Homeಮುಖಪುಟಅಬಕಾರಿ ನೀತಿ ಪ್ರಕರಣ: ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್‌

ಅಬಕಾರಿ ನೀತಿ ಪ್ರಕರಣ: ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿ ತಿರಸ್ಕರಿಸಿದ ದೆಹಲಿ ಹೈಕೋರ್ಟ್‌

- Advertisement -
- Advertisement -

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ (ಆಗಸ್ಟ್ 5) ತಿರಸ್ಕರಿಸಿದ್ದು, ಎಎಪಿ ನಾಯಕನಿಗೆ ಭಾರಿ ಹಿನ್ನಡೆಯಾಗಿದೆ.

ಕೇಜ್ರಿವಾಲ್ ಮತ್ತು ಸಿಬಿಐ ಪರ ವಕೀಲರ ವಾದವನ್ನು ಆಲಿಸಿದ ನಂತರ ನ್ಯಾಯಾಲಯವು ಜುಲೈ 29 ರಂದು ಎಎಪಿ ನಾಯಕನ ಜಾಮೀನು ಅರ್ಜಿಯ ಆದೇಶವನ್ನು ಕಾಯ್ದಿರಿಸಿತ್ತು. ಇದೀಗ ರದ್ದುಗೊಂಡಿರುವ ಅಬಕಾರಿ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ಅವರನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜುಲೈ 17 ರಂದು ಹೈಕೋರ್ಟ್ ಕಾಯ್ದಿರಿಸಿತ್ತು.

ಜಾಮೀನು ಅರ್ಜಿಗೆ ಸಂಬಂಧಿಸಿದಂತೆ, ನ್ಯಾಯಾಲಯವು ಅದನ್ನು ವಿಲೇವಾರಿ ಮಾಡಿದೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಹೆಚ್ಚಿನ ಪರಿಹಾರಕ್ಕಾಗಿ ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸುವ ಆಯ್ಕೆಯನ್ನು ನೀಡಿದೆ.

ಕೇಜ್ರಿವಾಲ್ ಬಂಧನವನ್ನು ಪ್ರಶ್ನಿಸಿದ ಅವರ ವಕೀಲರು, ಅವರು ಜೈಲಿನಿಂದ ಹೊರಬರದಂತೆ ಮತ್ತು ಜೈಲಿನೊಳಗೆ ಇರುವುದನ್ನು ಖಚಿತಪಡಿಸಿಕೊಳ್ಳಲು ಇದು “ವಿಮಾ ಬಂಧನ” ಎಂದು ವಾದಿಸಿದರು.

ಸಿಬಿಐ ವಕೀಲರು ಕೇಜ್ರಿವಾಲ್ ಅವರ ಎರಡೂ ಮನವಿಗಳನ್ನು ವಿರೋಧಿಸಿದರು. ಅವರ ಬಂಧನವನ್ನು “ವಿಮಾ ಬಂಧನ” ಎಂದು ಕರೆಯುವುದು ನ್ಯಾಯಸಮ್ಮತವಲ್ಲ ಎಂದು ಹೇಳಿದರು. ಕೇಜ್ರಿವಾಲ್ ಅಬಕಾರಿ ನೀತಿ ಹಗರಣದ “ಸೂತ್ರಧಾರ” ಎಂದು ಅವರು ಹೇಳಿದರು ಮತ್ತು ಅಪರಾಧದಲ್ಲಿ ಅವರು ಭಾಗಿಯಾಗಿರುವುದನ್ನು ಸಾಬೀತುಪಡಿಸಲು ಪುರಾವೆಗಳಿವೆ ಎಂದರು.

ಕೇಜ್ರಿವಾಲ್ ಬಂಧನ ಮತ್ತು ಅವರ ಜಾಮೀನು ಅರ್ಜಿಗಳು

ಕೇಜ್ರಿವಾಲ್ ಅವರನ್ನು ಜೂನ್ 26 ರಂದು ತಿಹಾರ್ ಜೈಲಿನಿಂದ ಸಿಬಿಐ ಬಂಧಿಸಿದ್ದು, ಇಡಿ ದಾಖಲಿಸಿದ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಅವರು ಇನ್ನೂ ನ್ಯಾಯಾಂಗ ಬಂಧನದಲ್ಲಿದ್ದಾರೆ. ಮಾರ್ಚ್ 21ರಂದು ಇಡಿಯಿಂದ ಬಂಧನಕ್ಕೊಳಗಾಗಿದ್ದ ಮುಖ್ಯಮಂತ್ರಿಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ ಜೂನ್ 20ರಂದು ಜಾಮೀನು ನೀಡಿತ್ತು.ಆದರೆ ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಜುಲೈ 12 ರಂದು, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತು.

