Homeಮುಖಪುಟಬೀದರ್‌ನ ಶಾಹಿನ್ ಶಾಲೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭೇಟಿ..

ಬೀದರ್‌ನ ಶಾಹಿನ್ ಶಾಲೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭೇಟಿ..

- Advertisement -
- Advertisement -

ಸಿಎಎ ವಿರುದ್ಧದ ನಾಟಕವಾಡಿಸಿದ ಕಾರಣಕ್ಕೆ ವಿವಾದದಲ್ಲಿರುವ ಬೀದರ್‌ನ ಶಾಹಿನ್ ಶಾಲೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭೇಟಿ ನೀಡಿ, ಆಡಳಿತ ಮಂಡಳಿಯೊಂದಿಗೆ ಮಾತುಕತೆ ನಡೆಸಿದ್ದಾರೆ.

ವಿದ್ಯಾರ್ಥಿಗಳು ಅಭಿನಯಿಸಿದ್ದ ಸಣ್ಣ ನಾಟಕದಿಂದಾಗಿ ರಾಜದ್ರೋಹದ ಆರೋಪ ಎದುರಿಸುತ್ತಿರುವ ಬೀದರ್‌ನ ಶಾಹಿನ್ ಶಾಲೆಗೆ ಹೋಗಿ ಅಲ್ಲಿನ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಜೊತೆ ಮಾತನಾಡಿ ಧೈರ್ಯ ತುಂಬಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ನಂತರ ಬಂಧಿತರಾಗಿರುವ ವಿದ್ಯಾರ್ಥಿನಿಯ ತಾಯಿ ನಜ್ಬುನ್ನಿಸಾ ಮತ್ತು ಶಿಕ್ಷಕಿ ಫರಿದಾ ಬೇಗಮ್ ಅವರನ್ನು ಜೈಲಿನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಪುಟ್ಟ‌ ಮಕ್ಕಳ ನಾಟಕದ ಮಾತುಗಳನ್ನು ಕೂಡಾ ಸಹಿಸಿಕೊಳ್ಳದೆ ಸೇಡಿಗೆ ಇಳಿದಿರುವ ಬಿಜೆಪಿ ಸೈದ್ಧಾಂತಿಕವಾಗಿ ದಿವಾಳಿಯಾಗಿರುವುದಕ್ಕೆ ಸಾಕ್ಷಿ. ಬೇಟಿ ಬಚಾವೋ‌ ಎಂದು ಕೂಗುತ್ತಾ ತಮ್ಮ ಬೆನ್ನನ್ನು ತಾವೆ ಚಪ್ಪರಿಸಿಕೊಳ್ಳುತ್ತಿರುವ ಪ್ರಧಾನಿ ಮೋದಿ‌ಯವರಿಗೆ ಬೀದರ್‌ನ‌ ಶಾಹಿನ್ ಶಾಲೆಯ ವಿದ್ಯಾರ್ಥಿನಿ ತನ್ನದಲ್ಲದ ತಪ್ಪಿಗೆ ತಾಯಿಯಿಂದ ದೂರವಾಗಿ ಮಾನಸಿಕ ಕ್ಷೋಭೆಗೊಳಗಾಗಿರುವುದು ಕಾಣ್ತಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಜನವರಿ 20ರಂದು ಈ ಶಾಲೆಯಲ್ಲಿ ಸಿಎಎ ವಿರುದ್ಧ ಪಠ್ಯೇತರ ಚಟುವಟಿಕೆಗಳ ಭಾಗವಾಗಿ ಮಕ್ಕಳಿಂದ ನಾಟಕ ಆಡಿಸಲಾಗಿತ್ತು. ಅದರಲ್ಲಿ ಯಾರಾದರೂ ದಾಖಲೆ ಕೇಳಿಬಂದರೆ ಚಪ್ಪಲಿಯಲ್ಲಿ ಹೊಡೆಯಿರಿ ಎಂಬ ಸಂಭಾಷಣೆ ಇದ್ದ ಕಾರಣ ದೂರು ದಾಖಲಾಗಿತ್ತು.

ನಂತರ ಪೊಲೀಸರು ಶಾಲೆಯ ಮುಖ್ಯಶಿಕ್ಷಕಿ ಫರೀದಾ ಬೇಗಂ ಮತ್ತು ಶಾಲೆಯ ಮಗುವಿನ ತಾಯಿ ನೈಜುಬುನ್ನೀಶ ಎಂಬುವವರನ್ನು ಕಳೆದ 15 ದಿನಗಳಿಂದ ಬಂಧಿಸಿ ಜೈಲಿನಟ್ಟಿದ್ದಾರೆ. ಇಂದು ಅವರ ಜಾಮೀನು ವಿಚಾರಣೆಯ ತೀರ್ಪು ಬರಬೇಕಿದೆ.

ಬಿಜೆಪಿ ಸರ್ಕಾರವು ಪೊಲೀಸ್ ಇಲಾಖೆಯನ್ನು ದುರುಪಯೋಗಿಸಿಕೊಂಡು ಪೌರತ್ವ ತಿದ್ದುಪಡಿ ಕಾಯಿದೆಯನ್ನು ವಿರೋಧಿಸಿದ ಕಾರಣಕ್ಕೆ ಶಿಕ್ಷಕರು ಮತ್ತು ಪೋಷಕರ ಮೇಲೆ ದೇಶದ್ರೋಹದ ಮೊಕದ್ದಮೆ ಹೂಡಿದ್ದಾರೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

ಬೀದರ್ ಶಾಲೆಯಲ್ಲಿ ಪ್ರದರ್ಶನವಾದ ನಾಟಕವೊಂದರ ವಿಷಯವು ನರೇಂದ್ರ ಮೋದಿ ಮತ್ತು ಅವರ ನೀತಿಗಳನ್ನು ಟೀಕಿಸಿತು. ಅದು ಹೇಗೆ ದೇಶದ್ರೋಹವಾಗುತ್ತದೆ? ತಾಯಿಯನ್ನು ಬಂಧಿಸುವುದು ಅಸಂವಿಧಾನಿಕ ಮತ್ತು ಖಂಡನಾರ್ಹವಾಗಿದೆ. ತಾಯಿ ಮತ್ತು ಮಗಳನ್ನು ಬೇರ್ಪಡಿಸಿದ್ದಕ್ಕಾಗಿ ಈ ರಾಜ್ಯದ ತಾಯಂದಿರು ಬಿ ಎಸ್ ಯಡಿಯೂರಪ್ಪ ಅವರನ್ನು ಕ್ಷಮಿಸುವುದಿಲ್ಲ ಎಂದು ನಿನ್ನೆ ಸಿದ್ದರಾಮಯ್ಯ ಕಿಡಿಕಾರಿದ್ದರು.

ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ ಸಹ ಅವರ ಜೊತೆಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...