ಭಾರತೀಯ ಸಂವಿಧಾನದ ಪಿತಾಮಹ ಡಾ.ಬಿ.ಆರ್. ಅಂಬೇಡ್ಕರ್ ಜೀವಂತವಾಗಿ ಇದ್ದಿದ್ದರೇ ಅವರನ್ನೂ ಪಾಕಿಸ್ತಾನ ಪರ ಎಂದು ಬಿಜೆಪಿ ದೂಷಿಸುತ್ತಿತ್ತು ಎಂದು ಪಿಡಿಪಿ ಅಧ್ಯಕ್ಷ ಮೆಹಬೂಬಾ ಮುಫ್ತಿ ಭಾನುವಾರ ಹೇಳಿದ್ದಾರೆ.
ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದ 370 ನೇ ವಿಧಿಯಲ್ಲಿ ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಲಾಗಿತ್ತು. ಆದರೆ ಕೇಂದ್ರ ಸರ್ಕಾರ ಅದನ್ನು ತೆಗೆದುಹಾಕಿದೆ ಎಂದು ಹೇಳಿದ್ದಾರೆ. 2019 ರಲ್ಲಿ ಕೇಂದ್ರವು ಕಾಶ್ಮೀರರಕ್ಕಿದ್ದ ವಿಶೇಷ ಸ್ಥಾನಮಾನವನ್ನು ತೆಗೆದು ಹಾಕಿದೆ.
ತಮ್ಮ ಪಕ್ಷ ಅಧಿಕಾರಕ್ಕೆ ಮರಳಿದರೆ ಆರ್ಟಿಕಲ್ 370 ರದ್ದತಿ ಮತ್ತು ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನದ ಬಗ್ಗೆ ಮತ್ತೊಮ್ಮೆ ಚಿಂತಿಸುತ್ತದೆ ಎಂದು ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಅವರ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದು ಬಿಜೆಪಿ ವಲಯದಲ್ಲಿ ಭಾರಿ ಟೀಕೆಗೆ ಕಾರಣವಾಗಿತ್ತು.
ಇದನ್ನೂ ಓದಿ: ಗೋಹತ್ಯೆ ತಡೆ ಕಾನೂನಿನ ದುರ್ಬಳಕೆ: ಪೊಲೀಸರ ವಿರುದ್ಧ ಅಲಹಾಬಾದ್ ಹೈಕೋರ್ಟ್ ಗರಂ
ದಿಗ್ವಿಜಯ್ ಸಿಂಗ್ ಅವರ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷವು ಪಾಕಿಸ್ತಾನದ ಕೈಗೊಂಬೆಯಾಗಿ ವರ್ತಿಸುತ್ತಿರುವುದಕ್ಕೆ ಸಾಕ್ಷಿ ಎಂದು ಬಿಜೆಪಿ ಹೇಳಿತ್ತು. ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ವಲ್ಪ ಕಾಲ ಬಿಜೆಪಿ ಮಿತ್ರರಾಗಿದ್ದ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರು ಬಿಜೆಪಿಯನ್ನು ಟೀಕಿಸಿದರು.
“ದೇವರಿಗೆ ಧನ್ಯವಾದಗಳು ಅಂಬೇಡ್ಕರ್ ಜೀ ಜೀವಂತವಾಗಿಲ್ಲ, ಇಲ್ಲದಿದ್ದರೆ ಅವರನ್ನೂ ಬಿಜೆಪಿ ಪಾಕಿಸ್ತಾನ ಪರ ಎಂದು ದೂಷಿಸುತ್ತಿತ್ತು” ಎಂದು ಅವರು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.
Indian constitution drafted by BR Ambedkar & subverted repeatedly by GOI to push their agenda is what granted Article 370 to J&K. Thank god Ambedkar ji isn’t alive or else he too would be slandered as pro- Pakistan by BJP. https://t.co/edkFkRWYp1
— Mehbooba Mufti (@MehboobaMufti) June 13, 2021
ಕ್ಲಬ್‌ಹೌಸ್ ಸಂಭಾಷಣೆಯ ಸಂದರ್ಭದಲ್ಲಿ ಸಿಂಗ್ ಈ ಹೇಳಿಕೆ ನೀಡಿದ್ದು, ಆ ವ್ಯಕ್ತಿಯನ್ನು ಪಾಕಿಸ್ತಾನ ಮೂಲದ ಪತ್ರಕರ್ತ ಎಂದು ಬಿಜೆಪಿ ಹೇಳಿದೆ.
“ಆರ್ಟಿಕಲ್ 370 ಅನ್ನು ಹಿಂತೆಗೆದುಕೊಳ್ಳುವ ಮತ್ತು ಜಮ್ಮು ಕಾಶ್ಮೀರ ರಾಜ್ಯದ ವಿಶೇಷ ಸ್ಥಾನಮಾನ ತೆಗೆದು ಹಾಕಿರುವ ನಿರ್ಧಾರವು ಅತ್ಯಂತ ದುಃಖಕರ. ಕಾಂಗ್ರೆಸ್ ಪಕ್ಷವು ಖಂಡಿತವಾಗಿಯೂ ಈ ವಿಷಯದ ಬಗ್ಗೆ ಮರು ಚಿಂತನೆ ಮಾಡುತ್ತಿತ್ತು” ಎಂದು ಕ್ಲಬ್ ಹೌಸ್ ಸಂಭಾಷಣೆಯಲ್ಲಿ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆಡಿಯೋ ವೈರಲ್ ಆಗಿದೆ.
ಇದನ್ನೂ ಓದಿ: ಕೊರೋನಾಗೆ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡು ಅನಾಥವಾದ ರಾಜ್ಯದ 42 ಮಕ್ಕಳು


