Homeಕರ್ನಾಟಕಆಳಂದ ಮತಗಳ್ಳತನ ಪ್ರಕರಣ | ಬಂಧನ ಭೀತಿಯಲ್ಲಿ ಬಿಜೆಪಿಯ ಮಾಜಿ ಶಾಸಕ ಮತ್ತು ಅವರ ಮಗ...

ಆಳಂದ ಮತಗಳ್ಳತನ ಪ್ರಕರಣ | ಬಂಧನ ಭೀತಿಯಲ್ಲಿ ಬಿಜೆಪಿಯ ಮಾಜಿ ಶಾಸಕ ಮತ್ತು ಅವರ ಮಗ : ನಿರೀಕ್ಷಣಾ ಜಾಮೀನಿಗೆ ಅರ್ಜಿ

- Advertisement -
- Advertisement -

‘ಆಳಂದ ಮತಗಳ್ಳತನ’ ಪ್ರಕರಣ ಸಂಬಂಧ ಬಂಧನ ಭೀತಿಯಲ್ಲಿರುವ ಕ್ಷೇತ್ರದ ಮಾಜಿ ಶಾಸಕ ಹಾಗೂ ಬಿಜೆಪಿ ನಾಯಕ ಸುಭಾಷ್ ಗುತ್ತೇದಾರ್ ಮತ್ತು ಅವರ ಮಗ ಹರ್ಷಾ ಗುತ್ತೇದಾರ್ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ.

ಅಪ್ಪ-ಮಗ ಇಬ್ಬರೂ ಜಾಮೀನು ಕೋರಿ ಬುಧವಾರ (ಅ.29) ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ವಿಶೇಷ ಸಾರ್ವಜನಿಕ ಅಭಿಯೋಜಕ ಅರ್ಜಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಸಮಯ ಕೋರಿದ್ದಾರೆ. ಹಾಗಾಗಿ, ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್ ಅವರು ವಿಚಾರಣೆಯನ್ನು ಗುರುವಾರಕ್ಕೆ (ಅ.30) ಮುಂದೂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಹೇಳಿದೆ.

ನಕಲಿ ಫಾರ್ಮ್ 7ರ ಮೂಲಕ ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದ 6 ಸಾವಿರಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲು ಪ್ರಯತ್ನಪಟ್ಟಿರುವುದು 2023ರ ವಿಧಾನಸಭಾ ಚುನಾವಣೆಗೆ ಮುನ್ನ ಬೆಳಕಿಗೆ ಬಂದಿತ್ತು.

ಈ ಸಂಬಂಧ ಆಳಂದದ ಆಗಿನ ಚುನಾವಣಾಧಿಕಾರಿ ಹಾಗೂ ಕಲಬುರಗಿಯ ಸಹಾಯಕ ಆಯುಕ್ತೆಯಾಗಿದ್ದ ಮಮತಾ ದೇವಿ ಅವರು 2023ರ ಫೆಬ್ರವರಿ 21ರಂದು ಆಳಂದ ಪೊಲೀಸರಿಗೆ ದೂರು ನೀಡಿದ್ದರು. ದೂರು ಆಧರಿಸಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಆರಂಭದಲ್ಲಿ ಆಳಂದ ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದರು. ಬಳಿಕ ತನಿಖೆ ಸಿಐಡಿಗೆ ವರ್ಗಾವಣೆಯಾಗಿತ್ತು.

ಆರೋಪಿಗಳನ್ನು ಬಂಧಿಸಲು ಅಗತ್ಯವಾದ ನಿರ್ಣಾಯಕ ದತ್ತಾಂಶಗಳನ್ನು ಚುನಾವಣಾ ಆಯೋಗ ಸಿಐಡಿ ಜೊತೆ ಹಂಚಿಕೊಳ್ಳದ ಕಾರಣ ಪ್ರಕರಣ ಬಹುತೇಕ ಹಳ್ಳಹಿಡಿದಂತೆ ಕಾಣುತ್ತಿದೆ ಎಂದು ದಿ ಹಿಂದೂ ಪತ್ರಿಕೆ 2025ರ ಸೆಪ್ಟೆಂಬರ್ 7ರಂದು ವಿಸ್ತೃತ ವರದಿ ಪ್ರಕಟಿಸಿತ್ತು.

