Homeಮುಖಪುಟಅಬಕಾರಿ ನೀತಿ ಪ್ರಕರಣ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ಅಬಕಾರಿ ನೀತಿ ಪ್ರಕರಣ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್

- Advertisement -
- Advertisement -

ದೆಹಲಿ ಅಬಕಾರಿ ನೀತಿಯ ಭ್ರಷ್ಟಾಚಾರ ಪ್ರಕರಣ ಸಂಬಂಧ ಸಿಬಿಐ ದಾಖಲಿಸಿದ್ದ ಕೇಸ್‌ನಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ.

ಪ್ರಕರಣದ ಅರ್ಹತೆಯ ಬಗ್ಗೆ ಯಾವುದೇ ಸಾರ್ವಜನಿಕ ಪ್ರತಿಕ್ರಿಯೆ ನೀಡದಂತೆ ಸುಪ್ರೀಂ ಕೋರ್ಟ್‌ ಅರವಿಂದ್ ಕೇಜ್ರಿವಾಲ್‌ಗೆ ನಿರ್ದೇಶಿಸಿದೆ. ಅಬಕಾರಿ ನೀತಿಯ ಭ್ರಷ್ಟಾಚಾರ ಪ್ರಕರಣದಲ್ಲಿ ಕೇಜ್ರಿವಾಲ್‌ಗೆ ನಿಯಮಿತ ಜಾಮೀನು ನೀಡುವ ಕುರಿತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರು ನ್ಯಾಯಮೂರ್ತಿ ಸೂರ್ಯ ಕಾಂತ್ ಅವರೊಂದಿಗೆ ಇಂದು ಸಮ್ಮತಿಸಿದ್ದಾರೆ.

10 ಲಕ್ಷ ರೂ ಜಾಮೀನು ಬಾಂಡ್, ಇಬ್ಬರ ಶ್ಯೂರಿಟಿಗಳ ಮೇಲೆ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಜಾಮೀನು ನೀಡಿದೆ.

ಜಾಮೀನು ಕೋರಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಸೆಪ್ಟೆಂಬರ್ 5 ರಂದು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್‌ನ ದ್ವಿಸದಸ್ಯ ಪೀಠ, ಶುಕ್ರವಾರ ತೀರ್ಪು ಪ್ರಕಟಿಸಿದ್ದು, ಅವರಿಗೆ ಜಾಮೀನು ನೀಡುವಲ್ಲಿ ಸರ್ವಾನುಮತದ ತೀರ್ಪು ನೀಡಿದೆ.

ಪ್ರಕರಣದ ಕುರಿತು ಸಾರ್ವಜನಿಕವಾಗಿ ಯಾವುದೇ ಹೇಳಿಕೆ ನೀಡದಂತೆ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಸೂಚಿಸಿದೆ.

ಜಾಮೀನು ನೀಡದರೂ ಸುಪ್ರೀಂ ಕೋರ್ಟಿನ ನ್ಯಾಯಾಧೀಶರು, ಸಿಬಿಐ ಅವರನ್ನು ಬಂಧಿಸುವ ವಿಷಯದಲ್ಲಿ ವಿಭಿನ್ನ ಅಭಿಪ್ರಾಯವನ್ನು ಹೊಂದಿದ್ದರು. ನ್ಯಾಯಮೂರ್ತಿ ಸೂರ್ಯಕಾಂತ್ ಅವರು, ಸಿಬಿಐ ಬಂಧನ ಕಾನೂನುಬದ್ಧವಾಗಿದೆ. ಆದರೆ, ನ್ಯಾಯಮೂರ್ತಿ ಭೂಯಾನ್ ಅವರು ಕೇಜ್ರಿವಾಲ್ ಬಂಧನಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಸೂರ್ಯಕಾಂತ್ ಅವರಿಗಿಂತ ಭಿನ್ನರಾಗಿದ್ದಾರೆ. ಇಡಿ ಪ್ರಕರಣದಲ್ಲಿ ನೀಡಲಾದ ಜಾಮೀನನ್ನು ವಿಫಲಗೊಳಿಸಲು ಸಿಬಿಐ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದೆ ಎಂದು ನ್ಯಾಯಮೂರ್ತಿ ಭುಯಾನ್ ಹೇಳಿದರು.

