Homeಮುಖಪುಟ‘ಮುಕ್ತ ಚುನಾವಣೆ ನಡೆದರೆ ಬಿಜೆಪಿಗೆ 40 ಸೀಟೂ ಬರಲ್ಲ' - ಬಾಂಬ್ ಸಿಡಿಸಿದ ಬಿಜೆಪಿ ನಾಯಕ

‘ಮುಕ್ತ ಚುನಾವಣೆ ನಡೆದರೆ ಬಿಜೆಪಿಗೆ 40 ಸೀಟೂ ಬರಲ್ಲ’ – ಬಾಂಬ್ ಸಿಡಿಸಿದ ಬಿಜೆಪಿ ನಾಯಕ

- Advertisement -
- Advertisement -

‘ಮುಕ್ತ ಚುನಾವಣೆ ನಡೆದರೆ ಬಿಜೆಪಿಗೆ 40 ಸೀಟೂ ಬರಲ್ಲ’ – ಮೋದಿಗೆ ಪತ್ರ ಬರೆದ ಬಿಜೆಪಿ ನಾಯಕ

‘ಮೋದಿ ಸಾಬ್, ಮುಕ್ತ ಮತ್ತು ನ್ಯಾಯಯುತ ಚುನಾವಣೆ ನಡೆದರೆ, ಈ ಸಲ ಬಿಜೆಪಿಗೆ 40 ಸೀಟೂ ಬರಲ್ಲ’ ಎಂದು ಬಿಜೆಪಿಯ ನಾಯಕರೂ ಆಗಿರುವ ಸುಪ್ರಿಂಕೋರ್ಟಿನ ವಕೀಲರೊಬ್ಬರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ, ಬಿಜೆಪಿ ಹೇಗೆ ವಿಷಯಗಳನ್ನು ತಿರುಚಿ ಲಾಭ ಮಾಡಿಕೊಳ್ಳುತ್ತದೆ ಮತ್ತು ಇಂತಹ ಕೆಲಸದಲ್ಲಿ ಮೋದಿ ನಿರ್ಲಜ್ಜರು ಎಂಬುದರ ಮೇಲೂ ಅವರು ಬೆಳಕು ಚೆಲ್ಲಿದ್ದಾರೆ…

ಅಜಿತ್ ಅಗರ್ ವಾಲ್

ಸುಪ್ರಿಂಕೋರ್ಟಿನ ವಕೀಲರೂ ಆಗಿರುವ ಬಿಜೆಪಿ ನಾಯಕ ಅಜಯ್ ಅಗರವಾಲ್ ಅವರು ಬಿಜೆಪಿ ನಾಯಕತ್ವದ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸುತ್ತಲೇ, ಗೆಲ್ಲಲು ಬಿಜೆಪಿ ಎಂತೆಂತಹ ಕೀಳು ಪ್ರಯೋಗಗಳನ್ನು ಮಾಡುತ್ತದೆ ಎಂಬುದನ್ನು ದೃಡಪಡಿಸಿದ್ದಾರೆ. 2014ರ ಚುನಾವಣೆಯಲ್ಲಿ ಅಗರವಾಲ್ ರಾಯ್‍ಬರೇಲಿಯಲ್ಲಿ ಸೋನಿಯಾ ವಿರುದ್ಧ ಸ್ಪರ್ಧಿಸಿ ಸೋತವರು. ಇಲ್ಲಿವರೆಗೆ ರಾಯ್‍ಬರೇಲಿಯಲ್ಲಿ ಬಿಜೆಪಿ ಅತಿ ಹೆಚ್ಚು ಮತ ಗಳಿಸಿದ್ದು ಆಗಲೇ. ಈ ಸಲ ಅವರಿಗೆ ಅಲ್ಲಿ ಬಿಜೆಪಿಯಿಂದ ಟಿಕೆಟ್ ನಿರಾಕರಿಸಲಾಗಿದೆ.

