Homeಮುಖಪುಟಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

- Advertisement -
- Advertisement -

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ.

ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ ಬೇಲಿಯ ಹೊರಗಿದ್ದ ಮರದಿಂದ ಹಣ್ಣನ್ನು ಕೀಳಲು ಯತ್ನಿಸಿದಾಗ, ಆತ ಆಕೆಯನ್ನು ಹಿಡಿದು ತನ್ನ ಮನೆಯೊಳಗೆ ಕರೆದೊಯ್ದು, ಮೆಟ್ಟಿಲ ಸರಪಳಿಗೆ ಕೈಕಾಲುಗಳನ್ನು ಕಟ್ಟಿಹಾಕಿ ಹೊಡೆದಿದ್ದಾರೆ ಎಂದು ವರದಿಯಾಗಿದೆ.

ದಾರಿಯಲ್ಲಿ ಹಾದು ಹೋಗುತ್ತಿದ್ದ ಮರ್ಚೆಂಟ್ ನೇವಿಯ ಉದ್ಯೋಗಿ ರೋಹಿತ್ ಜೈಸ್ವಾಲ್ ಎಂಬುವವರು ಮಗುವಿನ ಚೀರಾಟ ಕೇಳಿ ಒಳಗೆ ಹೋಗಿ ರಕ್ಷಿಸಿದ್ದಾರೆ. ಅವರು ಘಟನೆಯ ವಿಡಿಯೋ ಕೂಡ ಮಾಡಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿಡಿಯೋ ವೈರಲ್ ಆದ ನಂತರ ಉನಾ ಜಿಲ್ಲಾಡಳಿತ ಮತ್ತು ಪೊಲೀಸರು ಕ್ರಮ ಕೈಗೊಂಡಿದ್ದು, ಆರೋಪಿಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಸಂತ್ರಸ್ತ ಬಾಲಕಿಯು ವಲಸೆ ಕಾರ್ಮಿಕ ಕುಟುಂಬಕ್ಕೆ ಸೇರಿದವಳಾಗಿದ್ದು, ಆಕೆಯ ಕುಟುಂಬದವರು ಸಮೀಪದ ಗುಡಿಸಲಿನಲ್ಲಿ ವಾಸಿಸುತ್ತಿದ್ದಾರೆ ಎಂದು ವರದಿಗಳು ಹೇಳಿವೆ.

ಘಟನೆಯ ನಂತರ ನಿವೃತ್ತ ಸೇನಾಧಿಕಾರಿಯು ತನ್ನ ಕೃತ್ಯಕ್ಕೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ ಎಂದು ಕೆಲವು ವರದಿಗಳು ತಿಳಿಸಿವೆ.

ವೈರಲ್ ವಿಡಿಯೋದಲ್ಲಿ ಬಾಲಕಿ “ತನ್ನನ್ನು ರಕ್ಷಿಸಿ” ಎಂದು ಗೋಗೈರೆಯುವುದು ಇದೆ. ಪುಟ್ಟ ಬಾಲಕಿಯ ಕೈಗಳನ್ನು ಮೆಟ್ಟಿಲಿನ ಕಬ್ಬಿಣಕ್ಕೆ ಸರಪಳಿಯಿಂದ ಬಿಗಿಯಾಗಿ ಕಟ್ಟಿರುವುದುನ್ನೂ ನೋಡಬಹುದು.

ಬಾಲಕಿ ಮೇಲಿನ ದೌರ್ಜನ್ಯವನ್ನು ನಿವೃತ್ತ ಸೇನಾಧಿಕಾರಿ ಸಮರ್ಥಿಸಿಕೊಂಡಾಗ, ಆಕೆಯ ಸಹಾಯಕ್ಕೆ ಧಾವಿಸಿದ ಮರ್ಚೆಂಟ್ ನೇವಿಯ ಉದ್ಯೋಗಿ ರೋಹಿತ್ ಜೈಸ್ವಾಲ್ ಮಕ್ಕಳ ಸಹಾಯವಾಣಿ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಮತ್ತು ಮಕ್ಕಳ ರಕ್ಷಣಾ ಅಧಿಕಾರಿಗಳು ಸ್ಥಳಕ್ಕೆ ಬಂದು ಬಾಲಕಿಯನ್ನು ರಕ್ಷಿಸಿದ್ದಾರೆ. ಪೊಲೀಸರು ಬಾಲಕಿಯ ಪೋಷಕರಿಂದ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಬಾಲಕಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿ ಪೋಷಕರ ವಶಕ್ಕೆ ನೀಡಲಾಗಿದೆ ಎಂದು ವರದಿಗಳು ವಿವರಿಸಿವೆ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....