Homeಮುಖಪುಟಚುನಾವಣಾ ಬಾಂಡ್‌ ಕುರಿತ ಮಾಹಿತಿ ಬಿಡುಗಡೆಗೆ SBIಗೆ ನಿರ್ದೇಶಿಸಿ: ಆಯೋಗಕ್ಕೆ ಪತ್ರ ಬರೆದ ಮಾಜಿ ಅಧಿಕಾರಿಗಳ...

ಚುನಾವಣಾ ಬಾಂಡ್‌ ಕುರಿತ ಮಾಹಿತಿ ಬಿಡುಗಡೆಗೆ SBIಗೆ ನಿರ್ದೇಶಿಸಿ: ಆಯೋಗಕ್ಕೆ ಪತ್ರ ಬರೆದ ಮಾಜಿ ಅಧಿಕಾರಿಗಳ ತಂಡ

- Advertisement -
- Advertisement -

ಚುನಾವಣಾ ಬಾಂಡ್‌ಗಳ ಕುರಿತ ವಿವರಗಳನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಭಾರತೀಯ ಸ್ಟೇಟ್ ಬ್ಯಾಂಕ್‌ಗೆ ನಿರ್ದೇಶಿಸುವಂತೆ ಸಾಂವಿಧಾನಿಕ ನಡವಳಿಕೆ ಗುಂಪಿನ (ಸಿಸಿಜಿ) 79 ಮಾಜಿ ನಾಗರಿಕ ಸೇವಾಧಿಕಾರಿಗಳು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ಮಾರ್ಚ್ 4ರಂದು SBI ಚುನಾವಣಾ ಬಾಂಡ್‌ ಕುರಿತ ಡೇಟಾವನ್ನು ನೀಡಲು ಮಾರ್ಚ್ 6ರ ಗಡುವಿನ ಬದಲಿಗೆ ಜೂನ್ 30ರವರೆಗೆ ಕಾಲಾವಕಾಶವನ್ನು ವಿಸ್ತರಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಇದಕ್ಕೆ ಭಾರೀ ಆಕ್ಷೇಪ ವ್ಯಕ್ತವಾಗಿತ್ತು.

ಪತ್ರದಲ್ಲೇನಿದೆ?

ನಮ್ಮದು ಕೇಂದ್ರ ಮತ್ತು ವಿವಿಧ ರಾಜ್ಯಗಳಲ್ಲಿ ಕೆಲಸ ಮಾಡಿದ ಅಖಿಲ ಭಾರತೀಯ ಮಾಜಿ ನಾಗರಿಕ ಸೇವಾಧಿಕಾರಿಗಳ ಗುಂಪಾಗಿದೆ. ನಾವು ಯಾವುದೇ ರಾಜಕೀಯ ಪಕ್ಷದೊಂದಿಗೆ ಯಾವುದೇ ಸಂಬಂಧವನ್ನು ಹೊಂದಿಲ್ಲ ಆದರೆ ನಿಷ್ಪಕ್ಷಪಾತ, ತಟಸ್ಥತೆ ಮತ್ತು ಭಾರತದ ಸಂವಿಧಾನಕ್ಕೆ ಬದ್ಧರಾಗಿದ್ದೇವೆ.

ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದಂತೆ ಮಾಹಿತಿಯನ್ನು ಸಲ್ಲಿಸುವ ಸಮಯವನ್ನು ಜೂನ್ 30, 2024 ರವರೆಗೆ ವಿಸ್ತರಿಸಲು ಭಾರತೀಯ ಸ್ಟೇಟ್ ಬ್ಯಾಂಕ್ (SBI) ಸುಪ್ರೀಂ ಕೋರ್ಟ್‌ಗೆ (SCI) ಮಾಡಿದ ಅಸಾಮಾನ್ಯ ವಿನಂತಿಯನ್ನು ಉಲ್ಲೇಖಿಸಿ ನಾವು ನಿಮಗೆ ಪತ್ರ ಬರೆಯುತ್ತಿದ್ದೇವೆ. ಮಾರ್ಚ್ 6ರೊಳಗೆ ಡೇಟಾವನ್ನು ಸಾರ್ವಜನಿಕಗೊಳಿಸುವ ಸ್ಥಿತಿಯಲ್ಲಿಲ್ಲ ಎಂದು ಮಾರ್ಚ್ 4ರಂದು ನ್ಯಾಯಾಲಯಕ್ಕೆ ತಿಳಿಸಲು ಎಸ್‌ಬಿಐ 17 ದಿನಗಳನ್ನು ತೆಗೆದುಕೊಂಡಿದೆ ಎಂಬುದನ್ನು ನಾವು ನಿರಾಶೆಯಿಂದ ಗಮನಿಸುತ್ತೇವೆ. 48 ಕೋಟಿ ಖಾತೆಗಳನ್ನು ಹೊಂದಿರುವ ಮತ್ತು ಉನ್ನತ ಮಟ್ಟದ ಡಿಜಿಟಲೀಕರಣ ವ್ಯವಸ್ಥೆ ಇರುವ ಭಾರತದ ಅತಿದೊಡ್ಡ ಬ್ಯಾಂಕ್‌ಗೆ, ದಾಖಲೆಗಳನ್ನು ಚುನಾವಣಾ ಬಾಂಡ್‌ ಕುರಿತ ಮಾಹಿತಿ ನೀಡಲು ಸಮಯಾವಕಾಶ ಕೋರಿರುವುದು ಕರುಣಾಜನಕ ಸ್ಥಿತಿಯಾಗಿದೆ. ಅಖಿಲ ಭಾರತ ಬ್ಯಾಂಕಿಂಗ್ ಅಧಿಕಾರಿಗಳ ಒಕ್ಕೂಟದ ಮಾಜಿ ಪ್ರಧಾನ ಕಾರ್ಯದರ್ಶಿ ಥಾಮಸ್ ಫ್ರಾಂಕೋ, ಚುನಾವಣಾ ಬಾಂಡ್ ಯೋಜನೆಗಾಗಿ ಐಟಿ ವ್ಯವಸ್ಥೆಗಳ ಅಭಿವೃದ್ಧಿಗಾಗಿ ಎಸ್‌ಬಿಐ 2018ರ ಜೂನ್‌ನಲ್ಲಿ ಪತ್ರದ ಮೂಲಕ ಭಾರತ ಸರ್ಕಾರಕ್ಕೆ 60 ಲಕ್ಷ ರೂ.ಬೇಡಿಕೆ ಇಟ್ಟಿದೆ ಎಂಬುವುದನ್ನು ಉಲ್ಲೇಖಿಸಿದ್ದಾರೆ. ಇದಲ್ಲದೆ  ಫ್ರಾಂಕೊ ಅವರು ಕೇವಲ ಆರು ದಿನಗಳ ಅವಧಿಯಲ್ಲಿ ಆರು ವರ್ಷಗಳಲ್ಲಿ ಮಾರಾಟವಾದ ಬಾಂಡ್‌ಗಳ ವಿವರಗಳನ್ನು ನೀಡುವ ಆರ್‌ಟಿಐ ಉತ್ತರವನ್ನು ಸಹ ಪ್ರಕಟಿಸಿದ್ದಾರೆ. ಯೋಜನೆಯ ಅಂತಿಮಗೊಳಿಸುವಿಕೆಯ ಸಮಯದಲ್ಲಿ ಹಣಕಾಸು ಕಾರ್ಯದರ್ಶಿ ಸುಭಾಷ್ ಚಂದ್ರ ಗಾರ್ಗ್ ಅವರು ಸಂದರ್ಶನಗಳಲ್ಲಿ ಕೋರಿದ ಮಾಹಿತಿಯನ್ನು ಪಡೆಯಲು ಹತ್ತು ನಿಮಿಷಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳಬಾರದು ಎಂದು ಹೇಳಿದ್ದಾರೆ. ಎಸ್‌ಬಿಐಯ ಸಮಯದ ಬೇಡಿಕೆಯು ಸಂಪೂರ್ಣವಾಗಿ ನ್ಯಾಯಸಮ್ಮತವಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಚುನಾವಣಾ ಬಾಂಡ್‌ಗಳ ಯೋಜನೆಯನ್ನು ಅಸಂವಿಧಾನಿಕ ಎಂದು ಪತ್ರದಲ್ಲಿ ಹೇಳಲಾಗಿದ್ದು, ರಾಜಕೀಯ ಪಕ್ಷಗಳಿಗೆ ಧನಸಹಾಯ ಮಾಡುವ ಬಗ್ಗೆ ತಿಳಿದುಕೊಳ್ಳಲು ಭಾರತದ ನಾಗರಿಕರ ಮಾಹಿತಿಯ ಹಕ್ಕನ್ನು ಎಸ್‌ಸಿಐ ಉಲ್ಲೇಖಿಸಿದೆ. ಎಸ್‌ಬಿಐ ಈ ಮಾಹಿತಿಯನ್ನು ನಿರಾಕರಿಸುವುದು ಮತ್ತು ಸಾರ್ವತ್ರಿಕ ಚುನಾವಣೆಗೆ ಮೊದಲು ಸಾಧ್ಯವಿಲ್ಲ ಎಂದು ಸೂಚಿಸುವುದು, ಎಸ್‌ಬಿಐ ಅಧಿಕಾರದಲ್ಲಿರುವ ಸರ್ಕಾರವನ್ನು ರಕ್ಷಿಸುತ್ತಿದೆ ಎಂದು ಸೂಚಿಸುತ್ತದೆ. ನ್ಯೂಸ್‌ಲಾಂಡ್ರಿ ಮತ್ತು ನ್ಯೂಸ್ ಮಿನಿಟ್ ಎಂಬ ಮಾಧ್ಯಮ ಪೋರ್ಟಲ್‌ಗಳು ಈಗಾಗಲೇ ಮೂವತ್ತು ಕಾರ್ಪೊರೇಟ್‌ಗಳು  ಹಿಂದಿನ ಐದು ವರ್ಷಗಳಲ್ಲಿ ಸುಮಾರು 335 ಕೋಟಿ ರೂಪಾಯಿ ಮೌಲ್ಯದ ಬಾಂಡ್‌ಗಳ ಖರೀದಿಯನ್ನು ಮಾಡಿರುವುದರ ಕುರಿತು ಸುದ್ದಿ ಪ್ರಕಟಿಸಿದೆ. ECI ಮಾರ್ಚ್ 27ರೊಳಗೆ ಅಥವಾ ಅದಕ್ಕಿಂತ ಮುಂಚೆಯೇ ವೇಳಾಪಟ್ಟಿಯನ್ನು ಪ್ರಕಟಿಸಬಹುದು. ಚುನಾವಣೆಯ ಘೋಷಣೆಗೂ ಮುನ್ನವೇ ಎಸ್‌ಬಿಐ ಚುನಾವಣಾ ಬಾಂಡ್‌ಗಳ ಡೇಟಾವನ್ನು ನೀಡಬೇಕು. ಸಂವಿಧಾನದ 324ನೇ ವಿಧಿಯ ಅಡಿಯಲ್ಲಿ ತನ್ನ ಅಧಿಕಾರವನ್ನು ಬಳಸಿಕೊಂಡು ತನ್ನ ಖ್ಯಾತಿಯನ್ನು ಮತ್ತು ಅದರ ಸಮಗ್ರತೆಯನ್ನು ಮರಳಿ ಪಡೆಯಲು ಇಸಿಐಗೆ ಇದು ಒಂದು ಅವಕಾಶವಾಗಿದೆ. ತಕ್ಷಣವೇ ಮಾಹಿತಿಯನ್ನು ಬಿಡುಗಡೆ ಮಾಡಲು ಎಸ್‌ಬಿಐಗೆ ನಿರ್ದೇಶಿಸಬೇಕು. ಎಸ್‌ಬಿಐ ಈ ಮಾಹಿತಿಯನ್ನು ಒದಗಿಸುವವರೆಗೆ 2024ರ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸುವುದಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಬೇಕು. ECI ಮೌನವಾಗಿದ್ದರೆ, ಭಾರತೀಯ ಮತದಾರರ ಮಾಹಿತಿಯ ಹಕ್ಕನ್ನು ಗೌರವಿಸುವ ಮತ್ತು ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ನಡೆಸುವ ತನ್ನ ಸಾಂವಿಧಾನಿಕ ಬದ್ಧತೆಗೆ ಅಡ್ಡಿಯಾಗಲಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನು ಓದಿ: ಸುಧಾಮೂರ್ತಿ ‘ತುಕ್ಡೆ ತುಕ್ಡೆ ಗ್ಯಾಂಗ್‌ಗೆ ಸಹಾಯ ಮಾಡುತ್ತಿದ್ದಾರೆ’ ಎಂದಿದ್ದ RSS ನಂಟಿನ ಮ್ಯಾಗ್‌ಝಿನ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...