Homeಮುಖಪುಟಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

- Advertisement -
- Advertisement -

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ (ಫೆ.22) ಆರೋಪಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋ ಉಲ್ಲೇಖಿಸಿ ಜುಲ್ಲಿ ನೀಡಿರುವ ಹೇಳಿಕೆ ಪ್ರಕಾರ, ರಾಜಸ್ಥಾನದ ಟೋಂಕ್ ಜಿಲ್ಲೆಯ ನಿವಾಯ್ ತಾಲೂಕಿನ ಕರೇಡಾ ಗ್ರಾಮದಲ್ಲಿ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಮಹಿಳೆಯರಿಗೆ ಕಂಬಳಿ ವಿತರಿಸುತ್ತಿದ್ದರು. ಈ ವೇಳೆ ಕಂಬಳಿ ಪಡೆದ ಕೆಲ ಮಹಿಳೆಯ ಮುಸ್ಲಿಮರು ಎಂದು ಗೊತ್ತಾಗಿದೆ. ಹಾಗಾಗಿ, ಅವರನ್ನು ಅಮಾನಿಸಿದ ಜೌನ್‌ಪುರಿಯಾ, ಕೊಟ್ಟಿದ್ದ ಕಂಬಳಿಯನ್ನು ವಾಪಸ್ ಪಡೆದು ಸ್ಥಳದಿಂದ ತೆರಳುವಂತೆ ಸೂಚಿಸಿದ್ದಾರೆ.

ಮಾಜಿ ಸಂಸದರೊಬ್ಬರು ಬಡ ಮಹಿಳೆಗೆ ಅವರ ಧರ್ಮ ಕೇಳಿ ಕೊಟ್ಟ ಕಂಬಳಿಯನ್ನು ವಾಪಸ್ ತೆಗೆದುಕೊಂಡಿರುವುದು ಅತ್ಯಂತ ಖಂಡನೀಯ ಎಂದು ಟಿಕರಾಮ್ ಜುಲ್ಲಿ ಹೇಳಿದ್ದಾರೆ.

ಮಾಜಿ ಸಂಸದರ ವರ್ತನೆಗೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದಾಗ, ಅವರಿಗೆ ಬೆದರಿಕೆ ಹಾಕಿದ್ದಾರೆ. ಈ ತಾರತಮ್ಯವನ್ನು ಗ್ರಾಮಸ್ಥರು ತೀವ್ರವಾಗಿ ಆಕ್ಷೇಪಿಸಿದ್ದಾರೆ. ಸಂಸದರಂತಹ ಹುದ್ದೆಯನ್ನು ಅಲಂಕರಿಸಿದ್ದ ಸಾರ್ವಜನಿಕ ಪ್ರತಿನಿಧಿಯೊಬ್ಬರು ಈ ರೀತಿ ವರ್ತಿಸುವುದು ಖಂಡನೀಯ ಎಂದಿದ್ದಾರೆ.

ಸ್ಥಳೀಯರ ಪ್ರಕಾರ, ಭಾನುವಾರ ಮಧ್ಯಾಹ್ನ ಕಂಬಳಿ ವಿತರಣಾ ಕಾರ್ಯಕ್ರಮದ ವೇಳೆ ಈ ಘಟನೆ ನಡೆದಿದೆ. ಮೊದಲು ಸೇರಿದ್ದ ಎಲ್ಲಾ ಮಹಿಳೆಯರಿಗೆ ಸುಖ್‌ಬೀರ್ ಸಿಂಗ್ ಕಂಬಳಿ ವಿತರಿಸಿದ್ದರು. ನಂತರ ಅವರಲ್ಲಿ ಕೆಲವರು ಮುಸ್ಲಿಮರು ಎಂದು ತಿಳಿದು ವಾಪಸ್ ಪಡೆದಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ವೈರಲ್ ವಿಡಿಯೋದಲ್ಲಿ, “ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುವವರಿಗೆ ಕಂಬಳಿ ಪಡೆಯುವ ಹಕ್ಕಿಲ್ಲ” ಎಂದು ಜೌನ್‌ಪುರಿಯಾ ಹೇಳಿರುವುದು ಕೇಳಿ ಬಂದಿದೆ.

ಇದು ಸರ್ಕಾರಿ ಯೋಜನೆಯಲ್ಲ, ಬದಲಾಗಿ ತಮ್ಮ ಸ್ವಂತ ಹಣದಿಂದ ಮಾಡುತ್ತಿರುವ ವೈಯಕ್ತಿಕ ಕಾರ್ಯಕ್ರಮ ಎಂದು ಅವರು ತಮ್ಮ ನಡೆಯನ್ನು ಜೌನ್‌ಪುರಿಯಾ ಸಮರ್ಥಿಸಿಕೊಂಡಿದ್ದಾರೆ. 

ವೈರಲ್ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾಟೆ, “ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು ಟೋಂಕ್‌ನಲ್ಲಿ ಕಂಬಳಿ ಹಂಚುತ್ತಿದ್ದರು. ಈ ವೇಳೆ ಅವರು ಬಡ ಮುಸ್ಲಿಂ ಮಹಿಳೆಯರನ್ನು ಅವಮಾನಿಸಿ, ಅವರಿಂದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ. ವಾಸ್ತವವಾಗಿ, ಸಂಕುಚಿತ ಮತ್ತು ಅಸಹ್ಯಕರ ಮನಸ್ಥಿತಿಯ ಈ ಮನುಷ್ಯನೇ ಹೃದಯ ಮತ್ತು ಆಲೋಚನೆಗಳಲ್ಲಿ ನಿಜವಾದ ಬಡವನಾಗಿದ್ದಾನೆ. ಜನರು ಪ್ರತಿಭಟಿಸಿ ಸರಿಯಾದ ಕೆಲಸವನ್ನೇ ಮಾಡಿದ್ದಾರೆ; ಅವರು ಆ ಕಂಬಳಿಯನ್ನು ಅವನ ಮುಖಕ್ಕೇ ಎಸೆಯಬೇಕಿತ್ತು” ಬರೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...