ಕೇಜ್ರಿವಾಲ್ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಸಿಬಿಐ ತನ್ನ ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಮತ್ತು ಹಿರಿಯ ವಕೀಲ ಎಸ್‌ವಿ ರಾಜು ಅವರ ಮೂಲಕ ವಾದ ಮತ್ತು ಸಲ್ಲಿಕೆಗಳನ್ನು ನ್ಯಾಯಾಲಯ ವಿವರವಾಗಿ ಆಲಿಸಿದೆ.

ಕೇಜ್ರಿವಾಲ್ ಅವರ ಬಂಧನವನ್ನು ಕಾನೂನುಬಾಹಿರ ಮತ್ತು ಅನಿಯಂತ್ರಿತ ಎಂದು ಹೇಳಿದ ಸಿಂಘ್ವಿ, ಅದಕ್ಕೆ ಕೆಲವು ಸುರಕ್ಷತೆಗಳು ಇರಬೇಕು ಎಂದು ಹೇಳಿದರು. “ಆರೋಪಿ ವ್ಯಕ್ತಿಯನ್ನು ಬಂಧಿಸುವ ಬಗ್ಗೆ ರಕ್ಷಣಾತ್ಮಕ ಕ್ರಮಗಳು ಇರಬೇಕು. ಯಾವುದೇ ಆಧಾರವಿಲ್ಲದೆ ನೀವು  ಬಂಧಿಸಲು ಸಾಧ್ಯವಿಲ್ಲ” ಎಂದು ಅವರು ಹೇಳಿದರು.

“ಸುಳ್ಳು, ಷಡ್ಯಂತ್ರಗಳ ವಿರುದ್ಧದ ಹೋರಾಟದಲ್ಲಿ ಸತ್ಯಕ್ಕೆ ಮತ್ತೆ ಜಯ ಸಿಕ್ಕಿದೆ” ಎಂದು ಕೇಜ್ರಿವಾಲ್‌ಗೆ  ಸಿಕ್ಕ ನಂತರ ಎಎಪಿ ನಾಯಕ ಮನೀಶ್ ಸಿಸೋಡಿಯಾ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ; ಅಬಕಾರಿ ನೀತಿ ಪ್ರಕರಣ | ಶುಕ್ರವಾರ ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿ ತೀರ್ಪು ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ನಿವಾಸದ ಬಳಿಯ ಐತಿಹಾಸಿಕ ಮಸೀದಿ ತೆರವಿಗೆ ಆರು ದಿನಗಳ ಗಡುವು : ವಕ್ಫ್ ಬೋರ್ಡ್ ಕೈಬಿಟ್ಟಿದೆ, ಕುಡಿಯಲು ನೀರೂ ಇಲ್ಲ ಎಂದ ಇಮಾಮ್

ನವದೆಹಲಿಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸದ ಬಳಿ ಇರುವ ಐತಿಹಾಸಿಕ ಮಸೀದಿಯೊಂದಕ್ಕೆ ಅಕ್ಟೋಬರ್ 19, ಸೋಮವಾರದಂದು ತೆರವು ನೋಟಿಸ್ ನೀಡಲಾಗಿದೆ ಎಂದು ವರದಿಯಾಗಿದೆ. ಭೂಮಿ ಮತ್ತು ಅಭಿವೃದ್ಧಿ ಕಚೇರಿಯು (ಎಲ್&ಡಿಒ)...

‘ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ’: ಎಸ್ಐಆರ್ ವಿರೋಧಿಸಿ ಅ. 28ರಂದು ಮುಂಬೈನಲ್ಲಿ ಬೃಹತ್ ಪ್ರತಿಭಟನೆಗೆ ಪ್ರಕಾಶ್ ಅಂಬೇಡ್ಕರ್ ಕರೆ

ಮುಂಬೈ: ಮತದಾನದ ಹಕ್ಕು ಕೇವಲ ರಾಜಕೀಯ ಪ್ರಕ್ರಿಯೆಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ವೈಯಕ್ತಿಕ ಸ್ವಾತಂತ್ರ್ಯದ ಭಾಗವಾಗಿದೆ. ಈ ಹಕ್ಕನ್ನು ಕಸಿದುಕೊಳ್ಳಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಡಾ. ಬಿ.ಆರ್. ಅಂಬೇಡ್ಕರ್ ಅವರ ಮೊಮ್ಮಗ,...

