Homeಮುಖಪುಟ'ಎಲ್ಲರೂ ರಾಹುಲ್ ಗಾಂಧಿ ಪ್ರಧಾನಿಯಾಗಬೇಕೆಂದು ಬಯಸುತ್ತಾರೆ': ಕಾಂಗ್ರೆಸ್ ಮುಖಂಡ ಸಂಜಯ್ ನಿರುಪಮ್

‘ಎಲ್ಲರೂ ರಾಹುಲ್ ಗಾಂಧಿ ಪ್ರಧಾನಿಯಾಗಬೇಕೆಂದು ಬಯಸುತ್ತಾರೆ’: ಕಾಂಗ್ರೆಸ್ ಮುಖಂಡ ಸಂಜಯ್ ನಿರುಪಮ್

- Advertisement -
- Advertisement -

ಇಂದಿನಿಂದ ಎರಡು ದಿನಗಳ ಕಾಲ ಪ್ರತಿಪಕ್ಷಗಳ INDIA ಮೈತ್ರಿಕೂಟದ ಮೂರನೇ ಸಭೆ ಮುಂಬೈನಲ್ಲಿ ನಡೆಯುತ್ತಿದೆ. ಎಲ್ಲರೂ ರಾಹುಲ್ ಗಾಂಧಿಯನ್ನು ಮುಂದಿನ ಪ್ರಧಾನಿಯನ್ನಾಗಿ ನೋಡಲು ಬಯಸುತ್ತಾರೆ ಎಂದು ಸಭೆಗೂ ಮುನ್ನ ಮಹಾರಾಷ್ಟ್ರ ಕಾಂಗ್ರೆಸ್ ನಾಯಕ ಸಂಜಯ್ ನಿರುಪಮ್ ಅವರು ಹೇಳಿದ್ದಾರೆ.

ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಅವರು, ”ಇತರ ಪಕ್ಷಗಳಂತೆ, ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾವೆಲ್ಲರೂ ರಾಹುಲ್ ಗಾಂಧಿ ಪ್ರಧಾನಿಯಾಗಬೇಕೆಂದು ಬಯಸುತ್ತೇವೆ. ಆದರೆ ಈ ನಿರ್ಧಾರವನ್ನು ಮೈತ್ರಿಕೂಟದ ಎಲ್ಲಾ ಪಕ್ಷಗಳು ಒಟ್ಟಾಗಿ ತೆಗೆದುಕೊಳ್ಳಬೇಕು” ಎಂದರು.

”ಭಾರತದ ರಾಜಕೀಯ ಬದಲಾಗುತ್ತಿದೆ. ವಿರೋಧ ಪಕ್ಷಗಳು ಒಂದಾಗಿವೆ ಮತ್ತು ಬಿಜೆಪಿ ಸರ್ಕಾರವನ್ನು ಸೋಲಿಸುವಷ್ಟು ಶಕ್ತಿಯುತವಾಗಿವೆ. ಮುಂಬೈ ಸಭೆಯಲ್ಲಿ ಅಜೆಂಡಾ ನಿರ್ಧರಿಸಿ ಸಮನ್ವಯ ಸಮಿತಿಯನ್ನೂ ಪ್ರಕಟಿಸಲಾಗುವುದು” ಎಂದು ಹೇಳಿದ್ದಾರೆ.

”ಜನರು ರಾಹುಲ್ ಗಾಂಧಿಯನ್ನು ಪ್ರೀತಿಸುತ್ತಾರೆ ಮತ್ತು ಅವರ ನಾಯಕತ್ವದಲ್ಲಿ ಕೆಲಸ ಮಾಡಲು ಬಯಸುತ್ತಾರೆ. ಆದರೆ ನಾವೆಲ್ಲರೂ ಒಟ್ಟಿಗೆ ಕುಳಿತು ಕೆಲವು ಪಕ್ಷಗಳ ನಡುವಿನ ಭಿನ್ನಾಭಿಪ್ರಾಯಗಳನ್ನು ಕೊನೆಗೊಳಿಸುವ ಬಗ್ಗೆ ಚರ್ಚಿಸುತ್ತೇವೆ” ಎಂದು ಶಿವಸೇನಾ (ಯುಬಿಟಿ) ಸಂಜಯ್ ರಾವತ್ ಕೂಡ ಹೇಳಿದ್ದಾರೆ.

ಇದಕ್ಕೂ ಮುನ್ನ ಬುಧವಾರದಂದು, ”ಆಮ್ ಆದ್ಮಿ ಪಕ್ಷದ ವಕ್ತಾರ ಪ್ರಿಯಾಂಕಾ ಕಕ್ಕರ್ ಅವರು, ”ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪ್ರಧಾನಿಯಾಗುವ ಸ್ಪರ್ಧೆಯಲ್ಲಿದ್ದಾರೆ ಎಮದು ಹೇಳಿದ್ದಾರೆ.

ಗಮನಾರ್ಹವಾದ ವಿಷಯವೆಂದರೆ, ನಿತೀಶ್ ಕುಮಾರ್ ಅವರು, ”ನಾನು ಪ್ರಧಾನಿ ಹುದ್ದೆಯ ಮಹತ್ವಾಕಾಂಕ್ಷೆಯಲ್ಲ. ಆದರೆ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಹೋರಾಡಲು ಪ್ರತಿಪಕ್ಷಗಳನ್ನು ಒಗ್ಗೂಡಿಸುತ್ತೇನೆ” ಎಂದು ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಧಾರವಾಡ ಅಖಾಡ: ಕೇಸರಿ ಕೋಟೆಯಲ್ಲೇ ಸಂಘೀ ಸೇನಾಧಿಪತಿ ಪ್ರಹ್ಲಾದ್ ಜೋಶಿಗೆ ನಡುಕ!!

0
ಪೇಡಾ ನಗರಿ, ಸಾಂಸ್ಕೃತಿಕ ರಾಜಧಾನಿ, ಕರ್ನಾಟಕದ ಆಕ್ಸ್‌ಫರ್ಡ್ ಎಂದೆಲ್ಲ ಗುರುತಿಸಲ್ಪಡುವ ಧಾರವಾಡ ನಗರ ಕೇಂದ್ರವಾಗಿರುವ ಧಾರವಾಡ ಲೋಕಸಭಾ ಕ್ಷೇತ್ರ ಮಲೆನಾಡು, ಅರೆಮಲೆನಾಡು ಮತ್ತು ಬಯಲುನಾಡುಗಳ ವಿಭಿನ್ನ ನೈಸರ್ಗಿಕ ಗುಣ-ಧರ್ಮದ ಸೀಮೆ. ಖಡಕ್ ಜವಾರಿ...