Homeಕರ್ನಾಟಕನಾಳೆಯೇ ಚುನಾವಣೆ ನಡೆದರೂ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರುತ್ತೇವೆ: ಸಿದ್ದರಾಮಯ್ಯ

ನಾಳೆಯೇ ಚುನಾವಣೆ ನಡೆದರೂ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರುತ್ತೇವೆ: ಸಿದ್ದರಾಮಯ್ಯ

ಅಧಿಕಾರ ಕಳೆದುಕೊಳ್ಳುವ ಭಯದಲ್ಲಿ ಯಡಿಯೂರಪ್ಪನವರು ಬಿಜೆಪಿ 60% ಪಂಚಾಯತಿಗಳಲ್ಲಿ ಗೆದ್ದಿದೆ ಎಂದು ಸುಳ್ಳು ಹೇಳುತ್ತಿದ್ದಾರೆ. ನನಗಿರುವ ಮಾಹಿತಿ ಪ್ರಕಾರ ಗೆದ್ದ ಹೆಚ್ಚಿನ ಸಂಖ್ಯೆಯ ಪಂಚಾಯತಿ ಸದಸ್ಯರು ಕಾಂಗ್ರೆಸ್ ಕಾರ್ಯಕರ್ತರಾಗಿದ್ದಾರೆ...

- Advertisement -
- Advertisement -

“ನಾಳೆಯೇ ಚುನಾವಣೆ ನಡೆದರೂ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಅಭಿನಂದನೆಗಳು. ನಮ್ಮ ಅಭ್ಯರ್ಥಿಗಳ ಗೆಲುವಿಗೆ ಹಗಲಿರುಳೆನ್ನದೆ ಶ್ರಮಿಸಿದ ಕಾರ್ಯಕರ್ತರಿಗೆ ಹಾಗೂ ಮತ ನೀಡಿ, ಆಶೀರ್ವದಿಸಿದ ಮತದಾರರಿಗೆ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಹೊಸ ವರ್ಷದಿಂದ ಕಾರ್ಪೊರೇಟ್ ಸರಕುಗಳನ್ನು ತಿರಸ್ಕರಿಸಿ – ರೈತರ ಉತ್ಪನ್ನ ಬೆಂಬಲಿಸಿ: ಮೇಧಾ ಪಾಟ್ಕರ್‌…

“ಗ್ರಾಮಗಳ ಪ್ರಗತಿಯಲ್ಲಿ ದೇಶದ ಉನ್ನತಿ ಅಡಗಿದೆ. ಈ ಕಾರಣಕ್ಕಾಗಿ ಈ ಬಾರಿಯ ಚುನಾವಣೆಯಲ್ಲಿ ಜಯಗಳಿಸಿದ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ತಮ್ಮ ಗ್ರಾಮವನ್ನು ಸದೃಢಗೊಳಿಸುವ ಕಾರ್ಯದಲ್ಲಿ ಪಕ್ಷಾತೀತವಾಗಿ ಕೆಲಸ ಮಾಡಬೇಕೆಂಬುದು ನನ್ನ ಸಲಹೆ”

ಇದನ್ನೂ ಓದಿ: ಗ್ರಾಮ ಪಂಚಾಯತ್‌‌‌‌ ಚುನಾವಣೆ: ಮತ ಎಣಿಕೆಯಲ್ಲಿ ಲೋಪ ಅಭ್ಯರ್ಥಿ ರಾಜಣ್ಣ ಅವರಿಂದ ಜಿಲ್ಲಾಧಿಕಾರಿಗೆ ದೂರು

“ಇನ್ನೂ ಹಲವು ಜಿಲ್ಲೆಗಳಲ್ಲಿ ಮತ ಎಣಿಕೆ ಕಾರ್ಯ ಪೂರ್ಣಗೊಂಡು ಫಲಿತಾಂಶ ಹೊರಬಂದಿಲ್ಲ, ಮೀಸಲಾತಿ ಅಡಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಹಂಚಿಕೆಯಾಗಿಲ್ಲ, ಆಗಲೇ ಯಡಿಯೂರಪ್ಪ ಅವರು ನಮ್ಮ ಪಕ್ಷ 3800ಕ್ಕೂ ಅಧಿಕ ಪಂಚಾಯತಿಗಳಲ್ಲಿ ಗೆದ್ದಿದೆ ಎಂದು ಹೇಳಿಕೆ ನೀಡುತ್ತಿರುವುದು ಹಾಸ್ಯಾಸ್ಪದ”

ಇದನ್ನೂ ಓದಿ: ಗುಂಡ್ಲುಪೇಟೆ: ಗ್ರಾ.ಪಂ ಚುನಾವಣೆ ವಿಜಯೋತ್ಸವ ನೆಪದಲ್ಲಿ ದಲಿತ ಕೇರಿಗೆ ನುಗ್ಗಿ ಹಲ್ಲೆ