ಸೆಪ್ಟೆಂಬರ್ 18ರಂದು ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆಳಂದ ಪ್ರಕರಣದ ದಾಖಲೆ ಬಿಡುಗಡೆ ಮಾಡಿದ್ದರು.

ಆ ಬಳಿಕ, ಆಳಂದ ಸೇರಿದಂತೆ ರಾಜ್ಯದಾದ್ಯಂತ ದಾಖಲಾಗಿರುವ ಮತ್ತು ಮುಂದೆ ದಾಖಲಾಗಲಿರುವ ಎಲ್ಲಾ ‘ಮತಗಳ್ಳತನ’ ಪ್ರಕರಣಗಳ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ 2025ರ ಸೆಪ್ಟೆಂಬರ್ 20ರಂದು ರಾಜ್ಯ ಸರ್ಕಾರ ಆದೇಶಿಸಿತ್ತು.

2025ರ ಸೆಪ್ಟೆಂಬರ್ 26ರಂದು ಪ್ರಕರಣವನ್ನು ಸಿಐಡಿಯಿಂದ ಎಸ್‌ಐಟಿ ವಹಿಸಿಕೊಂಡಿದೆ. ಆ ಬಳಿಕ ಹಳ್ಳ ಹಿಡಿದಿದ್ದ ತನಿಖೆ ಚುರುಕುಗೊಂಡಿದೆ.

ಮತದಾರರ ಪಟ್ಟಿಯಿಂದ ಮತದಾರರ ಹೆಸರು ಅಳಿಸುವಂತೆ ನಕಲಿ ಫಾರ್ಮ್‌-7ರ ಮೂಲಕ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಲು ಪ್ರತಿ ಅರ್ಜಿಗೆ 80 ರೂಪಾಯಿಯನ್ನು ಡೇಟಾ ಸೆಂಟರ್ ಅಪರೇಟರ್‌ಗೆ ಪಾವತಿಸಲಾಗಿದೆ ಎಂಬುವುದು ಎಸ್‌ಐಟಿ ತನಿಖೆಯಿಂದ ಬಯಲಾಗಿದೆ.

ಡಿಸೆಂಬರ್ 2022ರಿಂದ ಫೆಬ್ರವರಿ 2023ರವರೆಗೆ ಕ್ಷೇತ್ರದ ಒಟ್ಟು 6,018 ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದು ಹಾಕಲು ನಕಲಿ ಅರ್ಜಿಗಳನ್ನು ಸಲ್ಲಿಸಲಾಗಿದ್ದು, ಇದಕ್ಕಾಗಿ ಒಟ್ಟು 4.8 ಲಕ್ಷ ರೂ. ಪಾವತಿಸಲಾಗಿದೆ ಎಂದು ಎಸ್‌ಐಟಿ ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಎಸ್‌ಐಟಿ, ಕಳೆದ ವಾರ 2023ರಲ್ಲಿ ಕಾಂಗ್ರೆಸ್‌ನ ಬಿ. ಆರ್ ಪಾಟೀಲ್ ವಿರುದ್ಧ ಸೋತಿದ್ದ ಬಿಜೆಪಿ ನಾಯಕ, ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಅವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಿ, ಪರಿಶೀಲನೆ ಕೈಗೊಂಡಿದೆ ಎಂದು ವರದಿಯಾಗಿದೆ.

