ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತು ಇಡಿ ಇದೀಗ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧದ ತನಿಖೆಯನ್ನು ಪೂರ್ಣಗೊಳಿಸಿದೆ. ಕೇಂದ್ರೀಯ ತನಿಖಾ ದಳ (ಸಿಬಿಐ) ದೆಹಲಿಯ ರೂಸ್ ಅವೆನ್ಯೂ ಕೋರ್ಟ್‌ನಲ್ಲಿ ಚಾರ್ಜ್‌ಶೀಟ್ ಸಲ್ಲಿಸಿದೆ.
ಕೇಜ್ರಿವಾಲ್ ನ್ಯಾಯಾಂಗ ಬಂಧನ ವಿಸ್ತರಣೆ
ಇದಕ್ಕೂ ಮೊದಲು ಜುಲೈ 25 ರಂದು, ದೆಹಲಿ ನ್ಯಾಯಾಲಯವು ಆಪಾದಿತ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿದ ಪ್ರಕರಣದಲ್ಲಿ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಆಗಸ್ಟ್ 8 ರವರೆಗೆ ವಿಸ್ತರಿಸಿತ್ತು. ಕೇಜ್ರಿವಾಲ್ ಅವರನ್ನು ತಿಹಾರ್ ಜೈಲಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಸಿಬಿಐ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.
ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್ ಅವರ ಕಸ್ಟಡಿಯನ್ನು ಜುಲೈ 31 ರವರೆಗೆ ವಿಸ್ತರಿಸಿದ್ದಾರೆ. ಜಾರಿ ನಿರ್ದೇಶನಾಲಯ (ಇಡಿ) ತನಿಖೆ ನಡೆಸುತ್ತಿದೆ. ಹೆಚ್ಚುವರಿಯಾಗಿ, ಸಿಬಿಐ ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ಅವರ ನ್ಯಾಯಾಂಗ ಬಂಧನವನ್ನು ಆಗಸ್ಟ್ 8 ರವರೆಗೆ ವಿಸ್ತರಿಸಲಾಗಿದೆ.
ಕೇಜ್ರಿವಾಲ್ ಅವರನ್ನು ಜೂನ್ 26 ರಂದು ತಿಹಾರ್ ಜೈಲಿನಿಂದ ಸಿಬಿಐ ಬಂಧಿಸಿದ್ದು, ಇಡಿ ದಾಖಲಿಸಿದ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮೂಲತಃ ಮಾರ್ಚ್ 21 ರಂದು ಇಡಿಯಿಂದ ಬಂಧಿಸಲ್ಪಟ್ಟ ಕೇಜ್ರಿವಾಲ್ ಅವರಿಗೆ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯವು ಜೂನ್ 20 ರಂದು ಜಾಮೀನು ನೀಡಿತ್ತು. ಆದರೆ, ಹೈಕೋರ್ಟ್ ಆದೇಶಕ್ಕೆ ತಡೆ ನೀಡಿತು. ಜುಲೈ 12 ರಂದು, ಇಡಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅವರಿಗೆ ಮಧ್ಯಂತರ ಜಾಮೀನು ನೀಡಿತು. ಅವರು ಪ್ರಕರಣದಲ್ಲಿ ಜಾಮೀನು ಬಾಂಡ್ ಅನ್ನು ಒದಗಿಸದ ಕಾರಣ ಅವರನ್ನು ಇಲ್ಲಿನ ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ.
ಪ್ರಕರಣ ಹಿನ್ನೆಲೆ
ಈ ವಿಷಯವು 2021-22ಕ್ಕೆ ದೆಹಲಿ ಸರ್ಕಾರದ ಈಗ ರದ್ದುಪಡಿಸಿದ ಅಬಕಾರಿ ನೀತಿಯ ರಚನೆ ಮತ್ತು ಕಾರ್ಯಗತಗೊಳಿಸುವಿಕೆಯಲ್ಲಿ ಭ್ರಷ್ಟಾಚಾರ, ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದೆ. ಮದ್ಯದ ವ್ಯಾಪಾರಿಗಳಿಗೆ ಪರವಾನಗಿ ನೀಡಲು ದೆಹಲಿ ಸರ್ಕಾರದ 2021-22 ರ ಅಬಕಾರಿ ನೀತಿಯು ಕಾರ್ಟೆಲೈಸೇಶನ್‌ಗೆ ಅವಕಾಶ ಮಾಡಿಕೊಟ್ಟಿದೆ. ಅದಕ್ಕಾಗಿ ಲಂಚವನ್ನು ಪಾವತಿಸಿದ ಕೆಲವು ಡೀಲರ್‌ಗಳಿಗೆ ಒಲವು ನೀಡಿದೆ ಎಂದು ಆರೋಪಿಸಲಾಗಿದೆ. ಆದರೆ, ಈ ಆರೋಪವನ್ನು ಎಎಪಿ ಪದೇ ಪದೇ ನಿರಾಕರಿಸಿದೆ.
ವಿವಾದದ ನಂತರ ಅಬಕಾತಿ ನೀತಿಯನ್ನು ರದ್ದುಗೊಳಿಸಲಾಯಿತು ಮತ್ತು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಕೇಂದ್ರೀಯ ತನಿಖಾ ದಳದ ತನಿಖೆಗೆ ಶಿಫಾರಸು ಮಾಡಿದರು. ನಂತರ, ಇಡಿ ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಪ್ರಕರಣ ದಾಖಲಿಸಿದೆ.
ಇದನ್ನೂ ಓದಿ; ಒಬಿಸಿ ಕೋಟಾ ಹೆಚ್ಚಿಸುವ ನಿತೀಶ್ ನಿರ್ಧಾರಕ್ಕೆ ಹಿನ್ನಡೆ; ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್


