Homeಕರ್ನಾಟಕಎಚ್.ಡಿ.ಕುಮಾರಸ್ವಾಮಿ V/s ಸುಮಲತಾ: ರಾಜಕೀಯ ಕದನಕ್ಕೆ ವಿರಾಮ ನೀಡಲು ಎಚ್‌ಡಿಕೆ ನಿರ್ಧಾರ

ಎಚ್.ಡಿ.ಕುಮಾರಸ್ವಾಮಿ V/s ಸುಮಲತಾ: ರಾಜಕೀಯ ಕದನಕ್ಕೆ ವಿರಾಮ ನೀಡಲು ಎಚ್‌ಡಿಕೆ ನಿರ್ಧಾರ

- Advertisement -
- Advertisement -

ಮಂಡ್ಯದ ಕೆಆರ್‌ಎಸ್‌ ಅಣೆಕಟ್ಟೆ ಸಮೀಪದ‌ ಬೇಬಿ ಬೆಟ್ಟದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆಗೆ ನಡೆಯುತ್ತಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ಸಂಸದೆ ಸುಮಲತಾ ಅಂಬರೀಷ್‌ ನಡುವೆ ನಡೆಯುತ್ತಿದ್ದ ರಾಜಕೀಯ ಕದನಕ್ಕೆ ವಿರಾಮ ಬೀಳುವ ಕಾಲ ಬಂದಿದೆ.

ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ರಾಜಕೀಯ ಕದನಕ್ಕೆ ಬ್ರೇಕ್ ಹಾಕಲು ನಿರ್ಧರಿಸಿದ್ದಾರೆ.

’ಕಾರ್ಯಕರ್ತ ಬಂಧುಗಳೇ, ಅಭಿಮಾನಿ ಅಣ್ಣ ತಮ್ಮಂದಿರೆ, ಅಕ್ಕ ತಂಗಿಯರೇ ನಾವು ಹೋರಾಟ ಮಾಡಬೇಕಾದ ವಿಚಾರ ಬಹಳಷ್ಟಿವೆ. ಕನ್ನಡ, ಕನ್ನಡಿಗ, ಕರ್ನಾಟಕಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನಮಗೆ ಬಹುದೊಡ್ಡ ನ್ಯಾಯ ಸಿಗಬೇಕಿದೆ. ನನ್ನ ಹೋರಾಟವನ್ನು ಈಗಾಗಲೇ ಅತ್ತ ಕೇಂದ್ರೀಕರಿಸಿದ್ದೇನೆ. ನಾಡು ನುಡಿಗಾಗಿ ಹೋರಾಡೋಣ. ಬೇರೆಲ್ಲ ವಿಷಯಗಳನ್ನು ನಾವು ಉಪೇಕ್ಷಿಸೋಣ’ ಎಂದಿದ್ದಾರೆ.

ಇದನ್ನೂ ಓದಿ: ಸಿನಿಮಾ ರಂಗಕ್ಕೂ ಕಾಲಿಟ್ಟ ಸುಮಲತಾ, ಹೆಚ್‌ಡಿಕೆ ವಾಗ್ವಾದ; ಅಣೆಕಟ್ಟೆಯಲ್ಲಿ ಬಿರುಕಿಲ್ಲ ಎಂದ ಸರ್ಕಾರ!

’ಪ್ರಾದೇಶಿಕ ಪಕ್ಷವಾಗಿ ನಾವು ಮಾತಾಡುವುದಿದೆ, ಮಾತಾಡೋಣ. ಪ್ರಾದೇಶಿಕ ವಿಚಾರಗಳು ಇತ್ತೀಚೆಗೆ ಗೌಣವಾಗುತ್ತಿವೆ, ಅದರ ಬಗ್ಗೆ ಮಾತಾಡೋಣ. ಒಕ್ಕೂಟ ವ್ಯವಸ್ಥೆಯಲ್ಲಿ ನಮಗೆ ಆಗುತ್ತಿರುವ ಅನ್ಯಾಯಗಳ ಬಗ್ಗೆ ನಾವು ದೊಡ್ಡದಾಗಿ ಕೂಗಿ ಹೇಳೋಣ. ಪ್ರಾದೇಶಿಕ ಅಸ್ಮಿತೆಯ ವಿಚಾರವನ್ನು ಜನರೊಂದಿಗೆ ಪ್ರಸ್ತಾಪಿಸೋಣ. ಆದರೆ, ಅನಗತ್ಯ ಮಾತು ಅನಗತ್ಯವಷ್ಟೆ’ ಎಂದಿದ್ದಾರೆ.

