Homeಚಳವಳಿಪಠ್ಯದ ಮೂಲಕ ಮಕ್ಕಳಿಗೆ ವಿಷಪ್ರಾಸನ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕಿಡಿ

ಪಠ್ಯದ ಮೂಲಕ ಮಕ್ಕಳಿಗೆ ವಿಷಪ್ರಾಸನ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕಿಡಿ

ನಮ್ಮ ಹೆಮ್ಮೆಯ ಸಾಕ್ಷಿಪ್ರಜ್ಞೆಗಳಾದ ದೇವನೂರ ಮಹಾದೇವ ಮತ್ತು ಬರಗೂರು ರಾಮಚಂದ್ರಪ್ಪನವರ ಅಭಿಪ್ರಾಯಗಳನ್ನೂ ಧಿಕ್ಕರಿಸಿ ಅವರ ಬಗ್ಗೆಯೂ ಹಗುರವಾಗಿ ಮಾತನಾಡುವುದು ಅಕ್ಷಮ್ಯ, ಅಪರಾಧ.

- Advertisement -
- Advertisement -

ಬಿಜೆಪಿ ಸರ್ಕಾರದ ಪಠ್ಯ ಪರಿಷ್ಕರಣೆ ವಿವಾದ ದಿನದಿಂದ ದಿನಕ್ಕೆ ಬೆಳೆಯುತ್ತಲೆ ಇದೆ. ಹೆಚ್ಚುತ್ತಿರುವ ಜನಾಕ್ರೋಶದ ನಡುವೆಯೇ ಪಠ್ಯ ಬೋಧನೆ ಮಾಡಲು ಸರ್ಕಾರ ಪಟ್ಟು ಹಿಡಿದಿದೆ. ಸರ್ಕಾರದ ಈ ಕ್ರಮಕ್ಕೆ ಮಾಜಿ ಸ್ಪೀಕರ್, ಹಾಲಿ ಶಾಸಕರಾದ ಕೆ.ಆರ್ ರಮೇಶ್ ಕುಮಾರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಾವು ವಿಷ ಉಂಡು ಅದರ ನಂಜು ಮುಂದಿನ ಜನಾಂಗಕ್ಕೂ ಉಣಿಸಬೇಕೆಂದು ಪ್ರಾಥಮಿಕ ಹಂತದ ಪಠ್ಯಪುಸ್ತಕದಲ್ಲಿಯೇ ವಿಷಪ್ರಾಸನ ಮಾಡಲು ಹೊರಟಿದ್ದಾರೆ. ಚಕ್ರತೀರ್ಥರಿಗೆ, ಚಕ್ರವರ್ತಿಗಳಿಗೆ ಪ್ರತಾಪಸಿಂಹರುಗಳಿಗೆ ಜಗತ್ತಿನ ಇತಿಹಾಸದ ಅರಿವು ಇದೆಯೋ ಇಲ್ಲವೋ ಗೊತ್ತಿಲ್ಲ ಎಂದು ಅವರು ಕಿಡಿಕಾರಿದ್ದಾರೆ.

ಪಠ್ಯ ವಿವಾದದ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ಕರ್ನಾಟಕ ರಾಜ್ಯ ಸರ್ಕಾರವು ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳ ಪಠ್ಯಪುಸ್ತಕಗಳ ಮರು ಪರಿಷ್ಕರಣೆಗಾಗಿ ರೋಹಿತ್ ಚಕ್ರತೀರ್ಥ ಎಂಬ ವ್ಯಕ್ತಿಯ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ತರಾತುರಿಯಲ್ಲಿ ತೆಗೆದುಕೊಂಡಿರುವ ನಿರ್ಣಯಗಳು ರಾಜ್ಯದ ನಾಗರೀಕರ ಪ್ರಜ್ಞೆಯನ್ನು ತೀವ್ರವಾಗಿ ನೋಯಿಸಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಮಕಾಲೀನ ಸಮಾಜದ ಅನೇಕ ಜ್ವಲಂತ ಸಮಸ್ಯೆಗಳ ವಿಷಯದಲ್ಲಿ ಅತ್ಯಂತ ಜವಾಬ್ದಾರಿ ಹಾಗೂ ಸಂವೈಧಾನಿಕ ಪ್ರಜ್ಞೆವುಳ್ಳವರಾಗಿ ಇಡೀ ನಾಡು ಹೆಮ್ಮೆಪಡತಕ್ಕಂಥ ನಮ್ಮ ಹೆಮ್ಮೆಯ ಸಾಕ್ಷಿಪ್ರಜ್ಞೆಗಳಾದ ದೇವನೂರ ಮಹಾದೇವ ಮತ್ತು ಬರಗೂರು ರಾಮಚಂದ್ರಪ್ಪ ಇವರ ಅಭಿಪ್ರಾಯಗಳನ್ನೂ ಧಿಕ್ಕರಿಸಿ ಅವರ ಬಗ್ಗೆಯೂ ಹಗುರವಾಗಿ ಮಾತನಾಡುವುದು ಅಕ್ಷಮ್ಯ, ಅಪರಾಧ ಎಂದು ರಮೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

