Homeಮುಖಪುಟ'ಇವಿಎಂ ಹ್ಯಾಕ್ ಮಾಡದಂತೆ ಸಂಪೂರ್ಣವಾಗಿ ರಕ್ಷಿಸಲಾಗಿದೆ..'; ಮಾಧ್ಯಮ ವರದಿಗಳನ್ನು ತಳ್ಳಿಹಾಕಿದ ಮುಂಬೈ ಚುನಾವಣಾಧಿಕಾರಿ

‘ಇವಿಎಂ ಹ್ಯಾಕ್ ಮಾಡದಂತೆ ಸಂಪೂರ್ಣವಾಗಿ ರಕ್ಷಿಸಲಾಗಿದೆ..’; ಮಾಧ್ಯಮ ವರದಿಗಳನ್ನು ತಳ್ಳಿಹಾಕಿದ ಮುಂಬೈ ಚುನಾವಣಾಧಿಕಾರಿ

- Advertisement -
- Advertisement -

ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ (ಇವಿಎಂ) ಯಾವುದೇ ರೀತಿಯ ಹ್ಯಾಕಿಂಗ್‌ನಿಂದ ರಕ್ಷಿಸಲು ದೃಢವಾದ ಆಡಳಿತಾತ್ಮಕ ಸುರಕ್ಷತೆಗಳನ್ನು ಹೊಂದಿರುವ ಸ್ವತಂತ್ರ ವ್ಯವಸ್ಥೆಯಾಗಿದೆ, ಅದನ್ನು ಅನ್ಲಾಕ್ ಮಾಡಲು ಒನ್-ಟೈಮ್ ಪಾಸ್‌ವರ್ಡ್ (ಒಟಿಪಿ) ಅಗತ್ಯವಿಲ್ಲ ಎಂದು ಮುಂಬೈನ ಚುನಾವಣಾಧಿಕಾರಿಯೊಬ್ಬರು ಹೇಳಿದರು.

ಮುಂಬೈ ವಾಯವ್ಯ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ವಂದನಾ ಸೂರ್ಯವಂಶಿ ಅವರು 48 ಮತಗಳ ಅಂತರದಿಂದ ಜಯಶಾಲಿಯಾದ ಶಿವಸೇನಾ ಅಭ್ಯರ್ಥಿ ರವೀಂದ್ರ ವೈಕರ್ ಅವರ ಸಂಬಂಧಿ ಬಗ್ಗೆ ಪತ್ರಿಕೆಯಲ್ಲಿ ಬಂದ ವರದಿಗೆ ಪ್ರತಿಕ್ರಿಯಿಸಿದರು. ಜೂನ್ 4 ರಂದು (ಮಂಗಳವಾರ) ಮತ ಎಣಿಕೆ ಸಮಯದಲ್ಲಿ ಇವಿಎಂಗೆ ಮೊಬೈಲ್ ಫೋನ್ ಸಂಪರ್ಕಪಡಿಸಲಾಗಿದೆ ಎಂಬ ಆರೋಪವನ್ನು ತಳ್ಳಿಹಾಕಿದ್ದಾರೆ.

“ಇಬಿಎಂ ಒಂದು ಸ್ವತಂತ್ರ ವ್ಯವಸ್ಥೆಯಾಗಿದ್ದು, ಅದನ್ನು ಅನ್ಲಾಕ್ ಮಾಡಲು ಒಟಿಪಿಯ ಅಗತ್ಯವಿಲ್ಲ. ಇದು ಪ್ರೋಗ್ರಾಮೆಬಲ್ ಅಲ್ಲ ಮತ್ತು ವೈರ್‌ಲೆಸ್ ಸಂವಹನ ಸಾಮರ್ಥ್ಯಗಳನ್ನು ಹೊಂದಿಲ್ಲ” ಎಂದು ಹೇಳಿದ್ದಾರೆ.

ಪತ್ರಿಕೆಯೊಂದು ಹಬ್ಬಿಸುತ್ತಿರುವ ಸಂಪೂರ್ಣ ಸುಳ್ಳು; ಭಾರತೀಯ ದಂಡ ಸಂಹಿತೆಯ ಸೆಕ್ಷನ್ 499, 505 ರ ಅಡಿಯಲ್ಲಿ ಮಾನನಷ್ಟ ಮತ್ತು ಸುಳ್ಳು ಸುದ್ದಿಗಳನ್ನು ಹರಡಿದ ಪತ್ರಿಕೆಗೆ ನಾವು ನೋಟಿಸ್ ನೀಡಿದ್ದೇವೆ ಎಂದು ಸೂರ್ಯವಂಶಿ ಇಂದು ಹೇಳಿದ್ದಾರೆ.

