Homeಕರ್ನಾಟಕಬಗರ್‌ ಹುಕುಂ ಅರ್ಜಿ ಸಲ್ಲಿಸಿದವರು ಮೃತಪಟ್ಟಿದ್ದರೂ ಸಹ ಅರ್ಹ ಕುಟುಂಬಸ್ಥರಿಗೆ ಭೂ ಮಂಜೂರುಗೊಳಿಸಬೇಕು: ಕೃಷ್ಣ ಬೈರೇಗೌಡ

ಬಗರ್‌ ಹುಕುಂ ಅರ್ಜಿ ಸಲ್ಲಿಸಿದವರು ಮೃತಪಟ್ಟಿದ್ದರೂ ಸಹ ಅರ್ಹ ಕುಟುಂಬಸ್ಥರಿಗೆ ಭೂ ಮಂಜೂರುಗೊಳಿಸಬೇಕು: ಕೃಷ್ಣ ಬೈರೇಗೌಡ

- Advertisement -
- Advertisement -

• ಶೀಘ್ರದಲ್ಲೇ ಶಾಸಕರ ಸಭೆ ನಡೆಸಿ ಅರ್ಹರಿಗೆ ಸಾಗುವಳಿ ಚೀಟಿ
• ಜನವರಿ ತಿಂಗಳಲ್ಲಿ ಕನಿಷ್ಟ 5,000 ಜನರಿಗೆ ಸಾಗುವಳಿ ಚೀಟಿ
• ನಮೂನೆ 1-5 ಪೋಡಿ ದುರಸ್ಥಿ ಬೆನ್ನಿಗೆ 6-10 ಸರ್ವೇಗೆ ಒತ್ತು
• ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವರು

ಬೆಂಗಳೂರು ಜನವರಿ 10: ಬಗರ್‌ ಹುಕುಂ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳು ದುರಾದೃಷ್ಟವಶಾತ್‌ ಮೃತಪಟ್ಟರೆ ಅವರ ಕುಟುಂಬಸ್ಥರಿಗೆ ಕಾನೂನು ಪ್ರಕಾರ ಜಮೀನು ಮಂಜೂರು ಮಾಡಿ ಡಿಜಿಟಲ್‌ ಸಾಗುವಳಿ ಚೀಟಿ ನೀಡಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ರಾಜ್ಯದ ಎಲ್ಲಾ ತಹಶೀಲ್ದಾರ್‌ ಹಾಗೂ ಎಡಿಎಲ್‌ಆರ್‌ ಗಳಿಗೆ ಸೂಚಿಸಿದರು.

ವಿಕಾಸಸೌಧದಿಂದ ರಾಜ್ಯದ ಎಲ್ಲಾ ತಹಶೀಲ್ದಾರ್‌ ಹಾಗೂ ಎಡಿಎಲ್‌ಆರ್‌ (ಭೂ ದಾಖಲೆಯ ಸಹಾಯ ನಿರ್ದೇಶಕ) ಅಧಿಕಾರಿಗಳ ಜೊತೆ ಶುಕ್ರವಾರ ವಿಡಿಯೋ ಕಾನ್ಫರೆನ್ಸ್‌ ಮೂಲಕ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, “ಅಕ್ರಮ-ಸಕ್ರಮ ಬಗರ್‌ ಹುಕುಂ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಫಲಾನುಭವಿಗಳು ಜಮೀನು ಪಡೆಯಲು ಅರ್ಹರು. ಅಂತವರಿಗೆ ಸಾಗುವಳಿ ಚೀಟಿ ನೀಡುವುದು ಸರ್ಕಾರದ ಕರ್ತವ್ಯ. ಒಂದು ವೇಳೆ ಅರ್ಜಿ ಸಲ್ಲಿಸಿದವರು ಮೃತಪಟ್ಟಿದ್ದರೆ ಅವರಿಗೆ ಸಂಬಂಧಿಸಿದ ಅರ್ಹ ಕುಟುಂಬಸ್ಥರಿಗೆ ಜಮೀನು ಮಂಜೂರುಗೊಳಿಸಬೇಕು” ಎಂದು ತಿಳಿಸಿದರು.

