Homeಮುಖಪುಟಅಸ್ಸಾಂ ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ ಇವಿಎಂ ಪತ್ತೆ: ಮರುಮತದಾನಕ್ಕೆ ಆದೇಶ, 4 ಅಧಿಕಾರಿಗಳ ಅಮಾನತು!

ಅಸ್ಸಾಂ ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ ಇವಿಎಂ ಪತ್ತೆ: ಮರುಮತದಾನಕ್ಕೆ ಆದೇಶ, 4 ಅಧಿಕಾರಿಗಳ ಅಮಾನತು!

- Advertisement -
- Advertisement -

ಅಸ್ಸಾಂನ ಬರಾಕ್ ಕಣಿವೆ ಪ್ರದೇಶದ ಕರೀಂಗಂಜ್ ಜಿಲ್ಲೆಯ ಬಿಜೆಪಿ ಅಭ್ಯರ್ಥಿಗೆ ಸೇರಿದ ಕಾರಿನಲ್ಲಿ ಚುನಾವಣಾ ಅಧಿಕಾರಿಗಳು ಇವಿಎಂ ಜೊತೆ ಪ್ರಯಾಣಿಸಿದ ಘಟನೆ ದೊಡ್ಡ ಕೋಲಾಹಲಕ್ಕೆ ಕಾರಣವಾಗಿದ್ದು, ಆ ನಾಲ್ವರು ಅಧಿಕಾರಿಗಳನ್ನು ಕರ್ತವ್ಯಲೋಪದ ಆರೋಪದ ಮೇಲೆ ಅಮಾನತು ಮಾಡಲಾಗಿದೆ. ಮತ್ತು ಆ ಕ್ಷೇತ್ರದಲ್ಲಿ ಮರುಮತದಾನ ನಡೆಸುವಂತೆ ಚುನಾವಣಾ ಆಯೋಗ ಆದೇಶ ನೀಡಿದೆ.

ಅದೇ ಸಂದರ್ಭದಲ್ಲಿ ಪ್ರತಿಭಟನೆ ಮತ್ತು ಘೇರಾವ್ ನಡೆಸಿದ ಪ್ರತಿಪಕ್ಷಗಳ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ನಿನ್ನೆ ಅಸ್ಸಾಂನಲ್ಲಿ ಎರಡನೇ ಹಂತದ ಮತದಾನ ಪೂರ್ಣಗೊಂಡಿದೆ. ಆದರೆ ಕರೀಮ್‌ಗಂಜ್‌ನ ರತನಾರಿ ಕ್ಷೇತ್ರದ ಸ್ಟೇಷನ್ ನಂಬರ್ 149ರ ರತನಾರಿ – ಇಂದಿರಾ ಎಂವಿ ಸ್ಕೂಲ್ ಬೂತ್‌ನಲ್ಲಿ ಚುನಾವಣಾ ಅಧಿಕಾರಿಗಳು ಇವಿಎಂ ಅನ್ನು ಪಕ್ಕದ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೃಷ್ಣೇಂದ್ರ ಪೌಲ್‌ರವರ ಪತ್ನಿಯ ಕಾರಿನಲ್ಲಿ ಸಾಗಿಸಿದ್ದರು. ಕಾರು ಸ್ಟ್ರಾಂಗ್‌ರೂಂ ಬಳಿ ಬರುತ್ತಲೇ ವಿರೋಧ ಪಕ್ಷದ ಕಾರ್ಯಕರ್ತರು ಘೇರಾವ್ ಹಾಕಿ ಪ್ರತಿಭಟಿಸಿದ್ದರು. ಹಿಂಸಾಚಾರ ಉಲ್ಭಣಗೊಂಡ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ, ಲಾಠೀ ಚಾರ್ಜ್ ಮಾಡಿದ್ದರು.

