Homeಮುಖಪುಟಉತ್ತಮ ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಏಕೆ ಬೇಕು ಎಂಬುದಕ್ಕೆ ಯೋಗಿ ಆದಿತ್ಯನಾಥ್ ಸಾಕ್ಷಿ: ಒವೈಸಿ ವ್ಯಂಗ್ಯ

ಉತ್ತಮ ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಏಕೆ ಬೇಕು ಎಂಬುದಕ್ಕೆ ಯೋಗಿ ಆದಿತ್ಯನಾಥ್ ಸಾಕ್ಷಿ: ಒವೈಸಿ ವ್ಯಂಗ್ಯ

- Advertisement -
- Advertisement -

ದೇಶದ ಇತಿಹಾಸವನ್ನು ತಿರುಚಲಾಗಿದೆ. ಅಲೆಕ್ಸಾಂಡರ್‌ರನ್ನು ಶ್ರೇಷ್ಠ, ಮಹಾನ್ ವ್ಯಕ್ತಿ ಎಂದು ಕರೆಯುತ್ತದೆ ಆದರೆ ಅಲೆಕ್ಸಾಂಡರ್‌ರನ್ನು ಸೋಲಿಸಿದ ಚಂದ್ರಗುಪ್ತ ಮೌರ್ಯರನ್ನು ಶ್ರೇಷ್ಠ ಎನ್ನದೆ ದೇಶಕ್ಕೆ ಮೋಸ ಮಾಡಲಾಗಿದೆ ಎಂದು ಹೇಳಿಕೆ ನೀಡಿರುವ ಯುಪಿ ಸಿಎಂ ಯೋಗಿ ಆದಿತ್ಯನಾಥ್‌ಗೆ ಸರಿಯಾದ ಶಿಕ್ಷಣ ಬೇಕಾಗಿದೆ AIMIM ನಾಯಕ ಅಸಾದುದ್ದೀನ್ ಒವೈಸಿ ವ್ಯಂಗ್ಯವಾಡಿದ್ದಾರೆ.

ಅಸಲಿಗೆ ಅಲೆಕ್ಸಾಂಡರ್‌ ಮತ್ತು ಚಂದ್ರಗುಪ್ತ ಮೌರ್ಯರ ನಡುವೆ ಯುದ್ದವೇ ನಡೆದಿಲ್ಲ, ಇದರ ಬಗ್ಗೆ ಸರಿಯಾದ ತಿಳುವಳಿಕೆ ಇಲ್ಲದೆ ಯುಪಿ ಸಿಎಂ ಹೇಳಿಕೆ ನೀಡಿದ್ದಾರೆ. ನಮಗೆ ಉತ್ತಮ ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಏಕೆ ಬೇಕು ಎಂಬುದಕ್ಕೆ ಇದು ಮತ್ತೊಂದು ಉದಾಹರಣೆಯಾಗಿದೆ ಎಂದು ಒವೈಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ಲಕ್ನೋದಲ್ಲಿ ನಡೆದ ‘ಸಾಮಾಜಿಕ ಪ್ರತಿನಿಧಿ ಸಮ್ಮೇಳನ’ದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಮಾತನಾಡಿ, “ಇತಿಹಾಸ ಹೇಗೆ ತಿರುಚಲ್ಪಟ್ಟಿದೆ! ಇತಿಹಾಸವು ಚಂದ್ರಗುಪ್ತ ಮೌರ್ಯನನ್ನು ಶ್ರೇಷ್ಠ ಎಂದು ಕರೆಯಲಿಲ್ಲ, ಅದು ಯಾರನ್ನು ಶ್ರೇಷ್ಠ ಎಂದು ಕರೆದಿದೆ? ಅವನಿಂದ ಸೋತ ಅಲೆಕ್ಸಾಂಡರ್‌ನನ್ನು ಮಹಾನ್ ಎಂದು ಕರೆಯುತ್ತಾರೆ. ದೇಶಕ್ಕೆ ಮೋಸ ಮಾಡಲಾಗಿದೆ. ಆದರೆ ಇತಿಹಾಸಕಾರರು ಈ ಬಗ್ಗೆ ಮೌನವಾಗಿದ್ದಾರೆ” ಎಂದು ಹೇಳಿಕೆ ನೀಡಿದ್ದರು.

ಮುಂದುವರೆದು “ಭಾರತೀಯರ ಮುಂದೆ ಸತ್ಯ ಹೊರಬಿದ್ದರೆ ಸಮಾಜ ಮತ್ತೊಮ್ಮೆ ಎದ್ದು ನಿಲ್ಲುತ್ತದೆ. ಸಮಾಜ ಎದ್ದು ನಿಂತಾಗ ರಾಷ್ಟ್ರವೂ ಎದ್ದು ನಿಲ್ಲುತ್ತದೆ. ಪ್ರಧಾನಿ ಮೋದಿಯವರು ಇಂದು ಈ ದೇಶವನ್ನು ಎದ್ದು ನಿಲ್ಲುವಂತೆ ಮಾಡುತ್ತಿದ್ದಾರೆ. ನಾವು ‘ಒಂದೇ ಭಾರತ, ಶ್ರೇಷ್ಠ ಭಾರತ’ದ ಬಗ್ಗೆ ಮಾತನಾಡುವಾಗ, ಈ ವಿಷಯಗಳ ಬಗ್ಗೆ ಮಾತನಾಡಲಾಗುತ್ತದೆ” ಎಂದು ಯುಪಿ ಸಿಎಂ ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ AIMIM ನಾಯಕ ಅಸಾದುದ್ದೀನ್ ಒವೈಸಿ “ಹಿಂದುತ್ವವೆಂಬುದು ನಕಲಿ ಇತಿಹಾಸದ ಕಾರ್ಖಾನೆಯಾಗಿದೆ. ಚಂದ್ರಗುಪ್ತ ಮತ್ತು ಅಲೆಕ್ಸಾಂಡರ್ ನಡುವೆ ಯುದ್ಧ ನಡೆದಿಲ್ಲ. ನಮಗೆ ಉತ್ತಮ ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಏಕೆ ಬೇಕು ಎಂಬುದಕ್ಕೆ ಇದು ಮತ್ತೊಂದು ಉದಾಹರಣೆಯಾಗಿದೆ. ಉತ್ತಮ ಶಾಲೆಗಳ ಅನುಪಸ್ಥಿತಿಯಲ್ಲಿ, ಈ ಬಾಬಾಗಳು (ಯೋಗಿ ಆದಿತ್ಯನಾಥ್) ತಮ್ಮ ಅನುಕೂಲಕ್ಕೆ ಅನುಗುಣವಾಗಿ ಸತ್ಯಗಳನ್ನು ತಿರುಚುತ್ತಾರೆ. ಬಾಬಾ ಶಿಕ್ಷಣಕ್ಕೆ ಬೆಲೆ ಕೊಡುವುದಿಲ್ಲ ಎಂಬುದನ್ನು ಇದು ತೋರಿಸುತ್ತದೆ” ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಹಿಂದೂ ಧರ್ಮ ಮತ್ತು ಹಿಂದುತ್ವ ಒಂದೇ ಅಲ್ಲ: ಹಿಂದುತ್ವ ಎಂದರೆ ರಾಜಕೀಯ – ನಟಿ ರಮ್ಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...