Homeಮುಖಪುಟಸಲಿಂಗ ವಿವಾಹ ಕಾನೂನುಬದ್ಧವಲ್ಲವಾದರೂ ಎಲ್‌ಜಿಬಿಟಿಕ್ಯೂ+ ಜೋಡಿ ಕುಟುಂಬ ರೂಪಿಸಿಕೊಳ್ಳಬಹುದು: ಮದ್ರಾಸ್ ಹೈಕೋರ್ಟ್

ಸಲಿಂಗ ವಿವಾಹ ಕಾನೂನುಬದ್ಧವಲ್ಲವಾದರೂ ಎಲ್‌ಜಿಬಿಟಿಕ್ಯೂ+ ಜೋಡಿ ಕುಟುಂಬ ರೂಪಿಸಿಕೊಳ್ಳಬಹುದು: ಮದ್ರಾಸ್ ಹೈಕೋರ್ಟ್

- Advertisement -
- Advertisement -

ಭಾರತದಲ್ಲಿ ಸಲಿಂಗ ವಿವಾಹವನ್ನು ಕಾನೂನುಬದ್ಧಗೊಳಿಸಲಾಗಿಲ್ಲವಾದರೂ ಎಲ್‌ಜಿಬಿಟಿಕ್ಯೂಐಎ+ ಸಮುದಾಯದ ಜನ ಕುಟುಂಬ ರೂಪಿಸಿಕೊಳ್ಳಬಾರದು ಎಂದರ್ಥವಲ್ಲ ಎಂಬುದಾಗಿ ಮದ್ರಾಸ್ ಹೈಕೋರ್ಟ್ ಹೇಳಿದೆ.

ಸುಪ್ರಿಯೋ @ ಸುಪ್ರಿಯಾ ಚಕ್ರವರ್ತಿ ಮತ್ತು ಭಾರತ ಒಕ್ಕೂಟ ನಡುವಣ ಪ್ರಕರಣದಲ್ಲಿ , ಎಲ್‌ಜಿಬಿಟಿಕ್ಯೂಐಎ+ ಜೋಡಿಗೆ ಮದುವೆಯಾಗುವ ಮೂಲಭೂತ ಹಕ್ಕನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ ಎಂಬುದನ್ನು ನ್ಯಾಯಮೂರ್ತಿಗಳಾದ ಜಿ.ಆರ್. ಸ್ವಾಮಿನಿಯಥನ್ ಮತ್ತು ವಿ ಲಕ್ಷ್ಮಿನಾರಾಯಣನ್ ಅವರಿದ್ದ ಪೀಠ ಒಪ್ಪಿಕೊಂಡರೂ ಕುಟುಂಬ ರೂಪಿಸಿಕೊಳ್ಳಲು ಮದುವೆಯೊಂದೇ ಮಾರ್ಗವಲ್ಲ. ‘ಆಯ್ಕೆ ಮಾಡಿಕೊಳ್ಳುವ ಕುಟುಂಬ’ ಎಂಬ ಪರಿಕಲ್ಪನೆ ಇದೀಗ ಎಲ್‌ಜಿಬಿಟಿಕ್ಯೂಐಎ+ ನ್ಯಾಯಶಾಸ್ತ್ರದಲ್ಲಿ ಉತ್ತಮ ರೀತಿಯಲ್ಲೇ ನೆಲೆಗೊಂಡಿದ್ದು ಅಂಗೀಕೃತವಾಗಿದೆ ಎಂದು ಹೇಳಿರುವುದಾಗಿ barandbench.com ವರದಿ ಮಾಡಿದೆ.

ಎಲ್‌ಜಿಬಿಟಿಕ್ಯೂಐಎ+ ಸಂಗಾತಿಗಳ ನಡುವಿನ ಸಿವಿಲ್‌ ಯೂನಿಯನ್‌ (ವಿವಾಹಕ್ಕೆ ಸರಿಸಮನಾದ ಕಾನೂನು ಮಾನ್ಯತೆ ಇರುವ ಸಂಬಂಧ) ಮಾನ್ಯತೆಗೆ ಕ್ರಮ ಕೈಗೊಳ್ಳುವಂತೆ ನ್ಯಾಯಮೂರ್ತಿ ಎನ್ ಆನಂದ್ ವೆಂಕಟೇಶ್ ಅವರಿದ್ದ ಏಕಸದಸ್ಯ ಪೀಠ ಕರೆ ನೀಡಿರುವ ಬಗ್ಗೆ ನ್ಯಾಯಾಲಯ ಗಮನ ಸೆಳೆದಿದೆ.

ಪ್ರಸಕ್ತ ಪ್ರಕರಣದಲ್ಲಿ ಮಹಿಳಾ ಸಲಿಂಗ ಜೋಡಿಯ ಸಂಗಾತಿಯಲ್ಲಿ ಒಬ್ಬರನ್ನು ಬಲವಂತವಾಗಿ ಬಂಧಿಸಿ ಇಬ್ಬರನ್ನೂ ಬೇರ್ಪಡಿಸಲಾಗಿತ್ತು. ಆ ಜೋಡಿಗೆ ರಕ್ಷಣೆ ನೀಡುವಂತೆ ಸೂಚಿಸುವ ವೇಳೆ ವಿಭಾಗೀಯ ಪೀಠ ಈ ಅವಲೋಕನ ಮಾಡಿದೆ.

