Homeಕರ್ನಾಟಕಅಬಕಾರಿ ಇಲಾಖೆಯಿಂದ ₹700 ಕೋಟಿ ವಸೂಲಿ ಹೇಳಿಕೆ; ಪ್ರಧಾನಿ ಮೋದಿ ಆರೋಪಕ್ಕೆ ಸಿಎಂ ತಿರುಗೇಟು

ಅಬಕಾರಿ ಇಲಾಖೆಯಿಂದ ₹700 ಕೋಟಿ ವಸೂಲಿ ಹೇಳಿಕೆ; ಪ್ರಧಾನಿ ಮೋದಿ ಆರೋಪಕ್ಕೆ ಸಿಎಂ ತಿರುಗೇಟು

- Advertisement -
- Advertisement -

‘ಚುನಾವಣೆಗಾಗಿ ಕರ್ನಾಟಕ ಸರ್ಕಾರ ಅಬಕಾರಿ ಇಲಾಖೆಯಿಂದ ₹700 ಕೋಟಿ ಸಂಗ್ರಹಿಸಿದೆ’ ಎಂಬ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. “ಪ್ರಧಾನಿ ನರೇಂದ್ರ ಮೋದಿ ಅವರು ಮಾಡುತ್ತಿರುವ ಆರೋಪಗಳು ಚುನಾವಣಾ ಭಾಷಣಕ್ಕಷ್ಟೇ ಸೀಮಿತ. ಇವುಗಳಲ್ಲಿ ಯಾವ ಸತ್ಯವೂ ಇಲ್ಲ” ಎಂದರು.

ಇಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬಿಜೆಪಿಯವರ ಮೇಲೆ ಅನೇಕ ಆರೋಪಗಳಿವೆ. ಕೊರೋನಾ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಅವ್ಯವಹಾರಗಳ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಡಿ.ಕುನ್ಹಾ ಅವರ ಆಯೋಗ ವರದಿ ಸಲ್ಲಿಸಿದ್ದು, ₹330 ಸಿಗುವ ಪಿಪಿಇ ಕಿಟ್ ಅನ್ನು ₹2,140 ಕೊಟ್ಟು ಖರೀದಿ ಮಾಡಿದ್ದಾರೆ. ಇದಕ್ಕೆ ನರೇಂದ್ರ ಮೋದಿ ಏನು ಹೇಳುತ್ತಾರೆ? ಭ್ರಷ್ಟಾಚಾರ ಮಾಡಿರುವುದು ಬಿಜೆಪಿ ಸರ್ಕಾರ, ನಮ್ಮ ಸರ್ಕಾರದಲ್ಲಿ ಯಾವುದೇ ಭ್ರಷ್ಟಾಚಾರವಾಗಿಲ್ಲ. ಭ್ರಷ್ಟಾಚಾರ ಮಾಡುವುದೂ ಇಲ್ಲ” ಎಂದು ವಾಗ್ದಾಳಿ ನಡೆಸಿದರು.

“ಪ್ರಧಾನಿ ನರೇಂದ್ರ ಮೋದಿ ಅವರು ಅಬಕಾರಿ ಇಲಾಖೆಯಲ್ಲಿ ಕರ್ನಾಟಕ ಸರ್ಕಾರ 700 ಕೋಟಿ ವಸೂಲಿ ಮಾಡಿದೆ ಎಂದು ಸುಳ್ಳು ಹೇಳುತ್ತಿದ್ದಾರೆ. ಒಂದೇ ಒಂದು ರೂಪಾಯಿ ವಸೂಲಿ ಮಾಡಿರುವುದನ್ನು ನಿರೂಪಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ. ಸಾಬೀತು ಮಾಡಲು ಆಗದಿದ್ದರೆ ಅವರು ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಿದ್ದಾರೆಯೇ? ಸುಳ್ಳು ಹೇಳಲು ಇತಿಮಿತಿ ಇರಬೇಕು” ಎಂದು ಕಿಡಿಕಾರಿದರು.

