ವಾರಣಾಸಿಯ ಮತ ಎಣಿಕೆ ಕೇಂದ್ರಗಳಿಂದ ವಿದ್ಯುನ್ಮಾನ ಮತಯಂತ್ರ(ಇವಿಎಂ)ಗಳನ್ನು ಕಳ್ಳತನ ಮಾಡಿ ತೆಗೆದುಕೊಂಡು ಹೋಗಲಾಗುತ್ತಿದೆ ಎಂದು ಸಮಾಜವಾದಿ ಪಕ್ಷ ಮಂಗಳವಾರ ಆರೋಪಿಸಿದೆ. ಟ್ರಕ್‌ನಲ್ಲಿ ಇರಿಸಲಾಗಿದ್ದ ಯಂತ್ರಗಳನ್ನು ಮತ ಎಣಿಕೆಗೆ ಎರಡು ದಿನಗಳ ಮೊದಲು ಹೊರತೆಗೆಯಲಾಗಿದೆ ಎಂದು ಆರೋಪಿಸಲಾಗಿದ್ದು, ಸಮಾಜವಾದಿ ಪಕ್ಷ ಮತ್ತು ಅದರ ಮಿತ್ರಪಕ್ಷಗಳ ಬೆಂಬಲಿಗರು ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡುತ್ತಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, “ವಾರಣಾಸಿಯಲ್ಲಿ ಇವಿಎಂ ಸಿಕ್ಕಿಬಿದ್ದಿರುವ ಸುದ್ದಿ ಯುಪಿಯ ಪ್ರತಿ ವಿಧಾನಸಭೆಯಲ್ಲೂ ಎಚ್ಚರಿಕೆಯಲ್ಲಿ ಇರುವಂತೆ ಸಂದೇಶ ನೀಡುತ್ತಿದೆ. ಮತ ಎಣಿಕೆಯಲ್ಲಿ ಅಕ್ರಮವೆಸಗುವ ಪ್ರಯತ್ನವನ್ನು ವಿಫಲಗೊಳಿಸಲು ಎಸ್‌ಪಿ-ಮೈತ್ರಿಕೂಟದ ಎಲ್ಲಾ ಅಭ್ಯರ್ಥಿಗಳು ಮತ್ತು ಬೆಂಬಲಿಗರು ತಮ್ಮ ಕ್ಯಾಮೆರಾಗಳೊಂದಿಗೆ ಸಿದ್ಧರಾಗಿರಬೇಕು. ಯುವ ಪ್ರಜಾಪ್ರಭುತ್ವ ಮತ್ತು ಭವಿಷ್ಯವನ್ನು ರಕ್ಷಿಸಲು, ಮತ ಎಣಿಕೆಯಲ್ಲಿ ಸೈನಿಕರಾಗಿ!” ಎಂದು ಟ್ವೀಟ್ ಮಾಡಿದ್ದಾರೆ.
वाराणसी में EVM पकड़े जाने का समाचार उप्र की हर विधानसभा को चौकन्ना रहने का संदेश दे रहा है।
मतगणना में धांधली की कोशिश को नाकाम करने के लिए सपा-गठबंधन के सभी प्रत्याशी और समर्थक अपने-अपने कैमरों के साथ तैयार रहें।
युवा लोकतंत्र व भविष्य की रक्षा के लिए मतगणना में सिपाही बने!
— Akhilesh Yadav (@yadavakhilesh) March 8, 2022
ಸಮಾಜವಾದಿ ಪಕ್ಷದ ಆರೋಪಕ್ಕೆ ಪ್ರತಿಕ್ರಿಯಿಸಿರುವ ವಾರಣಾಸಿಯ ಜಿಲ್ಲಾ ಮ್ಯಾಜಿಸ್ಟ್ರೇಟ್, ಪ್ರಸ್ತುತ ಇಎಂಗಳನ್ನು ತರಬೇತಿ ಉದ್ದೇಶಗಳಿಗಾಗಿ ಬಳಸಲಾಗುತ್ತಿದೆ ಮತ್ತು ಅವುಗಳನ್ನು ಮತದಾನಕ್ಕೆ ಬಳಸಿರಲಿಲ್ಲ ಎಂದು ಹೇಳಿದ್ದಾರೆ.
10 मार्च नतीजों से पहले #Varanasi में सपा कार्यकर्ताओं ने लगाया प्रशासन पर बड़ा आरोप, कहा #EVM की चोरी कराने की कोशिश हो रही थी, सच क्या है @ECISVEEP बताने का कष्ट करें, @samajwadiparty @yadavakhilesh #UPElection2022 #upassemblyelection2022 pic.twitter.com/owNhVBXVLd
— Punit Kumar (@punitjournalist) March 8, 2022
“ಕೆಲವು ರಾಜಕೀಯ ಪಕ್ಷಗಳು” ವದಂತಿಗಳನ್ನು ಹರಡುತ್ತಿವೆ ಎಂದು ಆರೋಪಿಸಿದ ಜಿಲ್ಲಾ ಮ್ಯಾಜಿಸ್ಟ್ರೇಟ್ ಕೌಶಲ್ ರಾಜ್ ಶರ್ಮಾ, “ಚುನಾವಣೆಯಲ್ಲಿ ಬಳಸಿದ ಇವಿಎಂಗಳನ್ನು ಸಿಆರ್‌ಪಿಎಫ್ ವಶದಲ್ಲಿರುವ ಸ್ಟ್ರಾಂಗ್ ರೂಮ್‌ನಲ್ಲಿ ಸೀಲ್ ಮಾಡಲಾಗಿದೆ. ಅಲ್ಲಿ ಸಿಸಿಟಿವಿ ಕಣ್ಗಾವಲು ಇದ್ದು ಅದನ್ನು ಎಲ್ಲಾ ರಾಜಕೀಯ ಪಕ್ಷಗಳ ಜನರು ವೀಕ್ಷಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.
