆ ಸ್ಥಳಾಂತರಿಸುವುದು ಕಷ್ಟದ ಕೆಲಸವೇನಲ್ಲ ಎಂದು ಅಂತರಾಷ್ಟ್ರೀಯ ಆರೋಗ್ಯ ಸಂಸ್ಥೆಯ ನಿರ್ದೇಶಕರೂ ಆಗಿರುವ ಅಂಟೋನಿ ಫ್ಲಾಹೆಂಟ್ ಬ್ರಿಟನ್ ಸರ್ಕಾರ ಮತ್ತು ಫುಟ್ಬಾಲ್ ಟೂರ್ನಿಯನ್ನು ಆಯೋಜಿಸುರುವ UEFA ಸಂಸ್ಥೆಗೆ ಸೂಚನೆಯನ್ನೂ ನೀಡಿದ್ದಾರೆ.

ಕೊರೊನಾ ಸೋಂಕಿನ ಆತಂಕದ ನಡುವೆಯೂ ಪಂದ್ಯಗಳನ್ನು ಸುರಕ್ಷಿತ ವಾತಾವರಣದಲ್ಲಿ ನಡೆಸಲಾಗುತ್ತಿದೆ. ಎಲ್ಲಾ ಪಂದ್ಯಗಳು ನಿಗದಿತ ದಿನದಂದು ನಿಗದಿತ ಸ್ಥಳದಲ್ಲಿಯೇ ನಡೆಯಲಿವೆ. ಸಾಕಷ್ಟು ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು UEFA ಸಂಸ್ಥೆ ಹೇಳಿದೆ.

ಕಳೆದ ಒಂದು ವಾರದಲ್ಲಿ ಯುರೋಪ್‌ನಾದ್ಯಂತ ಕೊರೋನಾ ಸೋಂಕಿತರ ಪ್ರಮಾಣದಲ್ಲಿ 10% ಹೆಚ್ಚಳವಾಗಿದೆ ಎಂದು ವಿಶ್ವಆರೋಗ್ಯ ಸಂಸ್ಥೆ (WHO) ಹೇಳಿದ್ದು, 11 ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುರೋ ಫುಟ್‌ಬಾಲ್ ಕಪ್ ಟೂರ್ನಿ ಕೊರೊನಾ ಸೋಂಕಿನ ಹೆಚ್ಚಳಕ್ಕೆ ಕಾರಣವಾಗುವ ಸಾಧ್ಯವಿದ್ದು ಆತಿಥೇಯ ನಗರಗಳು ಹೆಚ್ಚು ಎಚ್ಚರಿಕೆ ವಹಿಸಬೇಕೆಂದು ಎಚ್ಚರಿಸಿದೆ.

ಹಂಗೇರಿ ರಾಜಧಾನಿ ಬುಡಾಪೆಸ್ಟ್‌ ನಗರದ ಕ್ರೀಡಾಂಗಣದಲ್ಲಿ ಕಿಕ್ಕಿರಿದು ನೆರೆದ ಫುಟ್ಬಾಲ್ ಅಭಿಮಾನಿಗಳು

ಡೆನ್ಮಾರ್ಕ್ ಮತ್ತು ಬೆಲ್ಜಿಯಮ್ ನಡುವಿನ ಪಂದ್ಯ ವೀಕ್ಷಿಸಲು ತೆರಳಿದ 4000 ಜನರಲ್ಲಿ ಡೆಲ್ಟಾ ರೂಪಾಂತರಿ ವೈರಸ್‌ ಕಂಡುಬಂದಿದೆಯೆಂದು ಅಧಿಕಾರಿಗಳು ತಿಳಿಸಿದ್ದಾರೆ. ಹಾಗೇ ಸ್ಕಾಟ್ಲೆಂಡ್‌ನಲ್ಲೂ ಇದೇ ಪರಿಸ್ಥಿತಿಯಿದ್ದು  ಫುಟ್ಬಾಲ್ ಪಂದ್ಯವನ್ನು ವೀಕ್ಷಿಸಲು ಲಂಡನ್‌ಗೆ ತೆರಳಿದ 2,000 ಜನರಲ್ಲಿ ಹೊಸ ರೂಪಾಂತರಿ ವೈರಸ್‌ ಪತ್ತೆಯಾಗಿದೆ ಎಂದು ಸ್ಕಾಟ್ಲೆಂಡ್ ಆರೋಗ್ಯ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಫಿನ್ಲೆಂಡ್‌ ದೇಶದ ಹೊರಗೆ ಪಂದ್ಯವನ್ನು ವೀಕ್ಷಿಸಲು ತೆರಳಿದ ದೇಶದ ನಾಗರಿಕರಲ್ಲಿ ಕೂಡ ಡೆಲ್ಟಾ ರೂಪಾಂತರಿ ವೈರಸ್ ಕಂಡು ಬಂದಿದ್ದು ಸರಿ ಸುಮಾರು 100 ಹೊಸ ಡೆಲ್ಟಾ ಪ್ರಕರಣಗಳು ವರದಿಯಾಗಿವೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

