ಕೊರೊನಾ ಸಾಂಕ್ರಾಮಿಕದ ಮಧ್ಯೆ ಈ ಹಣಕಾಸು ವರ್ಷದ ಭಾರತದ ಒಟ್ಟು ದೇಶೀಯ ಉತ್ಪನ್ನ(ಜಿಡಿಪಿ) ಕುಸಿತದ ಬಗ್ಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ್ದಾರೆ.

ಭಾರತದ ನೆರೆಹೊರೆಯ ದೇಶಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ಮತ್ತು ಬಾಂಗ್ಲಾ ದೇಶಗಳ ಉದಾಹರಣೆ ನೀಡಿ ಅವುಗಳಿಗಿಂತ ಕೆಳಮಟ್ಟದಲ್ಲಿರುವ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ರಾಹುಲ್ ಗಾಂಧಿ, ಅಂತಾರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್) ವರದಿಗಳನ್ನು ಉಲ್ಲೇಖಿಸಿ, “ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ಕೂಡ ಕೋವಿಡ್ ಅನ್ನು ಭಾರತಕ್ಕಿಂತ ಉತ್ತಮವಾಗಿ ನಿಭಾಯಿಸಿದೆ. ಇದು ಬಿಜೆಪಿ ಸರ್ಕಾರದ ಮತ್ತೊಂದು ಘನ ಸಾಧನೆ” ಎಂದು ಐಎಂಎಫ್‌ನ ಪ್ರೊಜೆಕ್ಷನ್ ಗ್ರಾಫ್ ಅನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಆರ್ಥಿಕತೆಯಲ್ಲಿ ಭಾರತವನ್ನು ಹಿಂದಿಕ್ಕಲಿರುವ ಬಾಂಗ್ಲಾದೇಶ!

ಈ ಹಣಕಾಸು ವರ್ಷದಲ್ಲಿ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನವು ತಮ್ಮ ಜಿಡಿಪಿ ಬೆಳವಣಿಗೆಯಲ್ಲಿ 0.40% ಮತ್ತು 5% ನಷ್ಟು ಕುಸಿಯುವ ನಿರೀಕ್ಷೆಯಿದ್ದರೆ, ಭಾರತದ ಜಿಡಿಪಿ 10.3% ರಷ್ಟು ಕುಗ್ಗುವ ಸಾಧ್ಯತೆಯಿದೆ. ಇದು ಯಾವುದೇ ಪ್ರಮುಖ ಉದಯೋನ್ಮುಖ ರಾಷ್ಟ್ರಗಳ ಪೈಕಿ ಅತಿದೊಡ್ಡ ಕುಸಿತ. ಸ್ವಾತಂತ್ರ್ಯದ ನಂತರದ ಅತಿ ಕೆಟ್ಟ ಬೆಳವಣಿಗೆ ಇದು ಎಂದಿದ್ದಾರೆ.

ಆದಾಗ್ಯೂ, ಕೇಂದ್ರ ಸರ್ಕಾರವು ಐಎಂಎಫ್ ಗ್ರಾಫ್‌ ಅನ್ನು ನಿರಾಕರಿಸಿದ್ದು, ತಲಾ ಜಿಡಿಪಿ ಹೆಚ್ಚಾಗಿದೆ ಎಂದು ವಾದಿಸಿದೆ. 2014-15ರಲ್ಲಿ 83,091 ರೂಗಳಿಂದ 2019-20ರಲ್ಲಿ 1,08,620 ರೂಗಳಿಗೆ ಏರಿದೆ. ಇದು 30.7% ನಷ್ಟು ಹೆಚ್ಚಳವಾಗಿದೆ ಎಂದಿದೆ.

’ಬಿಜೆಪಿಯ ದ್ವೇಷ ತುಂಬಿದ ಸಾಂಸ್ಕೃತಿಕ ರಾಷ್ಟ್ರೀಯತೆಯೇ 6 ವರ್ಷಗಳ ಘನ ಸಾಧನೆ, ಬಾಂಗ್ಲಾದೇಶ ಕೂಡ ಭಾರತವನ್ನು ಹಿಂದಿಕ್ಕಲಿದೆ” ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

2019ರಲ್ಲಿ ಭಾರತದ ಜಿಡಿಪಿ ಬಾಂಗ್ಲಾದೇಶಕ್ಕಿಂತ 11 ಪಟ್ಟು ಹೆಚ್ಚಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಮುಂದಿನ ವರ್ಷ ಭಾರತದ ಜಿಡಿಪಿ 8.8% ರಷ್ಟು ಹೆಚ್ಚಾಗಲಿದೆ ಎಂದು ಐಎಂಎಫ್ ನಿರೀಕ್ಷಿಸಿದೆ. ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ವಿಶ್ವದ ಹಲವಾರು ರಾಷ್ಟ್ರಗಳಲ್ಲಿ ಆರ್ಥಿಕ ಚೇತರಿಕೆ ಮತ್ತು ಜಾಗತಿಕ ಆರ್ಥಿಕತೆ ಚೇತರಿಕೆಯ ಅನಿಶ್ಚಿತತೆ ಇದೆ ಎಂದು ಅಂತಾರಾಷ್ಟ್ರೀಯ ಸಂಸ್ಥೆ ಎಚ್ಚರಿಸಿದೆ.


ಇದನ್ನೂ ಓದಿ: ಭಾರತಕ್ಕಿಂತ ಅಮೆರಿಕ, ಜಪಾನ್ ಜಿಡಿಪಿ ಕುಸಿತ ಹೆಚ್ಚು?: ಸುಳ್ಳು ಹರಡುತ್ತಿರುವ ಪೋಸ್ಟ್ ಕಾರ್ಡ್

Donate

ಈ ಲೇಖನ, ಈ ವೆಬ್‌ಸೈಟ್ ನಿಮಗೆ ಇಷ್ಟವಾಯಿತೇ? ನಿಮ್ಮ ಬೆಂಬಲ ಇದಕ್ಕೆ ಅಗತ್ಯ.

ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ನಿಮ್ಮ ನಿರಂತರ ಆರ್ಥಿಕ ನೆರವು ಅಗತ್ಯ. ನಿಮ್ಮಿಂದ ಸಾಧ್ಯವಿರುವಷ್ಟು ಹೆಚ್ಚಿನ ವಂತಿಗೆಯನ್ನು ನೀಡಲು ಕೆಳಗಿನ ಲಿಂಕುಗಳನ್ನು ಕ್ಲಿಕ್ಕಿಸಿ.
ಒಂದು ವೇಳೆ ಈ ಲಿಂಕಿನ ಮೂಲಕ ಹಣ ಪಾವತಿ ಮಾಡುವುದಕ್ಕೆ ಅಡಚಣೆ ಇದ್ದರೆ, ಈ ಪುಟದ ಮೇಲೆ ಅಥವಾ ಕೆಳಗೆ ಇರುವ ವಂತಿಗೆ – Donate ಬಟನ್.ಅನ್ನು ಕ್ಲಿಕ್ಕಿಸಿ.
ಧನ್ಯವಾದಗಳು
Independent journalism can’t be independent without your support, contribute by clicking below.

+ posts

LEAVE A REPLY

Please enter your comment!
Please enter your name here