“ಅನುಕೂಲಸ್ಥರಿಗೆ ಎಲ್ಲಾ ಮಾಹಿತಿ ಇರುತ್ತದೆ. ತಮಗೆ ಬೇಕಾದ ಸರ್ಕಾರಿ ಸವಲತ್ತನ್ನು ತಾವಾಗಿಯೇ ಪಡೆದುಕೊಳ್ಳುತ್ತಾರೆ. ಆದರೆ, ಬಡವರಿಗೆ, ಸಮಾಜದ ಕಟ್ಟಕಡೆಯ ಸ್ತರದಲ್ಲಿ ಬದುಕುತ್ತಿರುವವರಿಗೆ ಮಾಹಿತಿ ಕೊರತೆ ಇರುತ್ತದೆ. ಇಂತವರಿಗೆ ಅಧಿಕಾರಿಗಳೇ ಮಾಹಿತಿ ನೀಡಿ ಸರ್ಕಾರಿ ಸವಲತ್ತುಗಳನ್ನು ತಲುಪಿಸಬೇಕು. ಬಗರ್‌ ಹುಕುಂ ಅರ್ಜಿ ಅರ್ಹವಾಗಿದ್ದಲ್ಲಿ ಅಧಿಕಾರಿಗಳೇ ಜವಾಬ್ದಾರಿ ವಹಿಸಿಕೊಂಡು ಜಮೀನು ಮಂಜೂರು ಮಾಡಬೇಕು” ಎಂದು ಆಗ್ರಹಿಸಿದರು.

ಇದೇ ವೇಳೆ ಅಧಿಕಾರಿಗಳನ್ನು ಪ್ರಶಂಸಿಸಿದ ಅವರು, “ಜನವರಿ 15ರ ಒಳಗೆ 15,000 ಫಲಾನುಭವಿಗಳಿಗೆ ಬಗರ್‌ ಹುಕುಂ ಯೋಜನೆಯ ಅಡಿಯಲ್ಲಿ ಸಾಗುವಳಿ ಚೀಟಿ ನೀಡಬೇಕು ಎಂಬ ಗುರಿಯನ್ನು ಅಧಿಕಾರಿಗಳಿಗೆ ನೀಡಲಾಗಿತ್ತು. ಈ ಗುರಿಯನ್ನು ಸಾಧಿಸಲಾಗದಿದ್ದರೂ ಇದೇ ಅವಧಿಯಲ್ಲಿ ಕನಿಷ್ಟ 5600ಕ್ಕೂ ಅಧಿಕ ಅರ್ಹ ಫಲಾನುಭವಿಗಳನ್ನು ಗುರುತಿಸಿರುವುದು ಹಾಗೂ ಎಲ್ಲಾ ಜಿಲ್ಲೆ-ತಾಲೂಕುಗಳಲ್ಲೂ ಈ ಸಂಬಂಧ ಸಕಾರಾತ್ಮಕ ಬೆಳವಣಿಗೆ ಕಂಡುಬಂದಿರುವುದು ಉತ್ತಮ ಬೆಳವಣಿಗೆ. ಶೀಘ್ರವೇ ಶಾಸಕರ ನೇತೃತ್ವದಲ್ಲಿ ಸಭೆ ನಡೆಸಿ ಅರ್ಹರಿಗೆ ಜಮೀನು ಮಂಜೂರುಗೊಳಿಸಿ” ಎಂದು ಕಿವಿಮಾತು ಹೇಳಿದರು.

ನಮೂನೆ 1 to 5 ಪೋಡಿ ದುರಸ್ಥಿಗೆ ಒತ್ತಡ:

ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಬೇಕು ಎಂಬ ಉದ್ದೇಶದಿಂದಲೇ ಕಳೆದ ಸೆಪ್ಟೆಂಬರ್‌ 2 ರಿಂದ ಅಭಿಯಾನ ಮಾದರಿಯಲ್ಲಿ 1-5 ನಮೂನೆ ಪೋಡಿ ದುರಸ್ಥಿ ಕೆಲಸಕ್ಕೆ ಚಾಲನೆ ನೀಡಲಾಯಿತು. ಆದರೆ, ಹಲವಾರು ತಾಲೂಕುಗಳಲ್ಲಿ 1-5 ನಮೂನೆ ಪೋಡಿ ದುರಸ್ಥಿ ಮುಗಿದಿದ್ದರೂ ಸಂಬಂಧಪಟ್ಟ ಫೈಲುಗಳನ್ನು 6-10 ನಮೂನೆ ಸರ್ವೇ ಕೆಲಸಕ್ಕಾಗಿ ಭೂ ದಾಖಲೆಯ ಸಹಾಯ ನಿರ್ದೇಶಕರಿಗೆ ಕಳುಹಿಸಲು ತಹಶೀಲ್ದಾರರುಗಳು ಮೀನಾಮೇಷ ಎಣಿಸುತ್ತಿರುವುದು ಏಕೆ? ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಕಿಡಿಕಾರಿದರು.

