Homeಮುಖಪುಟಎಫ್‌ಐಆರ್‌ ರದ್ದುಕೋರಿ ಚಂದ್ರಬಾಬು ನಾಯ್ಡು ಸುಪ್ರೀಂಕೋರ್ಟ್‌ ಮೊರೆ

ಎಫ್‌ಐಆರ್‌ ರದ್ದುಕೋರಿ ಚಂದ್ರಬಾಬು ನಾಯ್ಡು ಸುಪ್ರೀಂಕೋರ್ಟ್‌ ಮೊರೆ

- Advertisement -
- Advertisement -

ತೆಲುಗು ದೇಶಂ ಪಕ್ಷದ ಮುಖ್ಯಸ್ಥ, ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದುಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದಾರೆ.

ಕೌಶಲ ಅಭಿವೃದ್ಧಿ ನಿಗಮದ ಹಗರಣ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಆಂಧ್ರ ಪ್ರದೇಶ ಸಿಐಡಿಯ ತಂಡವು ರಾಜಮಹೇಂದ್ರವರಂನ ಕೇಂದ್ರ ಕಾರಾಗೃಹದಲ್ಲಿ ಚಂದ್ರಬಾಬು ನಾಯ್ಡು ಅವರನ್ನು ವಿಚಾರಣೆಯನ್ನು ನಡೆಸುತ್ತಿದೆ.

ನಿನ್ನೆ ವಿಜಯವಾಡದ ಎಸಿಬಿ ನ್ಯಾಯಾಲಯವು ನಾಯ್ಡು ಅವರನ್ನು ಹೆಚ್ಚಿನ ವಿಚಾರಣೆಗಾಗಿ ಸಿಐಡಿಗೆ ಎರಡು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ. ಆಂಧ್ರಪ್ರದೇಶ ಕೌಶಲ್ಯ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ  ಚಂದ್ರಬಾಬು ನಾಯ್ಡು ಅವರ ನ್ಯಾಯಾಂಗ ಬಂಧನವನ್ನು ವಿಜಯವಾಡ ನ್ಯಾಯಾಲಯ ಶುಕ್ರವಾರ ಸೆ. 24 ರವರೆಗೆ ವಿಸ್ತರಿಸಿತ್ತು.

ಸೆ.23 ಮತ್ತು ಸೆ. 24ರಂದು ಬೆಳಗ್ಗೆ 9.30 ರಿಂದ ಸಂಜೆ 5 ಗಂಟೆಯವರೆಗೆ ನಾಯ್ಡು ಅವರ ವಿಚಾರಣೆಗೆ ನ್ಯಾಯಾಲಯ ಅವಕಾಶ ನೀಡಿದೆ.

ಚಂದ್ರಬಾಬು ನಾಯ್ಡು ಅವರ ಎಫ್‌ಐಆರ್ ರದ್ದು ಅರ್ಜಿಯನ್ನು ಆಂಧ್ರಪ್ರದೇಶ ಹೈಕೋರ್ಟ್ ವಜಾಗೊಳಿಸಿದ ಹಿನ್ನೆಲೆಯಲ್ಲಿ ಪಕ್ಷದ ಕಾನೂನು ವಿಭಾಗವು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಲಿದೆ ಎಂದು ಟಿಡಿಪಿ ರಾಜ್ಯಾಧ್ಯಕ್ಷ ಕೆ ಅಚ್ಚನ್ ನಾಯ್ಡು ಶುಕ್ರವಾರ ಹೇಳಿದ್ದಾರೆ.

ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರು ವಿರೋಧ ಪಕ್ಷದ ವಿರುದ್ಧ ಸೇಡು ತೀರಿಸಿಕೊಳ್ಳುವ ವಿಧಾನವನ್ನು ಅನುಸರಿಸಿದ್ದಾರೆ ಎಂದು ಅಚ್ಚನ್ ನಾಯ್ಡು ಆರೋಪಿಸಿದ್ದಾರೆ.

ಕೌಶಲ್ಯ ಅಭಿವೃದ್ಧಿ ನಿಗಮದ ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಸೆಪ್ಟೆಂಬರ್ 9 ರಂದು ನಾಯ್ಡು ಅವರನ್ನು ಬಂಧಿಸಲಾಗಿತ್ತು. ಈ ಹಗರಣದಿಂದ ರಾಜ್ಯ ಸರ್ಕಾರಕ್ಕೆ 300 ಕೋಟಿ ರೂ.ಗೂ ಹೆಚ್ಚು ನಷ್ಟ ಉಂಟಾಗಿದೆ ಎಂದು ಆರೋಪಿಸಲಾಗಿದೆ.

ಇದನ್ನು ಓದಿ: “ಸಿಂಗಂ”ನಂತಹ ಚಲನಚಿತ್ರಗಳು ಹಾನಿಕಾರಕ ಸಂದೇಶವನ್ನು ರವಾನಿಸುತ್ತದೆ: ಹೈಕೋರ್ಟ್ ಜಡ್ಜ್ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...