“ಪ್ರಧಾನಿ ಮೋದಿಯವರು ಚುನಾವಣಾ ಪ್ರಚಾರ ಸಭೆಗಳಲ್ಲಿ ಕರ್ನಾಟಕವನ್ನು ಗುರಿಯಾಗಿಸಿಕೊಂಡು ಟೀಕೆ ಮಾಡುತ್ತಿದ್ದಾರೆ. ಕರ್ನಾಟಕ ದೊಡ್ಡ ರಾಜ್ಯವಾಗಿದ್ದು, ವಿಧಾನಸಭೆಯ ಚುನಾವಣೆಯಲ್ಲಿ ಕಾಂಗ್ರೆಸ್ 136 ಸ್ಥಾನಗಳನ್ನು ಪಡೆದಿರುವುದರಿಂದ ಹತಾಶರಾಗಿ ನನ್ನ ಮತ್ತು ನಮ್ಮ ಸರ್ಕಾರವನ್ನು ಪ್ರಧಾನಿಯವರು ಗುರಿಯಾಗಿಸಿ ಟೀಕೆ ಮಾಡುತ್ತಿದ್ದಾರೆ” ಎಂದರು.

“ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಕಾನೂನು ಪ್ರಕಾರ ಮಾಡುವ ತನಿಖೆ ನಡೆಸಲಿ, ಅದಕ್ಕೆ ಯಾವುದೇ ರೀತಿಯ ಪ್ರತಿರೋಧವನ್ನು ನಾವು ಒಡ್ಡುವುದಿಲ್ಲ. ಇಡಿ ತನಿಖೆ ನಿಷ್ಪಪಕ್ಷಪಾತವಾಗಿ ನಡೆಯುತ್ತಿದೆಯೇ ಇಲ್ಲವೇ ಎಂಬುದರ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ಆದರೆ, ಸುಳ್ಳು ಆರೋಪಗಳ ಮೇಲೆ ತನಿಖೆ ನಡೆಯುತ್ತಿದೆ ಎಂಬುದಷ್ಟೇ ಹೇಳಬಲ್ಲೇ” ಎಂದು ಹೇಳಿದರು.

“ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಗುತ್ತಿಗೆಗಳಲ್ಲಿ ಮೀಸಲಾತಿ ನೀಡಿರುವಂತೆ ಮುಸ್ಲಿಂಮರಿಗೂ ಮೀಸಲಾತಿ ನೀಡಿ ಎಂದು ಬೇಡಿಕೆಯಿಟ್ಟಿದ್ದಾರೆ. ಆದರೆ, ಈ ಬಗ್ಗೆ ಯಾವುದೇ ತೀರ್ಮಾನ ಸರ್ಕಾರ ತೆಗೆದುಕೊಂಡಿಲ್ಲ. ಈಗಾಗಲೇ ಸುಳ್ಳು ಸುದ್ದಿ ಹರಡಿ ಸಮಾಜದ ಸೌಹಾರ್ದತೆ ಲೆಡಿಸಲು ಬಿಜೆಪಿ ಆರಂಭಿಸಿದೆ. ಅವರಿಗೆ ಕೋಮುಗಲಭೆ ಸೃಷ್ಟಿಸುವುದೇ ಕಾಯಕವಾಗಿದೆ. ಬಿಜೆಪಿಯವರೆಂದೂ ಸಮಾಜದಲ್ಲಿ ಶಾಂತಿ, ಸೋದರತ್ವ ನೆಲೆಸಬೇಕೆಂದು ಬಯಸಿದವರೇ ಅಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ; ಆದಿವಾಸಿಗಳಿಗೆ ಅರಣ್ಯ ಇಲಾಖೆ ಅನಗತ್ಯ ಕಿರುಕುಳ ಕೊಡಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...