ಸಮುದಾಯಕ ಚಟುವಟಿಕೆಗಳಿಂದ ಕೊರೊನಾ ಸೋಂಕು ಹರಡಲು ಸಾಧ್ಯವಿಲ್ಲವೆಂದು ಹೇಳಲು ಆಗುವುದಿಲ್ಲ. ಆದರೆ ಫುಟ್ಬಾಲ್ ಒಂದರಿಂದಲೇ ಸೋಂಕು ಹರಡುತ್ತಿದೆ ಎಂಬುದನ್ನು ನಾನು ಒಪ್ಪುವುದಿಲ್ಲ. ಸ್ಥಳೀಯ ಆಡಳಿತಗಳು ಮತ್ತು ಸರ್ಕಾರಗಳು ನಿರ್ಬಂಧಗಳನ್ನು ಸಡಿಲಿಸರುವುದರಿಂದ ಈ ಚಟುವಟಿಕೆಗಳು ನಡೆಯುತ್ತಿವೆ. ಕಠಿಣ ನಿಯಮಗಳನ್ನು ತೆರವುಗೊಳಿಸುವ ಮೊದಲೇ ಸರ್ಕಾರಗಳು ಸೋಂಕಿನ ನಿಯಂತ್ರಣಕ್ಕೆ ಸೂಕ್ತಕ್ರಮ ಕೈಗೊಳ್ಳಬೇಕಿತ್ತು ಎಂದು ಯುರೋಪಿಯನ್‌ ಫುಟ್ಬಾಲ್‌ ಸಂಘಟನೆ (UEFA)  ವೈದ್ಯಕೀಯ ಸಲಹೆಗಾರ ಡಾ. ಡೇನಿಯಲ್‌ ಕೋಚ್ ಅಭಿಪ್ರಾಯಪಟ್ಟಿದ್ದಾರೆ.

ವ್ಯಾಕ್ಸೀನ್ ಪಡೆಯದ ನಾಗರಿಕರು ಲಂಡನ್ ಮತ್ತು ರಷ್ಯಾದ ಸೇಂಟ್‌ ಪೀಟರ್ಸ್‌ಬರ್ಗ್‌ ನಗರಗಳಿಗೆ ಪಂದ್ಯವನ್ನು ವೀಕ್ಷಿಸಲು ತೆರಳದೇ ಇರುವುದು ಉತ್ತಮ ಎಂದು ಡಾ. ಅಂಟೋನಿ ಫ್ಲಾಹಾಲ್ಟ್‌ ಯುರೋಪ್‌ನ ನಾಗರಿಕರಲ್ಲಿ ಮನವಿ ಮಾಡಿದ್ದಾರೆ.

-ರಾಜೇಶ್ ಹೆಬ್ಬಾರ್


ಇದನ್ನೂ ಓದಿ: ಸರ್ಕಾರದ ತಪ್ಪುಗಳಿಂದಾಗಿ ವೈದ್ಯರು ಶಿಕ್ಷೆ ಅನುಭವಿಸುತ್ತಿದ್ದಾರೆ: CJI ಎನ್‌.ವಿ. ರಮಣ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...