Homeಕರ್ನಾಟಕಮಾಜಿ ಸಚಿವ, ಹಿರಿಯ ರಾಜಕಾರಣಿ ಡಿ.ಬಿ. ಚಂದ್ರೇಗೌಡ ನಿಧನ

ಮಾಜಿ ಸಚಿವ, ಹಿರಿಯ ರಾಜಕಾರಣಿ ಡಿ.ಬಿ. ಚಂದ್ರೇಗೌಡ ನಿಧನ

- Advertisement -
- Advertisement -

ಮಾಜಿ ಸಚಿವ, ಬಿಜೆಪಿ ನಾಯಕ ಡಿ.ಬಿ. ಚಂದ್ರೇಗೌಡ ಅವರು ಮೂಡಿಗೆರೆ ತಾಲೂಕಿನ ದಾಸರಹಳ್ಳಿಯಲ್ಲಿ ನಿಧನರಾಗಿದ್ದಾರೆ.

87ರ ಹರೆಯದ ಡಿ.ಬಿ. ಚಂದ್ರೇಗೌಡ ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಶಾಸಕರಾಗಿ, ಸಂಸದರಾಗಿ, ಸಚಿವರಾಗಿ ಕಾರ್ಯನಿರ್ವಹಿಸಿದ್ದ ಚಂದ್ರೇಗೌಡರು ರಾಜ್ಯದ ಹಿರಿಯ ರಾಜಕಾರಣಿಯಾಗಿದ್ದರು. ಚಂದ್ರೇಗೌಡ ಅವರ ಪಾರ್ಥೀವ ಶರೀರವನ್ನು ಇಂದು ಮಧ್ಯಾಹ್ನ 2 ರಿಂದ ಸಂಜೆ 6 ರವರೆಗೆ ಮೂಡಿಗೆರೆ ಅಡ್ಯಂತಾಯ ರಂಗದಮಂದಿರದಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುವುದು. ಬುಧವಾರ ದಾರದಹಳ್ಳಿಯ ಅವರ ಪೂರ್ಣಚಂದ್ರ ಎಸ್ಟೇಟ್‌ನಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿದೆ.

1936ರಲ್ಲಿ ಜನಿಸಿದ ದಾರದಹಳ್ಳಿ ಬೈರೇಗೌಡ ಚಂದ್ರೇಗೌಡ ಅವರು ಬೆಂಗಳೂರಿನ ರೇಣುಕಾಚಾರ್ಯ ಕಾಲೇಜಿನಲ್ಲಿ ಬಿಎಸ್ಸಿ ಶಿಕ್ಷಣವನ್ನು ಮತ್ತು ಬೆಳಗಾವಿಯ ಆರ್.ಎಲ್. ಕಾನೂನು ಕಾಲೇಜಿನಲ್ಲಿ ಎಲ್.ಎಲ್.ಬಿ. ಪದವಿ ಪಡೆದಿದ್ದರು. ಕರ್ನಾಟಕ ವಿಧಾನಸಭೆಯ ಮಾಜಿ ಸ್ಪೀಕರ್‌, ಮೂರು ಅವಧಿಗೆ ಶಾಸಕ, ಒಂದು ಅವಧಿಗೆ ವಿಧಾನಪರಿಷತ್‌ ಸದಸ್ಯರಾಗಿ ಮತ್ತು 3 ಬಾರಿ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದರು.

ಡಿ.ಬಿ. ಚಂದ್ರೇಗೌಡ ಅವರು 1967ರವರೆಗೆ ಪ್ರಜಾ ಸೋಷಿಯಲಿಸ್ಟ್ ಪಕ್ಷದಲ್ಲಿದ್ದರು. 1971 ರಲ್ಲಿ ಅವರು  ಕಾಂಗ್ರೆಸ್ ಪಕ್ಷದಿಂದ ಚಿಕ್ಕಮಗಳೂರು ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದರು. ಅವರು ಚಿಕ್ಕಮಗಳೂರಿನಿಂದ 6ನೇ ಲೋಕಸಭೆಗೆ ಮರು ಆಯ್ಕೆಯಾಗಿದ್ದರು. ಆದರೆ ಇಂದಿರಾ ಗಾಂಧಿಯವರಿಗೆ ಸ್ಪರ್ಧಿಸಲು ಅವಕಾಶ ಮಾಡಿಕೊಡಲು ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಬಳಿಕ ವಿಧಾನ ಪರಿಷತ್ತಿನ ಸದಸ್ಯರಾಗಿ ಮುಖ್ಯಮಂತ್ರಿ ದೇವರಾಜು ಅರಸು ಅವರ ಸಂಪುಟದಲ್ಲಿ 1979-1980 ಅವಧಿಯಲ್ಲಿ ನೀರಾವರಿ ಸಚಿವರಾಗಿದ್ದರು. 1980-81ರ ಅವಧಿಯಲ್ಲಿ ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸಿದ್ದರು.

1983ರಲ್ಲಿ ಜನತಾ ಪಕ್ಷದಿಂದ ತೀರ್ಥಹಳ್ಳಿ ಕ್ಷೇತ್ರದಿಂದ ವಿಧಾನಸಭಾ ಸದಸ್ಯರಾಗಿ ಆಯ್ಕೆಯಾದರು. ರಾಮಕೃಷ್ಣ ಹೆಗ್ಡೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ 1983-85ರವರೆಗೆ ಚಂದ್ರೇಗೌಡರು ವಿಧಾನಸಭಾ ಸ್ಪೀಕರ್ ಆಗಿಯೂ ಕಾರ್ಯನಿರ್ವಹಿಸಿದ್ದರು. 1986ರಲ್ಲಿ ಇವರು ಜನತಾ ಪಕ್ಷದಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದರು. 1987ರಲ್ಲಿ ತೀರ್ಥಹಳ್ಳಿ ಕ್ಷೇತ್ರದಿಂದ 2ನೇ ಬಾರಿಗೆ ವಿಧಾನಸಭೆಗೆ ಪ್ರವೇಶ ಪಡೆದಿದ್ದರು.

1999ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಶೃಂಗೇರಿ ಕ್ಷೇತ್ರದಿಂದ ಆಯ್ಕೆಯಾಗಿ 1999ರಿಂದ 2004ರವರೆಗೆ ಎಸ್.ಎಂ. ಕೃಷ್ಣಾ ಅವರ ಸಂಪುಟದಲ್ಲಿ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾಗಿದ್ದರು. ಇದೇ ಅವಧಿಯಲ್ಲಿ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. 2008ರಲ್ಲಿ ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು. 2009ರಲ್ಲಿ ಬಿಜೆಪಿಯಿಂದ ಬೆಂಗಳೂರು ಉತ್ತರ ಕ್ಷೇತ್ರದ ಸಂಸದರಾಗಿದ್ದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...