ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜಾಮೀನು ನಿರಾಕರಣೆ ಮತ್ತು ಸಿಬಿಐ ಬಂಧನ ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿರುವ ಜಾಮೀನು ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಪ್ರಕಟಿಸಲಿದೆ ಎಂದು ವರದಿಯಾಗಿದೆ. ಸುಪ್ರೀಂ ಕೋರ್ಟ್ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾದ ಸೆಪ್ಟೆಂಬರ್ 13 ರ ಪಟ್ಟಿಯ ಪ್ರಕಾರ, ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠವು ತೀರ್ಪು ಪ್ರಕಟಿಸಲು ನಿರ್ಧರಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠವು ಸೆಪ್ಟೆಂಬರ್ 5 ರಂದು ಅರ್ಜಿಗಳ ತೀರ್ಪನ್ನು ಕಾಯ್ದಿರಿಸಿತ್ತು. ಕೇಜ್ರಿವಾಲ್ ಅವರು ಜಾಮೀನು ನಿರಾಕರಣೆಯನ್ನು ಪ್ರಶ್ನಿಸಿ ಮತ್ತು ಕೇಂದ್ರೀಯ ಸಂಸ್ಥೆ ಸಲ್ಲಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ಮಾಡಿರುವ ತನ್ನ ಬಂಧನದ ವಿರುದ್ಧ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದಾರೆ.
ಕೇಜ್ರಿವಾಲ್ ಅವರನ್ನು ಜೂನ್ 26 ರಂದು ಕೇಂದ್ರೀಯ ತನಿಖಾ ದಳ (ಸಿಬಿಐ) ಬಂಧಿಸಿತ್ತು. ಭ್ರಷ್ಟಾಚಾರ ಪ್ರಕರಣದಲ್ಲಿ ಅವರ ಬಂಧನವನ್ನು ಎತ್ತಿಹಿಡಿದ ದೆಹಲಿ ಹೈಕೋರ್ಟ್‌ನ ಆಗಸ್ಟ್ 5 ರ ಆದೇಶವನ್ನು ಅವರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ಪ್ರಕರಣದಲ್ಲಿ ಜಾಮೀನು ಕೋರಿ ತನ್ನ ಮನವಿಯೊಂದಿಗೆ ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸಲು ಹೈಕೋರ್ಟ್ ಅವರಿಗೆ ಸ್ವಾತಂತ್ರ್ಯವನ್ನು ನೀಡಿತ್ತು.
ಇದನ್ನೂಓದಿ: ಕೇಂದ್ರದಿಂದ ತೆರಿಗೆ ಹಂಚಿಕೆ ತಾರತಮ್ಯ : 8 ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸಿಎಂ ಸಿದ್ದರಾಮಯ್ಯ ಪತ್ರ
ದೆಹಲಿ ಸರ್ಕಾರದ 2021-22 ರ ಅಬಕಾರಿ ನೀತಿಯ ರಚನೆ ಮತ್ತು ಕಾರ್ಯಗತಗೊಳಿಸುವಿಕೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಲಾಗಿತ್ತು. ಆರೋಪದ ನಂತರ ದೆಹಲಿ ಸರ್ಕಾರವು ಕಾಯ್ದೆಯನ್ನು ವಾಪಾಸು ಪಡೆದಿತ್ತು. ಆರೋಪದ ನಂತರ ಜಾರಿ ನಿರ್ದೇಶನಾಲಯ (ಇಡಿ) ಪ್ರತ್ಯೇಕ ಮನಿ ಲಾಂಡರಿಂಗ್ ಪ್ರಕರಣವನ್ನು ಸಹ ದಾಖಲಿಸಿತ್ತು.
ಅಬಕಾರಿ ನೀತಿಯನ್ನು ಮಾರ್ಪಡಿಸುವಾಗ ಅಕ್ರಮಗಳನ್ನು ಎಸಗಲಾಗಿದೆ ಮತ್ತು ಪರವಾನಗಿ ಹೊಂದಿರುವವರಿಗೆ ಅನಗತ್ಯವಾದ ಅನುಕೂಲಗಳನ್ನು ನೀಡಲಾಗಿದೆ ಎಂದು ಸಿಬಿಐ ಮತ್ತು ಇಡಿ ಆರೋಪಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೇಜ್ರಿವಾಲ್‌ಗೆ ಜುಲೈ 12 ರಂದು ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಮಾರ್ಚ್ 21 ರಂದು ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿತ್ತು.
ವಿಡಿಯೊ ನೋಡಿ: ‘ಅಭಿವೃದ್ಧಿ ಎಂಬ ವಿನಾಶ’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಬಿ ಶ್ರೀಪಾದ ಭಟ್ ಅವರ ಮಾತು