ದೆಹಲಿ ಲೆಫ್ಟಿನೆಂಟ್ ಗವರ್ನರ್ ಅವರು ನೀತಿಯ ರಚನೆ ಮತ್ತು ಕಾರ್ಯಗತಗೊಳಿಸುವಿಕೆಯನ್ನು ಒಳಗೊಂಡಿರುವ ಅಕ್ರಮಗಳು ಮತ್ತು ಭ್ರಷ್ಟಾಚಾರದ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಿದ ನಂತರ 2022 ರಲ್ಲಿ ಅಬಕಾರಿ ನೀತಿಯನ್ನು ರದ್ದುಗೊಳಿಸಲಾಯಿತು.

ಸಿಬಿಐ ಮತ್ತು ಇಡಿ ಪ್ರಕಾರ, ಅಬಕಾರಿ ನೀತಿಯನ್ನು ಮಾರ್ಪಡಿಸುವಾಗ ಅಕ್ರಮಗಳನ್ನು ಎಸಗಲಾಗಿದೆ ಮತ್ತು ಪರವಾನಗಿ ಹೊಂದಿರುವವರಿಗೆ ಅನಗತ್ಯವಾದ ಅನುಕೂಲಗಳನ್ನು ನೀಡಲಾಗಿದೆ.

ಸಿಸೋಡಿಯಾ ಜಾಮೀನು ಅರ್ಜಿಯ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ಆರಂಭಿಸಿದೆ. ಸಿಸೋಡಿಯಾ ಪರವಾಗಿ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು. ನ್ಯಾಯಮೂರ್ತಿ ಬಿ.ಆರ್.ಗವಾಯಿ ಮತ್ತು ನ್ಯಾಯಮೂರ್ತಿ ಕೆ.ಬಿ.ವಿಶ್ವನಾಥನ್ ಅವರ ಪೀಠವು ಪ್ರಕರಣದ ವಿಚಾರಣೆ ನಡೆಸುತ್ತಿದೆ. ಸಿಬಿಐ ಮತ್ತು ಇಡಿ ಎರಡೂ ತನಿಖಾ ಸಂಸ್ಥೆಗಳು ಸಲ್ಲಿಸಿರುವ ಪ್ರಕರಣದಲ್ಲಿ ಸಿಸೋಡಿಯಾ ಜಾಮೀನು ಕೋರಿದ್ದಾರೆ. ಇದಕ್ಕೂ ಮುನ್ನ ಕೆಳ ನ್ಯಾಯಾಲಯ ಮತ್ತು ಹೈಕೋರ್ಟ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದವು.

ಅಬಕಾರಿ ನೀತಿಯಿಂದ ಆಮ್ ಆದ್ಮಿ ಪಕ್ಷಕ್ಕೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಸಿಂಘ್ವಿ ವಾದಿಸಿದರು. ಕೆಳ ನ್ಯಾಯಾಲಯದಲ್ಲಿ ಇನ್ನೂ ವಿಚಾರಣೆ ಆರಂಭವಾಗಿಲ್ಲ ಎಂದು ಸಿಂಘ್ವಿ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಅವರು, ತನಿಖಾ ಸಂಸ್ಥೆಗಳ ನಡವಳಿಕೆಯ ಬಗ್ಗೆ ಆತಂಕ ವ್ಯಕ್ತಪಡಿಸಿ, ಪ್ರಕರಣದ ವಿಚಾರಣೆಯನ್ನು ವಿಳಂಬ ಮಾಡುತ್ತಿದ್ದಾರೆ ಎಂದು ಹೇಳಿದರು.

ನಾಲ್ಕು ದಿನಗಳ ಹಿಂದೆ ಇಡಿ ಸಲ್ಲಿಸಿದ ಪ್ರತಿವಾದ ಅಫಿಡವಿಟ್ ಅನ್ನು ನೋಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ ಅವರು, ಪ್ರಕರಣವನ್ನು ವಿಸ್ತರಿಸುವ ಪ್ರಯತ್ನ ಎಂದು ಹೇಳಿದರು.

ಇದನ್ನೂ ಓದಿ; ಕೋಚಿಂಗ್ ಸೆಂಟರ್‌ನಲ್ಲಿ ಯುಪಿಎಸ್‌ಸಿ ಆಕಾಂಕ್ಷಿಗಳ ಸಾವು; ಸ್ವಯಂ ಪ್ರೇರಿತ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...