Homeಮುಖಪುಟಇಡಬ್ಲ್ಯೂಎಸ್‌ ಮೀಸಲಾತಿ: ನಿಲುವು ಬದಲಿಸಲು ಕಾಂಗ್ರೆಸ್‌ ಚಿಂತನೆ

ಇಡಬ್ಲ್ಯೂಎಸ್‌ ಮೀಸಲಾತಿ: ನಿಲುವು ಬದಲಿಸಲು ಕಾಂಗ್ರೆಸ್‌ ಚಿಂತನೆ

- Advertisement -
- Advertisement -

ಎಸ್‌ಸಿ, ಎಸ್‌ಟಿ, ಒಬಿಸಿ ಪಟ್ಟಿಗೆ ಸೇರದ, ಎಂಟು ಲಕ್ಷ ರೂ. ಆದಾಯ ಮಿತಿಯೊಳಗಿನ ಜಾತಿಗಳಿಗೆ ‘ಆರ್ಥಿಕವಾಗಿ ಹಿಂದುಳಿದ ವರ್ಗ’ದ (ಇಡಬ್ಲ್ಯೂಎಸ್‌) ಮೀಸಲಾತಿ ನೀಡಿರುವುದನ್ನು ಸ್ವಾಗತಿಸಿದ್ದ ಕಾಂಗ್ರೆಸ್‌, ಈಗ ತನ್ನ ನಿಲುವಿನ ಮರುಪರಿಶೀಲನೆಗೆ ಮುಂದಾಗಿದೆ.

ಇಡಬ್ಲ್ಯೂಎಸ್‌ ಮೀಸಲಾತಿಯನ್ನು 2019ರಲ್ಲಿ ಕೇಂದ್ರ ಸರ್ಕಾರ ಪರಿಚಯಿಸಿದಾಗ ಕಾಂಗ್ರೆಸ್‌ ಸ್ವಾಗತಿಸಿತ್ತು. ಅಲ್ಲದೆ ಇತ್ತೀಚೆಗೆ ಸುಪ್ರೀಂಕೋರ್ಟ್ ಇಡಬ್ಲ್ಯೂಎಸ್ ಪರ ತೀರ್ಪು ನೀಡಿದಾಗಲೂ ಕಾಂಗ್ರೆಸ್‌ ವರಿಷ್ಠರು ಸ್ವಾಗತಿಸಿದ್ದರು. ಆದರೆ ಕಾಂಗ್ರೆಸ್‌ ನಿಲುವಿಗೆ ಆಕ್ಷೇಪಗಳೂ ವ್ಯಕ್ತವಾಗಿದ್ದವು. ಕಾಂಗ್ರೆಸ್‌ ಮತ್ತು ಬಿಜೆಪಿಯ ನಡುವೆ ಅಂತಹ ವ್ಯತ್ಯಾಸಗಳೇನೂ ಇಲ್ಲ ಎಂಬ ಟೀಕೆಗಳು ಬಂದಿದ್ದವು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಡಬ್ಲ್ಯೂಎಸ್‌ ಮೀಸಲಾತಿಗಾಗಿ ಮಾಡಲಾದ ಸಂವಿಧಾನದ 103ನೇ ತಿದ್ದುಪಡಿಯು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ ಎಂದು ವಿಶ್ಲೇಷಣೆಗಳು ಬರುತ್ತಿವೆ. ಹಿಂದುಳಿದ ವರ್ಗದಲ್ಲಿನ ಸಮುದಾಯಗಳಿಗೆ ಜನಸಂಖ್ಯೆಗನುಗುಣವಾಗಿ ಮೀಸಲಾತಿಯನ್ನು ನೀಡಲಾಗಿಲ್ಲ. ಆದರೆ ಬೆರಳೆಣಿಕೆಯಷ್ಟು ಇರುವ ಮೇಲ್ಜಾತಿಗಳಿಗೆ ಶೇ. 10ರಷ್ಟು ಮೀಸಲಾತಿಯನ್ನು ನೀಡಿರುವುದು ಟೀಕೆಗೆ ಗುರಿಯಾಗಿದೆ.

ಇಡಬ್ಲ್ಯೂಎಸ್‌ ಮೀಸಲಾತಿಯು ಸಾಮಾಜಿಕ ನ್ಯಾಯದ ವಿರೋಧಿಯಷ್ಟೇ ಅಲ್ಲ, ಒಬಿಸಿ ವರ್ಗದ ವಿರೋಧಿಯೂ ಹೌದು ಎಂದು ರಾಜಕೀಯ ಚಿಂತಕರು ಹೇಳಲಾರಂಭಿಸಿದ್ದಾರೆ. ಈ ಎಲ್ಲ ಬೆಳವಣಿಗೆಗಳ ನಡುವೆ ಕಾಂಗ್ರೆಸ್ ತನ್ನ ನಿಲುವನ್ನು ಮರುಪರಿಶೀಲನೆಗೆ ಒಳಪಡಿಸಲು ಮುಂದಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಕಾಂಗ್ರೆಸ್‌ ಮಿತ್ರಪಕ್ಷಗಳಾದ ಡಿಎಂಕೆ ಮತ್ತು ಆರ್‌ಜೆಡಿ ತೀರ್ಪನ್ನು ವಿರೋಧಿಸಿವೆ. ಅದರಂತೆಯೇ ಕಾಂಗ್ರೆಸ್‌ ಸಹ ತನ್ನ ನಿರ್ಧಾರ ಬದಲಿಸಲು ಚಿಂತಿಸಿದೆ.