ಹೋರಾಟಗಾರನ ಕೊಲೆ, ಅಮಿತ್ ಶಾ ಭೇಟಿ : ಪಂಜಾಬ್‌ನಲ್ಲಿ ಎಎಪಿಗೆ ಮುಳುವಾಗುತ್ತಾ ಡ್ರಗ್ ವಿರೋಧಿ ಜನಾಕ್ರೋಶ?

ಕಳೆದ ವಾರ ಪಂಜಾಬ್‌ನ ಮಾನಸಾ ಜಿಲ್ಲೆಯಲ್ಲಿ ಮೆಡಿಕಲ್ ಶಾಪ್ ಮಾಲೀಕನೊಬ್ಬ 42 ವರ್ಷದ ಮಾದಕವಸ್ತು ವಿರೋಧಿ ಕಾರ್ಯಕರ್ತ (Anti-Drugs Activist's) ಪರ್ವಿಂದರ್ ಸಿಂಗ್ ಝೋಟಾ ಅವರನ್ನು ಹತ್ಯೆ ಮಾಡಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ....

ಜಂತರ್ ಮಂತರ್ ಅತಿಕ್ರಮಣ ಆರೋಪ: ಸಿಜೆಪಿಯ ಅಶುತೋಷ್, ಸೌರವ್ ಬಂಧನ ಮುಂದುವರಿಕೆ, ಅಪರಾಧ ವಿಭಾಗಕ್ಕೆ ತನಿಖೆ ವರ್ಗಾವಣೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಹ-ಸಂಚಾಲಕರಾದ ಅಶುತೋಷ್ ರಂಕಾ ಮತ್ತು ಸೌರವ್ ದಾಸ್ ಅವರ ವಿರುದ್ಧ ದಾಖಲಾದ ಪ್ರಕರಣದ ತನಿಖೆಯನ್ನು ದೆಹಲಿ ಪೊಲೀಸರು...

‘ವೋಟ್ ಚೋರಿ ಸರ್ಕಾರ’ದಿಂದ ಗ್ರಾಮೀಣ ಕಾರ್ಮಿಕರ ಕೂಲಿ ಕಳ್ಳತನವೂ ಪರಿಪೂರ್ಣ: ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ಜೈರಾಮ್ ರಮೇಶ್ ವಾಗ್ದಾಳಿ

ನವದೆಹಲಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA) ಬದಲಿಗೆ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ಗ್ರಾಮೀಣ ಭಾರತದ ಬಡವರು ಮತ್ತು...

ದೆಹಲಿ ಪೊಲೀಸರಿಂದ ಎನ್‌ಎಸ್‌ಯುಐ ನಾಯಕರ ಮೇಲೆ ಹಲ್ಲೆ : ಜೈಪುರ ಕಮಿಷನರ್ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರಿಂದ ಆಹೋರಾತ್ರಿ ಧರಣಿ

ರಾಜಸ್ಥಾನ ಕಾಂಗ್ರೆಸ್‌ನ ಹಿರಿಯ ನಾಯಕರು ಮತ್ತು ರಾಜ್ಯ ಘಟಕದ ಅಧ್ಯಕ್ಷ ಗೋವಿಂದ್ ಸಿಂಗ್ ದೋತಾಸ್ರಾ ಸೇರಿದಂತೆ ಹಲವಾರು ಶಾಸಕರು ಜೈಪುರ ಪೊಲೀಸ್ ಕಮಿಷನರೇಟ್ ಕಚೇರಿಯಲ್ಲಿ ಸೋಮವಾರ (ಅಕ್ಟೋಬರ್ 19) ರಾತ್ರಿಯಿಡೀ ಧರಣಿ ಸತ್ಯಾಗ್ರಹ...

