Homeಮುಖಪುಟಮುಂದಿನ ವರ್ಷದಿಂದ ವೈದ್ಯಕೀಯ ಕೋರ್ಸ್‌ಗಳ ಇಡಬ್ಲ್ಯೂಎಸ್‌ ಮೀಸಲಾತಿ ಮಾನದಂಡ ಬದಲು: ಕೇಂದ್ರ

ಮುಂದಿನ ವರ್ಷದಿಂದ ವೈದ್ಯಕೀಯ ಕೋರ್ಸ್‌ಗಳ ಇಡಬ್ಲ್ಯೂಎಸ್‌ ಮೀಸಲಾತಿ ಮಾನದಂಡ ಬದಲು: ಕೇಂದ್ರ

- Advertisement -
- Advertisement -

ದೇಶಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ಇಡಬ್ಲ್ಯೂಎಸ್‌‌ (ಆರ್ಥಿಕವಾಗಿ ದುರ್ಬಲ ವಿಭಾಗ) ಮೀಸಲಾತಿ ಫಲಾನುಭವಿಗಳನ್ನು ಗುರುತಿಸಲು ಈಗ ಅಸ್ತಿತ್ವದಲ್ಲಿರುವ ಮಾನದಂಡಗಳನ್ನು ಈ ಶೈಕ್ಷಣಿಕ ವರ್ಷಕ್ಕೆ ಉಳಿಸಿಕೊಳ್ಳಲಾಗುವುದು ಎಂದು ಸರ್ಕಾರ ತಿಳಿಸಿದೆ.

ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿರುವ ಸರ್ಕಾರ, ನೀಟ್‌‌ (ನ್ಯಾಷನಲ್ ಎಲಿಜಿಬಿಲಿಟಿ ಕಮ್ ಎಂಟ್ರೆನ್ಸ್ ಟೆಸ್ಟ್) ಬರೆದ ವಿದ್ಯಾರ್ಥಿಗಳಿಗೆ ಪ್ರವೇಶ ಮತ್ತು ಕಾಲೇಜುಗಳ ಹಂಚಿಕೆ ನಡೆಯುತ್ತಿರುವ ಈ ಸಮಯದಲ್ಲಿ ನಿಯಮಗಳ ಬದಲಾವಣೆಯು ತೊಡಕುಗಳಿಗೆ ಕಾರಣವಾಗುತ್ತದೆ” ಎಂದು ಪ್ರತಿಕ್ರಿಯಿಸಿದೆ.

ಮುಂದಿನ ಶೈಕ್ಷಣಿಕ ವರ್ಷದಿಂದ ಇಡಬ್ಲ್ಯೂಎಸ್‌‌ ನಿಯಮಗಳ ಪರಿಷ್ಕರಣೆಗಳನ್ನು ಅನ್ವಯಿಸಬಹುದು ಎಂದು ಸರ್ಕಾರ ತಿಳಿಸಿದೆ.

ಪರಿಷ್ಕೃತ EWS ಮಾನದಂಡವು ವಿವಾದಾತ್ಮಕವಾಗಿದ್ದು ₹ 8 ಲಕ್ಷ ವಾರ್ಷಿಕ ಆದಾಯದ ಮಿತಿಯನ್ನು ಉಳಿಸಿಕೊಂಡಿದೆ. ಆದರೆ ಆದಾಯವನ್ನು ಲೆಕ್ಕಿಸದೆ ಐದು ಎಕರೆ ಅಥವಾ ಅದಕ್ಕಿಂತ ಹೆಚ್ಚಿನ ಕೃಷಿ ಭೂಮಿ ಹೊಂದಿರುವ ಕುಟುಂಬಗಳನ್ನು ಹೊರತುಪಡಿಸುತ್ತದೆ.

₹ 8 ಲಕ್ಷ ವಾರ್ಷಿಕ ಆದಾಯದ ಮಾನದಂಡವು ಸಂವಿಧಾನದ 14, 15 ಮತ್ತು 16 ನೇ ವಿಧಿಗಳಿಗೆ ಅನುಗುಣವಾಗಿದೆ ಎಂದು ಸರ್ಕಾರ ಈ ಹಿಂದೆ ವಾದಿಸಿತ್ತು.

ನವೆಂಬರ್‌ನಲ್ಲಿ ನಡೆದ ಕೊನೆಯ ವಿಚಾರಣೆಯಲ್ಲಿ, ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, “ಪ್ರಸ್ತುತ ಆದಾಯ ಮಾನದಂಡಗಳನ್ನು ಮರುಪರಿಶೀಲಿಸಲಾಗುವುದು ಮತ್ತು ನಾಲ್ಕು ವಾರಗಳಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದು ಹೇಳಿದ್ದರು.

ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠಕ್ಕೆ ಸರ್ಕಾರದ ವಾದ ಅಷ್ಟಾಗಿ ಒಪ್ಪಿಗೆಯಾಗಲಿಲ್ಲ. “ನೀವು ಕೆಲವು ಜನಸಂಖ್ಯಾ ಅಥವಾ ಸಾಮಾಜಿಕ-ಆರ್ಥಿಕ ಅಂಕಿ-ಅಂಶವನ್ನು ಹೊಂದಿರಬೇಕು” ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದರು.

₹ 8 ಲಕ್ಷ ಮಿತಿಗೆ ಯಾವುದೇ ಆಧಾರವಿದೆಯೇ ಎಂದು ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠ ಸರ್ಕಾರವನ್ನು ಪ್ರಶ್ನಿಸಿತ್ತು. ವಾರ್ಷಿಕ ₹ 8 ಲಕ್ಷಕ್ಕಿಂತ ಕಡಿಮೆ ಆದಾಯದ ಗುಂಪಿನಲ್ಲಿರುವ ಇತರ ಹಿಂದುಳಿದ ವರ್ಗಗಳು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ ಎಂದು ಸೂಚಿಸುವ ಯಾವುದೇ ಸಾಮಾಜಿಕ, ಪ್ರಾದೇಶಿಕ ಅಥವಾ ಇತರ ಯಾವುದೇ ಸಮೀಕ್ಷೆ, ಡೇಟಾ ಇದೆಯೇ ಎಂದು ನ್ಯಾಯಾಲಯ ಕೇಳಿತ್ತು.

ಕಳೆದ ವಾರ ದೆಹಲಿಯಲ್ಲಿ ಕಿರಿಯ ವೈದ್ಯರು NEET ಕೌನ್ಸೆಲಿಂಗ್ ಮತ್ತು ಪ್ರವೇಶದ ವಿಳಂಬವನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು. ಭಾರತದಾದ್ಯಂತ ಮಾನದಂಡಗಳನ್ನು ಹೇಗೆ ಅನ್ವಯಿಸಬಹುದು ಎಂಬುದನ್ನು ನ್ಯಾಯಾಲಯವು ತಿಳಿದುಕೊಳ್ಳಲು ಬಯಸಿದೆ. “ಒಂದು ಸಣ್ಣ ಪಟ್ಟಣ ಅಥವಾ ಹಳ್ಳಿಯಲ್ಲಿರುವ ಒಬ್ಬ ವ್ಯಕ್ತಿಯ ಗಳಿಕೆಯನ್ನು ಮೆಟ್ರೋ ನಗರಗಳಲ್ಲಿ ಅದೇ ರೀತಿ ಗಳಿಸುವವರಿಗೆ ಹೇಗೆ ಸಮೀಕರಿಸಬಹುದು?” ಎಂದು ಕೇಳಿದೆ.

EWS ಕೋಟಾ ಸಮಸ್ಯೆಯು NEET ಪ್ರವೇಶದ ಮೇಲೆ ಪರಿಣಾಮ ಬೀರಿದೆ, ಇದರಿಂದಾಗಿ ಕಳೆದ ವಾರ ರಾಷ್ಟ್ರ ರಾಜಧಾನಿಯಲ್ಲಿ ಕಿರಿಯ ವೈದ್ಯರು ನೇಮಕಾತಿ ವಿಳಂಬದ ವಿರುದ್ಧ ಪ್ರತಿಭಟನೆಯನ್ನು ಪ್ರಾರಂಭಿಸಿದರು.

ಸರ್ಕಾರದ ವಿಳಂಬ ನೀತಿಯನ್ನು ವೈದ್ಯರು ಪ್ರಶ್ನಿಸುತ್ತಿದ್ದಾರೆ. ದೇಶದ ಆರೋಗ್ಯ ರಕ್ಷಣೆಗೆ, ವಿಶೇಷವಾಗಿ ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿನ ಒತ್ತಡ ಹಾಗೂ ಗಂಭೀರ ಪರಿಣಾಮಗಳ ಬಗ್ಗೆ ಎಚ್ಚರಿಕೆ ನೀಡುತ್ತಿದ್ದಾರೆ.

ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ತಜ್ಞರ ಸಮಿತಿಯು ಇಡಬ್ಲ್ಯೂಎಸ್ ನಿಯಮಗಳ ಪರಿಷ್ಕರಣೆ ವರದಿಯನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲು ಒಪ್ಪಿದ ನಂತರ ಪ್ರತಿಭಟನೆಯನ್ನು ಸ್ಥಗಿತಗೊಳಿಸಲಾಯಿತು.


ಇದನ್ನೂ ಓದಿರಿ: ನಿಮ್ಮಿಂದಾಗಿ ನಾನು ನೇಣು ಹಾಕಿಕೊಳ್ಬೇಕಾ? ಸುವರ್ಣ ಟಿ.ವಿ. ವಿರುದ್ಧ ನಟಿ ಸಂಜನಾ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....