ಮತದಾರರ ಹೆಸರುಗಳನ್ನು ಪಟ್ಟಿಯಿಂದ ಅಳಿಸಲು ಕಲಬುರಗಿಯ ಕೇಂದ್ರ ಸ್ಥಾನದಲ್ಲಿರುವ ಒಂದು ಡೇಟಾ ಸೆಂಟರ್‌ನಿಂದ ನಕಲಿ ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂಬುವುದನ್ನು ಎಸ್‌ಐಟಿ ಪತ್ತೆ ಮಾಡಿದೆ. ಸ್ಥಳೀಯ ನಿವಾಸಿ ಮೊಹಮ್ಮದ್ ಅಶ್ಫಾಕ್ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ ಎಂಬ ಸೂಚನೆಗಳು ಎಸ್‌ಐಟಿ ತನಿಖೆಯಲ್ಲಿ ಕಂಡುಬಂದಿವೆ.

ಇದೀಗ, ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಮತ್ತು ಅವರ ಮಗ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹರ್ಷ ಗುತ್ತೇದಾರ್‌ಗೆ ಎಸ್‌ಐಟಿ ನೋಟಿಸ್ ಜಾರಿ ಮಾಡಿದೆ ಎಂದು ತಿಳಿದು ಬಂದಿದೆ. ಇದರಿಂದ ಬಂಧನ ಭೀತಿಯಲ್ಲಿರುವ ಅವರು ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೊರೆ ಹೋಗಿದ್ದಾರೆ.

ಕನೇರಿ ಸ್ವಾಮಿಗೆ ಸುಪ್ರೀಂ ಛೀಮಾರಿ: “ನಿಮ್ಮನ್ನು ಗಡಿಪಾರು ಮಾಡಲೂ ಅಧಿಕಾರ ಇದೆ”.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲಾ ಮಕ್ಕಳು ಆರ್‌ಎಸ್‌ಎಸ್‌ ಗೀತೆ ಹಾಡಿದ ಪ್ರಕರಣ : ತನಿಖೆಗೆ ಆದೇಶಿಸಿದ ಸರ್ಕಾರ

ಹೊಸದಾಗಿ ಚಾಲನೆ ನೀಡಲಾದ ಎರ್ನಾಕುಲಂ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೊದಲ ಸಂಚಾರದ ವೇಳೆ ಶಾಲಾ ಮಕ್ಕಳು ಆರ್‌ಎಸ್‌ಎಸ್‌ ಗೀತೆ (ಗಾನ ಗೀತಂ) ಹಾಡಿದ ಬಗ್ಗೆ ತನಿಖೆಗೆ ಕೇರಳದ ಪ್ರಾಥಮಿಕ ಶಿಕ್ಷಣ ಸಚಿವ...

ಬಿಹಾರ ಚುನಾವಣೆ | ಎಲ್‌ಜೆಪಿ ಸಂಸದೆಯ ಎರಡೂ ಕೈಗಳಲ್ಲಿ ಮತದಾನದ ಶಾಯಿ ಗುರುತು; ಮತಗಳ್ಳತನ ಆರೋಪ

ಬಿಹಾರದಲ್ಲಿ ನವೆಂಬರ್ 6ರಂದು ನಡೆದ ಮೊದಲ ಹಂತದ ಮತದಾನದ ವೇಳೆ ಎನ್‌ಡಿಎ ಭಾಗವಾಗಿರುವ ಲೋಕಜನಶಕ್ತಿ ಪಕ್ಷ (ಎಲ್‌ಜೆಪಿ) ಸಂಸದೆ ಶಾಂಭವಿ ಚೌಧರಿ ಅವರ ಎರಡೂ ಕೈಗಳಲ್ಲಿ ಮತದಾನದ ಗುರುತಿನ ಶಾಯಿ ಕಂಡುಬಂದಿದೆ. ಈ...