“ಪ್ರಸ್ತುತ ಇವಿಎಂಗಳು ಮಂಡಿಯಲ್ಲಿನ ಕಾಲೇಜಿನ ಆಹಾರ ಸಂಗ್ರಹಣೆಯಿಂದ ಹೋಗುತ್ತಿದ್ದವು. ನಾಳೆ ಎಣಿಕೆ ಕರ್ತವ್ಯದಲ್ಲಿ ತೊಡಗಿರುವ ನೌಕರರಿಗೆ ಎರಡನೇ ಹಂತದ ತರಬೇತಿಯಾಗಿದೆ. ಈ ಯಂತ್ರಗಳನ್ನು ಯಾವಾಗಲೂ ಪ್ರಾಯೋಗಿಕ ತರಬೇತಿಗಾಗಿ ಬಳಸಲಾಗುತ್ತದೆ” ಎಂದು ಶರ್ಮಾ ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
#EVM के बेवफा होने से पहले का शोर…
तस्वीरें वाराणसी से…#UttarPradeshElections2022 #Varanasi https://t.co/eaI2DAv3Pj pic.twitter.com/7hLi0cCbW1— Mamta Gusain (@Mamtagusain5) March 8, 2022
ಆದರೆ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮಾಧ್ಯಮಗಳ ಮುಂದೆ ಈ ಹೇಳಿಕೆಗೆ ವಿರುದ್ಧವಾದ ಹೇಳಿಕೆ ನೀಡಿದ್ದು, “ವಾರಾಣಸಿಯಲ್ಲಿ ನಾವು ಒಂದು ಟ್ರಕ್ ಅನ್ನು ಅಡ್ಡಗಟ್ಟಿದ್ದೇವೆ. ಎರಡು ಟ್ರಕ್‌ಗಳು ಪರಾರಿಯಾಗಿವೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಇಲ್ಲದಿದ್ದರೆ, ಇವಿಎಂಗಳನ್ನು ಹೊಂದಿರುವ ಎರಡು ಟ್ರಕ್‌ಗಳು ತಪ್ಪಿಸಿಕೊಂಡಿದ್ದು ಯಾಕೆ? ಅಭ್ಯರ್ಥಿಗಳ ಒಪ್ಪಿಗೆಯಿಲ್ಲದೆ ನೀವು ಯಾವುದೇ ಇವಿಎಂಗಳನ್ನು ಕೊಂಡೊಯ್ಯಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.
वाराणसी में सपा कार्यकर्ताओं का जमकर हंगामा
मतगणना स्थल पर सपा कार्यकर्ताओं का हंगामा
गाड़ी में EVM मशीन को देख भड़के सपा कार्यकर्ता
सपा कार्यकर्ताओं ने EVM बदलने का आरोप लगाया
मौके पर भारी पुलिस फोर्स हुई तैनात।#Varanasi @juhiesingh @samajwadiparty @yadavakhilesh @ECISVEEP pic.twitter.com/JySnZFi1G9— Roshan Kumar Journalist (@cameraman_r) March 8, 2022
“ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಯೊಬ್ಬರು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ, ‘ಬಿಜೆಪಿ ಸೋತಲ್ಲೆಲ್ಲ ಎಣಿಕೆ ನಿಧಾನವಾಗಲಿ’ ಎಂದು ಹೇಳುತ್ತಿದ್ದಾರೆ ಎಂಬ ಮಾಹಿತಿ ನಮಗೆ ಬರುತ್ತಿದೆ. ಈಗ ಇವಿಎಂಗಳು ಸಿಕ್ಕಿಬಿದ್ದಿರುವುದರಿಂದ ಅಧಿಕಾರಿಗಳು ಹಲವು ನೆಪಗಳನ್ನು ಹೇಳುತ್ತಿದ್ದಾರೆ…” ಎಂದು ಅವರು ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ಏಳು ಹಂತಗಳಲ್ಲಿ ಮತದಾನ ನಡೆದಿತ್ತು. ಗುರುವಾರ ಮತ ಎಣಿಕೆ ನಡೆಯಲಿದ್ದು, ಬಿಜೆಪಿ ಮತ್ತೊಂದು ಅವಧಿಗೆ ಅಧಿಕಾರದ ನಿರೀಕ್ಷೆಯಲ್ಲಿದೆ. ರಾಜ್ಯದಲ್ಲಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಪಕ್ಷ ಹೇಳಿಕೊಂಡಿದೆ.
ಇದನ್ನೂ ಓದಿ: ಶಿವಸೇನೆ ನಾಯಕರ ನಿವಾಸಗಳ ಮೇಲೆ IT ದಾಳಿ: ಅವರಿಗೆ ಬೇರೆ ಯಾರೂ ಸಿಗುತ್ತಿಲ್ಲವೆ ಎಂದ ಸಂಜಯ್ ರಾವತ್



ಸೋಲು ಖಚಿತ ಅಂತ ಗೊತ್ತಾದ ಕೂಡಲೇ SP,BSP,Congress ಹೇಳೋ ಮೊದಲ ಪದವೇ EVM ಸರಿ ಇಲ್ಲಾ,EVM ನಲ್ಲಿ ಅಕ್ರಮ ನಡೆದಿದೆ ಅಂತ
Kallaru evm mission dhochiddu kannu kaanalve ninge..
Kurudane neenu
How was this caughty, where are the robbers, who caught them. There should be a video of how the truck was caught isnt it… Bidhru meese managilla anno ranathanthra idhu.