Homeಕರ್ನಾಟಕಮಾಜಿ ಶಾಸಕ ರಾಮಪ್ಪ ಲಮಾಣಿ ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆ

ಮಾಜಿ ಶಾಸಕ ರಾಮಪ್ಪ ಲಮಾಣಿ ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆ

- Advertisement -
ಶಿರಹಟ್ಟಿ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕ ರಾಮಪ್ಪ ಲಮಾಣಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರ ಸಮ್ಮುಖದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ.
- Advertisement -

ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ‌ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್‌ ಅವರ ನೇತೃತ್ವದದಲ್ಲಿ ರಾಮಪ್ಪ ಲಮಾಣಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ.

ಇದಕ್ಕೂ ಮೊದಲು ಬಿಜೆಪಿಯ  ಮಾಜಿ ಶಾಸಕರುಗಳಾದ  ರಾಮಪ್ಪ ಲಮಾಣಿ ಮತ್ತು ಎಂಪಿ ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿ ಕಾಂಗ್ರೆಸ್‌ ಸೇರ್ಪಡೆಯ ಬಗ್ಗೆ ಇಂಗಿತವನ್ನು ವ್ಯಕ್ತಪಡಿಸಿದ್ದರು.

ಬಿಜೆಪಿಯ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯ ಘೋಷಣೆ ಮಾಡಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿತ್ತು.

ಕಾಂಗ್ರೆಸ್‌ ಸೇರ್ಪಡೆ ಬಗ್ಗೆ ಮಾತನಾಡಿದ ರಾಮಪ್ಪ ಲಮಾಣಿ, ಉತ್ತರ ಕರ್ನಾಟಕ ಭಾಗದ ಮಾಜಿ ಶಾಸಕರುಗಳಿಗೆ ಜಗದೀಶ್ ಶೆಟ್ಟರ್ ಗಾಳ ಹಾಕಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಜನ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಮುಂದಿನ ದಿನಗಳಲ್ಲಿ ಬಿಜೆಪಿ ನೆಲಕಚ್ಚಲಿದೆ ಎಂದು ಹೇಳಿದ್ದಾರೆ.

ಬಿಜೆಪಿಯಲ್ಲಿ ಈಗ ನಾಯಕರೇ ಇಲ್ಲ, ಬಿಜೆಪಿ ನಾಯಕರೇ ಇಲ್ಲದ ಪಕ್ಷವಾಗಿದೆ. ಈ ಬಾರಿಯ ಚುನಾವಣೆಯಲ್ಲಿ 40 ಸ್ಥಾನಕ್ಕೆ ಬಿಜೆಪಿ ಕುಸಿಯುತ್ತಿತ್ತು, ಆದರೆ ಕಡಿಮೆ ಅಂತರದಲ್ಲಿ 15-20 ಜನರು ಗೆಲುವು ಕಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನು ಓದಿ: ತೀರ್ಪಿನ ಶೀರ್ಷಿಕೆಯಲ್ಲಿ ಆರೋಪಿಯ ಜಾತಿ ನಮೂದಿಗೆ ಆಕ್ಷೇಪಿಸಿದ ಸುಪ್ರೀಂಕೋರ್ಟ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...