Homeಮುಖಪುಟಪ್ರಧಾನ ಮಂತ್ರಿ ನಿಖರವಾಗಿ ಯಾವುದರ ಜೊತೆ ನಿಲ್ಲುತ್ತಾರೆ: ರಾಹುಲ್ ಗಾಂಧಿ ಪ್ರಶ್ನೆ

ಪ್ರಧಾನ ಮಂತ್ರಿ ನಿಖರವಾಗಿ ಯಾವುದರ ಜೊತೆ ನಿಲ್ಲುತ್ತಾರೆ: ರಾಹುಲ್ ಗಾಂಧಿ ಪ್ರಶ್ನೆ

- Advertisement -
- Advertisement -

ಇಡೀ ದೇಶದ ಜನರಿಗೆ ಕೊರೊನಾ ಲಸಿಕೆ ಹಾಕುವ ಬಗ್ಗೆ ಸರ್ಕಾರ ಎಂದಿಗೂ ಹೇಳಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಮಂಗಳವಾರ ಸ್ಪಷ್ಟನೆ ನೀಡಿದ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನ ಮಂತ್ರಿ ನಿಖರವಾಗಿ ಯಾವುದರ ಜೊತೆ ನಿಲ್ಲುತ್ತಾರೆ ಎಂದು ಪ್ರಶ್ನಿಸಿದ್ದಾರೆ.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, “ಇಡೀ ದೇಶಕ್ಕೆ ಲಸಿಕೆ ಹಾಕುವ ಬಗ್ಗೆ ಸರ್ಕಾರ ಎಂದಿಗೂ ಮಾತನಾಡಲಿಲ್ಲ ಎಂಬುದನ್ನು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ಅಂತಹ ವೈಜ್ಞಾನಿಕ ವಿಚಾರಗಳನ್ನು ವಾಸ್ತವ ಮಾಹಿತಿಗಳನ್ನಾಧರಿಸಿ ಚರ್ಚಿಸಬೇಕು, ಒಟ್ಟಾರೆ ಮಾತನಾಡಬಾರದು” ಎಂದು ಹೇಳಿದ್ದರು.

ಇದನ್ನೂ ಓದಿ: ಕೊರೊನಾ ಲಸಿಕೆಯ ಬಳಕೆಗೆ ಅನುಮತಿ ನೀಡಿದ ಬ್ರಿಟನ್!

ಈ ಹಿನ್ನಲೆಯಲ್ಲಿ ಇಂದು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ಪ್ರಧಾನ ಮಂತ್ರಿ ಎಲ್ಲರಿಗೂ ಲಸಿಕೆ ಸಿಗುತ್ತದೆ ಎಂದಿದ್ದರು. ಬಿಹಾರ ಚುನಾವಣೆಯಲ್ಲಿ ಬಿಜೆಪಿ ಎಲ್ಲರಿಗೂ ಉಚಿತ ಲಸಿಕೆ ನೀಡುವುದಾಗಿ ಹೇಳಿತ್ತು. ಇದೀಗ ಭಾರತ ಸರ್ಕಾರ ನಾವು ಎಲ್ಲರಿಗೂ ಲಸಿಕೆ ನೀಡುವುದಾಗಿ ಹೇಳಿಯೇ ಇಲ್ಲ ಎನ್ನುತ್ತಿದೆ. ನಿಜಕ್ಕೂ ಪ್ರಧಾನಿ ಯಾವುದರ ಜೊತೆ ನಿಲ್ಲುತ್ತಾರೆ” ಎಂದು ಪ್ರಶ್ನಿಸಿದ್ದಾರೆ.

ನವೆಂಬರ್ 24 ರಂದು ರಾಜ್ಯಗಳನ್ನುದ್ದೇಶಿಸಿ ಮಾತನಾಡಿದ ದೇಶದ ಪ್ರಧಾನಿ, ದೇಶದ ಪ್ರತಿಯೊಬ್ಬ ಪ್ರಜೆಗೆ ವ್ಯಾಕ್ಸೀನ್ ತಲುಪಲಿದೆ. ಅದಕ್ಕಾಗಿ ಎಲ್ಲಾ ವ್ಯವಸ್ಥೆ ನಡೆದಿದೆ ಎಂದು ಭರವಸೆ ನೀಡಿದ್ದರು. ಸ್ವತಃ ಪ್ರಧಾನಮಂತ್ರಿಗಳ ಕಚೇರಿಯಿಂದ ಬಂದ ಸರ್ಕಾರಿ PIB ಪತ್ರಿಕಾ ಪ್ರಕಟಣೆ ಇದನ್ನು ಹೇಳಿತ್ತು. ಅಷ್ಟೇ ಅಲ್ಲದೆ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ರಾಜ್ಯದ ಎಲ್ಲರಿಗೂ ಉಚಿತ ಕೊರೊನಾ ಲಸಿಕೆ ನೀಡುವ ಭರವಸೆ ನೀಡಿತ್ತು.

ಇದನ್ನೂ ಓದಿ: ಇಡೀ ದೇಶದ ಜನರಿಗೆ ಲಸಿಕೆ ಹಾಕುವುದಾಗಿ ಸರ್ಕಾರ ಎಂದೂ ಹೇಳಿಲ್ಲ: ಉಲ್ಟಾ ಹೊಡೆದ ಆರೋಗ್ಯ ಸಚಿವಾಲಯ 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...