Homeಮುಖಪುಟಯುಪಿ-ವಾರಣಾಸಿ ಮತ ಎಣಿಕೆ ಕೇಂದ್ರಗಳಿಂದ ಇವಿಎಂ ಕಳ್ಳತನ: ಸಮಾಜವಾದಿ ಪಕ್ಷ ಆರೋಪ

ಯುಪಿ-ವಾರಣಾಸಿ ಮತ ಎಣಿಕೆ ಕೇಂದ್ರಗಳಿಂದ ಇವಿಎಂ ಕಳ್ಳತನ: ಸಮಾಜವಾದಿ ಪಕ್ಷ ಆರೋಪ

- Advertisement -
- Advertisement -

ವಾರಣಾಸಿಯ ಮತ ಎಣಿಕೆ ಕೇಂದ್ರಗಳಿಂದ ವಿದ್ಯುನ್ಮಾನ ಮತಯಂತ್ರ(ಇವಿಎಂ)ಗಳನ್ನು ಕಳ್ಳತನ ಮಾಡಿ ತೆಗೆದುಕೊಂಡು ಹೋಗಲಾಗುತ್ತಿದೆ ಎಂದು ಸಮಾಜವಾದಿ ಪಕ್ಷ ಮಂಗಳವಾರ ಆರೋಪಿಸಿದೆ. ಟ್ರಕ್‌ನಲ್ಲಿ ಇರಿಸಲಾಗಿದ್ದ ಯಂತ್ರಗಳನ್ನು ಮತ ಎಣಿಕೆಗೆ ಎರಡು ದಿನಗಳ ಮೊದಲು ಹೊರತೆಗೆಯಲಾಗಿದೆ ಎಂದು ಆರೋಪಿಸಲಾಗಿದ್ದು, ಸಮಾಜವಾದಿ ಪಕ್ಷ ಮತ್ತು ಅದರ ಮಿತ್ರಪಕ್ಷಗಳ ಬೆಂಬಲಿಗರು ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡುತ್ತಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌, “ವಾರಣಾಸಿಯಲ್ಲಿ ಇವಿಎಂ ಸಿಕ್ಕಿಬಿದ್ದಿರುವ ಸುದ್ದಿ ಯುಪಿಯ ಪ್ರತಿ ವಿಧಾನಸಭೆಯಲ್ಲೂ ಎಚ್ಚರಿಕೆಯಲ್ಲಿ ಇರುವಂತೆ ಸಂದೇಶ ನೀಡುತ್ತಿದೆ. ಮತ ಎಣಿಕೆಯಲ್ಲಿ ಅಕ್ರಮವೆಸಗುವ ಪ್ರಯತ್ನವನ್ನು ವಿಫಲಗೊಳಿಸಲು ಎಸ್‌ಪಿ-ಮೈತ್ರಿಕೂಟದ ಎಲ್ಲಾ ಅಭ್ಯರ್ಥಿಗಳು ಮತ್ತು ಬೆಂಬಲಿಗರು ತಮ್ಮ ಕ್ಯಾಮೆರಾಗಳೊಂದಿಗೆ ಸಿದ್ಧರಾಗಿರಬೇಕು. ಯುವ ಪ್ರಜಾಪ್ರಭುತ್ವ ಮತ್ತು ಭವಿಷ್ಯವನ್ನು ರಕ್ಷಿಸಲು, ಮತ ಎಣಿಕೆಯಲ್ಲಿ ಸೈನಿಕರಾಗಿ!” ಎಂದು ಟ್ವೀಟ್ ಮಾಡಿದ್ದಾರೆ.

 

ಸಮಾಜವಾದಿ ಪಕ್ಷದ ಆರೋಪಕ್ಕೆ ಪ್ರತಿಕ್ರಿಯಿಸಿರುವ ವಾರಣಾಸಿಯ ಜಿಲ್ಲಾ ಮ್ಯಾಜಿಸ್ಟ್ರೇಟ್, ಪ್ರಸ್ತುತ ಇಎಂಗಳನ್ನು ತರಬೇತಿ ಉದ್ದೇಶಗಳಿಗಾಗಿ ಬಳಸಲಾಗುತ್ತಿದೆ ಮತ್ತು ಅವುಗಳನ್ನು ಮತದಾನಕ್ಕೆ ಬಳಸಿರಲಿಲ್ಲ ಎಂದು ಹೇಳಿದ್ದಾರೆ.

