ಚುನಾವಣೆ ಮುಗಿದು 50 ದಿನ ಕಳೆದರೂ ಬಿಜೆಪಿಗೆ ವಿರೋಧ ಪಕ್ಷ ನಾಯಕನನ್ನು ನೇಮಕ ಮಾಡಲು ಸಾಧ್ಯವಾಗಿಲ್ಲ ಎಂದು ರಾಜ್ಯ ಕಾಂಗ್ರೆಸ್ ಟೀಕೆ ಮುಂದುವರೆಸಿದೆ.
ಚುನಾವಣೆ ನಡೆದು ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾಗಿ ಸುಮಾರು ತಿಂಗಳು ಕಳೆದರೂ ಇನ್ನೂ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡದ ರಾಜ್ಯ ಬಿಜೆಪಿ ಬಗ್ಗೆ ಕಾಂಗ್ರೆಸ್ ಕುಹಕವಾಡಿದೆ.
ಈ ಬಗ್ಗೆ ರಾಜ್ಯ ಕಾಂಗ್ರೆಸ್ ಘಟಕ ಟ್ವೀಟ್ ಮಾಡಿದ್ದು, ”ಚುನಾವಣೆ ಮುಗಿದು 50ಕ್ಕೂ ಹೆಚ್ಚು ದಿನ ಕಳೆಯಿತು. ನಮ್ಮ ಸರ್ಕಾರ ರಚನೆ ಆಗಿ ತಿಂಗಳು ಕಳೆಯಿತು. ಮಂತ್ರಿಮಂಡಲವೂ ರಚನೆಯಾಯ್ತು. ಸರ್ಕಾರ ಕೆಲಸ ಶುರು ಮಾಡಿಯಾಯ್ತು. ಹಲವು ಕ್ಯಾಬಿನೆಟ್ ಸಭೆಗಳಾದವು, ಹಲವು ತೀರ್ಮಾನಗಳಾದವು. ಮೂರು ಗ್ಯಾರಂಟಿಗಳೂ ಜಾರಿಯಾದವು. ಇಷ್ಟೆಲ್ಲಾ ಆದರೂ ಬಿಜೆಪಿಗೆ ಒಬ್ಬ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲಾಗಿಲ್ಲ ಬಿಜೆಪಿ ಪಕ್ಷ ಆಡಳಿತ ಮಾಡಲು ನಾಲಾಯಕ್ ಎಂದು ಈಗಾಗಲೇ ಜನರು ಸರ್ಟಿಫಿಕೇಟ್ ಕೊಟ್ಟಾಗಿದೆ, ಈಗ ವಿರೋಧ ಪಕ್ಷವಾಗಿರಲೂ ಸಹ ನಾಲಾಯಕ್ ಎಂದು ತಿಳಿಯುತ್ತಿದೆ ಪ್ರಜಾಪ್ರಭುತ್ವದ ಸೌಂದರ್ಯಕ್ಕಾಗಿ ಸಮರ್ಥ ವಿಪಕ್ಷ ನಾಯಕನನ್ನು ಎದುರು ನೋಡುತ್ತಿದ್ದೇವೆ. ನಮ್ಮ ಆಸೆ ಈಡೇರುತ್ತದೋ ಇಲ್ಲವೋ ಗೊತ್ತಿಲ್ಲ” ಎಂದು ಟ್ವೀಟ್ ಮಾಡಿದೆ.
👉ಚುನಾವಣೆ ಮುಗಿದು 50ಕ್ಕೂ ಹೆಚ್ಚು ದಿನ ಕಳೆಯಿತು.
👉ನಮ್ಮ ಸರ್ಕಾರ ರಚನೆ ಆಗಿ ತಿಂಗಳು ಕಳೆಯಿತು.
👉ಮಂತ್ರಿಮಂಡಲವೂ ರಚನೆಯಾಯ್ತು.
👉ಸರ್ಕಾರ ಕೆಲಸ ಶುರು ಮಾಡಿಯಾಯ್ತು.
👉ಹಲವು ಕ್ಯಾಬಿನೆಟ್ ಸಭೆಗಳಾದವು, ಹಲವು ತೀರ್ಮಾನಗಳಾದವು.
👉ಮೂರು ಗ್ಯಾರಂಟಿಗಳೂ ಜಾರಿಯಾದವು.
ಇಷ್ಟೆಲ್ಲಾ ಆದರೂ ಬಿಜೆಪಿಗೆ ಒಬ್ಬ ವಿರೋಧ ಪಕ್ಷದ ನಾಯಕನ ಆಯ್ಕೆ…
— Karnataka Congress (@INCKarnataka) July 1, 2023
ಬಿಜೆಪಿಯಲ್ಲಿ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಪ್ರಮುಖವಾಗಿ ಮೂವರ ಹೆಸರು ಕೇಳಿಬರುತ್ತಿದೆ. ಬಸವರಾಜ್ ಬೊಮ್ಮಾಯಿ, ಅರವಿಂದ್ ಬೆಲ್ಲದ್ ಹಾಗೂ ಬಸನಗೌಡ ಪಾಟೀಲ್ ಯತ್ನಾಳ ಈ ಮೂವರಲ್ಲಿ ಒಬ್ಬರು ವಿಪಕ್ಷ ನಾಯಕನ ಸ್ಥಾನಕ್ಕೆ ನೇಮಕವಾಗುವ ಸಾಧ್ಯತೆ ಇದೆ.