’ನಾವು ಸಿಡಿಯಬೇಕಾದ ಪರಿಸ್ಥಿತಿ ಇದೆ, ಸಿಡಿಯೋಣ. ಕಾವೇರಿ ಜಲದ ಯೋಜನೆಗಳಿಗೆ ತಡೆಯೊಡ್ಡುತ್ತಿರುವವರ ವಿರುದ್ಧ ಸಿಡಿಯೋಣ. ನಮ್ಮ ನೆಲದಲ್ಲಿ ನಮ್ಮ ಕನ್ನಡ ಧ್ವಜವನ್ನು ಹಾರಿಸಲು ಬಿಡಲೊಲ್ಲದ ಪಟ್ಟಭದ್ರರ ವಿರುದ್ಧ ಸಿಡಿಯೋಣ. ನಮಗೆ ನೀಡಬೇಕಾದ ಪರಿಹಾರ, ಅನುದಾನ ನೀಡದ ವ್ಯವಸ್ಥೆಯ ವಿರುದ್ಧ ಸಿಡಿಯ ಬೇಕಾಗಿದೆ ಸಿಡಿಯೋಣ. ಇದು ನಮ್ಮ ಆಯ್ಕೆಯಾಗಲಿ’ ಎಂದು ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.

’ಕೋವಿಡ್‌ ಕಾಲದಲ್ಲಿ ಜೆಡಿಎಸ್‌ ರಾಜಕೀಯ ಮಾಡಲಿಲ್ಲ. ಆದರೆ, ಜನರ ಪರ ನಿಲ್ಲುವುದನ್ನು ಮರೆಯಲಿಲ್ಲ, ಸರ್ಕಾರವನ್ನು ಎಚ್ಚರಿಸದೇ ಇರಲಿಲ್ಲ. ಕರ್ನಾಟಕ, ಕನ್ನಡಿಗರಿಗೆ ಅಪಮಾನವಾದಾಗ ಸಿಡಿಯಲು ಒಂದು ಕ್ಷಣವೂ ತಡ ಮಾಡಿಲ್ಲ. ನಾವು ರಾಜಕೀಯ ಮಾಡೋಣ, ಕರ್ನಾಟಕ ಕೇಂದ್ರಿತ ರಾಜಕಾರಣ ಮಾಡೋಣ. ನಮ್ಮ ಮೇಲಿನ ಆರೋಪಗಳನ್ನು ಜನರ ತೀರ್ಮಾನಕ್ಕೆ ಬಿಡೋಣ’ ಎಂದು ಎಚ್‌ಡಿಕೆ ಕದನಕ್ಕೆ ವಿರಾಮ ಹಾಕುವ ನಿರ್ಧಾರಕ್ಕೆ ಬಂದಿದ್ದಾರೆ.

ಎಚ್‌ಡಿಕೆ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಸಂಸದೆ ಸುಮಲತಾ, ಈ ವಿಷಯವನ್ನು ಶುರು ಮಾಡಿದ್ದು ಅವರು. ಅಂತ್ಯ ಮಾಡುತ್ತೇನೆ ಅಂದರೆ ಸಂತೋಷ. ನಾನು ಯಾವತ್ತೂ ಇದನ್ನು ವಿವಾದ ಮಾಡಬೇಕು ಎಂದುಕೊಳ್ಳಲಿಲ್ಲ. ಇದರಲ್ಲಿ ಖಾಸಗಿ ವಿಷಯಗಳನ್ನು ತರಬೇಕು ಎಂಬ ಉದ್ದೇಶ ನನಗೆ ಇರಲಿಲ್ಲ’ ಎಂದಿದ್ದಾರೆ.


ಇದನ್ನೂ ಓದಿ: ಸಂಸದೆ ಸುಮಲತಾ ದಾಖಲೆ ನೀಡಿದರೆ ಅಕ್ರಮ ಗಣಿಗಾರಿಕೆಯ ತನಿಖೆ – ಮುರುಗೇಶ್ ನಿರಾಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಷ್ಟು ವರ್ಷಗಳ ಸಾರ್ವಜನಿಕ ಜೀವನದಲ್ಲಿ ಎಚ್ ಡಿಕೆ, ಟೀಕೆ ಮಾಡುವಾಗ ಭಾಷೆಯ ಬಳಕೆಯನ್ನೇ ತಿಳಿದಿಲ್ಲ ಎನ್ನುವುದು ನೋವಿನ ವಿಷಯ! ಭಾಷೆಯ ಬಳಕೆಯಲ್ಲಿ ತಾನು ಹಿಡಿತ ತಪ್ಪಿದೆ ಎಂದು ಹೇಳಿ ವಿಷಾದ ವ್ಯಕ್ತಪಡಿಸುವುದು ಅವಶ್ಯ ಮತ್ತು ರಾಜಕೀಯ ಹಿರಿತನಕ್ಕೆ ಶೋಭೆ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...