Homeಮುಖಪುಟಜಮ್ಮು ಕಾಶ್ಮೀರ: ಕಾಂಗ್ರೆಸ್‌ಗೆ ಮರಳಿದ ಮಾಜಿ ಸಚಿವ ಚೌಧರಿ ಲಾಲ್ ಸಿಂಗ್

ಜಮ್ಮು ಕಾಶ್ಮೀರ: ಕಾಂಗ್ರೆಸ್‌ಗೆ ಮರಳಿದ ಮಾಜಿ ಸಚಿವ ಚೌಧರಿ ಲಾಲ್ ಸಿಂಗ್

- Advertisement -
- Advertisement -

ಜಮ್ಮು ಮೂಲದ ‘ಡೋಗ್ರಾ ಸ್ವಾಭಿಮಾನ್ ಸಂಘಟನ್’ (ಡಿಎಸ್‌ಎಸ್) ಸಂಸ್ಥಾಪಕ ಮತ್ತು ಮಾಜಿ ಸಚಿವ ಚೌಧರಿ ಲಾಲ್ ಸಿಂಗ್ ಬುಧವಾರ ನವದೆಹಲಿಯಲ್ಲಿ ಕಾಂಗ್ರೆಸ್‌ಗೆ ಮರು ಸೇರ್ಪಡೆಗೊಂಡಿದ್ದಾರೆ.

ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ, ಸತತ ಎರಡು ಬಾರಿ ಉಧಮ್‌ಪುರ ಕ್ಷೇತ್ರದಿಂದ ಗೆದ್ದಿರುವ ಕೇಂದ್ರ ಸಚಿವ ಬಿಜೆಪಿಯ ಜಿತೇಂದರ್ ಸಿಂಗ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ.

2014 ರ ಸಾರ್ವತ್ರಿಕ ಚುನಾವಣೆಯ ನಂತರ ಕಾಂಗ್ರೆಸ್ ತೊರೆದ ಸಿಂಗ್, ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ನಂತರ ಪಿಡಿಪಿ-ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದರು. ಕಥುವಾ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಆರೋಪಿಗಳ ವಿರುದ್ಧದ ರ್‍ಯಾಲಿಯಲ್ಲಿ ಭಾಗವಹಿಸಿದ್ದಕ್ಕಾಗಿ ಅವರನ್ನು ಸಂಪುಟದಿಂದ ತೆಗೆದು ಹಾಕಲಾಗಿತ್ತು.

ಬಳಿಕ ಬಿಜೆಪಿ ತೊರೆದ ಲಾಲ್ ಸಿಂಗ್, ಡಿಎಸ್ಎಸ್ ಅನ್ನು ಪ್ರಾರಂಭಿಸಿದ್ದರು. ಜಮ್ಮುವಿನ ಡೋಗ್ರಾಗಳ ಹಕ್ಕುಗಳಾಗಿ ಹೋರಾಟ ರೂಪಿಸಿದ್ದರು. 2019 ರಲ್ಲಿ, ಅವರು ಉಧಮ್‌ಪುರ-ದೋಡಾ ಕ್ಷೇತ್ರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಆದರೆ, ಬಿಜೆಪಿ ಅಭ್ಯರ್ಥಿ ವಿರುದ್ಧ ಭಾರೀ ಅಂತರದಿಂದ ಸೋಲನುಭವಿಸಿದ್ದರು.

ಉಧಮ್‌ಪುರದಿಂದ ಎರಡು ಬಾರಿ ಸಂಸದರಾಗಿರುವ ಲಾಲ್ ಸಿಂಗ್ ಕಾಂಗ್ರೆಸ್‌ಗೆ ಮರಳಿರುವುದು ಜಮ್ಮುವಿನಲ್ಲಿ ಪಕ್ಷದ ನಿರೀಕ್ಷೆಯನ್ನು ಹೆಚ್ಚಿಸಿದೆ.

ಲಾಲ್ ಸಿಂಗ್ ಕಾಂಗ್ರೆಸ್‌ಗೆ ಮರಳುವುದರೊಂದಿಗೆ, ಉಧಮ್‌ಪುರ-ದೋಡಾ ಕ್ಷೇತ್ರದ ಚುನಾವಣಾ ಕಣ ರಂಗೇರಿದೆ. ಮಾಜಿ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ನೇತೃತ್ವದ ಡೆಮಾಕ್ರಟಿಕ್ ಆಜಾದ್ ಪಕ್ಷವು ಜಿ.ಎಂ. ಸರೂರಿ ಅವರನ್ನು ಉಧಮ್‌ಪುರ ಕ್ಷೇತ್ರದಿಂದ ಕಣಕ್ಕಿಳಿಸುವ ಸಾಧ್ಯತೆ ಇದೆ. ಸರೂರಿ ಮುಸ್ಲಿಂ ಮತಗಳನ್ನು ವಿಭಜಿಸಿದರೆ ಬಿಜೆಪಿಗೆ ಲಾಭವಾಗಬಹುದು.

ಲಾಲ್ ಸಿಂಗ್ ಪಕ್ಷಕ್ಕೆ ಮರಳಿರುವುದು ಆಂತರಿಕವಾಗಿ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ವರದಿಗಳು ಹೇಳಿವೆ. ಆದರೂ, ಅವರ ಮೇಲೆ ಪಕ್ಷ ಭರವಸೆಯಿಟ್ಟಿದೆ. ಬಿಜೆಪಿ ವಿರುದ್ದದ ಮುಸ್ಲಿಂ ಮತಗಳು ಲಾಲ್ ಸಿಂಗ್ ಪಡೆಯಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ : ಬಿಹಾರ: ‘ಜನ್ ಅಧಿಕಾರ್ ಪಕ್ಷ’ವನ್ನು ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸಿದ ಪಪ್ಪು ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪವಾಸ ಕೊನೆಗೊಳಿಸಲು ನಿರಾಕರಿಸಿದ ಸೋನಮ್ ವಾಂಗ್‌ಚುಕ್ : 19ನೇ ದಿನವೂ ಮುಂದುವರಿದ ಸತ್ಯಾಗ್ರಹ; ಇನ್ನಷ್ಟು ಹದಗೆಟ್ಟ ಆರೋಗ್ಯ

ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ಮಧ್ಯಸ್ಥಿಕೆಗಳ ಮೂಲಕ ಪದೇ ಪದೇ ಮನವಿ ಮಾಡಿಕೊಂಡಿದ್ದರೂ ಸಹ, ಹೋರಾಟಗಾರ ಸೋನಮ್ ವಾಂಗ್‌ಚುಕ್ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...