ಅತೃಪ್ತ ಶಾಸಕರನ್ನು ಅಡ್ಡ ದಾರಿಯಲ್ಲಿ ತೃಪ್ತಿಪಡಿಸಿ ಮುಖ್ಯಮಂತ್ರಿ ಪದವಿಗೆ ಏರಿದ ಯಡಿಯೂರಪ್ಪನವರೇ ತಂತಿ ಮೇಲಿಂದನೇ ಪ್ರವಾಹ ಪೀಡಿತ ಪ್ರದೇಶದಲ್ಲಿರುವ ಜನರ ಕಡೆಗೂ ನೋಡಿ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಛೇಡಿಸಿದ್ದಾರೆ.
ಮನೆ ಮಠ ಕಳೆದುಕೊಂಡು ಬೀದಿಗೆ ಬಿದ್ದಿರುವ ಅವರ ಬದುಕನ್ನು ನಿಮ್ಮ ಸರ್ಕಾರಕ್ಕೆ ಕಟ್ಟಿ ಕೊಡೋಕೆ ಸಾಧ್ಯವಾಗದಿದ್ದರೆ, ಜನರೇ ನಿಮ್ಮನ್ನು ‘ತಂತಿ’ ಮೇಲಿಂದ ಇಳಿಸುತ್ತಾರೆ ಎಂದು ಟೀಕಿಸಿದ್ದಾರೆ.
ಅತೃಪ್ತ ಶಾಸಕರನ್ನು ಅಡ್ಡ ದಾರಿಯಲ್ಲಿ ತೃಪ್ತಿಪಡಿಸಿ CM ಪದವಿಗೆ ಏರಿದ ಯಡಿಯೂರಪ್ಪನವರೇ ತಂತಿ ಮೇಲಿಂದನೇ ಪ್ರವಾಹ ಪೀಡಿತ ಪ್ರದೇಶದಲ್ಲಿರುವ ಜನರ ಕಡೆಗೂ ನೋಡಿ. ಮನೆ ಮಠ ಕಳೆದುಕೊಂಡು ಬೀದಿಗೆ ಬಿದ್ದಿರುವ ಅವರ ಬದುಕನ್ನು ನಿಮ್ಮ ಸರ್ಕಾರಕ್ಕೆ ಕಟ್ಟಿ ಕೊಡೋಕೆ ಸಾಧ್ಯವಾಗದಿದ್ದರೆ, ಜನರೇ ನಿಮ್ಮನ್ನು 'ತಂತಿ' ಮೇಲಿಂದ ಇಳಿಸುತ್ತಾರೆ.
— H D Kumaraswamy (@hd_kumaraswamy) September 30, 2019
ಯಡಿಯೂರಪ್ಪನವರು ನಿನ್ನೆ ನನ್ನದು ತಂತಿ ಮೇಲಿನ ನಡಿಗೆಯಾಗಿದೆ. ಯಾವುದೇ ಒಂದು ನಿರ್ಧಾರ ತೆಗೆದುಕೊಳ್ಳಬೇಕಾದರೂ ಹತ್ತು ಬಾರಿ ಯೋಚಿಸುತ್ತೇನೆ ಎಂದು ಹೇಳಿಕೆ ನೀಡಿದ್ದರು. ಅದಕ್ಕೆ ಪ್ರತಿಯಾಗಿ ಇಂದು ಎಚ್.ಡಿ ಕುಮಾರಸ್ವಾಮಿಯವರು ಮೇಲಿನ ಹೇಳಿಕೆ ನೀಡಿದ್ದಾರೆ.
ಉತ್ತರ ಕರ್ನಾಟಕದ ಬಹುಭಾಗ ಪ್ರವಾಹಕ್ಕೆ ತುತ್ತಾಗಿದ್ದು ಕೇಂದ್ರ ಸರ್ಕಾರದಿಂದ ಇನ್ನು ಪರಿಹಾರ ಹಣ ಬಂದಿಲ್ಲ. ರಾಜ್ಯ ಸರ್ಕಾರವೂ ತಮ್ಮ ಬಳಿ ಕೊಡಲು ಹಣವಿಲ್ಲ ಎನ್ನುತ್ತಿದೆ. ಹಾಗಾಗಿ ಬಿಜೆಪಿ ಸರ್ಕಾರ ಮತ್ತು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ವಿರುದ್ಧ ದಿನೇ ದಿನೇ ಟೀಕೆಗಳು ಹೆಚ್ಚಾಗುತ್ತಿವೆ..


