ಬಿಜೆಪಿ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಸೋತಿರುವ ಆಘಾತದಿಂದ ಇನ್ನೂ ಹೊರಬಂದಿಲ್ಲ. ಅದು ತನ್ನ ಸೋಲಿನ ವಿರುದ್ದ ರಾಜ್ಯದಲ್ಲಿ ಒಂದಲ್ಲ ಒಂದು ರಾಜಕೀಯ ತಂತ್ರವನ್ನು ಹಣೆಯುತ್ತಲೆ ಇದೆ. ಆದರೆ ಈ ಮಧ್ಯೆ ಟಿಎಂಸಿ ಬಿಟ್ಟು ಬಿಜೆಪಿ ಸೇರಿದ್ದ ಹಲವು ಶಾಸಕರು, ಕಾರ್ಯಕರ್ತರು ಮತ್ತೆ ಪಕ್ಷಕ್ಕೆ ಮರಳುತ್ತಿದ್ದಾರೆ. ಇದು ಕೂಡಾ ಬಿಜೆಪಿಗೆ ತಲೆ ನೋವಾಗಿ ಪರಿಣಮಿಸಿದೆ.
“ಬಿಜೆಪಿಯು ಎಣೆಯುತ್ತಿರುವ ಪ್ರತಿಯೊಂದು ತಂತ್ರವೂ ಟಿಎಂಸಿಯನ್ನು ಮತ್ತಷ್ಟು ಬಲಪಡಿಸುತ್ತಿದ್ದು, ಅವರ ಈ ತಂತ್ರಗಳಿಂದಾಗಿ ಮುಂದಿನ ದಿನಗಳಲ್ಲಿ ತ್ರಿಪುರ, ಉತ್ತರ ಪ್ರದೇಶ ಮತ್ತು ಗುಜರಾತ್‌ನಲ್ಲಿಯೂ ಪಕ್ಷ ಬಲಿಷ್ಠಗೊಳ್ಳಲಿದೆ” ಎಂದು ಟಿಎಂಸಿ ಶಾಸಕ ಮದನ್ ಮಿತ್ರಾ ಹೇಳಿದ್ದಾರೆ.
ಇದನ್ನೂ ಓದಿ: ಪಶ್ಚಿಮ ಬಂಗಾಳ: ತೃಣಮೂಲ ಕಾಂಗ್ರೆಸ್ ಸೇರಿದ ಮತ್ತೊಬ್ಬ ಬಿಜೆಪಿ ಶಾಸಕ
ನನ್ನ ಹೆಸರು ಜಾರಿ ನಿರ್ದೇಶನಾಲಯದ (ಇ.ಡಿ.) ಆರೋಪ ಪಟ್ಟಿಯಲ್ಲಿದೆ. ಇದರಿಂದ ನಾನು ತುಂಬಾ ಸಂತೋಷಗೊಂಡಿದ್ದೇನೆ. ಸುವೇಂದು ಅಧಿಕಾರಿ ಬಿಜೆಪಿಯವರು ಎಂಬ ಕಾರಣಕ್ಕೆ ಅವರ ಹೆಸರು ಆರೋಪ ಪಟ್ಟಿಯಲ್ಲಿಇಲ್ಲ. ಯಾರೆಲ್ಲ ಬಿಜೆಪಿಯಲ್ಲಿದ್ದಾರೋ ಅವರ ಹೆಸರುಗಳು ಆರೋಪ ಪಟ್ಟಿಯಲ್ಲಿ ಉಲ್ಲೇಖವಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
ಬಿಜೆಪಿಯಲ್ಲಿ ಇಲ್ಲದ ಸಾಕಷ್ಟು ಹಿರಿಯ ನಾಯಕರ ಹೆಸರುಗಳು ಇ.ಡಿ. ಆರೋಪ ಪಟ್ಟಿಯಲ್ಲಿವೆ. ಆದರೆ, ತನಿಖೆ ಮುಕ್ತಾಯವಾಗಿದೆ. ಇದೀಗ ಅವರು ಪ್ರತಿದಿನ ನೋಟಿಸ್ ನೀಡಲು ಸಾಧ್ಯವಿಲ್ಲ. ಬಿಜೆಪಿಯು ಇಂತಹ ತಂತ್ರಗಳನ್ನು ಹೆಚ್ಚೆಚ್ಚು ಮಾಡಿದಷ್ಟೂ, ಟಿಎಂಸಿ ಬಲಿಷ್ಠವಾಗುತ್ತದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಪಶ್ಚಿಮ ಬಂಗಾಳ: ವಿಧಾನ ಪರಿಷತ್ ರಚಿಸುವ ನಿರ್ಣಯ ಅಂಗೀಕಾರ, ಬಿಜೆಪಿ ತಂತ್ರಕ್ಕೆ ಟಿಎಂಸಿ ಪ್ರತಿತಂತ್ರವೇ?
ನಾರದಾ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ-2002 ಅಡಿಯಲ್ಲಿ ಟಿಎಂಸಿ ನಾಯಕರಾದ ಪಿರ್ಹಾದ್ ಹಕೀಂ, ಸುಬ್ರತಾ ಮುಖರ್ಜಿ, ಮದನ್ ಮಿತ್ರಾ ಮತ್ತು ಸೋವನ್ ಚಟರ್ಜಿ ವಿರುದ್ಧ ಇ.ಡಿ ದೂರು ದಾಖಲಿಸಿತ್ತು.
ಹಾಲಿ ಶಾಸಕರು, ಸಂಸದರು ಮತ್ತು ಐಪಿಎಸ್ ಅಧಿಕಾರಿಯೊಬ್ಬರೂ ಸೇರಿದಂತೆ ಒಟ್ಟು 12 ಜನರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ-1988 ಅಡಿಯಲ್ಲಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮತ್ತು ಕೇಂದ್ರೀಯ ತನಿಖಾ ದಳ (ಸಿಬಿಐ) ದಾಖಲಿಸಿದ್ದ ಎಫ್‌ಐಆರ್ ಆಧರಿಸಿ ಇ.ಡಿ ತನಿಖೆ ನಡೆಸಿತ್ತು.
ಎಫ್‌ಐಆರ್ ಪ್ರಕಾರ, 2014ರಲ್ಲಿ ಕುಟುಕು ಕಾರ್ಯಾಚರಣೆ ನಡೆಸಿದ್ದ ಪತ್ರಕರ್ತ ಮ್ಯಾಥ್ಯೂ ಸ್ಯಾಮುಯೆಲ್ಸ್, ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದ ವಿಡಿಯೊ ಹಾಗೂ ದಾಖಲೆಗಳನ್ನು ಬಹಿರಂಗಪಡಿಸಿದ್ದರು.
ಇದನ್ನೂ ಓದಿ: ಪಶ್ಚಿಮ ಬಂಗಾಳ: ಟಿಎಂಸಿ ಸೇರಿದ ಬಿಜೆಪಿ ಶಾಸಕ ತನ್ಮಯ್ ಘೋಷ್


