Homeಕರ್ನಾಟಕಜನಾದೇಶದ ಬಲದಿಂದ ಬಿ.ಎಸ್.ಯಡಿಯೂರಪ್ಪ ಅವರು ಎಂದೂ ಮುಖ್ಯಮಂತ್ರಿಯಾಗಿಲ್ಲ: ಸಿದ್ದರಾಮಯ್ಯ

ಜನಾದೇಶದ ಬಲದಿಂದ ಬಿ.ಎಸ್.ಯಡಿಯೂರಪ್ಪ ಅವರು ಎಂದೂ ಮುಖ್ಯಮಂತ್ರಿಯಾಗಿಲ್ಲ: ಸಿದ್ದರಾಮಯ್ಯ

- Advertisement -
- Advertisement -

ಇಂದು ಸದನದ ವಿಶ್ವಾಸಮತ ಗೆದ್ದು ಬಿ.ಎಸ್ ಯಡಿಯೂರಪ್ಪನವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ಅಧಿಕೃತತೆಯನ್ನು ಮತ್ತಷ್ಟು ದೃಢಪಡಿಸಿಕೊಂಡಿದ್ದಾರೆ. ಅವರು ಮುಖ್ಯಮಂತ್ರಿ ಆದ ಕೂಡಲೇ ಸಿಎಂ ಸಿದ್ದರಾಮಯ್ಯನವರು ಆಡಿರುವ ಮಾತುಗಳು ಇಲ್ಲಿವೆ.

“ಜನಾದೇಶದ ಬಲದಿಂದ ಬಿ.ಎಸ್.ಯಡಿಯೂರಪ್ಪ ಅವರು ಎಂದೂ ಮುಖ್ಯಮಂತ್ರಿಯಾಗಿಲ್ಲ. ಈ ಬಾರಿ ಕೂಡಾ ಅವರ ಮೇಲೆ ರಾಜ್ಯದ ಜನತೆಗೆ ವಿಶ್ವಾಸ ಇಲ್ಲ. ಅಕ್ರಮ ಮಾರ್ಗಗಳ ಮೂಲಕ ಸದನದ ವಿಶ್ವಾಸ ಸಂಪಾದನೆ ಮಾಡಲು ಹೊರಟಿರುವ ಅವರ ಪ್ರಯತ್ನದಲ್ಲಿ ಯಶಸ್ಸು ಗಳಿಸಿದರೂ ಅದು ತಾತ್ಕಾಲಿಕ. ಈ ಸರ್ಕಾರ ಬಹಳ ದಿನ ಬಾಳಲಾರದು.

ಬಿ.ಎಸ್. ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾರೆ, ಅವರಿಗೆ ಅಭಿನಂದನೆಗಳು. ಮುಖ್ಯಮಂತ್ರಿಯಾಗಿ ತಮ್ಮ ಅವಧಿ ಪೂರ್ಣಗೊಳಿಸಬೇಕೆಂಬುದು ನಮ್ಮ‌ ಆಶಯ. ಆದರೆ, ಎಷ್ಟು ‌ದಿನ ಅವರು ಅಧಿಕಾರದಲ್ಲಿ ಇರುತ್ತಾರೋ ಮುಂದೆ ನೋಡೋಣ.

ಮೈತ್ರಿ ಸರ್ಕಾರ ಜನ ಮೆಚ್ಚುಗೆಯ ಆಡಳಿತ ನೀಡಿದೆ. ಜನಸೇವೆಯನ್ನು ಪ್ರಾಮಾಣಿಕವಾಗಿ ಮಾಡಿದ್ದೇವೆ. ನನ್ನ ಕೊನೆಯ ಬಜೆಟ್‌ನಲ್ಲಿ ಖುಷ್ಕಿ ಭೂಮಿಯ ರೈತರಿಗೆ ರೂ.10 ಸಾವಿರ ನೀಡುವ ಯೋಜನೆ ತಂದಿದ್ದೆವು. ನೇಕಾರರ ಸಾಲ ಮನ್ನಾ ಕೂಡಾ ನಮ್ಮ ಸರ್ಕಾರದ ಅವಧಿಯಲ್ಲಿ ಮಾಡಲಾಗಿತ್ತು.

ಅದನ್ನೇ ಯಡಿಯೂರಪ್ಪರವರು ಪುನರುಚ್ಚಾರ ಮಾಡಿದ್ದಾರೆ. ಅವರಿಗೆ ನನ್ನ ಅಭಿನಂದನೆಗಳು.” ಎಂದು ತಮ್ಮ ಫೇಸ್ ಬುಕ್ ನಲ್ಲಿಯೂ ಸಹ ಬರೆದುಕೊಂಡಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಕೊಲೆಗೆ ರಾಜಕೀಯ ಬಣ್ಣ ಬಳಿದ ಅಣ್ಣಾಮಲೈ: ಪ್ರಕರಣ ದಾಖಲು

0
ಮಹಿಳೆಯೋರ್ವರ ಸಾವಿಗೆ ಸಂಬಂಧಿಸಿ ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಮಾಹಿತಿ ಪೋಸ್ಟ್ ಮಾಡಿದ ಆರೋಪದ ಮೇಲೆ ಬಿಜೆಪಿಯ ತಮಿಳುನಾಡು ರಾಜ್ಯ ಘಟಕದ ಮುಖ್ಯಸ್ಥ ಕೆ ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ತಮಿಳುನಾಡಿನ ಕಡಲೂರು ಜಿಲ್ಲೆಯ ಪಕ್ಕಿರಿಮಣಿಯಂ...