Homeಮುಖಪುಟಮನೆಯಲ್ಲಿ ಮಲಗಿದ್ದರೂ ಗೋವಿಂದರಾಜನಗರದಲ್ಲಿ ಗೆಲ್ಲುತ್ತಿದ್ದೆ, ಆದರೆ..: ವಿ.ಸೋಮಣ್ಣ ಬೇಸರ

ಮನೆಯಲ್ಲಿ ಮಲಗಿದ್ದರೂ ಗೋವಿಂದರಾಜನಗರದಲ್ಲಿ ಗೆಲ್ಲುತ್ತಿದ್ದೆ, ಆದರೆ..: ವಿ.ಸೋಮಣ್ಣ ಬೇಸರ

- Advertisement -
- Advertisement -

ನಾನು ಮನೆಯಲ್ಲಿ ಆರಾಮಾಗಿ ಮಲಗಿದ್ದರೂ ಗೋವಿಂದರಾಜನಗರದಲ್ಲಿ ಗೆಲ್ಲುತ್ತಿದ್ದೆ. ಆದರೆ ಪಕ್ಷ ನೀಡಿದ ಟಾಸ್ಕ್​​ ಪೂರೈಸಲು ಕ್ಷೇತ್ರ ಬಿಟ್ಟು ಹೋದೆ. ವರುಣಾ ಮತ್ತು ಚಾಮರಾಜನಗರ ಕ್ಷೇತ್ರದಲ್ಲಿ ಸ್ಪರ್ಧಿಸಿ, ಈಗ ಸೋತು ನಿರುದ್ಯೋಗಿ ಆಗಿ​​​ ಮನೆಯಲ್ಲಿ ಕುಳಿತಿದ್ದೇನೆ ಎಂದು ಮಾಜಿ ಸಚಿವ ವಿ ಸೋಮಣ್ಣ ಬೇಸರ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಅವರು, ತಾನು ಸೋತಿದ್ದುಏಕೆ ಎಂದು ಪದೇ ಪದೇ ಹೇಳುವ ಮೂಲಕ ತಾನೇ ಆ ಹುದ್ದೆಗೆ ಅರ್ಹ ವ್ಯಕ್ತಿ ಎಂದು ಬಿಂಬಿಸಿಕೊಳ್ಳಲು ಯತ್ನಿಸುತ್ತಿದ್ದಾರೆ.

ವಿಧಾನಸಭೆ ಚುನಾವಣೆ ಸೋಲಿಕ ಬಳಿಕ ಇದೇ ಮೊದಲ ಬಾರಿಗೆ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಗೆ ಭಾನುವಾರ ಭೇಟಿ ನೀಡಿದ ಅವರು ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ ಎಂಬುದನ್ನು ನಂಬಿದವನು ನಾನು. ಗೋವಿಂದರಾಜನಗರದಲ್ಲಿ 480 ಕೋಟಿ ರೂ.ಗೂ ಹೆಚ್ಚಿನ ಕೆಲಸ ಮಾಡಿರುವೆ. ಆಸ್ಪತ್ರೆ, ಶಾಲೆ, ಕಾಲೇಜು ಸೇರಿ ಹಲವು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಆದರೆ ಪಕ್ಷದ ತೀರ್ಮಾನಕ್ಕೆ ಬದ್ಧನಾಗಿ ನಡೆದುಕೊಂಡೆ. ಈಗ ಸೋತಿರುವೆ. ಬಿಜೆಪಿಯ ಕಾನೂನು ಪ್ರಕೋಷ್ಠ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳಲು ಪಕ್ಷದ ಕಚೇರಿಗೆ ಆಗಮಿಸಿದ್ದೇನೆ” ಎಂದರು.

ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿ, “ನಾನು ಈಗಾಲೇ ಹೈಕಮಾಂಡ್​​​​​​​ ಬಳಿ ಏನು ಹೇಳಬೇಕೋ ಅದನ್ನು ಹೇಳಿದ್ದೇನೆ. ನನಗೆ ಇತಿಮಿತಿ ಇದೆ. ಫೋರ್ ಸಿಕ್ಸ್ ಎಲ್ಲ ಇಲ್ಲೆ ಹೊಡೆಯುತ್ತೇನೆ ಅಂತ ಹೇಳಿದ್ದೇನೆ. ಈಗ ಬೋಲ್ಡ್ ಕೂಡ ಆಗಿದ್ದೇನೆ. ಪಕ್ಷ ಕೊಡುವ ಸಂದೇಶದ ಪ್ರಕಾರ ಕೆಲಸ ಮಾಡುತ್ತೇನೆ” ಎಂದು ಹೇಳಿದರು.

“ಡಬಲ್ ಸ್ಟ್ಯಾಂಡರ್ಡ್ ನನಗೆ ಇಲ್ಲ. ಎಲ್ಲ ಪಕ್ಷದಲ್ಲಿ ಕೆಲಸ ಮಾಡಿದ್ದೇನೆ. ಬಿಜೆಪಿಗೆ ಬಂದು ಎಂತೆಂತಹ ಸಂದರ್ಭದಲ್ಲೂ ಕೆಲಸ ಮಾಡಿದ್ದೇನೆ. ಈಗಲೂ ಅವಕಾಶ ಕೊಟ್ಟರೆ ಮಾಡುತ್ತೇನೆ” ಎಂದರು.

ನಿನ್ನೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬಿಜೆಪಿಯ ಸೋಲಿನ ನೈತಿಕ ಹೊಣೆ ಹೊತ್ತು ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿ ನಂತರ ಉಲ್ಟಾ ಹೊಡೆದಿದ್ದರು. ನಾನು ರಾಜೀನಾಮೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದರು.

ರಾಜ್ಯಧ್ಯಕ್ಷ ಸ್ಥಾನಕ್ಕೆ ವಿ ಸೋಮಣ್ಣ, ಸಿಟಿ ರವಿ, ಅಶ್ವತ್ ನಾರಾಯಣ ಹಾಗೂ ಆರ್ ಅಶೋಕ್ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಈ ನಡುವೆ ಹಾಲಿ ರಾಜ್ಯಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ರಾಜ್ಯಧ್ಯಕ್ಷ ಸ್ಥಾನ ಬಿಟ್ಟುಕೊಡಲು ಸಿದ್ದರಿಲ್ಲ. ಹಾಗಾಗಿ ದಿನೇ ದಿನೇ ಗೊಂದಲ ಹೆಚ್ಚಾಗಿದೆ.

ಇತ್ತೀಚೆಗೆ ವಿ.ಸೋಮಣ್ಣ ಬಹಿರಂಗವಾಗಿ ನಾನು ಆಕಾಂಕ್ಷಿ ಎಂದು ಘೋಷಿಸಿದ್ದರು. ”ಚುನಾವಣಾ ಬಳಿಕ ಎರಡು ಬಾರಿ ದೆಹಲಿಗೆ ಹೋಗಿ ಬಂದಿದ್ದೇನೆ. ಯಾರ ಮೇಲೆ ಏನು ಅಭಿಪ್ರಾಯ ಎಂದು ಹೇಳುವುದಕ್ಕಿಂತ ನನ್ನ 45 ವರ್ಷದ ಅನುಭವ ಹೇಳಿದ್ದೇನೆ. ನನ್ನನ್ನು ರಾಜ್ಯಾಧ್ಯಕ್ಷ ಮಾಡಿ ಎಂದು ಹೇಳಿದ್ದೇನೆ. ಕೇಂದ್ರ ನಾಯಕರಿಗೆ ಪತ್ರ ಬರೆದಿದ್ದೇನೆ. ಅದು ಎಷ್ಟು ಚರ್ಚೆ ಆಗುತ್ತಿದೆ ಎನ್ನುವ ಬಗ್ಗೆ ಗೊತ್ತಿಲ್ಲ” ಎಂದಿದ್ದರು.

”ನಾನು ಬಿಜೆಪಿಗೆ ಬಂದು 15 ವರ್ಷ ಆಯಿತು. ಇಂತಹ ಪರಿಸ್ಥಿತಿಯಲ್ಲಿ ಬಿಜೆಪಿಯನ್ನು ಒಟ್ಟಿಗೆ ನಡೆಸಿಕೊಂಡು ಹೋಗಬೇಕಿದೆ. ಹೈಕಮಾಂಡ್ ನನಗೆ ನೀಡಿದ್ದ ಎಲ್ಲಾ ಟಾಸ್ಕ್ ಮಾಡಿದ್ದೇನೆ ಆದರೆ ಆರ್ ಅಶೋಕ್ ಅವರು ಟಾಸ್ಕ್‌ಅನ್ನು ಸರಿಯಾಗಿ ನಿಭಾಯಿಸಿಲ್ಲ. ಅವರು ಡಿಕೆ ಶಿವಕುಮಾರ್ ವಿರುದ್ಧ ಸ್ಪರ್ಧೆ ಮಾತ್ರ ಮಾಡಿದರು. ಆದರೆ ಪೈಪೋಟಿ ನೀಡುವ ಪ್ರಯತ್ನ ಮಾಡಲಿಲ್ಲ. ಆದರೆ ನಾನು ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ಮಾಡಿ ಪ್ರಬಲ ಪೈಪೋಟಿ ನೀಡಿದ್ದೇನೆ. ನನ್ನ ತವರು ಕ್ಷೇತ್ರ ಬಿಟ್ಟು ಬೇರೆ ಎರಡು ಕಡೆಗಳಲ್ಲಿ ನನಗೆ ಸ್ಪರ್ಧೆ ಮಾಡಲು ಟಾಸ್ಕ್ ಕೊಟ್ಟರು, ನಾನು ಅದಕ್ಕೆ ಒಪ್ಪಿದೆ. ನಾನು ಪಕ್ಷ ಹೇಳಿದಂತೆ ನಡೆದುಕೊಂಡು ಬಂದಿದ್ದೇನೆ ಹಾಗಾಗಿ ನನಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಬೇಕು ಎಂದು ನಮ್ಮ ವರಿಷ್ಠರಿಗೆ ಒತ್ತಾಯ ಮಾಡಿದ್ದೇನೆ” ಎಂದು ಸೋಮಣ್ಣ ತಿಳಿಸಿದರು.

”ನಾನು ಕೇವಲ 100 ದಿನ ಮಾತ್ರ ಅವಕಾಶ ಕೇಳಿದ್ದೇನೆ. ಒಬ್ಬ ರಾಜ್ಯಾಧ್ಯಕ್ಷ ಯಾವ ರೀತಿ ಸಂಚಲನವನ್ನು ಮೂಡಿಸಬೇಕು ಎಂದು ತೋರಿಸುತ್ತೇನೆ. ನಾನು ಸ್ವಲ್ಪ ಜೋರಾಗಿ ಮಾತಾಡುತ್ತೇನೆ ಸತ್ಯ ಮಾತಾಡುತ್ತೇನೆ ಗಲಾಟೆ ಮಾಡುತ್ತೇನೆ ನಿಜ. ಆದರೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವಂಥ ಸಾಮರ್ಥ್ಯವಿದೆ. ಅವಕಾಶ ಕೊಟ್ಟರೆ ಎಲ್ಲರ ಮನೆಗೆ ಹೋಗಿ ಪಕ್ಷ ಸಂಘಟನೆ ಮಾಡುತ್ತೇನೆ. ನಮ್ಮಲ್ಲೂ ಕೂಡ ಪ್ರತಿಭೆ ಇದೆ, ಶಕ್ತಿ ಇದೆ, ದೂರದೃಷ್ಟಿ ಚಿಂತನೆ ಇದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಾರ್ವಜನಿಕರ ಒತ್ತಾಯಕ್ಕೆ ಮಣಿದು ತರಬೇತಿ ಶಿಬಿರದಿಂದ ವಿವಾದಿತರಾದ ರವಿಶಂಕರ್ ಗುರೂಜಿ, ಕರ್ಜಗಿಗೆ ಕೋಕ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...