Homeಕರ್ನಾಟಕದ್ವಿತೀಯ ಪಿಯು - ‘ಜುಲೈನಿನಲ್ಲಿ ಪರೀಕ್ಷೆ, ಆಗಸ್ಟ್‌ನಲ್ಲಿ ಫಲಿತಾಂಶ ಸಾಧ್ಯತೆ’: ಸಚಿವ ಸುರೇಶ್‌ ಕುಮಾರ್‌

ದ್ವಿತೀಯ ಪಿಯು – ‘ಜುಲೈನಿನಲ್ಲಿ ಪರೀಕ್ಷೆ, ಆಗಸ್ಟ್‌ನಲ್ಲಿ ಫಲಿತಾಂಶ ಸಾಧ್ಯತೆ’: ಸಚಿವ ಸುರೇಶ್‌ ಕುಮಾರ್‌

- Advertisement -
- Advertisement -

ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಸುರಕ್ಷಿತವಾಗಿ ನಡೆಸಲು ಎಲ್ಲ ಪೂರ್ವ ಸಿದ್ದತೆಗಳನ್ನು ಮಾಡಲಾಗಿದೆ, ಜುಲೈ ತಿಂಗಳಲ್ಲಿ ಪರೀಕ್ಷೆ ನಡೆಸಲು ಸಾಧ್ಯವಾದರೆ ಆಗಸ್ಟ್‌ನಲ್ಲಿ ಪರೀಕ್ಷಾ ಫಲಿತಾಂಶ ಘೋಷಿಸಲು ಸಾಧ್ಯವಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್‌ ಸೋಮವಾರ ಪ್ರತಿಪಾದಿಸಿದ್ದಾರೆ.

ಅವರು ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆ ಆಯೋಜಿಸಿದ್ದ ಸರ್ವ ರಾಜ್ಯಗಳ ಶಿಕ್ಷಣ ಸಚಿವರ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ಇದನ್ನೂ ಓದಿ: ಒಡಿಶಾದ ಬುಡಕಟ್ಟು ಸಮುದಾಯಗಳಲ್ಲಿ ಹೆಚ್ಚಿದ ಸೋಂಕು: ಕೊರೊನಾ ಕೇಂದ್ರಗಳನ್ನು ಆರಂಭಿಸಲು ಒತ್ತಾಯ

ಈ ಸಭೆಯಲ್ಲಿ ಮಾತನಾಡಿದ ಅವರು, ದ್ವಿತೀಯ ಪಿಯು ಪರೀಕ್ಷೆಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸುವ ಕಾರ್ಯ ಪೂರ್ಣಗೊಳಿಸಲಾಗಿದೆ. ರಾಜ್ಯದಲ್ಲಿ ಪರೀಕ್ಷಾ ಕೇಂದ್ರಗಳನ್ನು ಗಣನೀಯವಾಗಿ ಹೆಚ್ಚಿಸಲಾಗುತ್ತಿದ್ದು, ಅತ್ಯಂತ ಸುರಕ್ಷಿತವಾಗಿ ಪರೀಕ್ಷೆಗಳನ್ನು ನಡೆಸಲು ಎಲ್ಲ ಪೂರ್ವ ಸಿದ್ಧತೆಗಳನ್ನು ಮಾಡಲಾಗಿದೆ. ಜುಲೈಯಲ್ಲಿ ಪರೀಕ್ಷೆಗಳನ್ನು ನಡೆಸಲು ಸಾಧ್ಯವಾದಲ್ಲಿ ಆಗಸ್ಟ್‌ನಲ್ಲಿ ಪರೀಕ್ಷಾ ಫಲಿತಾಂಶವನ್ನು ಘೋಷಿಸಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.

ಕೊರೊನಾ ಎರಡನೆ ಅಲೆ ಎಲ್ಲೆಡೆ ತೀವ್ರವಾಗಿದ್ದು, ಇದು ತಹಬಂದಿಗೆ ಬಂದ ಕೂಡಲೇ 15-20 ದಿನಗಳ ಕಾಲಾವಕಾಶ ನೀಡಿ ಮುಂಚೆಯೇ ಪರೀಕ್ಷೆಗಳ ದಿನಾಂಕವನ್ನು ಪ್ರಕಟಿಸಲು ಸದ್ಯಕ್ಕೆ ತೀರ್ಮಾನಿಸಲಾಗಿದೆ. ಕೊರೊನಾ ಕಾರಣಕ್ಕಾಗಿ ವಾರ್ಷಿಕ ಪರೀಕ್ಷೆಯನ್ನು ತೆಗೆದುಕೊಳ್ಳಲು ವಿಫಲರಾಗುವ ವಿದ್ಯಾರ್ಥಿಗಳಿಗೆ ಹೊಸದಾಗಿ ಇನ್ನೊಮ್ಮೆ ಪರೀಕ್ಷೆ ಬರೆಯಲು ಇದೇ ಸಾಲಿನಲ್ಲಿ ಅವಕಾಶ ಕಲ್ಪಿಸಲು ಸಹ ರಾಜ್ಯ ಸರ್ಕಾರ ಯೋಜಿಸಿದೆ ಎಂದು ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಆಗಸ್ಟ್‌‌ನಲ್ಲಿ ಬಂದರೆ, ನೀಟ್/ಜೆಇಇ/ಸಿಇಟಿ/ಐಸಿಎಆರ್/ಅಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆಗಸ್ಟ್‌ನಲ್ಲಿ ಆಯೋಜಿಸಬಹುದು ಎಂದು ಸಚಿವ ಸುರೇಶ್ ಕುಮಾರ್ ಸಭೆಯಲ್ಲಿ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಇಸ್ರೇಲ್: ಫಿರಂಗಿಗಳು ಘರ್ಜಿಸುತ್ತಿರುವಾಗಲೂ ನಡೆಯುತ್ತಿವೆ ಮುಸ್ಲೀಮರು ಮತ್ತು ಯಹೂದಿಗಳ ಸೌಹಾರ್ದ ಕಾರ್ಯಕ್ರಮಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...