Homeಕರ್ನಾಟಕಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್

- Advertisement -
- Advertisement -

ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಅವರು ಬಿಜೆಪಿ ತೊರೆದು ಇಂದು (ಏ.19) ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಮಾಲೀಕಯ್ಯ ಗುತ್ತೇದಾರ್‌ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಬರ ಮಾಡಿಕೊಂಡರು. ಈ ವೇಳೆ ಸಚಿವರಾದ ಕೆ.ಎನ್.ರಾಜಣ್ಣ, ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲೇ ಇದ್ದ ಗುತ್ತೇದಾರ್ ಅವರು ಬಳಿಕ ಜಿಲ್ಲೆಯಲ್ಲಿ ರಾಜಕೀಯ ಅಸಮಾಧಾನದಿಂದ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. 2018 ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಅಫಜಲಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂ ವೈ ಪಾಟೀಲ್ ವಿರುದ್ಧ ಸ್ಪರ್ಧಿಸಿ ಸೋತಿದ್ದರು.

ಇದನ್ನೂ ಓದಿ : ಕೋವಿಡ್ ಭ್ರಷ್ಟ ಸುಧಾಕರ್ ಪರವಾಗಿ ಮತ ಕೇಳಲು ಪ್ರಧಾನಿ ಮೋದಿ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾರೆ : ಸಿಎಂ ಸಿದ್ದರಾಮಯ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಚುನಾವಣೆ ಪ್ರಚಾರದಲ್ಲಿ ಪದೇ ಪದೇ ಸುಳ್ಳು ಹೇಳುತ್ತಿರುವುದರಿಂದ…..’,: ಮೋದಿಗೆ ಕಾಂಗ್ರೆಸ್‌ ಪ್ರಣಾಳಿಕೆಯನ್ನು ವಿವರಿಸಿ ಪತ್ರ...

0
ಕಾಂಗ್ರೆಸ್‌ ಪ್ರಣಾಳಿಕೆಯ ಬಗ್ಗೆ ಮೋದಿ, ಅಮಿತ್‌ ಶಾ ಚುನಾವಣಾ ಭಾಷಣದಲ್ಲಿ ಸುಳ್ಳು ಆಪಾದನೆ ಮಾಡುತ್ತಿರುವ ಮಧ್ಯೆ ಕಾಂಗ್ರೆಸ್‌ ಪ್ರಣಾಳಿಕೆ ಬಗ್ಗೆ ಚರ್ಚೆಗೆ ನರೇಂದ್ರ ಮೋದಿ ಅಥವಾ ಅವರಿಂದ ನಿಯೋಜಿಸಲ್ಪಟ್ಟ ಯಾರಾದರು ಬನ್ನಿ ಎಂದು...