ಗೋಲ್ಪಾರದಲ್ಲಿ ತೆರವು ಕಾರ್ಯಾಚರಣೆ ಪುನರಾರಂಭಿಸಿದ ಅಸ್ಸಾಂ ಸರ್ಕಾರ : ನೆಲೆ ಕಳೆದುಕೊಳ್ಳಲಿರುವ 600 ಕುಟುಂಬಗಳು

ದಹಿಕಾಟಾ ಮೀಸಲು ಅರಣ್ಯದೊಳಗಿನ 1,140 ಬಿಘಾ (376 ಎಕರೆಗೂ ಹೆಚ್ಚು) ಅರಣ್ಯ ಭೂಮಿಯ ಮೇಲಿನ ಅತಿಕ್ರಮಣವನ್ನು ತೆರವುಗೊಳಿಸಲು ಅಸ್ಸಾಂ ಸರ್ಕಾರ ಭಾನುವಾರ (ನ.9) ಗೋಲ್ಪಾರ ಜಿಲ್ಲೆಯಲ್ಲಿ ತನ್ನ ತೆರವು ಕಾರ್ಯಾಚರಣೆಯನ್ನು ಪುನರಾರಂಭಿಸಿದೆ. ಇದರಿಂದ...

ದಲಿತ ಸಂಶೋಧನಾ ವಿದ್ಯಾರ್ಥಿಗೆ ಜಾತಿ ತಾರತಮ್ಯ ಆರೋಪ : ತನಿಖೆಗೆ ಆದೇಶಿಸಿದ ಸರ್ಕಾರ

ತಿರುವನಂತಪುರದ ಕೇರಳ ವಿಶ್ವವಿದ್ಯಾಲಯದಲ್ಲಿ ದಲಿತ ಸಂಶೋಧನಾ ವಿದ್ಯಾರ್ಥಿಗೆ ಜಾತಿ ತಾರತಮ್ಯ ಮಾಡಲಾಗಿದೆ ಎಂಬ ಆರೋಪದ ಕುರಿತ ತನಿಖೆಗೆ ಉನ್ನತ ಶಿಕ್ಷಣ ಸಚಿವೆ ಆರ್‌.ಬಿಂದು ಶನಿವಾರ (ನ.8) ಆದೇಶಿಸಿದ್ದಾರೆ. ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ...

ಅಂಡಮಾನ್, ನಿಕೋಬಾರ್ ದ್ವೀಪಗಳಲ್ಲಿ ಭೂಕಂಪ : ರಿಕ್ಟರ್ ಮಾಪಕದಲ್ಲಿ 5.4 ತೀವ್ರತೆ ದಾಖಲು

ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಇಂದು (ನ.9, 2025) ಮಧ್ಯಾಹ್ನ 12:06ಕ್ಕೆ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 5.4 ತೀವ್ರತೆ ದಾಖಲಾಗಿದೆ. ಭೂಕಂಪದ ಕೇಂದ್ರ ಬಿಂದು ಭೂಮಿಯ 90 ಕಿಲೋ ಮೀಟರ್ ಆಳದಲ್ಲಿ...

ತರಬೇತಿ ನಿರತ ಪೊಲೀಸರಿಗೆ ಭಗವದ್ಗೀತೆ ಪಠಿಸಲು ಆದೇಶ : ಇಲಾಖೆಯ ಕೇಸರೀಕರಣ ಎಂದ ಕಾಂಗ್ರೆಸ್

ಎಂಟು ಕೇಂದ್ರಗಳಲ್ಲಿ ತರಬೇತಿ ಪಡೆಯುತ್ತಿರುವ ಮಧ್ಯಪ್ರದೇಶದ ಸುಮಾರು 4,000 ಹೊಸದಾಗಿ ನೇಮಕಗೊಂಡ ಪೊಲೀಸ್ ಕಾನ್‌ಸ್ಟೆಬಲ್‌ಗಳು ಹಿಂದೂ ಮಾಸದ ಮಾರ್ಗಶಿರದಲ್ಲಿ ಪ್ರತಿದಿನ ಸಂಜೆ 'ಭಗವದ್ಗೀತೆ'ಯ ಅಧ್ಯಾಯಗಳನ್ನು ಓದಲು ನಿರ್ದೇಶಿಸಲಾಗಿದೆ. ತರಬೇತಿಯಲ್ಲಿರುವ ಕಾನ್‌ಸ್ಟೆಬಲ್‌ಗಳಿಗೆ ನೀತಿವಂತ ಮತ್ತು ಶಿಸ್ತಿನ...