ಡಿಎಂಕೆ ನೇತೃತ್ವದಲ್ಲಿ ಶನಿವಾರ ನಡೆದ ಸರ್ವಪಕ್ಷಗಳ ಸಭೆಯಲ್ಲಿ ಕಾಂಗ್ರೆಸ್ ಪಾಲ್ಗೊಂಡಿತ್ತು. “ಸಂವಿಧಾನ ಕಲ್ಪಿಸಿರುವ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾದ, ಸರ್ವೋಚ್ಚ ನ್ಯಾಯಾಲಯದ ವಿವಿಧ ತೀರ್ಪುಗಳ ವಿರುದ್ಧವಾದ ಮತ್ತು ಬಡವರಲ್ಲಿ ಜಾತಿ ತಾರತಮ್ಯವನ್ನು ಸೃಷ್ಟಿಸಿ ಪ್ರಗತಿ ಸಾಧಿಸಿರುವ ಜಾತಿಗಳಿಗೆ 10%ರಷ್ಟು ಮೀಸಲಾತಿ ನೀಡುವ 103ನೇ ಸಾಂವಿಧಾನಿಕ ತಿದ್ದುಪಡಿಯನ್ನು ನಾವು ತಿರಸ್ಕರಿಸುತ್ತೇವೆ” ಎಂದು ಸರ್ವಪಕ್ಷ ಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸಲಾಗಿದೆ.

‘ಸಾಮಾಜಿಕ ನ್ಯಾಯದ ಕುರಿತ ಭಾರತದ ಸುದೀರ್ಘ ಹೋರಾಟಕ್ಕೆ ಈ ತೀರ್ಪಿನಿಂದ ಹಿನ್ನೆಡೆಯಾಗಲಿದೆ’ ಎಂದು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌ ಹೇಳಿದ್ದಾರೆ.

ಕಾಂಗ್ರೆಸ್, ಎಡಪಕ್ಷಗಳು, ಮರುಮಲರ್ಚಿ ದ್ರಾವಿಡ ಮುನ್ನೇತ್ರ ಕಳಗಂ, ವಿದುತಲೈ ಚಿರುತೈಗಲ್ ಕಚ್ಚಿ ಮತ್ತು ಎನ್‌ಡಿಎ ಬಣದಲ್ಲಿರುವ ಪಟ್ಟಾಲಿ ಮಕ್ಕಳ್ ಕಚ್ಚಿ ಪಕ್ಷಗಳು ಸಭೆಯಲ್ಲಿ ಪಾಲ್ಗೊಂಡಿದ್ದವು.

ಇದನ್ನೂ ಓದಿರಿ: ಇಡಬ್ಲ್ಯೂಎಸ್‌ ಮೀಸಲಾತಿ ವಿರುದ್ಧ ತಮಿಳುನಾಡು ಪಕ್ಷಗಳಿಂದ ನಿರ್ಣಯ ಅಂಗೀಕಾರ

ತಮಿಳುನಾಡು, ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ ಈ ತೀರ್ಪಿನ ಕುರಿತು ವಿರೋಧ ವ್ಯಕ್ತವಾಗುತ್ತಿದೆ. ಇದೇ ಕಾರಣಕ್ಕೆ ಕಾಂಗ್ರೆಸ್‌ ತನ್ನ ನಿಲುವಿನ ಮರುಪರಿಶೀಲನೆಗೆ ಮುಂದಾಗಿದೆ.

ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಇತರ ನಾಯಕರು, ಈ ತೀರ್ಪಿನಿಂದಾಗುವ ‘ಸಾಮಾಜಿಕ ಮತ್ತು ರಾಜಕೀಯ ಪರಿಣಾಮ’ದ ಕುರಿತು ಅಧ್ಯಯನ ನಡೆಸುತ್ತಿದ್ದಾರೆ. ಜೊತೆಗೆ, ತೀರ್ಪಿನ ಕಾನೂನು ಆಯಾಮದ ಕುರಿತು ಪಿ. ಚಿದಂಬಂರಂ ಮತ್ತು ಅಭಿಷೇಕ್ ಮನು ಸಿಂಘ್ವಿ ಅಧ್ಯಯನ ನಡೆಸುತ್ತಿದ್ದಾರೆ ಎಂದು ಶನಿವಾರ ಪಕ್ಷದ ಮೂಲಗಳು ತಿಳಿಸಿವೆ.

‘ರಾಜಕೀಯ ಪರಿಣಾಮವನ್ನು ಗಮನಿಸದೆಯೇ ಪಕ್ಷವು ಆತುರಾತುರವಾಗಿ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡಿತು’ ಎಂದು ಪಕ್ಷದ ಮುಖಂಡರೊಬ್ಬರು ಅಭಿಪ್ರಾಯಪಟ್ಟಿರುವುದಾಗಿ ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ರಾಜ್ಯ ಸರ್ಕಾರಗಳು ಭಾರತದಲ್ಲಿರುವ ಜಾತಿ ಜನಸಂಖ್ಯೆಗೆ ಅನುಗುಣವಾಗಿ ಈಗಿರುವ 60% ಪ್ರತಿಶತ ಮಿಸಲಾತಿಯನ್ನು ರದ್ದು ಮಾಡಿ 100% ರಷ್ಟು ಮಿಸಲಾತಿಯನ್ನು ಎಕಕಾಲಕ್ಕೆ ಹಂಚಿಕೆ ಮಾಡಿ ಬಿಡಲಿ. ಪ್ರತಿಯೊಂದು ಜಾತಿಯವರಿಗೂ ಪ್ರಾತಿನಿಧ್ಯ ದೊರೆಯಲಿ.

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...