HomeUncategorizedಅಂಬೇಡ್ಕರ್‌ ಈಗ ಇದ್ದಿದ್ದರೆ ಬಿಜೆಪಿಗರು ಅವರನ್ನು ಪಾಕ್ ಪರ ಎನ್ನುತ್ತಿದ್ದರು: ಮೆಹಬೂಬಾ ಮುಫ್ತಿ

ಅಂಬೇಡ್ಕರ್‌ ಈಗ ಇದ್ದಿದ್ದರೆ ಬಿಜೆಪಿಗರು ಅವರನ್ನು ಪಾಕ್ ಪರ ಎನ್ನುತ್ತಿದ್ದರು: ಮೆಹಬೂಬಾ ಮುಫ್ತಿ

- Advertisement -
- Advertisement -

ಭಾರತೀಯ ಸಂವಿಧಾನದ ಪಿತಾಮಹ ಡಾ.ಬಿ.ಆರ್. ಅಂಬೇಡ್ಕರ್ ಜೀವಂತವಾಗಿ ಇದ್ದಿದ್ದರೇ ಅವರನ್ನೂ ಪಾಕಿಸ್ತಾನ ಪರ ಎಂದು ಬಿಜೆಪಿ ದೂಷಿಸುತ್ತಿತ್ತು ಎಂದು ಪಿಡಿಪಿ ಅಧ್ಯಕ್ಷ ಮೆಹಬೂಬಾ ಮುಫ್ತಿ ಭಾನುವಾರ ಹೇಳಿದ್ದಾರೆ.

ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದ 370 ನೇ ವಿಧಿಯಲ್ಲಿ ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಲಾಗಿತ್ತು. ಆದರೆ ಕೇಂದ್ರ ಸರ್ಕಾರ ಅದನ್ನು ತೆಗೆದುಹಾಕಿದೆ ಎಂದು ಹೇಳಿದ್ದಾರೆ. 2019 ರಲ್ಲಿ ಕೇಂದ್ರವು ಕಾಶ್ಮೀರರಕ್ಕಿದ್ದ ವಿಶೇಷ ಸ್ಥಾನಮಾನವನ್ನು ತೆಗೆದು ಹಾಕಿದೆ.

ತಮ್ಮ ಪಕ್ಷ ಅಧಿಕಾರಕ್ಕೆ ಮರಳಿದರೆ ಆರ್ಟಿಕಲ್ 370 ರದ್ದತಿ ಮತ್ತು ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನದ ಬಗ್ಗೆ ಮತ್ತೊಮ್ಮೆ ಚಿಂತಿಸುತ್ತದೆ ಎಂದು ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಅವರ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದು ಬಿಜೆಪಿ ವಲಯದಲ್ಲಿ ಭಾರಿ ಟೀಕೆಗೆ ಕಾರಣವಾಗಿತ್ತು.

ಇದನ್ನೂ ಓದಿ: ಗೋಹತ್ಯೆ ತಡೆ ಕಾನೂನಿನ ದುರ್ಬಳಕೆ: ಪೊಲೀಸರ ವಿರುದ್ಧ ಅಲಹಾಬಾದ್ ಹೈಕೋರ್ಟ್ ಗರಂ

ದಿಗ್ವಿಜಯ್ ಸಿಂಗ್ ಅವರ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷವು ಪಾಕಿಸ್ತಾನದ ಕೈಗೊಂಬೆಯಾಗಿ ವರ್ತಿಸುತ್ತಿರುವುದಕ್ಕೆ ಸಾಕ್ಷಿ ಎಂದು ಬಿಜೆಪಿ ಹೇಳಿತ್ತು. ಜಮ್ಮು ಮತ್ತು ಕಾಶ್ಮೀರದಲ್ಲಿ ಸ್ವಲ್ಪ ಕಾಲ ಬಿಜೆಪಿ ಮಿತ್ರರಾಗಿದ್ದ ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರು ಬಿಜೆಪಿಯನ್ನು ಟೀಕಿಸಿದರು.

“ದೇವರಿಗೆ ಧನ್ಯವಾದಗಳು ಅಂಬೇಡ್ಕರ್ ಜೀ ಜೀವಂತವಾಗಿಲ್ಲ, ಇಲ್ಲದಿದ್ದರೆ ಅವರನ್ನೂ ಬಿಜೆಪಿ ಪಾಕಿಸ್ತಾನ ಪರ ಎಂದು ದೂಷಿಸುತ್ತಿತ್ತು” ಎಂದು ಅವರು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಕ್ಲಬ್‌ಹೌಸ್ ಸಂಭಾಷಣೆಯ ಸಂದರ್ಭದಲ್ಲಿ ಸಿಂಗ್ ಈ ಹೇಳಿಕೆ ನೀಡಿದ್ದು, ಆ ವ್ಯಕ್ತಿಯನ್ನು ಪಾಕಿಸ್ತಾನ ಮೂಲದ ಪತ್ರಕರ್ತ ಎಂದು ಬಿಜೆಪಿ ಹೇಳಿದೆ.

“ಆರ್ಟಿಕಲ್ 370 ಅನ್ನು ಹಿಂತೆಗೆದುಕೊಳ್ಳುವ ಮತ್ತು ಜಮ್ಮು ಕಾಶ್ಮೀರ ರಾಜ್ಯದ ವಿಶೇಷ ಸ್ಥಾನಮಾನ ತೆಗೆದು ಹಾಕಿರುವ ನಿರ್ಧಾರವು ಅತ್ಯಂತ ದುಃಖಕರ. ಕಾಂಗ್ರೆಸ್ ಪಕ್ಷವು ಖಂಡಿತವಾಗಿಯೂ ಈ ವಿಷಯದ ಬಗ್ಗೆ ಮರು ಚಿಂತನೆ ಮಾಡುತ್ತಿತ್ತು” ಎಂದು ಕ್ಲಬ್ ಹೌಸ್ ಸಂಭಾಷಣೆಯಲ್ಲಿ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆಡಿಯೋ ವೈರಲ್ ಆಗಿದೆ.


ಇದನ್ನೂ ಓದಿ: ಕೊರೋನಾಗೆ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡು ಅನಾಥವಾದ ರಾಜ್ಯದ 42 ಮಕ್ಕಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಷ್ಟ್ರಧ್ವಜ ಹಾರಿಸದ ಮನೆಗಳ ಫೋಟೋ ತೆಗೆದುಕೊಳ್ಳಿ: ಉತ್ತರಾಖಾಂಡ್‌ ಬಿಜೆಪಿ ರಾಜ್ಯಾಧ್ಯಕ್ಷ ಹೇಳಿಕೆ

0
“75ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಯಾರ ಮನೆಯ ಮೇಲೆ ತಿರಂಗ ಧ್ವಜಗಳಿರುವುದಿಲ್ಲವೋ ಆ ಮನೆಯ ಫೋಟೋಗಳನ್ನು ತೆಗೆದುಕೊಳ್ಳಿ” ಎಂದು ಉತ್ತರಾಖಂಡ ಬಿಜೆಪಿ ಘಟಕದ ಮುಖ್ಯಸ್ಥ ತನ್ನ ಬೆಂಬಲಿಗರಿಗೆ ಸೂಚನೆ ನೀಡಿರುವುದಾಗಿ ‘ಟೈಮ್ಸ್ ಆಫ್...