“ಅಧಿಕಾರ ಕಳೆದುಕೊಳ್ಳುವ ಭಯದಲ್ಲಿ ಯಡಿಯೂರಪ್ಪನವರು ಬಿಜೆಪಿ 60% ಪಂಚಾಯತಿಗಳಲ್ಲಿ ಗೆದ್ದಿದೆ ಎಂದು ಸುಳ್ಳು ಹೇಳುತ್ತಿದ್ದಾರೆ. ನನಗಿರುವ ಮಾಹಿತಿ ಪ್ರಕಾರ ಗೆದ್ದ ಹೆಚ್ಚಿನ ಸಂಖ್ಯೆಯ ಪಂಚಾಯತಿ ಸದಸ್ಯರು ಕಾಂಗ್ರೆಸ್ ಕಾರ್ಯಕರ್ತರಾಗಿದ್ದಾರೆ”

ಇದನ್ನೂ ಓದಿ: ಆಗ ’ತುಕುಡೆ ಗ್ಯಾಂಗ್’, ಈಗ ಕೃಷಿಕರು: ಸಂಸದೆ ಶೋಭಾ ಕರಂದ್ಲಾಜೆಯ ಇಬ್ಬಂದಿತನ

“ಯಡಿಯೂರಪ್ಪನವರ ಮುಖ್ಯಮಂತ್ರಿ ಕುರ್ಚಿಯೇ ಅಲ್ಲಾಡ್ತಿದೆ, ಅದರ ನಡುವೆಯೂ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತೆ ಎಂದು ಹಗಲುಗನಸು ಕಾಣ್ತಿದ್ದಾರೆ. ಒಂದು ವೇಳೆ ನಾಳೆಯೇ ಚುನಾವಣೆ ನಡೆದರೂ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ. ಇದು ನೂರಕ್ಕೆ ನೂರು ಸತ್ಯ”

ಇದನ್ನೂ ಓದಿ: ಕೃಷಿ ಕಾಯ್ದೆಗಳ ವಿರುದ್ಧದ ನಿರ್ಣಯ ಬೆಂಬಲಿಸಿದ ಕೇರಳದ ಬಿಜೆಪಿ ಶಾಸಕ!

“ಬ್ರಿಟನ್ ನಿಂದ ರಾಜ್ಯಕ್ಕೆ ಬಂದವರನ್ನು ವಿಮಾನ ನಿಲ್ದಾಣದಲ್ಲಿ ಸೂಕ್ತ ಪರೀಕ್ಷೆಗೆ ಒಳಪಡಿಸದಿರುವುದು ದೊಡ್ಡ ತಪ್ಪು. ಈಗ ಬ್ರಿಟನ್ ನಿಂದ ಬಂದವರು ತಲೆಮರೆಸಿಕೊಂಡಿದ್ದಾರೆ, ಪ್ರಯಾಣಿಕರ ವಿಳಾಸ ಸಿಗ್ತಿಲ್ಲ ಅಂದರೆ ಅದು ಸರ್ಕಾರದ ಬೇಜವಾಬ್ದಾರಿಯನ್ನು ತೋರಿಸುತ್ತೆ. ಸರ್ಕಾರ ಕಳೆದ ಬಾರಿ ಮಾಡಿದ್ದ ತಪ್ಪನ್ನೆ ಮತ್ತೆ ಮಾಡುತ್ತಿದೆ”


ಇದನ್ನೂ ಓದಿ: ಮೆಹಮೂದ್ ಪ್ರಾಚಾ ಪರ ನಿಲ್ಲಲು ವಕೀಲ ಸಂಘಕ್ಕೆ ಪತ್ರ ಬರೆದ ವಕೀಲ ಅನೀಸ್ ಪಾಶಾ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಫೇಸ್‌ಬುಕ್, ಇನ್‌ಸ್ಟಾಗ್ರಾಮ್‌ ವೀಕ್ಷಿಸುತ್ತಾ ಬೀದಿಯಲ್ಲಿ ತಿರುಗಾಡುವ ಯುವಕರ ಖಾತೆಗಳಿಗೆ ಹಣ...

0
"ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್‌ಗಳನ್ನು ಬಳಸಿಕೊಂಡು ಬೀದಿಗಳಲ್ಲಿ ತಿರುಗುತ್ತಿರುವ ನಮ್ಮ ಯುವಕರ ಬ್ಯಾಂಕ್ ಖಾತೆಗಳಿಗೆ ವಾರ್ಷಿಕ ಒಂದು ಲಕ್ಷ ರೂಪಾಯಿ ಮತ್ತು ತಿಂಗಳಿಗೆ 8,500 ರೂಪಾಯಿಗಳನ್ನು ಜಮಾ ಮಾಡಲಾಗುತ್ತದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ"...