‘ಮೋದಿ ಒಬ್ಬ ಕೃತಘ್ನ’ ಎನ್ನುವ ಅಗರವಾಲ್, ‘ಗುಜಾರಾತಿನ ಅಸೆಂಬ್ಲಿ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ನನ್ನ ಪಾತ್ರವೂ ಇದೆ. ಮಣಶಂಕರ್ ಅಯ್ಯರ್ ಮನೆಯಲ್ಲಿ ಮನಮೋಹನಸಿಂಗ್, ಮಾಜಿ ರಾಷ್ಟ್ರಪತಿ ಹಮೀದ್ ಅನ್ಸಾರಿ, ಮಣಿಶಂಕರ್ ಅಯ್ಯರ್ ಅವರು ಪಾಕ್ ರಾಯಭಾರಿಯೊಂದಿಗೆ ಮಾತುಕತೆ ನಡೆಸಿದ್ದಾರೆ ಎಂಬ ವಿಷಯವನ್ನು ನಾನು ಮೀಟಿಂಗ್‍ವೊಂದರಲ್ಲಿ ಮೋದಿ ಗಮನಕ್ಕೆ ತಂದೆ. ಮರುದಿನವೇ ಮೋದಿಯವರು, ‘ನನ್ನ ಸೋಲಿಸಲು ಪಾಕ್ ಮತ್ತು ಕಾಂಗ್ರೆಸ್ ಕೈಜೋಡಿಸುವೆ’ ಎಂದೆಲ್ಲ ಆಧಾರರಹಿತ ಆರೋಪ ಮಾಡಿ, ಬಿಜೆಪಿಗೆ ಅಲ್ಪ ಬಹುಮತ ತಂದು ಕೊಟ್ಟರು ಎನ್ನುವ ಅಗರವಾಲ್, ಗೆಲುವಿಗಾಗಿ ಮೋದಿ ಎಂತಹ ಕೀಳುಮಟ್ಟಕ್ಕೂ ಇಳಿಯಬಲ್ಲರು ಎಂದು ಆರೋಪಿಸಿದ್ದಾರೆ.
ಗುಜರಾತ್ ಗೆಲುವಿಗೆ ನನ್ನ ಕೊಡುಗೆಯಿದೆ ಎಂದು ಸಂಘ ಪರಿವಾರದ ಹಿರಿಯ ನಾಯಕರೂ ಒಪ್ಪಿಕೊಂಡಿದ್ದಾರೆ. ಇದಕ್ಕೆ ಸಾಕ್ಷಿಯಾಗಿ ಅವರು ಸಂಘದ ದತ್ತಾತ್ರೇಯ ಹೊಸಬಾಳೆ ಜೊತೆ ಫೋನಿನಲ್ಲಿ ನಡೆಸಿದ ಮಾತುಕತೆಯ ಆಡಿಯೋಗಳನ್ನು ಬಿಡುಗಡೆ ಮಾಡಿದ್ದಾರೆ.

ಸದ್ಯ ಮೋದಿಗೊಂದು ಪತ್ರ ಬರೆದಿರುವ ಅವರು, ‘300-400 ಸೀಟು ಗೆಲ್ಲುವ ಮಾತು ಬಿಡಿ, ಮುಕ್ತ ಮತ್ತು ನ್ಯಾಯಯುತ ಚುನಾವಣೆ ನಡೆದರೆ ಬಿಜೆಪಿಗೆ 40 ಸೀಟೂ ಬರಲ್ಲ ಎಂದು ಕಿಡಿ ಕಾರಿದ್ದಾರೆ. ಮೋದಿಯೊಂದಿಗೆ ನನಗೆ 28 ವರ್ಷಗಳ ಒಡನಾಟವಿದೆ, ಕಳೆದ ಸಲ ರಾಯ್‍ಬರೇಲಿಯಲ್ಲಿ ನಾನು ಒಳ್ಳೆ ಫೈಟ್ ಕೊಟ್ಟರೂ ಮೋದಿ ನನ್ನನ್ನು ಬೇಕೆಂತಲೇ ನಿರ್ಲಕ್ಷಿಸಿದ್ದಾರೆ ಎಂದೂ ಅವರು ಅಪಾದಿಸಿದ್ದಾರೆ.
ಗುಜರಾತ್ ಅಸೆಂಬ್ಲಿ ಗೆಲುವಿಗಾಗಿ ಅದ್ವಾನಿಯವರ ರಾಜಕೀಯವನ್ನೂ ಬಲಿ ಹಾಕಲಾಗಿದೆ. ಅದ್ವಾನಿಯವರನ್ನು ರಾಷ್ಟ್ರಪತಿ ಮಾಡಲು ಪಕ್ಷ ಯೋಚಿಸಿತ್ತು. ಆದರೆ ಗುಜರಾತಿನಲ್ಲಿ ಕೋಲಿ ಸಮುದಾಯದ ಮತಗಳನ್ನು ಪಡೆಯಲು ರಾಮನಾಥ್ ಕೋವಿಂದ್ ಅವರನ್ನು ರಾಷ್ಟ್ರಪತಿ ಮಾಡಲಾಗಿತು. ಮೋದಿ ತಮ್ಮ ಹಿತಾಸಕ್ತಿ ಕಾಪಾಡಿಕೊಳ್ಳಲು ಹೀಗೆಲ್ಲ ಮಾಡಿದರಷ್ಟೇ ಎಂದೂ ಅಗರ್‍ವಾಲ್ ಹೇಳಿದ್ದಾರೆ.

ನೋಟು ಅಮಾನ್ಯೀಕರಣ ಮೂರ್ಖತನದ್ದು

ಪತ್ರದಲ್ಲಿ ನೋಟ್ ಬ್ಯಾನ್ ಬಗ್ಗೆ ಪ್ರಶ್ನಿಸಿರುವ ಅಗರವಾಲ್, ‘ಪಾರ್ಟಿಯಲ್ಲಿ ನೀವೇ ಬಹಳ ಬುದ್ಧಿವಂತರು. ಹೀಗಾಗಿ ಯಾರನ್ನೂ ಕೇಳದೇ ನೋಟ್‍ಬ್ಯಾನ್ ಮಾಡಿ ಬಡವರ ಬದುಕನ್ನು ಇನ್ನಷ್ಟು ಬವಣೆಗೆ ದೂಕಿಬಿಟ್ಟಿರಿ. ಇದೊಂದು ಮುರ್ಖತನದ ನಿರ್ಧಾರವಾಗಿತ್ತು’ ಎಂದು ಕಠೋರ ಶಬ್ದಗಳಲ್ಲಿ ಮೋದಿಯನ್ನು ಕುಟುಕಿದ್ದಾರೆ.
(ಆಧಾರ: ದಿ ವೈರ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...