“ಬೌದ್ಧ ಧರ್ಮದ ಉದಯ ಜಡ್ಡುಗಟ್ಟಿದ ವೈದಿಕ ಸಂಪ್ರದಾಯಗಳ ವಿರುದ್ಧ ಸಹಜವಾಗಿಯೇ ಜನ್ಮತಾಳಿತು. ವಿಶ್ವದ ಅತಿದೊಡ್ಡ ಮಾನವತಾವಾದಿ ಡಾ: ಬಿ.ಆರ್. ಅಂಬೇಡ್ಕರ್‌ರವರು ಇದರ ಇಡೀ ಇತಿಹಾಸವನ್ನು ತಮ್ಮ Triumph of Brahmanism ಎಂಬ ಪುಸ್ತಕದಲ್ಲಿ ವಿವರಿಸಿದ್ದಾರೆ. ಬರಗೂರು ರಾಮಚಂದ್ರಪ್ಪರವರಂಥ ಒಬ್ಬ ಸಂವೇದನಾಶೀಲ, ಸಂವಿಧಾನಾತ್ಮಕ ಬದ್ಧತೆಯುಳ್ಳ ಮನಸ್ಸಿನ ಮತ್ತು ಧಮನಿತರ ನೋವನ್ನು ಪರಿಣಾಮಕಾರಿಯಾಗಿ ಸಮಾಜಕ್ಕೆ ಪರಿಚಯಿಸುವ ಭೌದ್ಧಿಕ ಮತ್ತು ನೈತಿಕ ಸಾಮರ್ಥ್ಯ ಇದ್ದವರು. ಇಂಥವರ ಅಧ್ಯಕ್ಷತೆಯಲ್ಲಿ ರಚಿತವಾದ ಪಠ್ಯಪುಸ್ತಕಗಳ ಪುನರ್‌ಪರಿಷ್ಕರಣೆ ಮಾಡಬೇಕಾಗಿದ್ದಲ್ಲಿ ಒಂದು ಜವಾಬ್ದಾರಿಯುತ ಸರ್ಕಾರ ತನ್ನ ಕನಿಷ್ಟ ವಿವೇಚನೆಯನ್ನಾದರೂ ತೋರಿಸಬೇಕಾಗಿತ್ತು” ಎಂದು ಅವರು ತಿಳಿಸಿದ್ದಾರೆ.