“ಕೆಲವು ರಾಜಕೀಯ ಪಕ್ಷಗಳು” ವದಂತಿಗಳನ್ನು ಹರಡುತ್ತಿವೆ ಎಂದು ಆರೋಪಿಸಿದ ಜಿಲ್ಲಾ ಮ್ಯಾಜಿಸ್ಟ್ರೇಟ್ ಕೌಶಲ್ ರಾಜ್ ಶರ್ಮಾ, “ಚುನಾವಣೆಯಲ್ಲಿ ಬಳಸಿದ ಇವಿಎಂಗಳನ್ನು ಸಿಆರ್‌ಪಿಎಫ್ ವಶದಲ್ಲಿರುವ ಸ್ಟ್ರಾಂಗ್ ರೂಮ್‌ನಲ್ಲಿ ಸೀಲ್ ಮಾಡಲಾಗಿದೆ. ಅಲ್ಲಿ ಸಿಸಿಟಿವಿ ಕಣ್ಗಾವಲು ಇದ್ದು ಅದನ್ನು ಎಲ್ಲಾ ರಾಜಕೀಯ ಪಕ್ಷಗಳ ಜನರು ವೀಕ್ಷಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಪ್ರಸ್ತುತ ಇವಿಎಂಗಳು ಮಂಡಿಯಲ್ಲಿನ ಕಾಲೇಜಿನ ಆಹಾರ ಸಂಗ್ರಹಣೆಯಿಂದ ಹೋಗುತ್ತಿದ್ದವು. ನಾಳೆ ಎಣಿಕೆ ಕರ್ತವ್ಯದಲ್ಲಿ ತೊಡಗಿರುವ ನೌಕರರಿಗೆ ಎರಡನೇ ಹಂತದ ತರಬೇತಿಯಾಗಿದೆ. ಈ ಯಂತ್ರಗಳನ್ನು ಯಾವಾಗಲೂ ಪ್ರಾಯೋಗಿಕ ತರಬೇತಿಗಾಗಿ ಬಳಸಲಾಗುತ್ತದೆ” ಎಂದು ಶರ್ಮಾ ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಆದರೆ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಮಾಧ್ಯಮಗಳ ಮುಂದೆ ಈ ಹೇಳಿಕೆಗೆ ವಿರುದ್ಧವಾದ ಹೇಳಿಕೆ ನೀಡಿದ್ದು, “ವಾರಾಣಸಿಯಲ್ಲಿ ನಾವು ಒಂದು ಟ್ರಕ್ ಅನ್ನು ಅಡ್ಡಗಟ್ಟಿದ್ದೇವೆ. ಎರಡು ಟ್ರಕ್‌ಗಳು ಪರಾರಿಯಾಗಿವೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಇಲ್ಲದಿದ್ದರೆ, ಇವಿಎಂಗಳನ್ನು ಹೊಂದಿರುವ ಎರಡು ಟ್ರಕ್‌ಗಳು ತಪ್ಪಿಸಿಕೊಂಡಿದ್ದು ಯಾಕೆ? ಅಭ್ಯರ್ಥಿಗಳ ಒಪ್ಪಿಗೆಯಿಲ್ಲದೆ ನೀವು ಯಾವುದೇ ಇವಿಎಂಗಳನ್ನು ಕೊಂಡೊಯ್ಯಲು ಸಾಧ್ಯವಿಲ್ಲ” ಎಂದು ಅವರು ಹೇಳಿದ್ದಾರೆ.

“ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಯೊಬ್ಬರು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ, ‘ಬಿಜೆಪಿ ಸೋತಲ್ಲೆಲ್ಲ ಎಣಿಕೆ ನಿಧಾನವಾಗಲಿ’ ಎಂದು ಹೇಳುತ್ತಿದ್ದಾರೆ ಎಂಬ ಮಾಹಿತಿ ನಮಗೆ ಬರುತ್ತಿದೆ. ಈಗ ಇವಿಎಂಗಳು ಸಿಕ್ಕಿಬಿದ್ದಿರುವುದರಿಂದ ಅಧಿಕಾರಿಗಳು ಹಲವು ನೆಪಗಳನ್ನು ಹೇಳುತ್ತಿದ್ದಾರೆ…” ಎಂದು ಅವರು ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ಏಳು ಹಂತಗಳಲ್ಲಿ ಮತದಾನ ನಡೆದಿತ್ತು. ಗುರುವಾರ ಮತ ಎಣಿಕೆ ನಡೆಯಲಿದ್ದು, ಬಿಜೆಪಿ ಮತ್ತೊಂದು ಅವಧಿಗೆ ಅಧಿಕಾರದ ನಿರೀಕ್ಷೆಯಲ್ಲಿದೆ. ರಾಜ್ಯದಲ್ಲಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಪಕ್ಷ ಹೇಳಿಕೊಂಡಿದೆ.

ಇದನ್ನೂ ಓದಿ: ಶಿವಸೇನೆ ನಾಯಕರ ನಿವಾಸಗಳ ಮೇಲೆ IT ದಾಳಿ: ಅವರಿಗೆ ಬೇರೆ ಯಾರೂ ಸಿಗುತ್ತಿಲ್ಲವೆ ಎಂದ ಸಂಜಯ್ ರಾವತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ಸೋಲು ಖಚಿತ ಅಂತ ಗೊತ್ತಾದ ಕೂಡಲೇ SP,BSP,Congress ಹೇಳೋ ಮೊದಲ ಪದವೇ EVM ಸರಿ ಇಲ್ಲಾ,EVM ನಲ್ಲಿ ಅಕ್ರಮ ನಡೆದಿದೆ ಅಂತ

  2. How was this caughty, where are the robbers, who caught them. There should be a video of how the truck was caught isnt it… Bidhru meese managilla anno ranathanthra idhu.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...