ತನ್ನ ಮಗಳು ಮಾದಕ ವ್ಯಸನಿಯಾಗಿದ್ದು ಅರ್ಜಿದಾರೆ ಆಕೆಯನ್ನು ದಾರಿ ತಪ್ಪಿಸಿದ್ದಾಳೆ ಎಂದು ಬಂಧಿತೆಯ ತಾಯಿ ಹೇಳಿಕೊಂಡಿದ್ದರು. ಆದರೆ ಬಂಧಿತೆಯೊಂದಿಗೆ ಮಾತುಕತೆ ನಡೆಸಿದ ನ್ಯಾಯಾಲಯ ಆಕೆಯ ತಾಯಿ ಹೇಳಿದ್ದು ಸುಳ್ಳು ಎಂದು ತಳ್ಳಿಹಾಕಿದೆ.

ದ್ವಿಲಿಂಗಿಯಾಗಿದ್ದ (ಗಂಡು ಮತ್ತು ಹೆಣ್ಣು ಇಬ್ಬರ ಮೇಲೂ ಪ್ರಣಯ ಆಕರ್ಷಣೆಗೆ ಒಳಗಾಗುವವರು) ತಮ್ಮ ಮಗ ಹಾಗೂ ಲೇಖಕ ವಿಕ್ರಮ್‌ ಸೇಠ್‌ ಅವರಿಗೆ ಬೆಂಬಲವಾಗಿ ನಿಂತಿದ್ದ ದೆಹಲಿ ಹೈಕೋರ್ಟ್‌ ಪ್ರಥಮ ಮಹಿಳಾ ನ್ಯಾಯಮೂರ್ತಿ ಲೀಲಾ ಸೇಠ್‌ ಅವರನ್ನು ಇದೇ ವೇಳೆ ಸ್ಮರಿಸಿದ ನ್ಯಾಯಾಲಯ, ಪ್ರಸ್ತುತ ಪ್ರಕರಣದ ಬಂಧಿತೆಯ ತಾಯಿ ಲೀಲಾ ಸೇಠ್‌ ಅಲ್ಲ. ಆಕೆ ಈ ಸಂಬಂಧ ಬಹಿರಂಗವಾಗುವುದನ್ನು ಬಯಸದೆ ಇರುವುದು ಅರ್ಥವಾಗುವಂಥದ್ದೇ. ನಮ್ಮ ಸಮಾಜ ಇನ್ನೂ ಸಂಪ್ರದಾಯವಾದಿಯಾಗಿದೆ ಎಂದು ಹೇಳಿದೆ.

ಲೈಂಗಿಕ ದೃಷ್ಟಿಕೋನವು ಸ್ವಯಂ ನಿರ್ಣಯ, ಘನತೆ ಮತ್ತು ಸ್ವಾತಂತ್ರ್ಯದ ಮೂಲಭೂತ ಅಂಶಗಳಲ್ಲಿ ಒಂದಾಗಿದೆ ಎಂದು ನ್ಯಾಯಾಲಯ ಇದೇ ವೇಳೆ ತಿಳಿಸಿದೆ. ಎಲ್‌ಜಿಬಿಟಿಕ್ಯೂಐಎ+ ವ್ಯಕ್ತಿಗಳನ್ನು ವಿವರಿಸಲು “ಕ್ವೀರ್” ಎಂಬ ಪದ ಬಳಸುತ್ತಿರುವುದನ್ನು ಅದು ಪ್ರಶ್ನಿಸಿತು. ಯಾವುದೇ ಶಬ್ದಕೋಶದಲ್ಲಿ ಗಮನಿಸಿದರೂ ಈ ಪದದ ಅರ್ಥ ವಿಲಕ್ಷಣತೆ ಎಂದಿದೆ. ಆದರೆ, ಸಲಿಂಗತೆ ವಿಲಕ್ಷಣ ಅಲ್ಲದಿರುವಾಗ ಅದನ್ನು ಹಾಗೆ ಏಕೆ ಕರೆಯಬೇಕು ಎಂದು ನ್ಯಾಯಾಲಯ ಪ್ರಶ್ನಿಸಿದೆ.

ಅಂತಿಮವಾಗಿ ನ್ಯಾಯಾಲಯ ಬಂಧಿತೆ ತನ್ನ ಸಲಿಂಗ ಸಂಗಾತಿಯೊಂದಿಗೆ ಬದುಕಲು ಅರ್ಹಳಾಗಿದ್ದು ಆಕೆಯ ಇಚ್ಛೆಗೆ ವಿರುದ್ಧವಾಗಿ ಆಕೆಯನ್ನು ಕುಟುಂಬ ಬಂಧಿಸಿ ಇರಿಸಿಕೊಳ್ಳುವಂತಿಲ್ಲ ಎಂದು ತೀರ್ಪು ನೀಡಿದೆ. ಜೋಡಿಗೆ ರಕ್ಷಣೆ ನೀಡದೆ ಇರುವ ಪೊಲೀಸರನ್ನು ಟೀಕಿಸಿದ ನ್ಯಾಯಾಲಯ ಸೂಕ್ತ ರಕ್ಷಣೆ ಒದಗಿಸುವಂತೆ ತಾಕೀತು ಮಾಡಿದೆ.

ಸೌಜನ್ಯ : barandbench.com

ಮಹಿಳೆಯರು ಮೈಗಂಟಿದ ಉಡುಪು ಧರಿಸುವುದು ನನಗೆ ಇಷ್ಟವಿಲ್ಲ: ಬಿಜೆಪಿ ಸಚಿವ ವಿಜಯವರ್ಗೀಯ ವಿವಾದಾತ್ಮಕ ಹೇಳಿಕೆ; ವೀಡಿಯೊ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....