ಪುನರ್‌ರಚಿತ ಸಮಿತಿಯಲ್ಲಿ ಇರುವ ಎಲ್ಲ ಸದಸ್ಯರು ಉದ್ದೇಶಪೂರ್ವಕವಾಗಿಯೋ ಅಥವಾ ಆಕಸ್ಮಿಕವಾಗಿಯೋ ಬ್ರಾಹ್ಮಣರೇ ಆಗಿರುತ್ತಾರೆ. ಬುದ್ಧ, ಬಸವ, ಅಂಬೇಡ್ಕರ್‌ರವರ ಆಲೋಚನೆಗಳನ್ನು ವಿರೋಧಿಸುವವರೇ ಆಗಿರುತ್ತಾರೆ. ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡಿರುವ ರೋಹಿತ್ ಚಕ್ರತೀರ್ಥರವರ ಶೈಕ್ಷಣಿಕ
ಹಿನ್ನೆಲೆಯಾಗಲಿ ಅಥವಾ ಸಾಮಾಜಿಕ ಮತ್ತು ಸಾಂಸ್ಕೃತಿಕ ಹಾಗೂ ಸಾರಸ್ವತ ಲೋಕಗಳಲ್ಲಿ ಇವರ ಸ್ಥಾನಮಾನದ ಬಗ್ಗೆ ಎಲ್ಲವೂ ನಿಗೂಢವಾಗಿದೆ. ಮನುಕುಲದ ಪ್ರವಾದಿ, ಶೂದ್ರ ಪ್ರಪಂಚದ ಮೌಡ್ಯಕ್ಕೆ ತನ್ನ ಜ್ಞಾನ ಕಿರಣಗಳನ್ನು ಹರಿಸಿ ಮಲಗಿದ್ದವರನ್ನು ಎಬ್ಬಿಸಿದ ಮಹಾನ್‌ಚೇತನ ಕುವೆಂಪುರವರ ಬಗ್ಗೆಯೂ ಸಹ ಅಗೌರವ ತೋರಿಸುವ ಕುತ್ಸಿತ ಕ್ರಿಮಿಗಳು ವಿರಾಜಮಾನರಾಗುತ್ತಿದ್ದಾರೆ. ಇದು ಅತ್ಯಂತ ನೋವಿನ ಸಂಗತಿ ಎಂದು ರಮೇಶ್ ಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬಹುಶಃ ಇವರ ಪ್ರಯತ್ನಗಳು ಇತಿಹಾಸವನ್ನು ತಿರುಚಲು ಎಳೆ ಪ್ರಾಯದ ಮಕ್ಕಳೇ ಸೂಕ್ತ ವೇದಿಕೆ ಎಂದು ಮುಂದೆ ಹೊರಟಂತೆ ಕಾಣುತ್ತದೆ. ಗಾಂಧಿಯನ್ನು ಬಲಿತೆಗೆದುಕೊಂಡ ದೇಶ ಭಕ್ತರಿಗೆ ಸಹಜವಾಗಿಯೇ ಕೇಶವ್ ಬಲಿರಾಂ ಹಡವಾರ್‌ರವರು ಸ್ವಾತಂತ್ರ್ಯ ಹೋರಾಟಗಾರರಾಗಿ ಕಾಣುವುದು ಸಮಂಜಸವಾಗಿಯೇ ಇದೆ. ಆದ್ದರಿಂದಲೇ ತಾವು ಉಂಡ ನಂಜು ಮುಂದಿನ ಜನಾಂಗಕ್ಕೂ ಉಣಿಸಬೇಕೆಂದು ಪ್ರಾಥಮಿಕ ಹಂತದ ಪಠ್ಯಪುಸ್ತಕದಲ್ಲಿಯೇ ವಿಷಪ್ರಾಸನ ಮಾಡಲು ಹೊರಟಿದ್ದಾರೆ. ಚಕ್ರತೀರ್ಥರಿಗೆ, ಚಕ್ರವರ್ತಿಗಳಿಗೆ ಪ್ರತಾಪಸಿಂಹರುಗಳಿಗೆ ಜಗತ್ತಿನ ಇತಿಹಾಸದ ಅರಿವು ಇದೆಯೋ ಇಲ್ಲವೋ ಗೊತ್ತಿಲ್ಲ ಎಂದು ಅವರು ಹೇಳಿದ್ದಾರೆ.

ಕಳೆದ 45 ವರ್ಷಗಳ ಸಾರ್ವಜನಿಕ ಜೀವನದಲ್ಲಿ ಇಂಥ ಯಾವುದೇ ಸಂದಿಗ್ಧತೆ ಬಂದಾಗ ನಾನು ಯಾವುದೇ ಸ್ಥಾನದಲ್ಲಿದ್ದರೂ ಮುಕ್ತ ಮನಸ್ಸಿನಿಂದ ನಿರ್ಭಯವಾಗಿ ವಿಧಾನಸಭೆಯಲ್ಲಿ ನನ್ನ ನಿಲುವನ್ನು ವ್ಯಕ್ತಪಡಿಸುತ್ತಿದ್ದೆ. ಪ್ರಸ್ತುತ ಸನ್ನಿವೇಶದಲ್ಲಿ ವಿಧಾನಸಭೆಯ ಅಧಿವೇಶನ ಇಲ್ಲದ ಕಾರಣ ಈ ಪತ್ರಿಕಾ ಹೇಳಿಕೆ ನನ್ನ ನಿಲುವನ್ನು ಬಹಿರಂಗಪಡಿಸಲು ಅನಿವಾರ್ಯವಾಗಿದೆ. ಪುಜಾತಂತ್ರದ ಹಿತದೃಷ್ಟಿಯಿಂದ ಸಂವಿಧಾನದ ಆಶಯಗಳನ್ನು ಗೌರವಿಸುವ ದೃಷ್ಟಿಯಿಂದ ಮಾನ್ಯ ಮುಖ್ಯಮಂತ್ರಿಗಳು ಈ ಗೊಂದಲಕ್ಕೆ ಇತಿಶ್ರೀ ಹಾಡಬೇಕೆಂದು ಆಗ್ರಹಪೂರ್ವಕವಾಗಿ ವಿನಂತಿಸುತ್ತೇನೆ ಎಂದು ರಮೇಶ್ ಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ಪಠ್ಯದಲ್ಲಿ ಜಾತಿ, ಪಕ್ಷ ರಾಜಕಾರಣ ಹೆಡೆಯಾಡಬಾರದು: ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...