Homeಕರ್ನಾಟಕಇದ್ರೀಶ್‌ ಕೊಲೆ ಗೂಂಡಾ ಸಂಸ್ಕೃತಿಗೆ ಸಾಕ್ಷಿ; ಸಿದ್ದರಾಮಯ್ಯ, ಕಾಂಗ್ರೆಸ್‌ ಪ್ರತಿಕ್ರಿಯೆ

ಇದ್ರೀಶ್‌ ಕೊಲೆ ಗೂಂಡಾ ಸಂಸ್ಕೃತಿಗೆ ಸಾಕ್ಷಿ; ಸಿದ್ದರಾಮಯ್ಯ, ಕಾಂಗ್ರೆಸ್‌ ಪ್ರತಿಕ್ರಿಯೆ

- Advertisement -
- Advertisement -

ರಾಮನಗರ ಜಿಲ್ಲೆ, ಕನಕಪುರ ತಾಲ್ಲೂಕಿನ ಸಾತನೂರು ಬಳಿ ಶುಕ್ರವಾರ ಮಧ್ಯರಾತ್ರಿ ವಾಹನದಲ್ಲಿ ಜಾನುವಾರು ಸಾಗಿಸುತ್ತಿದ್ದ ವ್ಯಕ್ತಿಯ ಹತ್ಯೆಯಾಗಿರುವುದಾಗಿ ವರದಿಯಾಗಿದೆ. ಗೋರಕ್ಷಣೆ ಹೆಸರಲ್ಲಿ ಪುನೀತ್‌ ಕೆರೆಹಳ್ಳಿ ಮತ್ತು ಆತನ ಸಹಚರರು ಕೊಲೆ ಮಾಡಿದ್ದಾರೆಂದು ಪ್ರಕರಣ ದಾಖಲಾಗಿದೆ.

ಇದ್ರೀಶ್‌ ಪಾಷ ಎನ್ನುವ 39 ವರ್ಷದ ಅಮಾಯಕ ಮುಸ್ಲಿಂ ವ್ಯಕ್ತಿಯ ಕೊಲೆಗೆ ಆಕ್ರೋಶ ವ್ಯಕ್ತವಾಗಿದೆ. ಕರ್ನಾಟಕ ಕಾಂಗ್ರೆಸ್‌ ಈ ಕುರಿತು ಟ್ವೀಟ್ ಮಾಡಿದ್ದು, “ಬಿಜೆಪಿ ಸರ್ಕಾರ ಪುಂಡರನ್ನು, ರೌಡಿಗಳನ್ನು ಪೋಷಿಸಿದ್ದರ ಪರಿಣಾಮ ಈಗ ಕೊಲೆ ಮಾಡುವ ಹಂತಕ್ಕೆ ತಲುಪಿದ್ದಾರೆ. ಕನಕಪುರದಲ್ಲಿ ಗೋಸಾಗಣೆಯ ವಾಹನದ ಮೇಲೆ ದಾಳಿ ನಡೆಸಿ ಓರ್ವನ ಹತ್ಯೆ ಮಾಡಿದ ಕೊಲೆಗಡುಕರಿಗೆ ಬಿಜೆಪಿಯ ಕೃಪಾಪೋಷಣೆ ಇದೆ. ಬಿಜೆಪಿ ಹೇಳುತ್ತಿದ್ದ ಯುಪಿ ಮಾಡೆಲ್ ಅಕ್ಷರಶಃ ಕರ್ನಾಟಕದಲ್ಲಿ ಜರುಗುತ್ತಿದೆ” ಎಂದು ಟೀಕಿಸಿದೆ.

“40% ಕಮಿಷನ್ ಪಡೆದು ಆರಾಮಾಗಿರುವ ಆರಗ ಜ್ಞಾನೇಂದ್ರ ಅವರೇ, ಕಾನೂನು ಪಾಲನೆಯ ಹೊಣೆಯನ್ನು ಪೊಲೀಸರಿಗೆ ಕೊಟ್ಟಿದ್ದೀರೋ, ಕೊಲೆಗಡುಕರಿಗೆ ಕೊಟ್ಟಿದ್ದೀರೋ? ಗೋರಕ್ಷಣೆಯ ಹೆಸರಲ್ಲಿ ನಡೆದ ಹತ್ಯೆಗೆ ನಿಮ್ಮ ವಿಫಲ ಸರ್ಕಾರ ಹೊಣೆಯಲ್ಲವೇ? ಬೀದಿ ಪುಂಡರನ್ನು ಆದರ್ಶ ವ್ಯಕ್ತಿಗಳು ಎಂಬಂತೆ ಮೆರೆಸುವ ಬಿಜೆಪಿ ಈ ಕೊಲೆಯ ಹೊಣೆ ಹೊರಲಿ” ಎಂದಿದೆ.