ರಾತ್ರಿ 9 ಗಂಟೆಯ ಸಮಯದಲ್ಲಿ ತಮಗಾಗಿ ನಿಯೋಜಿಸಿದ ವಾಹನ ಕೆಟ್ಟುಹೋದ ಕಾರಣ ಬದಲಿ ವಾಹನಕ್ಕಾಗಿ ಚುನಾವಣಾ ಅಧಿಕಾರಿಗಳು ಸೆಕ್ಟರ್ ಅಧಿಕಾರಿಯನ್ನು ಸಂಪರ್ಕಿಸಿದ್ದರು. ಕೆಲ ಸಮಯದಲ್ಲಿ ವಾಹನ ಕಳಿಸುವುದಾಗಿ ಅವರಿಗೆ ಭರವಸೆ ನೀಡಲಾಗಿತ್ತು. ಆದರೂ ಮತದಾನದ ಸಿಬ್ಬಂದಿ ರಾತ್ರಿ 9:20ರ ಸಮಯದಲ್ಲಿ ಖಾಸಗಿ ವಾಹನದಲ್ಲಿ ಇವಿಎಂಗಳೊಂದಿಗೆ ಸ್ಟ್ರಾಂಗ್‌ ರೂಂ ತಲುಪಿದ್ದಾರೆ. ಆ ಕಾರು ಕರೀಮ್‌ಗಂಜ್ ಜಿಲ್ಲೆಯ ಪಥಾರ್ಕಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಪತ್ನಿಯದಾಗಿತ್ತು. ಅದು ನಮಗೆ ಗೊತ್ತಿರಲಿಲ್ಲ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ರತನಾರಿ ಕ್ಷೇತ್ರದ ಮತದಾನ ಸಿಬ್ಬಂದಿ ಇವಿಎಂಗಳೊಂದಿಗೆ ಬಿಜೆಪಿ ಅಭ್ಯರ್ಥಿಯ ಕಾರಿನಲ್ಲಿ ಪ್ರಯಾಣಿಸಿರುವುದು ದೊಡ್ಡ ವಿವಾದಕ್ಕೆ ಕಾರಣವಾಗಿದ್ದು, ಅಸ್ಸಾಂನಲ್ಲಿ ಬಿಜೆಪಿ ಇವಿಎಂಗಳನ್ನು ಕದಿಯುತ್ತಿದೆ ಎಂದು ಪ್ರತಿಪಕ್ಷಗಳು ಗಂಭೀರ ಆರೋಪ ಮಾಡಿವೆ. ಸೋತ ಬಿಜೆಪಿಯ ಕೊನೆಯ ಉಪಾಯ: ಇವಿಎಂಗಳನ್ನು ಕದಿಯುವುದಾಗಿ, ಇದು ಪ್ರಜಾಪ್ರಭುತ್ವದ ಕೊಲೆ” ಎಂದು ಎಐಯುಡಿಎಫ್ ಮುಖಂಡ ಮೌಲನಾ ಬದ್ರುದ್ದೀನ್ ಅಜ್ಮಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಆಡಳಿತದಲ್ಲಿರುವ ಬಿಜೆಪಿ ಸರ್ಕಾರವು ಇವಿಎಂಗಳನ್ನು ವಶಪಡಿಸಿಕೊಂಡು ತಿರುಚುತ್ತಿದೆ. ಕೇವಲ ಇದೊಂದೇ ಮಾರ್ಗದಲ್ಲಿ ಮಾತ್ರ ಬಿಜೆಪಿ ಅಸ್ಸಾಂನಲ್ಲಿ ಜಯಗಳಿಸುತ್ತಿದೆ” ಎಂದು ಕಾಂಗ್ರೆಸ್‌ ವಕ್ತಾರ ಗೌರವ್ ಗೊಗೊಯ್ ಆರೋಪಿಸಿದ್ದಾರೆ.

ತೀವ್ರ ಟೀಕೆ ಕೇಳಿಬಂದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ಕರೀಮ್‌ಗಂಜ್‌ನ ರತನಾರಿ ಕ್ಷೇತ್ರದ ಸ್ಟೇಷನ್ ನಂಬರ್ 149ರ ರತನಾರಿ – ಇಂದಿರಾ ಎಂವಿ ಸ್ಕೂಲ್ ಬೂತ್‌ನಲ್ಲಿ ಮರುಮತದಾನಕ್ಕೆ ಆದೇಶಿಸಲಾಗಿದೆ. ನಾಲ್ಕರು ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಪಶ್ಚಿಮ ಬಂಗಾಳಲ್ಲಿಯೂ ಸಹ ಚುನಾವಣಾ ಆಯೋಗವು ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದೆ ಎಂದು ಆಡಳಿತರೂಢ ಟಿಎಂಸಿ ಪಕ್ಷ ಪದೇ ಪದೇ ಆರೋಪಿಸಿದೆ.


ಇದನ್ನೂ ಓದಿ: ಅಸ್ಸಾಂ ಚುನಾವಣಾ ಅಧಿಕಾರಿಗಳು, ಇವಿಎಂ ಜೊತೆ ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ: ಗಲಭೆಗೆ ತಿರುಗಿದ ವಿವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...