Homeಕರ್ನಾಟಕಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

- Advertisement -
- Advertisement -

ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ ನಡೆಯುತ್ತಿದೆ.

ಈ ನಡುವೆ ಮತ್ತೊಬ್ಬರು 44 ವರ್ಷದ ಮಹಿಳೆ ಪ್ರಜ್ವಲ್ ಗನ್ ಪಾಯಿಂಟ್ ಇಟ್ಟು ಬೆದರಿಸಿ ಹಲವು ಬಾರಿ ತನ್ನ ಮೇಲೆ ಅತ್ಯಾಚಾರವೆಸಗಿರುವುದಾಗಿ ದೂರು ನೀಡಿದ್ದಾರೆ. ಮಹಿಳೆಯ ದೂರು ಆಧರಿಸಿ ಸಿಐಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ದೂರು ನೀಡಿದ ಮಹಿಳೆ ಹಾಸನ ಜಿಲ್ಲಾ ಪಂಚಾಯತ್‌ನ ಮಾಜಿ ಸದಸ್ಯೆ ಹಾಗೂ ಜೆಡಿಎಸ್ ನಾಯಕಿ ಎಂದು ಹೇಳಲಾಗ್ತಿದೆ. ಜನವರಿ 1, 2021ರಿಂದ 25 ಏಪ್ರಿಲ್ 2024ರ ನಡುವೆ ಪ್ರಜ್ವಲ್ ತನ್ನ ಮೇಲೆ ಅತ್ಯಾಚಾರವೆಸಗಿ, ಕಿರುಕುಳ ನೀಡಿದ್ದಾರೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾಗಿ ತಿಳಿದು ಬಂದಿದೆ.

ಮಹಿಳೆಯ ದೂರಿನಲ್ಲಿ ಏನಿದೆ?

“ಜನ ಸೇವೆ ಮಾಡುವ ನಾನು ಆಗಾಗ ಶಾಸಕ, ಸಂಸದರನ್ನು ಭೇಟಿಯಾಗುತ್ತಿದ್ದೆ. ಒಂದು ಬಾರಿ ಸರ್ಕಾರಿ ಬಿಸಿಎಂ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯರಿಗೆ ಸೀಟು ಕೊಡಿಸಲು ಸಂಸದ ಪ್ರಜ್ವಲ್ ರೇವಣ್ಣ ಅವರ ಕಚೇರಿ ಮತ್ತು ಕ್ವಾಟ್ರಸ್‌ಗೆ ಹೋಗಿದ್ದೆ. ಆಗ ಸಂಸದರು ಕೆಲಸದ ನಿಮಿತ್ತ ಸ್ಥಳದಿಂದ ಹೊರಟು ಹೋಗಿದ್ದರು. ಮರುದಿನ ಬರುವಂತೆ ಹೇಳಿದ್ದರು.”

“ಮರುದಿನ ಪುನಃ ನಾನು ಪ್ರಜ್ವಲ್ ರೇವಣ್ಣ ಅವರ ಕ್ವಾಟ್ರಸ್‌ಗೆ ಹೋಗಿದ್ದೆ. ಆಲ್ಲಿ ಪ್ರಜ್ವಲ್ ಕಡೆಯವರು ನನ್ನನ್ನು ಮೊದಲ ಮಹಡಿಗೆ ಕಳುಹಿಸಿದ್ದರು. ಅಲ್ಲಿಯೂ ಕೆಲ ಮಹಿಳೆಯರು ಇದ್ದರು. ಸ್ಥಳಕ್ಕೆ ಬಂದಿದ್ದ ಪ್ರಜ್ವಲ್ ಇತರ ಮಹಿಳೆಯರನ್ನು ಮಾತನಾಡಿಸಿ ವಾಪಸ್ ಕಳುಹಿಸಿದ್ದರು. ನಾನು ಒಬ್ಬಳೇ ಉಳಿದುಕೊಂಡಿದ್ದೆ. ಎಲ್ಲರೂ ಹೋದ ಬಳಿಕ ಪ್ರಜ್ವಲ್ ನನ್ನ ಕೈ ಹಿಡಿದು ಕೊಠಡಿಯೊಂದಕ್ಕೆ ಎಳೆದೊಯ್ದರು. ಕೊಠಡಿ ಬಾಗಿಲು ಹಾಕಿ ಒಳಗಿನಿಂದ ಲಾಕ್ ಮಾಡಿದ್ದರು. ನಾನು ಲಾಕ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಏನು ಆಗಲ್ಲ ಎಂದಿದ್ದರು.”