ಪಶ್ಚಿಮ ಬಂಗಾಳ : ನಾಲ್ಕು ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ

ನಾಲ್ಕು ವರ್ಷ ವಯಸ್ಸಿನ ಹೆಣ್ಣು ಮಗುವನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯವೆಸಗಿದ ಆಘಾತಕಾರಿ ಘಟನೆ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಶುಕ್ರವಾರ (ನ.7) ರಾತ್ರಿ ಈ ಘಟನೆ ನಡೆದಿದೆ. ಅಪರಿಚಿತರು ದುಷ್ಕೃತ್ಯವೆಸಗಿದ್ದಾರೆ. ಮಗುವಿನ...

ವಂದೇ ಭಾರತ್‌ ರೈಲಿನಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ ಮಕ್ಕಳು, ವಿಡಿಯೋ ಹಂಚಿಕೊಂಡ ರೈಲ್ವೆ : ತೀವ್ರ ವಿರೋಧ

ಶನಿವಾರ (ನ.8) ಎರ್ನಾಕುಲಂ-ಬೆಂಗಳೂರು ನಡುವಿನ ನೂತನ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳು ಆರ್‌ಎಸ್‌ಎಸ್‌ ಗೀತೆ ಹಾಡಿರುವ ವಿಡಿಯೋವನ್ನು ದಕ್ಷಿಣ ರೈಲ್ವೆ ಹಂಚಿಕೊಂಡಿದ್ದು, ಕೇರಳದಲ್ಲಿ ತೀವ್ರ ಆಕ್ಷೇಪ...

ಶಾಲಾ ಮಕ್ಕಳಿಗೆ ನ್ಯೂಸ್ ಪೇಪರ್‌ನಲ್ಲಿ ಬಿಸಿಯೂಟ ಬಡಿಸಿದ ವಿಡಿಯೋ ವೈರಲ್ : ಪ್ರಧಾನಿ, ಸಿಎಂಗೆ ನಾಚಿಕೆಯಾಗ್ಬೇಕು ಎಂದ ರಾಹುಲ್ ಗಾಂಧಿ

ಮಧ್ಯಪ್ರದೇಶದ ಶಾಲೆಯೊಂದರ ಮಕ್ಕಳು ನ್ಯೂಸ್‌ ಪೇಪರ್‌ನಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ವಿಡಿಯೋ ಹಂಚಿಕೊಂಡಿರುವ ರಾಹುಲ್ ಗಾಂಧಿ, "ಇಂತಹ ದಯನೀಯ ಸ್ಥಿತಿಯಲ್ಲಿ ಭಾರತದ ಭವಿಷ್ಯ ಬೆಳಗುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಮೋಹನ್...

ಬಿಹಾರ ಚುನಾವಣೆ : ರಸ್ತೆ ಬದಿ ಪತ್ತೆಯಾದ ವಿವಿಪ್ಯಾಟ್‌ ಸ್ಲಿಪ್‌ಗಳು

ಬಿಹಾರದ ಸಮಸ್ತಿಪುರ ಜಿಲ್ಲೆಯ ಶೀತಲ್‌ಪಟ್ಟಿ ಗ್ರಾಮದ ಎಸ್‌ಆರ್ ಕಾಲೇಜು ಬಳಿ ಭಾರೀ ಸಂಖ್ಯೆಯಲ್ಲಿ ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿ ಪ್ಯಾಟ್‌) ಸ್ಲಿಪ್‌ಗಳು ಪತ್ತೆಯಾಗಿದ್ದು, ಭಾರತೀಯ ಚುನಾವಣಾ ಆಯೋಗ (ಇಸಿಐ) ಶನಿವಾರ...