“ಬಳ್ಳಾರಿ ತಾಲೂಕಿನಲ್ಲಿ ಈವರೆಗೆ 397 ಹಾಗೂ ಬೆಳಗಾವಿಯಲ್ಲಿ 147 ಪ್ರಕರಣಗಳಲ್ಲಿ 1-5 ನಮೂನೆ ಪೋಡಿ ದುರಸ್ಥಿ ಕೆಲಸ ಮುಗಿದಿದೆ. ಆದರೆ, ಯಾವ ಪ್ರಕರಣವನ್ನು ತಹಶೀಲ್ದಾರರು ಮುಂದಿನ ಹಂತದ ಕೆಲಸಕ್ಕಾಗಿ ಎಡಿಎಲ್‌ಆರ್‌ಗಳಿಗೆ ಕಳುಹಿಸಿಲ್ಲ. ಇದೇ ರೀತಿ ಚಿಕ್ಕೋಡಿ, ಅಥಣಿ, ಔರಾದ್‌, ಬೀದರ್‌ ಚಿತ್ರದುರ್ಗ, ಚಾಮರಾಜನಗರ, ಗುಂಡ್ಲುಪೇಡೆ, ಹುಮ್ನಾಬಾದ್‌, ಚಳ್ಳಕೆರೆ ಹೊಳಲ್ಕೆರೆ ಸೇರಿದಂತೆ ಹಲವಾರು ತಾಲೂಕುಗಳಲ್ಲಿ ದುರಸ್ಥಿ ಕೆಲಸ ಮುಗಿದಿದ್ದರೂ ಎಡಿಎಲ್‌ಆರ್‌ ಗಳಿಗೆ ಕಳುಹಿಸಿರುವ ಫೈಲುಗಳ ಸಂಖ್ಯೆ ಶೂನ್ಯ. ಜನರೇನು ನಿಮ್ಮ ಬಳಿ ಬಂದು ಸಲಾಂ ಹೊಡೆಯಬೇಕು ಎಂದು ನೀವು ಹೀಗೆ ಕಾಯಿಸುತ್ತಿದ್ದೀರಾ?” ಎಂದು ತಹಶೀಲ್ದಾರರ ವಿರುದ್ಧ ಅವರು ಆಕ್ರೋಶ ಹೊರಹಾಕಿದರು.

“ತಹಶೀಲ್ದಾರರು 1-5 ನಮೂನೆ ಪೋಡಿ ದುರಸ್ಥಿ ಕೆಲಸ ಮುಗಿಸಿ ಎಡಿಎಲ್‌ಆರ್‌ ಗೆ ಕಳುಹಿಸಿದರೆ ಮಾತ್ರ ಸರ್ವೇ ಕೆಲಸ ಮುಗಿಸಿ ಜನರಿಗೆ ಸೂಕ್ತ ದಾಖಲೆ ನೀಡುವುದು ಸಾಧ್ಯ. ಜಮೀನು ಮಂಜೂರಾಗಿದ್ದರೂ ಪೋಡಿಯಾಗಿ ಆರ್.ಟಿ.ಸಿ ಆಗದೆ ಇರುವುದರಿಂದ ರೈತರ ಪರಿಸ್ಥಿತಿ ತ್ರಿಶಂಕುವಿನಂತೆ ಆಗಿದೆ. ತಾಲ್ಲೂಕು ಕಚೇರಿ, ಸರ್ವೆ ಕಛೇರಿಗಳಿಗೆ ಅಲೆದು ಅಲೆದು ಪ್ರಯೋಜನವಾಗದೆ ತೀವ್ರ ತೊಂದರೆಗೆ ತುತ್ತಾಗಿದ್ದಾರೆ. ಈ ಬಗ್ಗೆ ಬಹಳ ವರ್ಷಗಳಿಂದ ಚರ್ಚೆಗಳು, ಪ್ರಯತ್ನಗಳು ಆಗುತ್ತಿದ್ದರೂ ಸರಿಯಾದ ಪರಿಹಾರ ದೊರೆತಿರುವುದಿಲ್ಲ. ಈಗ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಪೋಡಿ ದುರಸ್ಥಿ ಅಭಿಯಾನಕ್ಕೆ ಚಾಲನೆ ನೀಡಿದರೂ ಸಹ ಅಧಿಕಾರಿಗಳು ಹೀಗೆ ಮಂದಗತಿಯಲ್ಲಿ ಕೆಲಸ ನಿರ್ವಹಿಸುತ್ತಿರುವುದನ್ನು ಸಹಿಸಿಕೊಳ್ಳುವುದು ಸಾಧ್ಯವಿಲ್ಲ” ಎಂದು ಎಚ್ಚರಿಸಿದರು.