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿ, “ಧರ್ಮ ರಕ್ಷಣೆಯ ಹೆಸರಲ್ಲಿ ಭಾರತೀಯ ಜನತಾ ಪಕ್ಷ ರಾಜ್ಯದಲ್ಲಿ ಬೆಳೆಸಿದ ಗೂಂಡಾ ಸಂಸ್ಕೃತಿಗೆ ಸಾತನೂರು ಬಳಿ ನಡೆದ ಯುವಕನ ಹತ್ಯೆ ಸಾಕ್ಷಿ. ಈ ಹತ್ಯೆಯ ಹೊಣೆಯನ್ನು ಆರಗ ಜ್ಞಾನೇಂದ್ರ ಅವರಂತಹ ಅಸಮರ್ಥ ಗೃಹ ಸಚಿವರೇ ಹೊರಬೇಕು” ಎಂದಿದ್ದಾರೆ.

“ಕರ್ನಾಟಕ ಇಂತಹ ಅಸಮರ್ಥ‌, ಅದಕ್ಷ ಮತ್ತು ಬೇಜವಾಬ್ದಾರಿ ಗೃಹ‌ಸಚಿವರನ್ನು ಎಂದೂ‌ ನೋಡಿರಲಿಲ್ಲ. ತನ್ನ‌ ಇಲಾಖೆಯ ಮೇಲೆ ನಿಯಂತ್ರಣ‌ ಇಲ್ಲದ ಈ ಸಚಿವರಿಗೆ ರಾಜ್ಯದ ಶಾಂತಿ‌ ಮತ್ತು‌ ಸುವ್ಯವಸ್ಥೆಯನ್ನು‌ ನಿರ್ವಹಿಸಲು‌ ಸಾಧ್ಯವೇ? ಮೊದಲು ಇವರನ್ನು ಸಂಪುಟದಿಂದ ಕಿತ್ತು ಹಾಕಿ” ಎಂದು ಆಗ್ರಹಿಸಿದ್ದಾರೆ.

“ಗೋರಕ್ಷಣೆಯ ಹೆಸರಲ್ಲಿ ನಡೆದ ಹತ್ಯೆ ಕೇವಲ ಹುಚ್ಚಾಟ ಆಗಿರಲಾರದು. ಇದು ಚುನಾವಣಾ ದಿನಗಳಲ್ಲಿ ಕೋಮುದ್ವೇಷವನ್ನು ಬಡಿದೆಬ್ಬಿಸುವ ಯೋಜಿತ ಸಂಚಿನ‌ ಭಾಗವಾಗಿರುವ ಸಾಧ್ಯತೆ ಇದೆ.‌ ಈ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣದ ಕೂಲಂಕಷ ತನಿಖೆ ನಡೆಸಬೇಕು” ಎಂದು ಒತ್ತಾಯಿಸಿದ್ದಾರೆ.

“ಚುನಾವಣಾ ಪ್ರಕ್ರಿಯೆ ಚಾಲನೆಯಲ್ಲಿರುವಾಗಲೇ ನಗರದಲ್ಲಿ ನಿತ್ಯ ಅತ್ಯಾಚಾರ, ಕೊಲೆಗಳು ನಿರ್ಭೀತಿಯಿಂದ ನಡೆಯುತ್ತಿರುವುದು ಕಳವಳಕಾರಿ ಸಂಗತಿ. ಈ ಸರ್ಕಾರ ಅಸ್ತಿತ್ವದಲ್ಲಿರುವಾಗ ಚುನಾವಣೆ ನ್ಯಾಯಯುತವಾಗಿ ನಡೆಯುವುದು ಅನುಮಾನ. ಚುನಾವಣಾ ಆಯೋಗ ಈ ಬೆಳವಣಿಗೆಗಳನ್ನು ಗಂಭೀರವಾಗಿ ಪರಿಗಣಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಬಿಜೆಪಿಗೆ ಮತ ಹಾಕುವಂತೆ...

0
ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಹಾಗೂ ಹಿರಿಯ ರಾಜಕಾರಣಿ ಅಧೀರ್ ರಂಜನ್ ಚೌಧರಿ ಅವರಿ ಬಿಜೆಪಿ ಪರ ಮಾತನಾಡಿದ್ದಾರೆ ಎನ್ನಲಾದ ವಿಡಿಯೋವೊಂದು ವೈರಲ್ ಆಗಿದೆ. ವಿಡಿಯೋದಲ್ಲಿ " ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಪಕ್ಷಕ್ಕೆ ಮತ...