Homeಕರ್ನಾಟಕಮಹಿಳೆಗೆ ಪಾದರಸ 'ಇಂಜೆಕ್ಟ್‌' ಮಾಡಿ ಕೊಂದ ದುರುಳ ಪತಿ; ಸಾವಿಗೂ ಮುನ್ನ, ಪತಿಯ ದುಷ್ಕೃತ್ಯ ಬಿಚ್ಚಿಟ್ಟಿದ್ದ...

ಮಹಿಳೆಗೆ ಪಾದರಸ ‘ಇಂಜೆಕ್ಟ್‌’ ಮಾಡಿ ಕೊಂದ ದುರುಳ ಪತಿ; ಸಾವಿಗೂ ಮುನ್ನ, ಪತಿಯ ದುಷ್ಕೃತ್ಯ ಬಿಚ್ಚಿಟ್ಟಿದ್ದ ಮಹಿಳೆ

- Advertisement -
- Advertisement -

ದುರುಳ ವ್ಯಕ್ತಿಯೊಬ್ಬ ತನ್ನ ಪತ್ನಿಗೆ ಪಾದರಸ ಚುಚ್ಚುಮದ್ದು ನೀಡಿ, ಕೊಂದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಾವಿಗೂ ಮುನ್ನ ಪೊಲೀಸರಿಗೆ ಮಾಹಿತಿ ನೀಡಿರುವ ಮಹಿಳೆ, ‘ತನ್ನ ಪತಿ ಮತ್ತು ಮಾವ ನನ್ನನ್ನು ಕೊಲ್ಲಲು ಸಂಚುಹೂಡಿ, ವೈದ್ಯಕೀಯ ದಂಪತಿಯ ನೆರವು ಪಡೆದಿದ್ದಾರೆ’ ಎಂದು ಆರೋಪಿಸಿದ್ದಾರೆ.

ಮೃತ ಮಹಿಳೆಯನ್ನು ವಿದ್ಯಾ ಎಂದು ಗುರುತಿಸಾಗಿದೆ. ಅವರು ಕಳೆದ ವಾರ ಮೃತಪಟ್ಟಿದ್ದಾರೆ. ಅವರು ತಮ್ಮ ಮೇಲಾದ ದೌರ್ಜ್ಯದ ಕುರಿತು ಪೊಲೀಸರಿಗೆ ವಿವರಿಸಿರುವಂತೆ, ಅವರಿಗೆ ಫೆಬ್ರವರಿ 26ರಂದು ಆಕೆಯ ಪತಿ ಪಾದರವನ್ನು ಇಂಜೆಕ್ಟ್‌ ಮಾಡಿದ್ದಾರೆ.

“SLN ಡಯಾಗ್ನೋಸ್ಟಿಕ್ ಸೆಂಟರ್ ಎಂಬಲ್ಲಿ ಕೆಲಸ ಮಾಡುತ್ತಿದ್ದ ಶ್ವೇತಾ ಮತ್ತು ಆಕೆಯ ಪತಿ ನನ್ನ ಗಂಡನಿಗೆ ಕ್ಲೋರೋಪಾರ್ಫ್‌, ಸಿರಿಂಜ್ ಹಾಗೂ ಮರ್ಕ್ಯುರಿಯನ್ನು ನೀಡಿದ್ದರು. ಅವುಗಳನ್ನು ಬಳಸಿಕೊಂಡ ನನ್ನ ಪತಿ, ನಾನು ಫೆಬ್ರವರಿ 26ರ ರಾತ್ರಿ ಮಲಗಿದ್ದಾಗ, ಕ್ಲೋರೋಫಾರ್ಮ್‌ ಮೂಲಕ ನನ್ನ ಪ್ರಜ್ಞೆ ತಪ್ಪಿಸಿ, ಪಾದರಸವನ್ನು ಇಂಜೆಕ್ಟ್‌ ಮಾಡಿದ್ದಾರೆ” ಎಂದು ವಿವರಿಸಿರುವುದಾಗಿ ವರದಿಯಾಗಿದೆ. 

“ಮರುದಿನ ಸಂಜೆ ವೇಳೆಗೆ ನನಗೆ ಪ್ರಜ್ಞೆ ಬಂದಿತು. ಆಗ, ನನ್ನ ಕಾಲು ಊದಿಕೊಂಡಿತ್ತು. ನನ್ನ ಬಲ ತೊಡೆಯಲ್ಲಿ ತೀವ್ರ ನೋವಾಗುತ್ತಿತ್ತು. ಕೆಲ ದಿನಗಳಲ್ಲಿಯೇ ನನ್ನ ಆರೋಗ್ಯ ಸ್ಥಿತಿ ಹದಗೆಟ್ಟು, ಮಾರ್ಚ್‌ 7ರಂದು ಅತ್ತಿಬೆಲೆ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದೆ. ಅಲ್ಲಿಂದ, ಆಕ್ಸ್‌ಫರ್ಡ್‌ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ, ವೈದ್ಯರು ಪರೀಕ್ಷಿಸಿದಾಗ, ನನ್ನ ದೇಹದಲ್ಲಿ ಪಾದರಸ ಇರುವುದು ಪತ್ತೆಯಾಯಿತು” ಎಂದು ಸಾವಿನ ಅಂಚಿನಲ್ಲಿದ್ದ ಮಹಿಳೆ ಪೊಲೀಸರಿಗೆ ವಿವರಿಸಿದ್ದರೆಂದು ತಿಳಿದುಬಂದಿದೆ.

“ನನ್ನ ಪತಿ ಬಸವರಾಜ್ ಮತ್ತು ಅವನ ತಂದೆ ಮರಿಶ್ವಾಮಾಚಾರಿ ನನ್ನನ್ನು ಕೊಲ್ಲುವ ಉದ್ದೇಶದಿಂದ ನನ್ನ ದೇಹಕ್ಕೆ ಪಾದರಸವನ್ನು ಚುಚ್ಚಿದ್ದಾರೆ. ಅವರಿಬ್ಬರು ನನಗೆ ನಿರಂತರ ಕಿರುಕುಳ ನೀಡಿ, ಅವಮಾನಿಸುತ್ತಿದ್ದರು. ಮನೆಯೊಳಗೆ ಕೂಡಿಹಾಕುತ್ತಿದ್ದರು” ಎಂದು ವಿದ್ಯಾ ಆರೋಪಿಸಿದ್ದರು.

ದೇಹದಲ್ಲಿ ಪಾದರಸ ಇದ್ದಿದ್ದರಿಂದ ಆಕೆಯ ಮೂತ್ರಪಿಂಡಗಳು ಸೇರಿದಂತೆ ಬಹು ಅಂಗಗಳು ಹಾನಿಯಾಗಿದ್ದವು. ಆಕೆಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿ, ಅಲ್ಲಿ ನಿಯಮಿತವಾಗಿ ಡಯಾಲಿಸಿಸ್‌ ಮಾಡಲಾಗುತ್ತಿತ್ತು. ಆದಾಗ್ಯೂ, ಆಕೆ 9 ತಿಂಗಳ ಜೀವನ್ಮರಣ ಹೋರಾಟದ ಬಳಿಕ ಇತ್ತೀಚೆಗೆ ಮೃತಪಟ್ಟಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...