ಸೋಶಿಯಲ್ ಮೀಡಿಯಾ ಅಕೌಂಟ್ ಬ್ಲಾಕ್: ಬಳಕೆದಾರರಿಗೆ ಸರ್ಕಾರದ ನೋಟಿಸ್‌ ಪ್ರತಿ ನೀಡುವುದು ಕಡ್ಡಾಯ ಎಂದ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌

ಸಾಮಾಜಿಕ ಜಾಲತಾಣಗಳಲ್ಲಿನ ಖಾತೆ ಅಥವಾ ವಿಷಯಗಳನ್ನು (Content) ತಡೆಹಿಡಿಯಲು ಸರ್ಕಾರವು ಮಧ್ಯವರ್ತಿ ಸಂಸ್ಥೆಗಳಿಗೆ (ಫೇಸ್‌ಬುಕ್, ಟ್ವಿಟರ್ ಇತ್ಯಾದಿ) ಸೂಚನೆ ಅಥವಾ ಆದೇಶ ರವಾನಿಸಿದ ತಕ್ಷಣ, ಆ ಆದೇಶ ಅಥವಾ ನೋಟಿಸ್‌ನ ಪ್ರತಿಯನ್ನು ಸಂಬಂಧಪಟ್ಟ...

ಉತ್ತರ ಪ್ರದೇಶ| ದೇವಾಲಯದಲ್ಲಿ ಪೂಜೆ ಸಲ್ಲಿಸಿದ ದಲಿತ ವ್ಯಕ್ತಿಯ ಮೇಲೆ ಹಲ್ಲೆ

ದಲಿತ ಸಮುದಾಯದ ವ್ಯಕ್ತಿಯೊಬ್ಬರು ಧಾರ್ಮಿಕ ಸ್ಥಳದಲ್ಲಿ ವಾಸಿಸುತ್ತಿರುವುದಕ್ಕೆ ಮತ್ತು ಅವರು ಪೂಜೆ ಸಲ್ಲಿಸುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಇಬ್ಬರು ವ್ಯಕ್ತಿಗಳು, ಅವರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ್ದಾರೆ. ಸಾಲದ್ದಕ್ಕೆ ಅವರನ್ನು ದೇವಾಲಯದೊಳಗೆ...

ಸುಪ್ರೀಂ ಕೋರ್ಟ್‌ ತೀರ್ಪನ್ನು ‘ನ್ಯಾಯ ನಿರಾಕರಣೆ’ ಎಂದು ಟೀಕಿಸುವುದು ಅಪರಾಧವಲ್ಲ : ಕರ್ನಾಟಕ ಹೈಕೋರ್ಟ್

ಭಿನ್ನಾಭಿಪ್ರಾಯ ವ್ಯಕ್ತಪಡಿಸುವ ಹಕ್ಕಿನ ವ್ಯಾಪ್ತಿಯನ್ನು ಸ್ಪಷ್ಟಪಡಿಸಿರುವ ಕರ್ನಾಟಕ ಹೈಕೋರ್ಟ್, ಸುಪ್ರೀಂ ಕೋರ್ಟ್ ತೀರ್ಪೊಂದನ್ನು ಟೀಕಿಸುವ ಘೋಷವಾಕ್ಯಗಳನ್ನು ಸಾರ್ವಜನಿಕ ಗೋಡೆಯ ಮೇಲೆ ಬರೆದಿದ್ದಾರೆ ಎಂಬ ಆರೋಪದ ಮೇರೆಗೆ 13 ವ್ಯಕ್ತಿಗಳ ವಿರುದ್ಧ ದಾಖಲಿಸಲಾಗಿದ್ದ ಎಫ್‌ಐಆರ್...

‘ಭಾರತದಲ್ಲಿ ಆಡಳಿತ ಬದಲಾವಣೆ ಆಗುವುದಿಲ್ಲ’: ಪ್ರತಿಭಟನೆ, ಹೋರಾಟಗಳಿಗೆ ಪಶ್ಚಿಮ ದೇಶಗಳ ಪ್ರಭಾವ ಕಾರಣ ಎಂದ ಮೋಹನ್ ಭಾಗವತ್

ನಾಗ್ಪುರ: ಭಾರತದಲ್ಲಿ ಆಡಳಿತ ಬದಲಾವಣೆಯ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎನ್ನುವ ವಾದವನ್ನು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ವಿರೋಧಿಸಿದ್ದಾರೆ. ಆಡಳಿತ ಬದಲಾವಣೆಗೆ ಕರೆ ನೀಡುವ ಚಳವಳಿಗಳು ಮೂಲಭೂತ ಸಮಸ್ಯೆಗಳನ್ನು ಪರಿಹರಿಸುವುದಿಲ್ಲ. ಬದಲಿಗೆ,...