“ನನ್ನ ಪತಿ ಬಗ್ಗೆಯೂ ಮಾತನಾಡಿದ್ದ ಪ್ರಜ್ವಲ್ ಅವರಿಂದಾಗಿ ತನ್ನ ತಾಯಿಗೆ ಎಂಎಲ್‌ಎ ಟಿಕೆಟ್ ತಪ್ಪಿತೆಂದು ಹೇಳಿದ್ದರು. ನಂತರ ನನಗೆ ಬಟ್ಟೆ ಬಿಚ್ಚುವಂತೆ ಹಾಗೂ ಮಂಚದ ಮೇಲೆ ಮಲಗುವಂತೆ ಒತ್ತಾಯಪಡಿಸಿದ್ದರು. ನಾನು ಅದಕ್ಕೆ ಒಪ್ಪದಿದ್ದಾಗ ‘ನನ್ನ ಬಳಿ ಗನ್ ಇದೆ’, ನಾನು ಹೇಳಿದಂತೆ ಕೇಳದಿದ್ದರೆ ನಿನ್ನನ್ನು ಹಾಗೂ ನಿನ್ನ ಪತಿಯನ್ನು ಮುಗಿಸುತ್ತೇನೆ ಎಂದು ಬೆದರಿಸಿದ್ದರು. ನಾನು ಆತನಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದೆ. ಆದರೆ, ಆತ ಕೈಗಳನ್ನು ಬಿಗಿಯಾಗಿ ಹಿಡಿದಿದ್ದರು. ನನ್ನ ಬಟ್ಟೆಗಳನ್ನು ಒತ್ತಾಯದಿಂದ ಬಿಚ್ಚಿಸಿದ್ದರು. ನಾನು ಕೂಗುತ್ತೇನೆ ಎಂದಾಗ ಮೊಬೈಲ್‌ನಲ್ಲಿ ವಿಡಿಯೋ ಮಾಡಿಕೊಂಡು ನನಗೆ ತೋರಿಸಿದ್ದರು. ಹೇಳಿದಂತೆ ಕೇಳದಿದ್ದರೆ ವಿಡಿಯೋವನ್ನು ಎಲ್ಲರಿಗೂ ತೋರಿಸಿ ಮರ್ಯಾದೆ ಕಳೆಯುವುದಾಗಿ ಬ್ಲ್ಯಾಕ್ ಮೇಲ್ ಮಾಡಿದ್ದರು.”

“ಬಳಿಕ ತನ್ನ ಮೇಲೆ ಅತ್ಯಾಚಾರವೆಸಗಿ ಕಿರುಕುಳ ನೀಡಿದ್ದರು. ವಿಡಿಯೋ ಮುಂದಿಟ್ಟುಕೊಂಡು ಪ್ರಜ್ವಲ್ ಹಲವು ಬಾರಿ ನನ್ನನ್ನು ಒತ್ತಾಯದಿಂದ ತಮ್ಮ ಕ್ವಾಟ್ರಸ್‌ಗೆ ಕರೆಸಿ ಅತ್ಯಾಚಾರವೆಸಗಿದ್ದಾರೆ. ಆಗಾಗ ವಿಡಿಯೋ ಕಾಲ್ ಮಾಡಿ ಬಟ್ಟೆ ಬಿಚ್ಚುವಂತೆಯೂ ಪೀಡಿಸಿದ್ದಾರೆ. ಪತಿಯನ್ನು ಕೊಲ್ಲುವ ಬೆದರಿಗೆ ಹಾಕಿದ್ದಾರೆ” ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾಗಿ ವರದಿಗಳು ಹೇಳಿವೆ

ಇದುವರೆಗೆ ಭಯದಿಂದ ದೂರು ನೀಡಿಲ್ಲ. ಆದರೆ, ಈಗ ಪ್ರಜ್ವಲ್ ರೇವಣ್ಣ ವಿರುದ್ಧದ ಆರೋಪಗಳ ತನಿಖೆಗೆ ಎಸ್‌ಐಟಿ ರಚನೆಯಾಗಿರುವ ಕಾರಣ ದೂರು ನೀಡಲು ನಿರ್ಧರಿಸಿದೆ ಎಂದು ಮಹಿಳೆ ಹೇಳಿದ್ದಾರೆ ಎಂದು ವರದಿಗಳು ತಿಳಿಸಿವೆ.

ಹೆಚ್‌ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಇದು ಮೂರನೇ ಎಫ್‌ಐಆರ್‌ ಆಗಿದೆ ದಾಖಲಾಗಿರುವುದು. ಮೊದಲು ಹೊಳೆನರಸೀಪುರ ಠಾಣೆಯಲ್ಲಿ ಮಹಿಳೆಯೊಬ್ಬರು ದೂರು ನೀಡಿದ್ದರು. ಬಳಿಕ ಲೈಂಗಿಕ ದೌರ್ಜನ್ಯದ ಸಂತ್ರಸ್ತೆಯಾಗಿರುವ ಮನೆ ಕೆಲಸದ ಮಹಿಳೆಯನ್ನು ಅಪಹರಿಸಿದ ಆರೋಪದ ಮೇಲೆ ಹೆಚ್‌ಡಿ ರೇವಣ್ಣ ವಿರುದ್ದ ಎಫ್‌ಐಆರ್ ದಾಖಲಾಗಿದೆ.

ಇದನ್ನೂ ಓದಿ : ಮಹಿಳೆಯ ಅಪಹರಣ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಹೆಚ್‌.ಡಿ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...