ಕೋರ್ಟ್‌ ಕೇಸ್‌ ಮುಗಿಸಿದವರ ವಿರುದ್ಧ ಅಸಮಾಧಾನ

ತಹಶೀಲ್ದಾರ್‌ ನ್ಯಾಯಾಲಯಗಳಲ್ಲಿ ವರ್ಷಗಳಿಗಿಂತ ಹೆಚ್ಚುಕಾಲ ಬಾಕಿ ಉಳಿದಿರುವ ತಕರಾರು ಅರ್ಜಿಗಳನ್ನು ವಿಲೇವಾರಿ ಮಾಡಲು ಸಮಸ್ಯೆ ಏನು ಎಂದು ತಹಶೀಲ್ದಾರರ ವಿರುದ್ಧ ಸಚಿವರು ಕಿಡಿಕಾರಿದರು.

ತಹಶೀಲ್ದಾರ್‌ ನ್ಯಾಯಾಲಯಗಳಲ್ಲಿ 90 ದಿನಗಳಿಗಿಂತ ಹೆಚ್ಚು ಕಾಲ ಯಾವುದೇ ತಕರಾರು ಅರ್ಜಿಗಳನ್ನು ಉಳಿಸಿಕೊಳ್ಳುವಂತಿಲ್ಲ. ಆದರೆ, ಕಳೆದ ವರ್ಷ 10,750ಕ್ಕೂ ಅಧಿಕ ಪ್ರಕರಣಗಳನ್ನು ಬಾಕಿ ಉಳಿಸಲಾಗಿತ್ತು. ಕಳೆದ ಒಂದು ವರ್ಷದಿಂದ ಅಭಿಯಾನ ಮಾದರಿಯಲ್ಲಿ 10,000ಕ್ಕೂ ಅಧಿಕ ಪ್ರಕರಣಗಳನ್ನು ವಿಲೇ ಮಾಡಲಾಗಿದೆ. ಆದರೆ, ಉಳಿದ ಪ್ರಕರಣಗಳ ವಿಲೇಗೆ ಅಧಿಕಾರಿಗಳು ಮೀನಾಮೇಷ ಎಣಿಸುತ್ತಿರುವುದು ಏಕೆ? ಕೆಲವರು ಮಾಡುತ್ತಿರುವ ಕೆಲಸದಿಂದ ಇಡೀ ಇಲಾಖೆಗೆ ಕೆಟ್ಟ ಹೆಸರು” ಎಂದು ಅವರು ಅಭಿಪ್ರಾಯಪಟ್ಟರು.

ಮುಂದುವರೆದು, “ರಾಯಭಾಗ 9, ಹುಕ್ಕೇರಿ 20, ರಾಮದುರ್ಗ 6, ಬೀದರ್ 6, ಬಳ್ಳಾರಿ 4, ಸವದತ್ತಿ 4 ಹೊಳಲ್ಕೆರೆ 9, ಕಾಗವಾಡ 5, ಚನ್ನಗಿರಿ 5, ಕಡೂರು 8, ಹೊಸಕೋಟೆ 12, ಮಂಡ್ಯ 11, ಮಾಗಡಿ 18, ಕನಕಪುರ 14, ಹಾರೋಹಳ್ಳಿ 20, ರಾಮದುರ್ಗ 10, ಬೆಂಗಳೂರು ಪಶ್ಚಿಮ 10, ನೆಲಮಂಗಲ 8 ಸೇರಿದಂತೆ 20 ತಾಲೂಕುಗಳಲ್ಲಿ ವರ್ಷಕ್ಕಿಂತ ಅಧಿಕ ಸಮಯದ ಅಲ್ಪ ಪ್ರಮಾಣದ ಪ್ರಕರಣಗಳು ಬಕಿ ಉಳಿದಿವೆ. ಅಧಿಕಾರಿಗಳು ಶೀಘ್ರದಲ್ಲಿ ಈ ಎಲ್ಲಾ ಪ್ರಕರಣಗಳನ್ನು ಇತ್ಯರ್ಥಗೊಳಿಸಿ ಜನರಿಗೆ ನ್ಯಾಯ ಕಲ್ಪಿಸಬೇಕು” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸೂಚಿಸಿದರು.

ಸಭೆಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್‌ ಕಟಾರಿಯಾ, ಕಂದಾಯ ಆಯುಕ್ತರಾದ ಸುನೀಲ್‌ ಕುಮಾರ್‌ ಹಾಗೂ ಸರ್ವೇ ಇಲಾಖೆ ಆಯುಕ್ತರಾದ ಮಂಜುನಾಥ್‌ ಹಾಗೂ ಇತರರು ಉಪಸ್ಥಿತರಿದ್ದರು.

ಮುಖ್ಯವಾಹಿನಿಗೆ ಬಂದ 6 ನಕ್ಸಲರಿಗೆ ಜ.30ರವರೆಗೆ ನ್ಯಾಯಾಂಗ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...