Homeಮುಖಪುಟ"ನನ್ನ ವಿರುದ್ಧದ ಪ್ರಕರಣಗಳು ಒಂದೊಂದು ಸಹ ನನ್ನ ಎದೆಯ ಮೇಲಿನ ಪದಕಗಳಂತೆ ": ರಾಹುಲ್ ಗಾಂಧಿ  

“ನನ್ನ ವಿರುದ್ಧದ ಪ್ರಕರಣಗಳು ಒಂದೊಂದು ಸಹ ನನ್ನ ಎದೆಯ ಮೇಲಿನ ಪದಕಗಳಂತೆ “: ರಾಹುಲ್ ಗಾಂಧಿ  

- Advertisement -
- Advertisement -

“ನನ್ನ ವಿರುದ್ಧ 15 ರಿಂದ 16 ಪ್ರಕರಣಗಳಿವೆ. ನೀವು ಸೈನಿಕನನ್ನು ನೋಡಿದಾಗ ಅವನ ಎದೆಯ ಮೇಲೆ ಸಾಕಷ್ಟು ಪದಕಗಳು ಇರುತ್ತವೆ. ಹಾಗೆಯೇ ಪ್ರತಿಯೊಂದು ಪ್ರಕರಣವೂ ನನಗೆ ಪದಕವಾಗಿದೆ” ಎಂದು ಕಾಂಗ್ರೆಸ್‌ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಹೇಳಿದ್ದಾರೆ.

ವಯನಾಡಿನ ವನ್ಯಾಂಬಲಂನಲ್ಲಿ ನಡೆದ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು ತಮ್ಮ ವಿರುದ್ಧ ಬಿಜೆಪಿಯಿಂದ ದೇಶಾದ್ಯಂತ ಪ್ರಕರಣಗಳು ದಾಖಲಾಗಿವೆ. ಅವು ನನ್ನನ್ನು ತಲ್ಲಣಗೊಳಿಸುವುದಿಲ್ಲ ಮತ್ತು ಅವುಗಳನ್ನು “ಪದಕ” ಎಂದು ಪರಿಗಣಿಸಿದ್ದೇನೆ ಎಂದಿದ್ದಾರೆ.

“ಅವರಿಗಿಂತ ನಾನು ಹೆಚ್ಚು ಸಂತೋಷದಿಂದಿದ್ದೀನಿ” ಮತ್ತು ಅವರನ್ನು ಸೈದ್ಧಾಂತಿಕವಾಗಿ ಎದುರಿಸುತ್ತೇನೆ. ನಾನು ದ್ವೇಷದ ಭಾರತವನ್ನು ನಂಬುವುದಿಲ್ಲ. ಬಿಜೆಪಿ ಎಷ್ಟು ಬಾರಿ ಮನವರಿಕೆ ಮಾಡಲು ಪ್ರಯತ್ನ ಪಟ್ಟರೂ ಸಹ ನಾನು ಅದನ್ನು ನಂಬುವುದಿಲ್ಲ ಎಂದು ಹೇಳಿದ್ದಾರೆ.

ಮಹಿಳೆಯರನ್ನು, ಎಲ್ಲಾ ಧರ್ಮದ ಜನರಿಗೆ, ಎಲ್ಲಾ ಸಮುದಾಯಗಳನ್ನು ಮತ್ತು ವಿಭಿನ್ನ ಸಿದ್ಧಾಂತವುಳ್ಳವರನ್ನು ಗೌರವಿಸುವುದೇ ಭಾರತದ ಶಕ್ತಿಯಾಗಿದೆ ಎಂದು ಅವರು ಹೇಳಿದ್ದಾರೆ.

“ಅವರು ನನ್ನ ವಿರುದ್ಧ ಮೊಕದ್ದಮೆ ಹೂಡಿದಾಗಲೆಲ್ಲಾ ನಾನು ಪ್ರೀತಿಯ ಬಗ್ಗೆ ಮಾತನಾಡುತ್ತೇನೆ.. ಮತ್ತು ನನ್ನೊಂದಿಗೆ ನಿಂತಿರುವ ನಿಮ್ಮನ್ನು ನಾನು ಎಂದಿಗೂ ಮರೆಯುವುದಿಲ್ಲ” ಎಂದು ಅವರು ನೆರೆದಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಹೇಳಿದ್ದಾರೆ.

ಆದ್ದರಿಂದ ಅವರು ನನ್ನ ವಿರುದ್ಧ ಮೊಕದ್ದಮೆ ಹೂಡಿದಾಗಲೆಲ್ಲಾ, ಅವರು ನನ್ನ ಎದೆಯ ಮೇಲೆ ಪದಕವನ್ನು ಹಾಕುತ್ತಾರೆ ಎಂದು ಭಾವಿಸುತ್ತೇನೆ ಎಂದಿದ್ದಾರೆ.

ಕಳೆದ ವರ್ಷ ರಾಜ್ಯದಲ್ಲಿ ಸಂಭವಿಸಿದ ವಿನಾಶಕಾರಿ ಪ್ರವಾಹವನ್ನು ಉಲ್ಲೇಖಿಸಿದ ಅವರು, ಅನೇಕ ಜನರು ತಮ್ಮ ಮನೆಗಳು, ಜೀವನ ಮತ್ತು ಎಲ್ಲವನ್ನೂ ಕಳೆದುಕೊಂಡರು, ಆದರೆ ಅಂತಹ ದುರಂತದಲ್ಲಿ ಹಲವಾರು ಜನರ ಸಕಾರಾತ್ಮಕ ಮಾನವೀಯ ಗುಣಗಳು ಬೆಳಕಿಗೆ ಬಂದವು ಎಂದು ಸಹಾಯ ಮಾಡಿದವರನ್ನು ನೆನೆದಿದ್ದಾರೆ.

ಪ್ರವಾಹ ಪೀಡಿತ ಜನರನ್ನು ತಲುಪಲು ಇನ್ನೂ ಸಾಕಷ್ಟು ಮರು ನಿರ್ಮಾಣ ಮತ್ತು ಬೆಂಬಲದ ಅಗತ್ಯವಿದೆ ಎಂದ ಅವರು ಪರಿಹಾರ ಮತ್ತು ಪುನರ್ವಸತಿ ವಿಷಯದ ಕುರಿತು ರಾಜ್ಯ ಸರ್ಕಾರದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...