ಜೂನ್ 4 ರಂದು ಸಾರ್ವತ್ರಿಕ ಚುನಾವಣೆಯ ಫಲಿತಾಂಶಗಳು ಪ್ರಕಟವಾದಾಗ, ಗೋರೆಗಾಂವ್‌ನ ಮತ ಎಣಿಕೆ ಕೇಂದ್ರದಲ್ಲಿ ಮೊಬೈಲ್ ಫೋನ್ ಬಳಸಿದ ಆರೋಪದ ಮೇಲೆ ವೈಕರ್ ಅವರ ಸೋದರ ಮಾವ ಮಂಗೇಶ್ ಪಾಂಡಿಲ್ಕರ್ ಅವರ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 188 (ಅಧಿಕೃತ ಆದೇಶವನ್ನು ಪಾಲಿಸದಿರುವುದು) ಅಡಿಯಲ್ಲಿ ಬುಧವಾರ ಪ್ರಕರಣ ದಾಖಲಿಸಲಾಗಿದೆ ಎಂದು ವನ್ರೈ ಪೊಲೀಸರು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೂರ್ಯವಂಶಿ, ಜೋಗೇಶ್ವರಿ ವಿಧಾನಸಭಾ ಕ್ಷೇತ್ರದ ಡಾಟಾ ಎಂಟ್ರಿ ಆಪರೇಟರ್ ದಿನೇಶ್ ಗುರವ್ ಅವರ ವೈಯಕ್ತಿಕ ಮೊಬೈಲ್ ಫೋನ್ ಅನಧಿಕೃತ ವ್ಯಕ್ತಿಯ ಕೈಯಲ್ಲಿ ಪತ್ತೆಯಾಗಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಡೇಟಾ ಎಂಟ್ರಿ, ಮತ ಎಣಿಕೆ 2 ವಿಭಿನ್ನ ಅಂಶಗಳಾಗಿವೆ ಎಂದರು.

“ಡೇಟಾ ಎಂಟ್ರಿ ಮತ್ತು ಮತ ಎಣಿಕೆ ಎರಡು ವಿಭಿನ್ನ ಅಂಶಗಳಾಗಿವೆ. ಡೇಟಾ ಎಂಟ್ರಿಗಾಗಿ ಎನ್‌ಕೋರ್ ಲಾಗಿನ್ ಸಿಸ್ಟಮ್ ಅನ್ನು ತೆರೆಯಲು ‘ಒಟಿಪಿ ಎಆರ್‌ಒ’ ಅನ್ನು ಸಕ್ರಿಯಗೊಳಿಸುತ್ತದೆ. ಎಣಿಕೆ ಪ್ರಕ್ರಿಯೆಯು ಸ್ವತಂತ್ರವಾಗಿದೆ ಮತ್ತು ಮೊಬೈಲ್ ಫೋನ್‌ನ ಅನಧಿಕೃತ ಬಳಕೆಗೆ ಯಾವುದೇ ಸಂಬಂಧವಿಲ್ಲ, ಇದು ದುರದೃಷ್ಟಕರ ಘಟನೆಯಾಗಿದೆ ಮತ್ತು ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ” ಎಂದು ಸೂರ್ಯವಂಶಿ ಹೇಳಿದರು.

“ಹ್ಯಾಕಿಂಗ್ ಯಾವುದೇ ಸಾಧ್ಯತೆಯನ್ನು ತಳ್ಳಿಹಾಕಲು ಸುಧಾರಿತ ತಾಂತ್ರಿಕ ವೈಶಿಷ್ಟ್ಯಗಳು ಮತ್ತು ದೃಢವಾದ ಆಡಳಿತಾತ್ಮಕ ಸುರಕ್ಷತೆಗಳು ಅದರಲ್ಲಿವೆ. ಅಭ್ಯರ್ಥಿಗಳು ಅಥವಾ ಅವರ ಏಜೆಂಟರ ಸಮ್ಮುಖದಲ್ಲಿ ಎಲ್ಲವನ್ನೂ ನಡೆಸುವುದು ಸುರಕ್ಷತೆಗಳನ್ನು ಒಳಗೊಂಡಿರುತ್ತದೆ” ಎಂದು ಅವರು ಹೇಳಿದರು.

ವೈಕರ್ ಅಥವಾ ಶಿವಸೇನೆಯ (ಯುಬಿಟಿ) ಸೋತ ಅಭ್ಯರ್ಥಿ ಅಮೋಲ್ ಕೀರ್ತಿಕರ್ ಮರು ಎಣಿಕೆಗೆ ಕೋರಲಿಲ್ಲ. ಆದರೆ, ಅಮಾನ್ಯ ಅಂಚೆ ಮತಗಳ ಪರಿಶೀಲನೆಗೆ ಒತ್ತಾಯಿಸಲಾಯಿತು ಮತ್ತು ಅದನ್ನು ಮಾಡಲಾಗಿದೆ ಎಂದು ಅಧಿಕಾರಿ ಹೇಳಿದರು.

ಸಕ್ಷಮ ನ್ಯಾಯಾಲಯದ ಆದೇಶದ ಹೊರತು ಸಿಸಿಟಿವಿ ದೃಶ್ಯಾವಳಿಗಳನ್ನು ನೀಡಲಾಗುವುದಿಲ್ಲ ಎಂದು ಸೂರ್ಯವಂಶಿ ಹೇಳಿದರು.

ಇದನ್ನೂ ಓದಿ; ಪಶ್ಚಿಮ ಬಂಗಾಳ: ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್ ರೈಲು ಡಿಕ್ಕಿ; 5 ಸಾವು, 30 ಮಂದಿ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...